ಲೇಖಕ: admin

ಮಡಿಕೇರಿ NEWS DESK ನ.23 : ಕರ್ನಾಟಕ ರಾಜ್ಯದ ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾಂವಿ ಸವಣೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಚನ್ನಪಟ್ಟಣದಲ್ಲಿ ಸಿ.ಪಿ.ಯೋಗೇಶ್ವರ್, ಸಂಡೂರುವಿನಲ್ಲಿ ಅನ್ನಪೂರ್ಣ ತುಕಾರಾಂ ಹಾಗೂ ಶಿಗ್ಗಾಂವಿ ಸವಣೂರು ಕ್ಷೇತ್ರದಲ್ಲಿ ಯಾಸಿರ್ ಅಹಮ್ಮದ್ ಪಠಾಣ್ ಗೆಲುವು ಸಾಧಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಚನ್ನಪಟ್ಟಣದಲ್ಲಿ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿ ಶಿಗ್ಗಾಂವಿ ಸವಣೂರು ಕ್ಷೇತ್ರದಲ್ಲಿ ಸೋಲು ಅನುಭವಿಸಿದ್ದಾರೆ.

Read More

ಮಡಿಕೇರಿ ನ.23 NEWS DESK : ಮಕ್ಕಳ ದಿನಾಚರಣೆ ಹಿನ್ನಲೆಯಲ್ಲಿ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ಸಕಾ೯ರಿ ಬಾಲಕಿಯರ ಬಾಲಮಂದಿರದ ಮಕ್ಕಳಿಗೆ ಮನರಂಜನಾ ಕ್ರೀಡೆಯಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಯಿತು. ನಗರದ ರಾಜಾಸೀಟ್ ನಲ್ಲಿರುವ ಸಾಹಸ ಕ್ರೀಡೆಗಳಲ್ಲಿ ಸಕಾ೯ರಿ ಬಾಲಕಿಯರ ಬಾಲ ಮಂದಿರದ ಮಕ್ಕಳು ಸಂಭ್ರಮದಿಂದ ತೊಡಗಿಸಿಕೊಂಡರು. ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ಪೊನ್ನಚ್ಚನ ಮಧುಸೂದನ್, ಕಾಯ೯ದಶಿ೯ ಕಟ್ಟೆಮನೆ ಸೋನಜಿತ್ ಹಾಜರಿದ್ದರು.

Read More

ಪುತ್ತೂರು ನ.23 NEWS DESK : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಮಹಿಳೆಯರ ಕಬಡ್ಡಿ ತಂಡವು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿಕೊಂಡಿದೆ. ಬೆಂಗಳೂರಿನ ರಾಜರಾಜೇಶ್ವರಿ ಕಾಲೇಜ್ ಆಫ್ ಎಂಜಿನಿಯರಿಂಗ್‍ನಲ್ಲಿ ನಡೆದ ಈ ಕ್ರೀಡಾ ಕೂಟದಲ್ಲಿ ರಾಜ್ಯಾದ್ಯಂತ ಎಂಟು ವಿಭಾಗದ ಒಟ್ಟು 16 ತಂಡಗಳು ಭಾಗವಹಿಸಿದ್ದವು. ಇದರಲ್ಲಿ ಅತ್ಯುತ್ತಮ ನಿರ್ವಹಣೆಯನ್ನು ನೀಡಿದ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ತಂಡವು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ. ತಂಡವನ್ನು ಸಮರ್ಥವಾಗಿ ಮುನ್ನಡೆಸಿದ ನಾಯಕಿ, ತೃತೀಯ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ವರ್ಷಿತಾ.ಪಿ.ಆಳ್ವಾ ವಿಭಾಗ ಮಟ್ಟದ ಮತ್ತು ರಾಜ್ಯಮಟ್ಟದ ಕ್ರೀಡಾಕೂಟಗಳೆರಡರಲ್ಲೂ ಬೆಸ್ಟ್ ರೈಡರ್ ಆಗಿ ಹೊರಹೊಮ್ಮಿದ್ದಾರೆ. ಈ ಮೊದಲು ಮಂಗಳೂರಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಮಂಗಳೂರು ವಿಭಾಗಮಟ್ಟದ ಸ್ಪರ್ಧೆಯಲ್ಲಿ ಕಾಲೇಜು ತಂಡವು ದ್ವಿತೀಯ ಸ್ಥಾನವನ್ನು ಗೆದ್ದುಕೊಂಡು ರಾಜ್ಯಮಟ್ಟಕ್ಕೆ ಅರ್ಹತೆಯನ್ನು ಗಳಿಸಿಕೊಂಡಿತ್ತು. ಅಂತಿಮ ವರ್ಷದ ಎಲೆಕ್ಟ್ರಾನಿಕ್ಸ್ ವಿಭಾಗದ ರಶ್ಮಿ.ಎ, ವಿದ್ಯಾ.ಸಿ.ಎಸ್, ಅಂತಿಮ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ಶ್ರೇಯಾ.ಎಂ,…

