ಲೇಖಕ: admin

ಮಡಿಕೇರಿ ನ.7 NEWS DESK : ಕೊಡಗು- ಕೇರಳ ಗಡಿಭಾಗದಲ್ಲಿರುವ ಕರಿಕೆ ಗ್ರಾ.ಪಂ ವ್ಯಾಪ್ತಿಯಲ್ಲಿ ನೂತನ ಬಿಎಸ್‍ಎನ್‍ಎಲ್ ಟವರ್ ನಿರ್ಮಾಣಗೊಂಡು ಎರಡು ವರ್ಷ ಕಳೆದರೂ ಕಾರ್ಯಾರಂಭಗೊಂಡಿಲ್ಲ. ಇದರಿಂದ ನೆಟ್ ವರ್ಕ್ ಸಮಸ್ಯೆ ಎದುರಾಗಿದ್ದು, ಈ ಕುರಿತು ಕರಿಕೆ ಗ್ರಾ.ಪಂ ಅಧ್ಯಕ್ಷ ಎನ್.ಬಾಲಚಂದ್ರನ್ ನಾಯರ್ ಅವರು ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ. ಕರಿಕೆ ಗ್ರಾ.ಪಂ ವ್ಯಾಪ್ತಿಯ ಗ್ರಾಮಸ್ಥರು, ವಿದ್ಯಾರ್ಥಿಗಳು, ಖಾಸಗಿ ಸಂಸ್ಥೆಗಳು, ಗ್ರಾಮ ಪಂಚಾಯ್ತಿ ಕಚೇರಿ ಹಾಗೂ ಸರ್ಕಾರಿ ಕಚೇರಿ ಸಿಬ್ಬಂದಿಗಳು ನೆಟ್ ವರ್ಕ್ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ತುರ್ತು ಸಂದರ್ಭಗಳಲ್ಲಿ ಕರೆ ಮಾಡುವುದಕ್ಕೂ ನೆಟ್ ವರ್ಕ್ ಸಿಗುತ್ತಿಲ್ಲ. ಗ್ರಾ.ಪಂ ಕೆಲಸ ಕಾರ್ಯಗಳು ಕುಂಟಿತಗೊಳ್ಳುತ್ತಿದೆ. ಎಲ್ಲಾ ಕಾರ್ಯಚಟುವಟಿಕೆಗಳು ಅಂತರ್ಜಾಲ ಮತ್ತು ನಿಸ್ತಂತು ವ್ಯವಸ್ಥೆಯ ಮೂಲಕವೇ ನಡೆಯುವ ಈ ಕಾಲಘಟ್ಟದಲ್ಲಿ ನೆಟ್ ವರ್ಕ್ ಸೌಲಭ್ಯವೇ ಇರದಿದ್ದರೆ ಹೇಗೆ ಕಾರ್ಯ ನಿರ್ವಹಿಸುವುದು ಎಂದು ಅವರು ಪ್ರಶ್ನಿಸಿದರು. ನೆಟ್ ವರ್ಕ್ ಸಮಸ್ಯೆ ತೀವ್ರ ಸ್ವರೂಪವನ್ನು ಪಡೆದುಕೊಂಡ ಸಂದರ್ಭ ಗ್ರಾಮಸ್ಥರ ಒತ್ತಾಯಕ್ಕೆ ಮಣಿದು ಕರಿಕೆ ಚೆತ್ತುಕಾಯದಲ್ಲಿ ನೂತನ ಬಿಎಸ್‍ಎನ್‍ಎಲ್ ಟವರ್ ನ್ನು…

