ಕುಶಾಲನಗರ ಜು.30 NEWS DESK : ರಾಜ್ಯದ ಮಾಜಿ ಮುಖ್ಯಮಂತ್ರಿ ಆರ್. ಗುಂಡೂರಾಯರ ಪ್ರತಿಮೆಯನ್ನು ನಗರದಲ್ಲಿ ಸ್ಥಾಪಿಸುವ ಸಂಬಂಧ ಆ.22ರಂದು ಶಿಲಾವಿನ್ಯಾಸ ಕಾರ್ಯಕ್ರಮ ನಡೆಯಲಿದೆ. ನಗರದ ಪುರಸಭೆ ಸಭಾಂಗಣದಲ್ಲಿ ನಡೆದ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಸಭೆಯಲ್ಲಿ ವಿಷಯದ ಕುರಿತು ಚರ್ಚೆ ನಡೆಯಿತು. ಆ.22ರಂದು ಗುಂಡೂರಾಯರ ಪುಣ್ಯಸ್ಮರಣೆಯ ದಿನವಾಗಿದ್ದು, ಅಂದು ಕುಶಾಲನಗರ ಪುರಸಭೆ ಆವರಣದಲ್ಲಿ ಸ್ಥಾಪಿಸಲು ಉದ್ದೇಶ ಹೊಂದಿರುವ ಪ್ರತಿಮೆಯ ಬಗ್ಗೆ ಎಂಜಿನಿಯರ್ ಅರ್ಬಸ್ ಅಹಮದ್ ಅವರು ಸಮಗ್ರ ಮಾಹಿತಿ ಒದಗಿಸಿದರು. ಪ್ರತಿಮೆ ನಿರ್ಮಾಣಕ್ಕೆ ಅಗತ್ಯವಿರುವ ವೆಚ್ಚದ ಬಗ್ಗೆ ಚರ್ಚಿಸಲಾಗಿ ಗುಂಡೂರಾಯರ ಪುತ್ರ ಹಾಗೂ ಮಾಜಿ ಸಚಿವರಾದ ದಿನೇಶ್ ಗುಂಡೂರಾವ್ ಮತ್ತು ಕ್ಷೇತ್ರ ಶಾಸಕರಾದ ಡಾ.ಮಂತರ್ ಗೌಡ ಸಹಕಾರ ನೀಡುವ ಬಗ್ಗೆ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ವಿ.ಪಿ.ಶಶಿಧರ್ ಹೇಳಿದರು. ಉಳಿದಂತೆ ಸ್ಥಳೀಯ ಸಂಘ ಸಂಸ್ಥೆಗಳ ಮತ್ತು ಗುಂಡೂರಾಯರ ಅಭಿಮಾನಿಗಳ ಮೂಲಕ ದೇಣಿಗೆ ಸಂಗ್ರಹದ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಯಿತು. ಪ್ರತಿಮೆ ನಿರ್ಮಾಣ ಸಮಿತಿಯ ಗೌರವಾಧ್ಯಕ್ಷರಾಗಿ ಕ್ಷೇತ್ರದ ಶಾಸಕರು ಮತ್ತು ಸಂಚಾಲಕರಾಗಿ ಪುರಸಭೆ…
ಲೇಖಕ: admin
ಮಡಿಕೇರಿ ಜು.30 NEWS DESK : ಗುರುಪೂರ್ಣಿಮೆ ಅಂಗವಾಗಿ ಕುಶಾಲನಗರ ಶಿರಡಿ ಸಾಯಿಬಾಬಾ ಮಂದಿರದಲ್ಲಿ ವಿಶೇಷ ಪೂಜಾ ಕಾರ್ಯಕ್ರಮ ನಡೆಯಿತು. ಶ್ರೀ ಶಿರಡಿ ಸಾಯಿ ಟ್ರಸ್ಟ್ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಕಡ ಆರತಿ, ಗಣಪತಿ ಹೋಮ, ಬಾಬಾ ಮೂರ್ತಿಗೆ ಪಂಚಾಮೃತ ಅಭಿಷೇಕ ನೆರವೇರಿತು. ನಂತರ ಮೂಲ ವಿಗ್ರಹಕ್ಕೆ ಭಕ್ತಾದಿಗಳು ಕ್ಷೀರಾಭಿಷೇಕ ಜರುಗಿತು. ಬಳಿಕ ಸತ್ಯನಾರಾಯಣ ಪೂಜೆ ನಡೆಯಿತು. ಕುಶಾಲನಗರ ದೇವಾಲಯಗಳ ಒಕ್ಕೂಟದ ಪ್ರತಿನಿಧಿಗಳು ಫಲ ತಾಂಬೂಲ ಸಹಿತ ದೇವಾಲಯಕ್ಕೆ ಆಗಮಿಸಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ದೇವರಿಗೆ ಅಭಿಷೇಕ ಮಾಡಿದರು. ಮಧ್ಯಾಹ್ನ ಕನಕ ದುರ್ಗಮ್ಮ ಹಾಗೂ ಸುಬ್ರಹ್ಮಣ್ಯ ಸ್ವಾಮಿಗೆ ಪೂಜೆ ಸಲ್ಲಿಸಲಾಯಿತು. ಮಹಾಮಂಗಳಾರತಿ ನಂತರ ಭಕ್ತಾದಿಗಳಿಗೆ ಪ್ರಸಾದ ವಿನಿಯೋಗ ನೆರವೇರಿತು. ಶ್ರೀ ಶಿರಡಿ ಸಾಯಿ ಟ್ರಸ್ಟ್ ಅಧ್ಯಕ್ಷರಾದ ಧರೇಶ್ ಬಾಬು ಮತ್ತು ಕಾರ್ಯಕಾರಿ ಮಂಡಳಿ ಸದಸ್ಯರು ಇದ್ದರು. ಪಟ್ಟಣ ಸೇರಿದಂತೆ ಸುತ್ತಮುತ್ತಲ ವ್ಯಾಪ್ತಿಯ ಹೆಚ್ಚಿನ ಸಂಖ್ಯೆಯ ಭಕ್ತಾದಿಗಳು ಪಾಲ್ಗೊಂಡಿದ್ದರು.
ಕುಶಾಲನಗರ ಜು.30 NEWS DESK : ದುಶ್ಚಟಗಳಿಂದ ದೂರವಿದ್ದರೆ ಸಮಾಜದಲ್ಲಿ ಗೌರವಯುತವಾಗಿ ಜೀವಿಸಲು ಸಾಧ್ಯ ಎಂಬುದನ್ನು ಇಂದಿನ ಯುವ ಪೀಳಿಗೆ ಅರಿತುಕೊಳ್ಳಬೇಕು ಎಂದು ಕನ್ನಡ ಉಪನ್ಯಾಸಕರಾದ ಡಾ.ಜ಼ಮೀರ್ ಅಹಮದ್ ಅವರು ಅಭಿಪ್ರಾಯಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಸೋಮವಾರ ಪೇಟೆ ತಾಲೂಕಿನ ಕೂಡಿಗೆ ವಲಯ ಮತ್ತು ಸರ್ಕಾರಿ ಪ್ರೌಢ ಶಾಲೆ, ತೊರೆನೂರು ಇವರ ಸಂಯುಕ್ತಾಶ್ರಯದಲ್ಲಿ ಜರುಗಿದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ನಮ್ಮ ಭಾರತೀಯ ಪರಂಪರೆ, ಸಂಸ್ಕೃತಿಯ ತನ್ನದೇ ಆದ ವೈಶಿಷ್ಟ್ಯತೆಯನ್ನು ಹೊಂದಿದ್ದು, ಉತ್ತಮ ಆರೋಗ್ಯ, ಉತ್ತಮ ಪರಿಸರ, ಮಾನವೀಯ ಮೌಲ್ಯಗಳನ್ನು ಹೊಂದುವುದು ಸ್ವಸ್ಥ ಸಮಾಜದ ಬಹುಮುಖ್ಯ ಭಾಗವಾಗಿದೆ. ನಮ್ಮ ಕುಟುಂಬ ಮತ್ತು ಸಮಾಜಕ್ಕೆ ಹಾನಿ ಮಾಡುವ ಅಭ್ಯಾಸಗಳ ಬಗ್ಗೆ ಅರಿವು ಇರಬೇಕು. ಮಾದಕ ವಸ್ತುಗಳ ವ್ಯಸನ ನಮ್ಮನ್ನು ದಾಸ್ಯರನ್ನಾಗಿ ಮಾಡುವುದಷ್ಟೇ ಅಲ್ಲದೇ ನಮ್ಮ ಅಮೂಲ್ಯವಾದ ಬದುಕನ್ನು ಕಸಿದುಕೊಳ್ಳುತ್ತದೆ. ದುಶ್ಚಟಗಳಿಂದ ಮುಕ್ತರಾಗಿ ಸಮಾಜದಲ್ಲಿ ಗೌರವಯುತ ಬದುಕನ್ನು ರೂಪಿಸಿಕೊಳ್ಳಬೇಕು ಎಂದು ತಿಳಿಸಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ…
