ಲೇಖಕ: admin

ಕುಶಾಲನಗರ, ನ.25 NEWS DESK : ಭವಿಷ್ಯದ ಬೆಳಕಾಗಿರುವ ವಿದ್ಯಾರ್ಥಿಗಳು ಜ್ಞಾನಾರ್ಜನೆ ಜತೆಗೆ ದೇಶಾಭಿಮಾನ ಬೆಳೆಸಿಕೊಂಡು ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕು ಎಂದು ಕಲ್ಯಾಣ ಕರ್ನಾಟಕ ಪ್ರತಿಷ್ಠಾನದ ಅಧ್ಯಕ್ಷ ಹಾಗೂ ಚಿಂತಕ ಬಸವಕುಮಾರ್ ಪಾಟೀಲ್ ಹೇಳಿದರು. ಬೀದರ್ ನ ಕಲ್ಯಾಣ ಕರ್ನಾಟಕ ಪ್ರತಿಷ್ಠಾನದ ವತಿಯಿಂದ ಕರ್ನಾಟಕ ಸುವರ್ಣ ಸಂಭ್ರಮ: 50 ರ ಅಂಗವಾಗಿ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಅಕ್ಷರ ಜ್ಯೋತಿಯಾತ್ರೆಯ ವತಿಯಿಂದ. ಕುಶಾಲನಗರ ಪಟ್ಟಣದ ಕನ್ನಡ ಭಾರತಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ( ಎನ್.ಎಸ್.ಎಸ್.) ಘಟಕ ಹಾಗೂ ಪದವಿ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ವಿದ್ಯಾರ್ಥಿಗಳಲ್ಲಿ ಮಾನವೀಯ ಮೌಲ್ಯಗಳು ಮತ್ತು ಉತ್ತಮ ವ್ಯಕ್ತಿತ್ವ ಬೆಳವಣಿಗೆ ಹಾಗೂ ಪರೀಕ್ಷಾ ಫಲಿತಾಂಶದ ಸಫಲತೆಯ ಮಾರ್ಗೋಪಾಯಗಳು ಕುರಿತು ಏರ್ಪಡಿಸಿದ್ದ ವಿಶೇಷ ಉಪನ್ಯಾಸ ಮಾಲೆ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡಿದರು. ವಿದ್ಯಾರ್ಥಿಗಳಲ್ಲಿ ಶಿಕ್ಷಣದ ಬಗ್ಗೆ ಆಸಕ್ತಿ ಹುಟ್ಟಿಸಿ, ಉನ್ನತ ಕನಸುಗಳನ್ನು ಬಿತ್ತಿ, ವಿದ್ಯಾರ್ಥಿಗಳಿಗೆ ಪ್ರೇರಣೆ, ಸ್ಪೂರ್ತಿ ನೀಡುವುದರ ಮೂಲಕ ಉನ್ನತ ಸಾಧನೆಯ ಛಲ‌ ಮೂಡಿಸುವುದು. ವಿದ್ಯಾರ್ಥಿಗಳಲ್ಲಿರುವ ಕೀಳರಿಮೆ ಕಿತ್ತು…

Read More

ವಿರಾಜಪೇಟೆ ನ.25 NEWS DESK : ಕಡಂಗ ಅರಪಟ್ಟು ಗ್ರಾಮದ ದೇವರಕಾಡಿನಲ್ಲಿ ನೆಲೆಸಿರುವ ನೆಲ್ಯಾಳು ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದ ವಾರ್ಷಿಕ ಮಹಾಪೂಜಾ ಸೇವೆಯು ಶ್ರದ್ಧಾಭಕ್ತಿಯಿಂದ ನಡೆಯಿತು. ಮುಂಜಾನೆಯಿಂದಲೇ ಶ್ರೀ ಅಯ್ಯಪ್ಪ ಸ್ವಾಮಿಗೆ ಅಭಿಷೇಕ, ಕ್ಷೀರಾಭಿಷೇಕ, ಅಲಂಕಾರ ಸೇವೆ, ವಿಶೇಷ ಕರ್ಪೂರ ಆರತಿಯನ್ನು ಮಾಡಿ ಪ್ರಾರ್ಥಿಸಿದರು. ಗ್ರಾಮಸ್ಥರು ಹರಕೆ ವಸ್ತುಗಳಾದ ಹುಲಿ, ನಾಯಿ, ಹಂದಿ, ಹಸು ಮೊದಲಾದ ಸಾಕು ಪ್ರಾಣಿಗಳ ಮಣ್ಣಿನ ಮೂರ್ತಿಗಳನ್ನು ಸಮರ್ಪಿಸಿದರು. ದೇವಾಲಯದ ಅರ್ಚಕರಾದ ರಾಮ್ ಪ್ರಸಾದ್ ಭಟ್  ಪೂಜಾ ವಿಧಾನಗಳನ್ನು ನೆರವೇರಿಸಿದರು. ಮಧ್ಯಾಹ್ನ ನೆರೆದಿದ್ದ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ನೆಲ್ಯಾಳು ಕುಟುಂಭಸ್ಥರು, ಗ್ರಾಮಸ್ಥರು ಉಪಸ್ಥಿತರಿದ್ದರು. ಪ್ರತಿವರ್ಷ ನ.16 ರಿಂದ ಡಿ.15 ರ ತನಕ ಈ ದೇವಾಲಯದಲ್ಲಿ ಪ್ರತಿದಿನ ನಿತ್ಯ ಪೂಜೆಯು ನಡೆಯುತ್ತದೆ.

Read More

ಮಡಿಕೇರಿ NEWS DESK ನ 24. ರಾಷ್ಟ್ರಕವಿ ರಸಋಷಿ ಕುವೆಂಪು ಅವರು ರಚಿಸಿದ ನಾಡಗೀತೆ “ಜಯ ಭಾರತ ಜನನಿಯ ತನುಜಾತೆ ಜಯ ಹೇ ಕರ್ನಾಟಕ ಮಾತೆ” ಈ ಗೀತೆಗೆ ನೂರು ಪರುಷ ತುಂಬಿದೆ. 1924 ರಲ್ಲಿ ಕುವೆಂಪು ಅವರು ಈ ಗೀತೆಯನ್ನು ರಚಿಸಿದ್ದು, ಭಾರೀ ಜನಮನ್ನಣೆ ಗಳಿಸಿದೆ. ಕರ್ನಾಟಕ ಸರಕಾರ ಈ ಗೀತೆಯನ್ನು ನಾಡಗೀತೆ ಎಂದು ಘೋಷಿಸಿತು. ನಂತರ ಸರಕಾರಿ ಮತ್ತು ಸರಕಾರೇತರ ಕಾರ್ಯಕ್ರಮಗಳಲ್ಲಿ ಈ ಗೀತೆ ಹಾಡುವುದು ಕಡ್ಡಾಯವಾಗಿದೆ. ಕನ್ನಡ ಸಾಹಿತ್ಯ ಪರಿಷತ್ತು ಬಹಳ ಹಿಂದಿನಿಂದಲೇ ಈ ಗೀತೆಯನ್ನು ತನ್ನ ಕಾರ್ಯಕ್ರಮಗಳಲ್ಲಿ ಅಳವಡಿಸಿಕೊಂಡು ಬಂದಿದೆ‌. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನಾಡಗೀತೆಯ 100ನೇ ವರ್ಷಾಚರಣೆಯನ್ನು ಸಂಭ್ರಮದಿಂದ ಆಚರಿಸಲಿದೆ. ಡಿಸೆಂಬರ್ 29ರಂದು ಕುವೆಂಪು ಅವರ ಜನ್ಮದಿನದಂದು ಮಡಿಕೇರಿಯಲ್ಲಿ  ಕಾರ್ಯಕ್ರಮ ನಡೆಯಲಿದೆ. ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ, ನಾಡಗೀತೆ ಗಾಯನ ಸ್ಪರ್ಧೆ, ನಾಡಗೀತೆ ವಿಶ್ಲೇಷಣೆ, ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ಪತ್ರಿಕಾ…