Read More

ವಿರಾಜಪೇಟೆ ನ.7 NEWS DESK : ವಿರಾಜಪೇಟೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಐಕ್ಯೂಎಸಿ ಹಾಗೂ ನಿರ್ವಹಣಾ ಶಾಸ್ತ್ರ ವಿಭಾಗದ ವತಿಯಿಂದ ಉದ್ಯೋಗಕ್ಕಾಗಿ ನೆಟ್‍ವರ್ಕಿಂಗ್ ಮತ್ತು ಮಾರ್ಕೆಟಿಂಗ್‍ಗಾಗಿ ಸಾಮಾಜಿಕ ಮಾಧ್ಯಮದ ವಿಷಯದ ಬಗ್ಗೆ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಸಂತ ಅನ್ನಮ್ಮ ಪದವಿ ಕಾಲೇಜಿನ ಪ್ಲೇಸ್‍ಮೆಂಟ್ ಸೆಲ್ ಅಧಿಕಾರಿ ಹಾಗೂ ಸಹಾಯಕ ಪ್ರಾಧ್ಯಾಪಕ ಕೆ.ಸಿ.ಶಿಲ್ಪ ಮಾತನಾಡಿ, ಸಾಮಾಜಿಕ ಮಾಧ್ಯಮದಿಂದ ವಿದ್ಯಾರ್ಥಿಗಳ ಮೇಲೆ ಆಗುವ ಪ್ರಭಾವ ಮತ್ತು ಅದರ ಅನುಕೂಲತೆ ಹಾಗೂ ಅನಾನುಕೂಲತೆಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ.ಸಿ.ದಯಾನಂದ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ನಿರ್ವಹಣಾ ಶಾಸ್ತ್ರ ವಿಭಾಗದ ಮುಖ್ಯಸ್ಥ ಗುರುಪ್ರಸಾದ್ ಹಾಗೂ ಐಕ್ಯೂಎಸಿ ಸಂಚಾಲಕ ಡಾ. ಕೆ.ಬಸವರಾಜು, ಕಾರ್ಯಕ್ರಮದ ಸಂಚಾಲಕರು ಹಾಗೂ ಉಪನ್ಯಾಸಕರಾದ ಕೆ.ಎಸ್.ಕಾರ್ಯಪ್ಪ, ಕೆ.ಸಿ,ಧನ್ಯ, ಸುಮಯ್ಯ ತಬಸ್ಸುಂ ಸೇರಿದಂತೆ ಕಾಲೇಜಿನ ಉಪನ್ಯಾಸಕ ವೃಂದದವರು, ವಿದ್ಯಾರ್ಥಿಗಳು ಹಾಜರಿದ್ದರು.

Read More

ಮಡಿಕೇರಿ ನ.7 NEWS DESK : ಕನ್ನಡ ರಾಜ್ಯೋತ್ಸವದ ಅಂಗವಾಗಿ ವಿರಾಜಪೇಟೆಯ ಸೈಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ನುಡಿನೃತ್ಯ ಸಂಭ್ರಮ-2024 ನುಡಿಹಬ್ಬವನ್ನು ಆಚರಿಸಲಾಗುತ್ತಿದ್ದು, ಇದರ ಪ್ರಯುಕ್ತ ವಿದ್ಯಾರ್ಥಿಗಳಿಗೆ ಅಂತರ ಕಾಲೇಜು ನೃತ್ಯ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಕಾಲೇಜಿನ ಕನ್ನಡ ಭಾಷಾ ವಿಭಾಗದ ಮುಖ್ಯಸ್ಥ ಅರ್ಜುನ್ ಮೌರ್ಯ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿರಾಜಪೇಟೆ ಸೈಂಟ್ ಆನ್ಸ್ ಕಾಲೇಜು, ಕನ್ನಡ ಭಾಷಾ ವಿಭಾಗ ಮತ್ತು ವಿರಾಜಪೇಟೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದರು. ನ.19 ರಂದು ಕಾಲೇಜಿನಲ್ಲಿ ಕನ್ನಡ ಸಂಸ್ಕೃತಿ ಪರಂಪರೆ, ಸ್ಥಳೀಯ ಜಾನಪದ ಸ್ವರೂಪ ಬಿಂಬಿಸುವ ವಸ್ತು ಪ್ರದರ್ಶನ ನಡೆಯಲಿದ್ದು, ಇದರಲ್ಲಿ ಕಾಲೇಜಿನ ಪ್ರತಿ ತರಗತಿಯ ವಿದ್ಯಾರ್ಥಿಗಳು ಜಾನಪದ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಸ್ತಬ್ಧ ಚಿತ್ರ, ಹಳೆಯ ಸಾಮಗ್ರಿಗಳು ಸೇರಿದಂತೆ ವಿವಿಧ ವಸ್ತುಗಳನ್ನು ಪ್ರದರ್ಶಿಸಲಿದ್ದು, ಇದು ಸ್ಪರ್ಧೆಯ ರೂಪದಲ್ಲಿ ನಡೆಯಲಿದೆ. ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಗುದೆಂದರು. ನ.20 ರಂದು ಕೊಡಗಿನ ಪದವಿ, ತತ್ಸಮಾನ ಹಾಗೂ ಸ್ನಾತಕೋತ್ತರ ಪದವಿ,…