Read More

ಮಡಿಕೇರಿ ನ.23 NEWS DESK : ಭಾರತ ದೇಶದ ಅಪ್ರತಿಮ ವೀರ ಸೇನಾನಿಗಳಾದ ಫೀ.ಮಾ.ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ತಿಮ್ಮಯ್ಯ ಅವರನ್ನು ಸಾಮಾಜಿಕ ಜಾಲತಾಣದಲ್ಲಿ ಅಪಮಾನಿಸಿರುವುದು ಖಂಡನೀಯವೆಂದು ಆಮ್ ಆದ್ಮಿ ಪಾರ್ಟಿಯ ರಾಜ್ಯ ಕಾರ್ಯದರ್ಶಿ ಭೋಜಣ್ಣ ಸೋಮಯ್ಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸಮಾಜದ ಸಾಮರಸ್ಯವನ್ನು ಕದಡುವ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಭಾರತೀಯ ಸೇನೆಗೆ ಫೀ.ಮಾ.ಕೆ.ಎಂ.ಕಾರ್ಯಪ್ಪ, ಜನರಲ್ ತಿಮ್ಮಯ್ಯ ಸೇರಿದಂತೆ ಕೊಡಗು ಜಿಲ್ಲೆಯ ಅನೇಕ ವೀರ ಯೋಧರು ಅಪಾರ ಕೊಡುಗೆಯನ್ನು ನೀಡಿದ್ದಾರೆ. ಸೇನೆಯಲ್ಲಿ ವಿವಿಧ ಹುದ್ದೆಗಳನ್ನು ಅಲಂಕರಿಸಿ ದೇಶದ ರಕ್ಷಣೆಗಾಗಿ ಯುದ್ಧಗಳನ್ನು ಎದುರಿಸಿ ತ್ಯಾಗಬಲಿದಾನ ಮಾಡಿದ್ದಾರೆ. ವೀರ ಯೋಧರಿಗೆ ನಿತ್ಯ ಗೌರವ ತೋರಬೇಕೆ ಹೊರತು ಅವಹೇಳನ ಮಾಡುವುದು ಸರಿಯಲ್ಲ. ಜಿಲ್ಲೆಯ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕದಡುವ ಕಿಡಿಗೇಡಿಗಳ ಪಿತೂರಿಯನ್ನು ಸರ್ಕಾರ ವಿಫಲಗೊಳಿಸಬೇಕು ಎಂದು ಭೋಜಣ್ಣ ಸೋಮಯ್ಯ ಒತ್ತಾಯಿಸಿದ್ದಾರೆ.  