Read More

ಮಡಿಕೇರಿ NEWS DESK ನ.24 : ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ನ.26 ರಂದು ನಡೆಯುವ 34ನೇ ಕೊಡವ ನ್ಯಾಷನಲ್ ಡೇ ಮತ್ತು ಭಾರತೀಯ ಸಂವಿಧಾನ ದಿನಾಚರಣೆಯ ಯಶಸ್ಸಿಗಾಗಿ ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ ಪ್ರಮುಖರು ದೇವಟ್ ಪರಂಬುವಿನಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ನರಮೇಧದ ಸ್ಮಾರಕ ಸ್ಥಳದಲ್ಲಿ ಪುಷ್ಪ ನಮನ ಸಲ್ಲಿಸಿ ಸಿಎನ್‌ಸಿ ಬೇಡಿಕೆಗಳ ಈಡೇರಿಕೆಗೆ ಶಕ್ತಿ ತುಂಬುವಂತೆ ಕೋರಿದರು. ಈ ಸಂದರ್ಭ ಮಾತನಾಡಿದ ಎನ್.ಯು.ನಾಚಪ್ಪ, ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆ, ಆದಿಮಸಂಜಾತ ಕೊಡವ ಬುಡಕಟ್ಟು ಜನಾಂಗಕ್ಕೆ ಆಂತರಿಕ ರಾಜಕೀಯ ಸ್ವ-ನಿರ್ಣಯದ ಹಕ್ಕುಗಳು ಮತ್ತು ಎಸ್‌ಟಿ ಟ್ಯಾಗ್ ನೀಡಬೇಕು. ಅಂತರರಾಷ್ಟ್ರೀಯ ಕಾನೂನಿನಡಿಯಲ್ಲಿ ಕೊಡವ ಬುಡಕಟ್ಟಿನ ಮಾತೃ ಮಣ್ಣಿನಲ್ಲಿ ಐತಿಹಾಸಿಕ ನಿರಂತರತೆಗಾಗಿ ಸಾರ್ವತ್ರಿಕ ಮನ್ನಣೆಯನ್ನು ಕಲ್ಪಿಸಬೇಕು. ಕೊಡವ ಭೂಮಿ, ಭಾಷೆ, ಸಾಂಸ್ಕೃತಿಕ ಪರಂಪರೆಯ ಆರ್ಥಿಕ ಮತ್ತು ರಾಜಕೀಯ ಸ್ವಾತಂತ್ರ‍್ಯಕ್ಕಾಗಿ ಸಾಂವಿಧಾನಿಕ ಖಾತ್ರಿ ಒದಗಿಸಬೇಕು, ಸಂವಿಧಾನದ 25 ಮತ್ತು 26 ನೇ ವಿಧಿಗಳ ಅಡಿಯಲ್ಲಿ ಕೊಡವ ಸಾಂಪ್ರದಾಯಿಕ “ಸಂಸ್ಕಾರ ಗನ್” ಹಕ್ಕಿಗೆ ಸಾಂವಿಧಾನಿಕ…