Read More

ಮಡಿಕೇರಿ ನ.7 NEWS DESK : ಹಲವು ಹಗರಣಗಳ ಆರೋಪ ಎದುರಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಪರ ದಲಿತ ಸಂಘರ್ಷ ಸಮಿತಿಯ ಹೆಸರಿನಲ್ಲಿ ಕೆಲವರು ನಡೆಸಿರುವ ಅರೆಬೆತ್ತಲೆ ಪ್ರತಿಭಟನೆ ಹಾಸ್ಯಾಸ್ಪದವಾಗಿದೆ ಎಂದು ಭಾರತೀಯ ಜನತಾ ಪಾರ್ಟಿಯ ಎಸ್‍ಸಿ ಮೋರ್ಚಾದ ಜಿಲ್ಲಾಧ್ಯಕ್ಷ ಪಿ.ಎಂ.ರವಿ ಟೀಕಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ನಗರದಲ್ಲಿ ಅರೆಬೆತ್ತಲೆ ಪ್ರತಿಭಟನಾ ಮೆರವಣಿಗೆ ನಡೆಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೆಂಬಲ ಸೂಚಿಸಿದವರು ಕಾಂಗ್ರೆಸ್ ಪಕ್ಷದ ಅಂಗಸಂಸ್ಥೆಗೆ ಸೇರಿದವರಂತೆ ವರ್ತಿಸಿ ಪರಿಶಿಷ್ಟರ ಹಾದಿ ತಪ್ಪಿಸುವ ಯತ್ನ ಮಾಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರದಿಂದ ಪರಿಶಿಷ್ಟರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಇತ್ತೀಚೆಗೆ ಬಯಲಿಗೆ ಬಂದಿರುವ ಹಗರಣಗಳೇ ಸಾಕ್ಷಿ ಹೇಳುತ್ತಿವೆ. ಪರಿಶಿಷ್ಟರ ಅಭ್ಯುದಯಕ್ಕಾಗಿ ಮೀಸಲಿಟ್ಟ ಸಾವಿರಾರು ಕೋಟಿ ರೂ. ಅನುದಾನ, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿದ್ದ ಪರಿಶಿಷ್ಟರ ಅನುದಾನ ದುರುಪಯೋಗವಾಗಿದೆ, ಮೂಡ ಜಾಗ ನಿಯಮ ಬಾಹಿರವಾಗಿ ಮಂಜೂರಾಗಿದೆ. ಪರಿಶಿಷ್ಟರ ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿವೆ. ಇದೆಲ್ಲವನ್ನು ಮುಂದಿಟ್ಟುಕೊಂಡು ಪರಿಶಿಷ್ಟರ ಪರವಾಗಿ ಬಿಜೆಪಿ ನಿರಂತರವಾಗಿ…