ಕಾವೇರಿ ಬಿಕ್ಕಟ್ಟು ಬಂದಾಗ ಮಾತ್ರ ಕರ್ನಾಟಕಕ್ಕೆ ಕೊಡಗು ನೆನಪಾಗುತ್ತದೆ. ಕಾವೇರಿ ನೀರಿನ ಹಂಚಿಕೆ ವಿಚಾರ ಬಂದಾಗ ಮಾತ್ರ ಸರ್ಕಾರಗಳು, ರಾಜಕೀಯ ಪಕ್ಷಗಳು, ಹೋರಾಟಗಾರರು, ಸಂಘಟನೆಗಳು ಹಾಗೂ ಜನರು ಕಾವೇರಿಯ ಬಗ್ಗೆ ಮಾತನಾಡುತ್ತಾರೆ. ಆದರೆ ಒಂದು ಪ್ರಶ್ನೆ… ಕಾವೇರಿ ಹುಟ್ಟುವ ಕೊಡಗಿನ ಬಗ್ಗೆ ನಾವು ವರ್ಷಪೂರ್ತಿ ಎಷ್ಟು ಕಾಳಜಿ ವಹಿಸುತ್ತೇವೆ? ಕೊಡಗು ಕೇವಲ ಒಂದು ಜಿಲ್ಲೆ ಅಲ್ಲ. ಅದು ಕಾವೇರಿಯ ತಾಯಿ. ಭಾರತದ ಸ್ಕಾಕ್ಟ್ಲ್ಯಾಂಡ್.ದಕ್ಷಿಣ ಕಾಶ್ಮೀರ ಎಂದು ಹೆಸರಾಗಿರುವ ಈ ಪುಣ್ಯಭೂಮಿ ತನ್ನ ಕಾಡುಗಳು, ಬೆಟ್ಟಗಳು, ಮಳೆ, ಜಲಮೂಲಗಳು ಮತ್ತು ಪರಿಸರ ಸಂಪತ್ತಿನ ಮೂಲಕ ಕೋಟ್ಯಂತರ ಜನರ ದಾಹವನ್ನು ನೀಗಿಸುತ್ತಿದೆ. ಕೊಡಗಿನ ಮಡಿಲಲ್ಲಿ ಹುಟ್ಟಿದ ಕಾವೇರಿ, ಕರ್ನಾಟಕ ಮಾತ್ರವಲ್ಲದೆ ಲಕ್ಷಾಂತರ ರೈತರು, ನಗರಗಳು ಮತ್ತು ಕೈಗಾರಿಕೆಗಳಿಗೆ ಜೀವ ನೀಡುತ್ತಿದೆ. ಆದರೆ ಇಂದು ಕೊಡಗು ಮೌನವಾಗಿ ನೋವು ಅನುಭವಿಸುತ್ತಿದೆ. ಅರಣ್ಯ ನಾಶ, ಅನಿಯಂತ್ರಿತ ಅಭಿವೃದ್ಧಿ, ಬೆಟ್ಟಗಳ ಒತ್ತುವರಿ, ಜಲಮೂಲಗಳ ಹಾನಿ ಮತ್ತು ಪರಿಸರದ ಮೇಲಿನ ನಿರ್ಲಕ್ಷ್ಯ—ಇವೆಲ್ಲವೂ ಕಾವೇರಿಯ ಭವಿಷ್ಯವನ್ನೇ ಅಪಾಯಕ್ಕೆ ತಳ್ಳುತ್ತಿವೆ. ಕಾವೇರಿಯನ್ನು ಉಳಿಸಬೇಕೆಂದು ಕೂಗುವ ಪ್ರತಿಯೊಂದು ಧ್ವನಿಯೂ ಮೊದಲು…
ಮಡಿಕೇರಿ NEWS DESK ಜು.30 : ಸೋಮವಾರಪೇಟೆ ತಾಲ್ಲೂಕಿನ ಬಿಳಿಗೇರಿ ಗ್ರಾಮದಲ್ಲಿ ಕಾಫಿ ತೋಟದಲ್ಲಿ ಮರ ಬಿದ್ದು ಮೃತಪಟ್ಟ ಕಾರ್ಮಿಕ ಮಹಿಳೆಯರಾದ ಪರ್ಬಿನ ಖಾತುನ್ (29) ಹಾಗೂ ಅಲಿಮಾನ್ (48) ಅವರ ಕುಟುಂಬಕ್ಕೆ ತೋಟದ ಮಾಲೀಕರು ವಿಳಂಬವಲ್ಲದೆ ಪರಿಹಾರ ನೀಡಬೇಕೆಂದು ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ನ ಕೊಡಗು ಜಿಲ್ಲಾಧ್ಯಕ್ಷ ಕೆ.ಹೆಚ್.