Read More

ಮಡಿಕೇರಿ NEWS DESK ನ.24 : ಭಾರತೀಯ ಸೇನೆಗೆ ಅಪಾರ ಶಕ್ತಿಯನ್ನು ತುಂಬಿದ ಮತ್ತು ತಮ್ಮದೇ ಆದ ಕೊಡುಗೆಯನ್ನು ನೀಡಿದ ವಿಶ್ವ ವಿಖ್ಯಾತ ವೀರ ಸೇನಾನಿಗಳಾದ ಫೀ.ಮಾ.ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ಅವರ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನ ಮಾಡಿರುವುದನ್ನು ತೀವ್ರವಾಗಿ ಖಂಡಿಸುವುದಾಗಿ ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ವಿ.ಜಿ.ಮೋಹನ್ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆಯನ್ನು ನೀಡಿರುವ ಅವರು ವೀರ ಸೇನಾಧಿಕಾರಿಗಳಿಗೆ ಅಗೌರವ ತೋರಿದ ಕಿಡಿಗೇಡಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಫೀ.ಮಾ.ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ಅವರು ಕೊಡಗು ಜಿಲ್ಲೆಯ ಹೆಮ್ಮೆಯ ವೀರಪುತ್ರರಾಗಿದ್ದಾರೆ. ಇವರ ಸೇನಾ ಸಾಧನೆಯ ಬಗ್ಗೆ ಅರಿವಿಲ್ಲದ ಕಿಡಿಗೇಡಿ ಆಕ್ಷೇಪಾರ್ಹ ಹೇಳಿಕೆಯನ್ನು ಪೋಸ್ಟ್ ಮಾಡಿ ಸಮಾಜದ ಸಾಮರಸ್ಯ ಕದಡುವ ಯತ್ನ ಮಾಡಿದ್ದಾನೆ. ದೇಶಭಕ್ತ ಯೋಧರನ್ನು ಅವಮಾನಿಸಿದ ಆರೋಪಿಯ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಿ ಉನ್ನತ ಮಟ್ಟದ ತನಿಖೆ ನಡೆಸಬೇಕು ಮತ್ತು ಈತನನ್ನು ಗಡಿಪಾರು ಮಾಡಬೇಕು. ಇನ್ನು ಮುಂದೆ ಈ ರೀತಿಯ ಪ್ರಕರಣಗಳು ನಡೆಯದಂತೆ ಪೊಲೀಸ್ ಇಲಾಖೆ…

Read More

ಮಡಿಕೇರಿ NEWS DESK ನ.24 : ಭಾಷೆ ಮತ್ತು ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ, ಇದನ್ನು ಓದುವ ಹವ್ಯಾಸದ ಮೂಲಕ ಬೆಳಗುವ ಕೆಲಸವಾಗಬೇಕು ಎಂದು ಹಿರಿಯ ಸಾಹಿತಿ ಬಾಚರಣಿಯಂಡ ಅಪ್ಪಣ್ಣ ಅವರು ಅಭಿಪ್ರಾಯಪಟ್ಟಿದ್ದಾರೆ. ಕೊಡಗಿನ ಸಾಹಿತ್ಯ ಕ್ಷೇತ್ರಕ್ಕೆ ಗಮನಾರ್ಹ ಕೊಡುಗೆಯನ್ನು ನೀಡುತ್ತಿರುವ ಕೊಡವ ಮಕ್ಕಡ ಕೂಟ ಸಂಘಟನೆಯ ದಾಖಲೆಯ “100ನೇ ಮೊಟ್ಟ್” 100ನೇ ಪುಸ್ತಕದ ಬಿಡುಗಡೆ ಸಮಾರಂಭವನ್ನು ಪತ್ರಿಕಾ ಭವನದಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು. ಜ್ಞಾನ ಭಂಡಾರದಿಂದ ಕೂಡಿರುವ ಸಾಹಿತ್ಯ ಕ್ಷೇತ್ರ ಭಾಷೆ ಮತ್ತು ಜಾತಿಯನ್ನು ಮೀರಿ ಬೆಳೆದಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಓದುಗರ ಸಂಖ್ಯೆ ಕಡಿಮೆಯಾಗುತ್ತಿರುವುದರಿಂದ ಬರಹಗಾರರಿಗೆ ಪ್ರೋತ್ಸಾಹದ ಕೊರತೆ ಎದುರಾಗಿದೆ. ದಿಗ್ಗಜ ಸಾಹಿತಿಗಳ ನಡುವೆ ನಾವು ಬೆಳೆಯುವುದು ಕಷ್ಟ ಎನ್ನುವ ಆತಂಕ ಹೊಸ ಬರಹಗಾರರಿಂದ ದೂರವಾಗಬೇಕು. ಉತ್ತಮ ಸಾಹಿತ್ಯ ರಚನೆಯ ಮೂಲಕ ಮುಂದೆ ಬರಬೇಕು ಎಂದು ಬಾಚರಣಿಯಂಡ ಅಪ್ಪಣ್ಣ ಕರೆ ನೀಡಿದರು. ಇಂದು ಸಾಹಿತ್ಯ ಕ್ಷೇತ್ರದಲ್ಲಿ ರಚನಾತ್ಮಕ ವಿಮರ್ಶೆಯ ಅಗತ್ಯವಿದೆ, ಬರಹಗಾರರಿಗೆ ಅರಿವಿಲ್ಲದೆಯೇ ಆಕ್ಷೇಪಾರ್ಹ ಅಂಶಗಳು ಸಾಹಿತ್ಯದಲ್ಲಿ ನುಸುಳುವ…