Read More

ಪುತ್ತೂರು ನ.7 NEWS DESK : ಯಾವುದೇ ಅಪರಾಧವನ್ನು ಮಾಡಿ ಪೊಲೀಸ್ ಕೇಸುಗಳಾದರೆ ಅದರಿಂದ ಬಿಡಿಸಿಕೊಳ್ಳುವುದು ತುಂಬಾ ಕಷ್ಟ, ಇದರಿಂದ ವಿದ್ಯಾರ್ಥಿಯೊಬ್ಬನ ಜೀವನವೇ ಹಾಳಾಗಬಹುದು ಹೀಗಾಗಿ ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಮೂಡಿಸುವುದು ಅವಶ್ಯಕ ಎಂದು ಪುತ್ತೂರಿನ ಮಹಿಳಾ ಠಾಣೆಯ ಪೊಲೀಸ್ ಸಬ್-ಇನ್ಸ್‍ಪೆಕ್ಟರ್ ಭವಾನಿ ಗೌಡ ಹೇಳಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆ್ಯಂಟಿ ರ್ಯಾಗಿಂಗ್ ಕಮಿಟಿ, ಆ್ಯಂಟಿ ರ್ಯಾಗಿಂಗ್ ಸ್ಕ್ವಾಡ್ ಮತ್ತು ಕಾಲೇಜು ಆಂತರಿಕ ದೂರು ಸಮಿತಿಯ ಸಂಯುಕ್ತ ಆಶ್ರಯದಲ್ಲಿ ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ಮಾತಾಡಿದರು. ಮಹಿಳೆಯರ ಮತ್ತು ಮಕ್ಕಳ ಸುರಕ್ಷತೆಗಾಗಿ ಕಠಿಣ ಕಾನೂನುಗಳಿದ್ದು ಇದರ ಸದ್ಭಳಕೆಯನ್ನು ಮಾಡಿಕೊಳ್ಳಬೇಕು. ಸುಳ್ಳು ದೂರುಗಳನ್ನು ನೀಡುವುದು ಕೂಡಾ ಅಪರಾಧವಾಗುತ್ತದೆ ಎಂದರು. ವಿವಿಧ ದೂರುಗಳನ್ನು ಆಧರಿಸಿ ತಮ್ಮ ಅನುಭವಗಳನ್ನು ಎಳೆ ಎಳೆಯಾಗಿ ಹಂಚಿಕೊಂಡ ಅವರು ಲೈಂಗಿಕ ದೌರ್ಜನ್ಯ, ವರದಕ್ಷಿಣೆ ಕಿರುಕುಳ, ಪೋಕ್ಸೋ ಕಾಯ್ದೆ, ಬಾಲಕಾರ್ಮಿಕರು, ಬಾಲ್ಯವಿವಾಹ ಸೈಬರ್ ಕ್ರೈಂ ಗಳ ಬಗ್ಗೆ ಮಾಹಿತಿ ನೀಡಿದರು. ಸಾಮಾಜಿಕ ಜಾಲತಾಣಗಳನ್ನು ಒಳ್ಳೆಯ ಉದ್ದೇಶಕ್ಕಾಗಿ ಬಳಸಿದರೆ…

Read More

ಕುಶಾಲನಗರ ನ.7 NEWS DESK :  ಕಾಡಾನೆಗಳಿಂದ ನಿರಂತರವಾಗಿ ಬೆಳೆ ಹಾಗೂ ಸ್ವತ್ತು ನಷ್ಟವಾಗುತ್ತಿದ್ದರೂ ಕೂಡ ಅರಣ್ಯ ಇಲಾಖೆ ರೈತರಿಗೆ ಬೆಳೆ ನಷ್ಟ ಪರಿಹಾರ ನೀಡಿಲ್ಲ. ಈ ಬಗ್ಗೆ ಅರಣ್ಯ ಇಲಾಖೆಗೆ ತಾಕೀತು ಮಾಡಿ ಬೆಳೆ ನಷ್ಟ ಪರಿಹಾರ ಕೊಡಿಸಬೇಕೆಂದು ಗ್ರಾಮಸಭೆಯಲ್ಲಿ ಏಳನೇ ಹೊಸಕೋಟೆ ಗ್ರಾ.ಪಂ ವ್ಯಾಪ್ತಿಯ ಕೃಷಿಕರು ಒತ್ತಾಯಿಸಿದರು. ಏಳನೇ ಹೊಸಕೋಟೆ ಗ್ರಾ.ಪಂ ಸಭಾಂಗಣದಲ್ಲಿ ಅಧ್ಯಕ್ಷ ಇ.ಬಿ.ಜೋಸೆಫ್ ಅಧ್ಯಕ್ಷತೆಯಲ್ಲಿ ನಡೆದ ಗ್ರಾಮಸಭೆಯಲ್ಲಿ ತೊಂಡೂರು, ಕಂಬಿಬಾಣೆ ಹಾಗೂ ಏಳನೇ ಹೊಸಕೋಟೆಯ ರೈತರು ಹಾಗೂ ಸಾರ್ವಜನಿಕರು ಆಗ್ರಹಿಸಿದರು. ಕಾಡಾನೆಗಳ ಹಾವಳಿ ನಿರಂತರವಾಗಿದ್ದರೂ ಕೂಡ ಅರಣ್ಯ ಇಲಾಖೆ ಆನೆಗಳ ತಡೆಗೆ ಯೋಜನೆ ರೂಪಿಸುತ್ತಿಲ್ಲ. ತೊಂಡೂರು ವ್ಯಾಪ್ತಿಯ ಅರಣ್ಯದಂಚಿನಲ್ಲಿ ರೈಲ್ವೆ ಕಂಬಿ ತಡೆಗೋಡೆ ಕಾಮಗಾರಿ ಅಪೂರ್ಣಗೊಂಡಿದೆ. ಕಾಡಾನೆಗಳಿಂದ ಆಗುತ್ತಿರುವ ಬೆಳೆ ನಷ್ಟ ಪರಿಹಾರಕ್ಕಾಗಿ ಕಚೇರಿಗೆ ಅಲೆದು ಚಪ್ಪಲಿ ಸವೆದರೂ ಕೂಡ ಪರಿಹಾರ ಮಾತ್ರ ನಯಾಪೈಸೆ ಬರಲಿಲ್ಲ ಎಂದು ಗ್ರಾಮಸ್ಥರು ಅಸಮಧಾನ ವ್ಯಕ್ತಪಡಿಸಿದರು. ಏಳನೇ ಹೊಸಕೋಟೆಯ ರಾಷ್ಟ್ರೀಯ ಹೆದ್ದಾರಿಯಂಚಿನಲ್ಲಿ ಯೋಜಿಸಿರುವ ಹೊಸ ಮದ್ಯದ ಅಂಗಡಿ ಆರಂಭಕ್ಕೆ ಪರವಾನಗಿ ನೀಡುವ…