ಅಣ್ಣ ಷರೀಫ್ ಹಾಗೂ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಜಾಕ್ ಎಂ.ಎ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಹೊಟ್ಟೆಪಾಡಿಗಾಗಿ ಹೊರ ರಾಜ್ಯದಿಂದ ಬಂದು ಕಾಫಿ ತೋಟದಲ್ಲಿ ಕಾರ್ಮಿಕರಾಗಿ ದುಡಿಯುತ್ತಿದ್ದ ಬಡ ಮಹಿಳೆಯರು ದಾರುಣ ಅಂತ್ಯ ಕಂಡಿದ್ದಾರೆ. ಉಳಿದ ಇಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ತೋಟದ ಮಾಲೀಕರು ಮೃತರ ಕುಟುಂಬಕ್ಕೆ ಹಾಗೂ ಗಾಯಾಳುಗಳಿಗೆ ಸೂಕ್ತ ಪರಿಹಾರವನ್ನು ನೀಡಬೇಕು. ಅಲ್ಲದೆ ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಭರಿಸಬೇಕು ಎಂದು ಆಗ್ರಹಿಸಿದ್ದಾರೆ. ಪರಿಹಾರ ನೀಡುವಲ್ಲಿ ವಿಳಂಬ ಧೋರಣೆ ತಾಳಿದರೆ ಎಸ್‌ಡಿಟಿಯು ಪ್ರತಿಭಟನೆಯನ್ನು ನಡೆಸಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ. ಕರ್ನಾಟಕ ರಾಜ್ಯ ಸರಕಾರ ಕೂಡ ಮೃತರ ಕುಟುಂಬಗಳಿಗೆ…
ಮಡಿಕೇರಿ NEWS DESK ಜು.30 : ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ವತಿಯಿಂದ ಆ.2 ರಂದು 31ನೇ ಸಾರ್ವತ್ರಿಕ ಕಕ್ಕಡ ಪದ್ನೆಟ್ ಆಚರಣೆ ನಡೆಯಲಿದೆ ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಮಡಿಕೇರಿ ಸಮೀಪದ ಕ್ಯಾಪಿಟಲ್ ವಿಲೇಜ್ ನಲ್ಲಿ ಭಾನುವಾರ ಬೆಳಿಗ್ಗೆ 10.30 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ಹಿರಿಯ ಮಾಧ್ಯಮ ವರದಿಗಾರರು ಹಾಗೂ ಹಿಂದಿನ ಉಪ ಮುಖ್ಯಮಂತ್ರಿಗಳ ಮಾಜಿ ಮಾಧ್ಯಮ ಮತ್ತು ರಾಜಕೀಯ ಸಲಹೆಗಾರ ದೀಪಕ್ ತಿಮ್ಮಯ್ಯ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಸಾರ್ವಜನಿಕವಾಗಿ “ಕಕ್ಕಡ ಪದ್ನೆಟ್” ಆಚರಣೆ ಆರಂಭವಾಗಿ ಈ ವರ್ಷಕ್ಕೆ ಮೂರು ದಶಕಗಳು (31 ವರ್ಷಗಳು) ಪಾದಾರ್ಪಣೆ ಮಾಡುತ್ತಿದೆ. ಈ ಪರಂಪರೆಯನ್ನು ಮೂಲತಃ ಕೊಡವ ಕಾರಣವರು (ಪೂರ್ವಜರು) ಪ್ರಾರಂಭಿಸಿದ್ದು, ಅದನ್ನು