Read More

ಸೋಮವಾರಪೇಟೆ NEWS DESK ನ.23 : ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ ಮಾಡಿದ ಘಟನೆ ಸೋಮವಾರಪೇಟೆ ಪಟ್ಟಣದಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ಪರಾರಿಯಾಗುವ ಸಂದರ್ಭ ಚೋರರು ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದು,ಪೊಲೀಸರ ಅತಿಥಿಯಾಗಿದ್ದಾರೆ. ಪಟ್ಟಣದ ಸ್ವಾಮಿ ವಿವೇಕಾನಂದ ಸರ್ಕಲ್ ಬಳಿಯಿರುವ ಶ್ರೀಕುಮಾರಲಿಂಗೇಶ್ಚರ ಹಾರ್ಡ್ ವೇರ್ ಅಂಗಡಿಯಲ್ಲಿ ಮಾಲೀಕರಾದ ತೀರ್ಥ ಹರೀಶ್ ಒಬ್ಬರೆ ಕುಳಿತ್ತಿದ್ದ ಸಂದರ್ಭ, ಖರೀದಿಯ ನೆಪದಲ್ಲಿ ಬಂದ ಮೂವರು ಕಳ್ಳರು, ಇದ್ದಕ್ಕಿದ್ದಂತೆ ಕುತ್ತಿಗೆಯಲ್ಲಿದ್ದ ಸರವನ್ನು ಕಿತ್ತುಕೊಂಡಿದ್ದಾರೆ. ಡ್ರಾಯರ್‌ನಲ್ಲಿದ್ದ ಹಣ ಮತ್ತು ಚಿನ್ನದ ಸರವನ್ನು ತೆಗದುಕೊಂಡು ಸ್ಕೂಟಿಯಲ್ಲಿ ಪರಾರಿಯಾಗಲು ಪ್ರಯತ್ನಿಸಿದ್ದಾರೆ. ಮಹಿಳೆಯ ಚೀರಾಟವನ್ನು ಗಮನಿಸಿದ ಅಕ್ಕಪಕ್ಕದ ವರ್ತಕರು, ಸ್ಕೂಟಿಯನ್ನು ಹಿಂಬಾಲಿಸಿಕೊಂಡು ಹೋಗಿದ್ದಾರೆ. ಸಫಾಲಿ ಬಾರ್ ಮುಂಭಾಗ ಒಬ್ಬ ಅರೋಪಿಯನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸ್ ವಶದಲ್ಲಿರುವ ಆರೋಪಿ ಹಾಸನದ ಇಕ್ಬಾಲ್ ಎಂದು ತಿಳಿದು ಬಂದಿದೆ. ಮತ್ತೊಬ್ಬ ಆರೋಪಿ ಸನಬ್ ಎಂಬಾತ ಬಸ್‌ನಲ್ಲಿ ಹಾಸನಕ್ಕೆ ತೆರಳುತ್ತಿದ್ದ ಸಂದರ್ಭ ಶನಿವಾರಸಂತೆ ಬಳಿ ಸಿಕ್ಕಿಬಿದ್ದಿದ್ದಾನೆ. ಇಬ್ರಾಹಿಂ ಎಂಬುವವನು ತಲೆಮರೆಸಿಕೊಂಡಿದ್ದಾನೆ ಎಂದು…