Read More

ವಿರಾಜಪೇಟೆ ನ.7 NEWS DESK : ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆ.ಎಂ.ಎ.) ವತಿಯಿಂದ ಕೊಡವ ಮುಸ್ಲಿಂ ಶಿಕ್ಷಣ ನಿಧಿಯ ಸಹಯೋಗದಲ್ಲಿ ಈ ಸಾಲಿನಲ್ಲಿ ನೀಡಲಾದ ಕೆ.ಎಂ.ಎ. ಪ್ರತಿಭಾ ಪುರಸ್ಕಾರವನ್ನು ಒಟ್ಟು 29 ವಿದ್ಯಾರ್ಥಿಗಳು ಪಡೆದುಕೊಂಡರು. ವಿರಾಜಪೇಟೆಯ ಸೇಂಟ್ ಆನ್ಸ್ ಪ್ಯಾರಿಸ್ ಸಭಾಂಗಣದಲ್ಲಿ ನಡೆದ ಕೆ.ಎಂ.ಎ. ಪ್ರತಿಭಾ ಪುರಸ್ಕಾರ-2024 ವಿತರಣಾ ಸಮಾರಂಭದಲ್ಲಿ ಸಂಸ್ಥೆಯ ವತಿಯಿಂದ ಅರ್ಹ ವಿದ್ಯಾರ್ಥಿಗಳಿಗೆ ನಗದು ಬಹುಮಾನ, ಪಾರಿತೋಷಕ ಮತ್ತು ಪ್ರಸಂಶನಾ ಪತ್ರವನ್ನು ನೀಡಿ ಗೌರವಿಸಲಾಯಿತು. ಕೆ.ಎಂ.ಎ. ಪ್ರತಿಭಾ ಪುರಸ್ಕಾರ- 2024ರ ಮದರಸ 5ನೇ ತರಗತಿ ವಿಭಾಗದಲ್ಲಿ ಪುದಿಯಾಣೆರ ಎನ್. ತಮ್ಮನ್ನ, ಪ್ರಥಮ (ತಂಝಿದುಲ್ ಇಸ್ಲಾಂ ಮದರಸ, ಚಾಮಿಯಾಲ), 7ನೇ ತರಗತಿ ವಿಭಾಗದಲ್ಲಿ ದುದ್ದಿಯಂಡ ಎಂ. ಹರ್ಷಾನ (ಬುಸ್ತಾನುಲ್ ಉಲೂಮ್ ಮದರಸ, ನಲ್ವತ್ತೋಕ್ಲು) ಪ್ರಥಮ, ಕುಪ್ಪೋಡಂಡ ಎ.ಶಾಕಿರಲಿ (ನಜ್ಮುಲ್ ಹುದ ಮದರಸ, ಎಡಪಾಲ) ದ್ವಿತೀಯ, ಕೋಳುಮಂಡ ಎ. ಮೊಹಮ್ಮದ್ ಸಿನಾನ್ (ನುಶ್ರತುಲ್ ಇಸ್ಲಾಂ ಮದರಸ, ಕೊಮ್ಮತೋಡು) ತೃತೀಯ ಸ್ಥಾನ ಪಡೆದರೆ, 10ನೇ ತರಗತಿ ವಿಭಾಗದಲ್ಲಿ ಕಿಕ್ಕರೆ ಯು. ಮೊಹಮ್ಮದ್ ಇಲ್ಯಾಸ್…