ಸಿಎನ್‌ಸಿ ಸಾರ್ವತ್ರಿಕ ಆಚರಣೆಯ ಮೂಲಕ ಅತ್ಯಂತ ಗೌರವದಿಂದ ಮುಂದುವರಿಸಿಕೊಂಡು ಬರುತ್ತಿದೆ. “ಕಕ್ಕಡ ಪದ್ನೆಟ್” ಕಾವೇರಿ ಮಾತೆ, ಪ್ರಕೃತಿ ಮಾತೆ, ಪವಿತ್ರ ಕೋವಿ (ತೋಕ್), ಕೊಡವ ವಂಶಾವಳಿಯ ಪವಿತ್ರ ಸ್ಥಳಗಳಾದ ‘ಮಂದ್’ ಮತ್ತು…
ಮಡಿಕೇರಿ NEWS DESK ಜು.30 : ನಾನು ಕೂಡ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದೇನೆ ಎಂದು ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಎಂ.ಎ.ಉಸ್ಮಾನ್ ತಿಳಿಸಿದ್ದಾರೆ. ಕಳೆದ ಹಲವು ದಶಕಗಳಿಂದ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಒಬ್ಬ ಸಕ್ರಿಯ ಸದಸ್ಯನಾಗಿ ನಿರಂತರವಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದೇನೆ ಮತ್ತು ಜನಸೇವೆಗೆ ಆದ್ಯತೆ ನೀಡಿದ್ದೇನೆ. ನಿಗಮ, ಪ್ರಾಧಿಕಾರ, ಸ್ಥಳೀಯ ಸಂಸ್ಥೆಗಳಲ್ಲಿ ಅಧಿಕಾರಕ್ಕಾಗಿ ಪ್ರಭಾವ ಬೀರದೆ ಅಥವಾ ಆಸೆ ಪಡದೆ ಪಕ್ಷದ ನಿರ್ಧಾರಕ್ಕೆ ಬದ್ಧನಾಗಿ ಸಾಮಾನ್ಯ ಕಾರ್ಯಕರ್ತನಂತೆ ಪಕ್ಷಕ್ಕಾಗಿ ದುಡಿದಿದ್ದೇನೆ. ನನ್ನ ಪಕ್ಷ ನಿಷ್ಠೆಗೆ ಪ್ರತಿಫಲವಾಗಿ ವರಿಷ್ಠರು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನ ನೀಡುತ್ತಾರೆ ಎನ್ನುವ ವಿಶ್ವಾಸವಿದೆ ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಜನಪ್ರತಿನಿಧಿಯಾಗಿ ಗ್ರಾ.ಪಂ ಅಧ್ಯಕ್ಷ, ಉಪಾಧ್ಯಕ್ಷನಾಗಿ ಕಾರ್ಯನಿರ್ವಹಿಸಿದ್ದೇನೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಹಾಗೂ ಜಿಲ್ಲೆಯಲ್ಲಿ ಕಾಂಗ್ರೆಸ್ ಶಾಸಕರು ಇಲ್ಲದ ಸಮಯದಲ್ಲಿ ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷನಾಗಿ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತ ಘಟಕದ ಪ್ರಧಾನ…