Read More

ಸೋಮವಾರಪೇಟೆ NEWS DESK ನ.23 : ದೇಶ ಕಂಡ ಅಪ್ರತಿಮ ವೀರ ಸೇನಾನಿಗಳಾದ ಫೀ.ಮಾ.ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ಅವರನ್ನು ಸಾಮಾಜಿಕ ಜಾಲತಾಣದಲ್ಲಿ ಅವಮಾನಿಸಿರುವ ಪ್ರಕರಣವನ್ನು ತೀವ್ರವಾಗಿ ಖಂಡಿಸುವುದಾಗಿ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ವೀರ ಸೇನಾನಿಗಳಿಗೆ ಅಗೌರವ ತೋರಿರುವುದು ಇಡೀ ದೇಶಭಕ್ತರಿಗೆ ಮಾಡಿದ ಅಪಮಾನವಾಗಿದೆ. ಪ್ರಕರಣದ ಆರೋಪಿ ವಿರುದ್ಧ ಪೊಲೀಸ್ ಇಲಾಖೆ ಸಮಗ್ರ ತನಿಖೆ ನಡೆಸಿ ಶಿಕ್ಷೆಗೆ ಗುರಿಪಡಿಸಬೇಕೆಂದು ಒತ್ತಾಯಿಸಿದ್ದಾರೆ. ರಾಷ್ಟ್ರ ರಕ್ಷಣೆಗಾಗಿ ಅಪಾರ ಕೊಡುಗೆಯನ್ನು ನೀಡಿ ಭಾರತೀಯ ಸೇನೆಯನ್ನು ಬಲಿಷ್ಠಗೊಳಿಸಿದ ವೀರ ಸೇನಾಧಿಕಾರಿಗಳ ಅವಹೇಳನವನ್ನು ಯಾರೂ ಸಹಿಸಲು ಸಾಧ್ಯವಿಲ್ಲ. ಫೀ.ಮಾ.ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ಅವರಿಂದ ಪ್ರೇರೇಪಣೆಗೊಂಡು ಇಂದು ಕೂಡ ಕೊಡಗು ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯ ಯುವಕರು ಸೇನೆಗೆ ಸೇರ್ಪಡೆಯಾಗಿ ದೇಶ ಸೇವೆ ಮಾಡುತ್ತಿದ್ದಾರೆ. ಇದನ್ನು ಅರಿಯದ ಕಿಡಿಗೇಡಿ ಅತ್ಯಂತ ಅವಿವೇಕತನದಿಂದ ವರ್ತಿಸಿದ್ದು, ಮಹಾನ್ ಸೇನಾನಿಗಳ ಬಗ್ಗೆ ಅಗೌರವ ತೋರಿರುವುದನ್ನು ಕಟು ಶಬ್ಧಗಳಲ್ಲಿ ಖಂಡಿಸುವುದಾಗಿ ಎಸ್.ಮಹೇಶ್…