Read More

ವಿರಾಜಪೇಟೆ ನ.7 NEWS DESK : ಕನ್ನಡ ನಾಡು ನುಡಿ ಉಳಿಸಿ ಬೆಳೆಸುವ ಜವಾಬ್ದಾರಿ ಕನ್ನಡಿಗರ ಮೇಲಿದೆ ಎಂದು ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ಕೆ.ಬಸವರಾಜು ಅಭಿಪ್ರಾಯ ವ್ಯಕ್ತಪಡಿಸಿದರು. ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ ನಡೆದ 69ನೇ ಕರ್ನಾಟಕ ರಾಜ್ಯೋತ್ಸವ ಹಾಗೂ ಎನ್.ಎಸ್.ಎಸ್ ಘಟಕವನ್ನು ಉದ್ಘಾಟಿಸಿ ಅವರು, ಮಾತನಾಡಿದರು. ಕನ್ನಡ ನಾಡು, ನುಡಿ, ಉಳಿಸಿ ಬೆಳೆಸುವ ಜವಾಬ್ದಾರಿ ಕನ್ನಡಿಗರ ಮೇಲಿದೆ. ಕನ್ನಡದ ಮೇಲಿನ ಅಭಿಮಾನ  ಒಂದು ದಿನಕ್ಕೆ ಮಾತ್ರ ಸೀಮಿತವಾಗಿರುವಂತದ್ದಲ್ಲ ಕನ್ನಡ ನಮ್ಮ ಉಸಿರಾಗಬೇಕು. ಕನ್ನಡವೆನ್ನುವಂಥದ್ದು ಹಲವು ಭಾಷೆಗಳೊಂದಿಗೆ ಒಡಮೂಡಿ ಬಂದಂತಹ ಸುಂದರ ಭಾಷೆಯಾಗಿದೆ. ಜಗತ್ತಿನಲ್ಲಿ ಮಾತನಾಡಿದಂತೆ ಬರೆಯುವ, ಬರೆದಂತೆ ಓದುವ , ಓದಿದಂತೆ ಮಾತನಾಡುವ ಭಾಷೆ ಎಂದರೆ ಕನ್ನಡ ಮಾತ್ರ. ಪ್ರಸ್ತುತ ಸಮಾಜವನ್ನು ತೆಗೆದುಕೊಂಡಾಗ ಇತರೆ ಪ್ರಾದೇಶಿಕ ಭಾಷೆಗಳು ಹಾಗೂ ಹೊರ ರಾಜ್ಯದ ಭಾಷೆಗಳಿಂದಾಗಿ ಕನ್ನಡ ತುಳಿತಕ್ಕೆ ಒಳಗಾಗುತ್ತಿದೆ. ಇದು ಸರಿಯಲ್ಲ ಎಂಟು ಜ್ಞಾನಪೀಠ ಪ್ರಶಸ್ತಿ, ಒಂದು ಸರಸ್ವತಿ ಸಮ್ಮಾನ್, ಮೂರು ರಾಷ್ಟ್ರಕವಿಗಳನ್ನು ಹೊಂದಿದ…