ಮಡಿಕೇರಿ NEWS DESK ಜು.30 : ಕಳೆದ ಕೆಲವು ದಿನಗಳಿಂದ ಅಯ್ಯಂಗೇರಿ ಗ್ರಾಮದಲ್ಲಿ ಕಾಡಾನೆಗಳ ಉಪಟಳ ಮಿತಿ ಮೀರಿದೆ. ಅರಣ್ಯ ಇಲಾಖೆಗೆ ಮಾಹಿತಿ ಇದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲವೆಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಕಾಡಾನೆಗಳು ಗದ್ದೆಗಳಿಗೆ ಲಗ್ಗೆ ಇಟ್ಟು ಭತ್ತದ ಕೃಷಿಯನ್ನು ನಾಶ ಮಾಡುತ್ತಿವೆ. ನಾಟಿ ಕಾರ್ಯ ಮುಗಿದಿರುವ ಗದ್ದೆಗಳಿಗೆ ತೀವ್ರ ಹಾನಿಯಾಗಿದ್ದು, ನಷ್ಟಕ್ಕೊಳಗಾಗಿರುವ ರೈತರು ಅರಣ್ಯ ಇಲಾಖೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಯ್ಯಂಗೇರಿ ಗ್ರಾಮ ವ್ಯಾಪ್ತಿಯಲ್ಲಿ ಕಾಡಾನೆಗಳ ಉಪಟಳ ನಿರಂತರವಾಗಿದೆ ಎಂದು ಆತಂಕ ವ್ಯಕ್ತಪಡಿಸಿರುವ ಗ್ರಾಮಸ್ಥರು, ಅರಣ್ಯ ಇಲಾಖೆ ಶಾಶ್ವತ ಪರಿಹಾರ ಸೂಚಿಸಬೇಕೆಂದು ಒತ್ತಾಯಿಸಿದ್ದಾರೆ. *ಅರಣ್ಯ ಸಿಬ್ಬಂದಿಗಳ ಭೇಟಿ* ಕಾಡಾನೆಗಳು ಉಪಟಳ ನೀಡುತ್ತಿರುವ ಅಯ್ಯಂಗೇರಿ ಪ್ರದೇಶಕ್ಕೆ ಇಂದು ಅರಣ್ಯ ಸಿಬ್ಬಂದಿಗಳು ಭೇಟಿ ನೀಡಿದರು. ಗ್ರಾಮಸ್ಥರ ಸಹಕಾರದೊಂದಿಗೆ ಕಾಡಾನೆಗಳನ್ನು ಕಾಡಿಗಟ್ಟುವ ಕಾರ್ಯಾಚರಣೆಯನ್ನು ಆರಂಭಿಸಿದರು.
ಸೋಮವಾರಪೇಟೆ NEWS DESK ಜು.29 : ಬಿಡದಿ ರೈತಪರ ಹೋರಾಟಕ್ಕೆ ಜು.24ರಂದು ತೆರಳುತ್ತಿದ್ದ ಕೊಡಗಿನ ರೈತರನ್ನು ಪೊಲೀಸರು ಬಂಧಿಸಿರುವುದನ್ನು ಖಂಡಿಸಿ ಆ.7ರಂದು ಎಸ್‌ಪಿ ಕಚೇರಿ ಚಲೋ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆಯ ಜಿಲ್ಲಾ ಉಪಾಧ್ಯಕ್ಷ ಜಿ.ಎಂ.ಹೂವಯ್ಯ ತಿಳಿಸಿದ್ದಾರೆ. ಶಾಂತಿಯುತ ಹೋರಾಟ ಮಾಡಲು ನಮಗೆ ಸಂವಿಧಾನಿಕ ಹಕ್ಕು ಇದೆ. ಇದನ್ನು ತಡೆಯಲು ಪೊಲೀಸರಿಗೆ ಅಧಿಕಾರ ಕೊಟ್ಟವರೂ ಯಾರು? ನಮ್ಮ ಜಿಲ್ಲೆಯಲ್ಲಿ ನಡೆಯುತ್ತಿರುವ ಸಿ ಆ್ಯಂಡ್ ಡಿ ಹೋರಾಟದಲ್ಲಿ ರಾಜ್ಯ ರೈತ ಸಂಘದ ಅನೇಕ ನಾಯಕರು ಭಾಗಿಯಾಗಿದ್ದಾರೆ. ಈ ಕಾರಣದಿಂದ ಬಿಡದಿಯಲ್ಲಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ಸೂಚಿಸಲು