Read More

ಮಡಿಕೇರಿ NEWS DESK ನ.23 : ವೀರ ಸೇನಾನಿಗಳಾದ ಫೀ.ಮಾ.ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ಅವರುಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅವಮಾನಿಸಿದ ಕಿಡಿಗೇಡಿಯನ್ನು ತಕ್ಷಣ ಗಡಿಪಾರು ಮಾಡಬೇಕು ಮತ್ತು ಗುಪ್ತಚರ ಇಲಾಖೆ ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ಅವರಂತಹ ಭಾರತೀಯ ಸೇನೆಯ ದಂತಕಥೆಗಳ ವಿರುದ್ಧ ಸಾಮಾಜಿಕ ಜಾಲತಾಣದ ಮೂಲಕ ಅವಹೇಳನ ಮಾಡಿರುವುದು ಶಿಕ್ಷಾರ್ಹ ಅಪರಾಧವಾಗಿದೆ. ಈ ರೀತಿಯ ಬೆಳವಣಿಗೆ ದೇಶಭಕ್ತಿ ಮತ್ತು ರಾಷ್ಟ್ರೀಯವಾದಿ ಶಕ್ತಿಗಳನ್ನು ದುರ್ಬಲಗೊಳಿಸುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಕೊಡವ ಸಮುದಾಯದ ವಿರುದ್ಧ ಪಿತೂರಿ ನಡೆಸುತ್ತಿದ್ದು, ಬೆದರಿಕೆಯ ಮೂಲಕ ಕೊಡವರ ನೈತಿಕತೆಯನ್ನು ದುರ್ಬಲಗೊಳಿಸುವ ಯತ್ನ ಆತಂಕಕಾರಿಯಾಗಿದೆ. ಗುಪ್ತಚರ ಇಲಾಖೆ ಕಿಡಿಗೇಡಿಯ ಜಾಲವನ್ನು ಪತ್ತೆ ಹಚ್ಚಬೇಕು ಮತ್ತು ದಮನ ಮಾಡಬೇಕು. ಕೊಡಗಿನಿಂದ ಶಾಶ್ವತವಾಗಿ ಗಡಿಪಾರು ಮಾಡಿ ಕೊಡವ ಸಮುದಾಯಕ್ಕೆ ಹೆಚ್ಚಿನ ಹಾನಿಯಾಗದಂತೆ ತಡೆಯಬೇಕು ಮತ್ತು ಸಾಮಾಜಿಕ ಸಾಮರಸ್ಯವನ್ನು ಕಾಪಾಡಬೇಕು. ವೀರ…

Read More

ನ.25 ರಿಂದ ಡಿ.1ರ ವರೆಗೆ ಯಾರಿಗೆ ಶುಭ, ಯಾರಿಗೆ ಅಶುಭ ? ಮೇಷ ರಾಶಿ :: ಈ ವಾರ ನಿಮಗೆ ಅಷ್ಟೊಂದು ಒಳ್ಳೆಯದಿನವಲ್ಲ. ಸುತ್ತಾಟ, ಹಣವ್ಯಾಯ, ಬಂಧು ಕಲಹ, ಹೊಸ ಸ್ನೇಹಿತರು ಆಗುವರು. :: ಶುಭ ಸಂಖ್ಯೆ :: 1, 2, 39 :: ಶುಭ ಬಣ್ಣ :: ಕೆಂಪು, ಹಳದಿ, ಕೇಸರಿ. ವೃಷಭ ರಾಶಿ : ಈ ವಾರ ಉತ್ತಮ ಫಲ ಪಡೆಯಲಿದ್ದೀರಿ. ಹೊಸ ಬಟ್ಟೆ ಖರೀದಿಸಲಿದ್ದೀರಿ. ದೂರ ಪ್ರಯಾಣ ಮಾಡಲಿದ್ದೀರಿ, ಬಂಧು ಕಲಹದಿಂದ ದುಃಖ. :: ಶುಭ ಸಂಖ್ಯೆ :: 5, 6, 8 :: ಶುಭ ಬಣ್ಣ :: ಬಿಳಿ, ಹಸಿರು, ಕಪ್ಪು ಮಿಥುನ ರಾಶಿ :: ಈ ವಾರ ಬಿಡುವಿಲ್ಲದ ಕೆಲಸದಲ್ಲಿ ತೊಡಗುವಿರಿ, ಉತ್ತಮ ಸ್ಥಾನಮಾನ ದೊರಕಲಿದೆ. ದೂರು ಪ್ರಯಾಣ ಮಾಡಲಿದ್ದೀರಿ. ತೀರ ಸುತ್ತಾಟದಿಂದ ಅನಾರೋಗ್ಯ ಕಾಡಲಿದೆ. :: ಶುಭಸಂಖ್ಯೆ : 3, 5, 6 :: ಶುಭ ಬಣ್ಣ :: ಕೆಂಪು, ಹಸಿರು ಕರ್ಕಾಟಕ…

Read More