Read More

ಗೋಣಿಕೊಪ್ಪಲು ನ.7 NEWS DESK : ಪೊನ್ನಂಪೇಟೆ ತಾಲ್ಲೂಕಿಗೆ ಆಗಮಿಸುತ್ತಿರುವ ಕನ್ನಡ ಜ್ಯೋತಿ ರಥವನ್ನು ಅದ್ದೂರಿಯಾಗಿ ಸ್ವಾಗತಿಸಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿ ಗೌರವಿಸಿ ಬೀಳ್ಕೊಡಬೇಕೆಂದು ಎಂದು ಪೊನ್ನಂಪೇಟೆ ತಾಲ್ಲೂಕು ತಹಶೀಲ್ದಾರರು ಮತ್ತು ತಾಲ್ಲೂಕು ದಂಡಾಧಿಕಾರಿ ಕೆ.ಎನ್.ಮೋಹನ್ ಕುಮಾರ್ ನುಡಿದರು. 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಮಂಡ್ಯ ಜಿಲ್ಲೆಯಲ್ಲಿ ಡಿ. 20,21,22 ರಂದು ನಡೆಯಲಿದ್ದು ಸಮ್ಮೇಳನದ ಪ್ರಚಾರಕ್ಕಾಗಿ ಆಗಮಿಸುತ್ತಿರುವ ಕನ್ನಡ ಜ್ಯೋತಿ ಹೊತ್ತ ರಥವನ್ನು ಸ್ವಾಗತಿಸುವ ಕಾರ್ಯಕ್ರಮದ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.  ಸಭೆಯಲ್ಲಿ ಉಪಸಿತರಿದ್ದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ ಕೇಶವ ಕಾಮತ್ ಮಾತನಾಡುತ್ತಾ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಭುವನಗಿರಿಯಲ್ಲಿರುವ ಭುವನೇಶ್ವರಿ ದೇವಾಲಯದಿಂದ ಹೊರಟ ಕನ್ನಡ ಜ್ಯೋತಿ ಹೊತ್ತ ರಥವು ಎಲ್ಲಾ ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಸಾಹಿತ್ಯ ಸಮ್ಮೇಳನದ ಕುರಿತು ಜನರಿಗೆ ಮಾಹಿತಿ ನೀಡುವ ಕಾರ್ಯ ಮಾಡುತ್ತಿದೆ. ಆ ರಥವು ಡಿ.10 ಮತ್ತು 11ರಂದು ಕೊಡಗು ಜಿಲ್ಲೆಯಲ್ಲಿ ಸಂಚರಿಸಲಿದ್ದು ಸಂಪಾಜೆ…

Read More

ನಾಪೋಕ್ಲು ನ.7 NEWS DESK : ಬೇತು ಗ್ರಾಮದ ಮಕ್ಕಿ ಶ್ರೀ ಶಾಸ್ತಾವು ದೇವಾಲಯದಲ್ಲಿ ನಾಡಿನ ಸುಭಿಕ್ಷೆಗಾಗಿ ಏಕಾದಶ ರುದ್ರ ವಿಶೇಷ ಶ್ರದ್ಧಾ ಭಕ್ತಿಯಿಂದ ನೆರವೇರಿತು. ಮುಂಜಾನೆಯಿಂದಲೇ ವಿಶೇಷ ಪೂಜಾ ವಿಧಿ ವಿಧಾನಗಳ ಜರುಗಿತು. ಮಧ್ಯಾಹ್ನ ಮಹಾಪೂಜೆ ಬಳಿಕ ತೀರ್ಥ ಪ್ರಸಾದ ವಿತರಣೆ, ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ನಡೆಯಿತು. ಅರ್ಚಕರಾದ ಗುತ್ತಿಗಾರಿನ ಶಿವಸುಬ್ರಹ್ಮಣ್ಯ ಜೋಯಿಸ, ಪೈಚಾರಿನ ಸುಬ್ರಮಣ್ಯ ಭಟ್, ಕಲ್ಮಡ್ಕದ ಅರುಣ್ ಶಂಕರ್ ಭಟ್, ದೇವಾಲಯದ ಮುಖ್ಯ ಅರ್ಚಕ ದಿವಾಕರ ಏಕಾದಶ ರುದ್ರ ಪೂಜೆಯನ್ನು ನೆವೇರಿಸಿದರು. ಈ ಸಂದರ್ಭ ದೇವಾಲಯದ ತಕ್ಕ ಮುಖ್ಯಸ್ಥರು, ದೇವಾಲಯದ, ಆಡಳಿತ ಮಂಡಳಿ ಪದಾಧಿಕಾರಿಗಳು, ಹಾಗೂ ಭಕ್ತಾದಿಗಳು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ವರದಿ : ದುಗ್ಗಳ ಸದಾನಂದ. 

Read More