ತೆರಳಲಾಗುತ್ತಿತ್ತು ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು. ರಾಜ್ಯದ ಎಲ್ಲಾ ಜಿಲ್ಲೆಗಳಿಂದ ರೈತರು ಬಿಡದಿಗೆ ತೆರಳಿ ಹೋರಾಟದಲ್ಲಿ ಭಾಗವಹಿಸಿದ್ದಾರೆ. ಆದರೆ ಕೊಡಗಿನ ರೈತರು ಭಾಗವಹಿಸದಂತೆ ಪೊಲೀಸರು ತಡೆದಿರುವುದರಿಂದ ನಮಗೆ ಅವಮಾನವಾಗಿದೆ ಎಂದು ಹೇಳಿದರು. ಸಂಘದ ತಾಲೂಕು ಅಧ್ಯಕ್ಷ ಕೆ.ಎಂ.ದಿನೇಶ್ ಮಾತನಾಡಿ, ಬಿಡದಿಗೆ ತೆರಳುತ್ತಿದ್ದ ರೈತ ಮುಖಂಡರನ್ನು ಬಂಧನ…
ಮಡಿಕೇರಿ NEWS DESK ಜು.29 : ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಕಳೆದ ಎರಡು ತಿಂಗಳಿನಿ0ದ ಕ್ಷೀಣಿಸಿದ್ದ ಮಳೆ ಚೇತರಿಕೆ ಕಂಡಿದೆ. ಜಿಲ್ಲೆಯ ಎಲ್ಲಾ ಭಾಗಗಳಲ್ಲಿ ಎರಡು ದಿನಗಳಿಂದ ಗಾಳಿ ಸಹಿತ ಉತ್ತಮ ಮಳೆಯಾಗುತ್ತಿದೆ. ಮಡಿಕೇರಿ ತಾಲ್ಲೂಕಿನಲ್ಲಿ ಮೈಕೊರೆಯುವ ಚಳಿ, ಗಾಳಿ ಸಹಿತ ಮಳೆ ಸುರಿಯುತ್ತಿದೆ. ಮಂಗಳವಾರ ರಾತ್ರಿಯಿಂದ ಉತ್ತಮ ಮಳೆೆಯಾಗುತ್ತಿದ್ದು, ದಟ್ಟ ಮಂಜು ಕವಿದಿರುವ ಪರಿಣಾಮ ಹೊಂಡ ಗುಂಡಿಗಳ ರಸ್ತೆಯಲ್ಲಿ ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಕಾವೇರಿ ನದಿಯ ಉಗಮಸ್ಥಾನ ತಲಕಾವೇರಿ ಮತ್ತು ಭಾಗಮಂಡಲ ವ್ಯಾಪ್ತಿಯಲ್ಲಿ ಉತ್ತಮ ಮಳೆಯಾಗುತ್ತಿದೆ. ಕಳೆದೊಂದು ದಿನದ ಅವಧಿಯಲ್ಲಿ 78 ಮಿ.ಮೀ. ಮಳೆ ದಾಖಲಾಗಿದೆ. ಕ್ಷೇತ್ರ ವ್ಯಾಪ್ತಿ ಮತ್ತು ನದಿ ಪಾತ್ರದ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಕಾವೇರಿ ನೀರಿನ ಮಟ್ಟ ಏರಿಕೆಯಾಗಿದೆ. ಕೊಡಗಿನ ಗಡಿ ಗ್ರಾಮ ಕರಿಕೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ದೊಡ್ಡ ಗಾತ್ರದ ಬಿದಿರು ಬುಡ ಸಹಿತ ರಸ್ತೆಗೆ ಬಿದ್ದು ಸಂಚಾರ ವ್ಯವಸ್ಥೆ ಅಸ್ತವ್ಯವಸ್ತಗೊಂಡಿತ್ತು. ಮoಗಳವಾರ ರಾತ್ರಿ ಪೊನ್ನಂಪೇಟೆ ತಾಲ್ಲೂಕಿನ ನಿಟ್ಟೂರು ಗ್ರಾಮದಲ್ಲಿ ಮನೆಯ ಗೋಡೆ…