Read More

ಮಡಿಕೇರಿ NEWS DESK ನ.23 : ದೇಶ ಕಂಡ ಅಪ್ರತಿಮ ವೀರ ಸೇನಾನಿಗಳಾದ ಫೀ.ಮಾ.ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ತಿಮ್ಮಯ್ಯ ಅವರ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಶ್ರೀವತ್ಸ ಭಟ್ ಎಂಬ ಹೆಸರಿನ ಖಾತೆಯ ಮೂಲಕ ಆಕ್ಷೇಪಾರ್ಹ ಪದ ಬಳಕೆ ಮಾಡಿ ಅಗೌರವ ತೋರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ತಿಳಿಸಿದ್ದಾರೆ. ನಗರದಲ್ಲಿ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಸುಳ್ಯ ತಾಲ್ಲೂಕಿನ ಹಾಲೆಟ್ಟಿ ಗ್ರಾಮದ ನಿವಾಸಿ, ವಕೀಲ ವೃತ್ತಿಯಲ್ಲಿ ತೊಡಗಿರುವ ವಿದ್ಯಾಧರ ಗೌಡ (66) ಬಂಧಿತ ಆರೋಪಿಯಾಗಿದ್ದು, ನ್ಯಾಯಾಲಯಕ್ಕೆ ಹಾಜರು ಪಡಿಸಿರುವುದಾಗಿ ಹೇಳಿದರು. ಇಡೀ ದೇಶವೇ ಗೌರವ ತೋರುವ ಸೇನಾ ನಾಯಕರ ಬಗ್ಗೆ ಅವಾಚ್ಯ ಪದ ಬಳಕೆ ಮಾಡಿರುವ ಕುರಿತು ಗ್ರೂಪ್ ನ ಅಡ್ಮಿನ್ ಅವರನ್ನು ವಿಚಾರಣೆ ನಡೆಸಿ ಮಾಹಿತಿ ಪಡೆಯಲಾಗಿದೆ. ಗ್ರೂಪ್‌ನಲ್ಲಿ ಯಾವುದೇ ರೀತಿಯ ಅವಹೇಳನಕಾರಿ ಮತ್ತು ಅವಾಚ್ಯ ಸಂದೇಶಗಳನ್ನು ರವಾನಿಸದಂತೆ ಗ್ರೂಪ್ ನಲ್ಲಿರುವ ಎಲ್ಲರಿಗೂ ಸೂಕ್ತ…

Read More

ಮಡಿಕೇರಿ ನ.23 NEWS DESK : ವಿರಾಜಪೇಟೆ ತಾಲ್ಲೂಕು ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ವತಿಯಿಂದ 2ನೇ ಹಂತದ ಅರ್ಜಿಗಳನ್ನು ವಿಲೇವಾರಿ ಮಾಡುವ ಸಲುವಾಗಿ ಸಂಬಂಧಿಸಿದ ಸ್ಥಳಗಳನ್ನು ಪರಿಶೀಲಿಸಲಾಯಿತು. ವಿರಾಜಪೇಟೆ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಅವರ ನಿರ್ದೇಶನದ ಮೇರೆಗೆ ವಿರಾಜಪೇಟೆ ತಾಲ್ಲೂಕು ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿಯ ಅಧ್ಯಕ್ಷ ಆರ್.ಕೆ.ಅಬ್ದುಲ್ ಸಲಾಂ, ಸದಸ್ಯರುಗಳಾದ ವಿ.ಕೆ.ಸತೀಶ್ ಕುಮಾರ್, ಕೋಳೆರ ಟೀನಾ ಅವರ ನೇತೃತ್ವದಲ್ಲಿ ತಹಶೀಲ್ದಾರ್ ರಾಮಚಂದ್ರ, ಕಂದಾಯ ಪರಿವೀಕ್ಷಕರು, ಗ್ರಾಮ ಲೆಕ್ಕಿಗರು ಹಾಗೂ ಸಿಬ್ಬಂದಿಗಳು ಸ್ಥಳ ಪರಿಶೀಲನೆ ನಡೆಸಿದರು. ವಿರಾಜಪೇಟೆ ಹೋಬಳಿಯ ಹೆಗ್ಗಳ, ಆರ್ಜಿ, ಬೇಟೋಳಿ ಗ್ರಾಮಗಳಲ್ಲಿ ಸರ್ಕಾರಿ ಜಾಗ ಮಂಜೂರಾತಿ ಕೋರಿ ಫಾರಂ 57 ರಲ್ಲಿ ಈಗಾಗಲೇ ಅರ್ಜಿ ಸಲ್ಲಿಕೆಯಾಗಿದೆ. ಈ ಸಂಬಂಧ ಸ್ಥಳ ಪರಿಶೀಲನೆ ನಡೆಸಲಾಯಿತು ಎಂದು ಆರ್.ಕೆ.ಅಬ್ದುಲ್ ಸಲಾಂ ತಿಳಿಸಿದರು.

Read More

ಮಡಿಕೇರಿ ನ.23 NEWS DESK : ವಿರಾಜಪೇಟೆ ಕಾವೇರಿ ಕಾಲೇಜು ಹಾಗೂ ಇನ್ಟೊಪೀಸ್ ಡ್ಯಾನ್ಸ್ ಕ್ರಿವ್ ಸಂಸ್ಥೆಯ ಜಂಟಿ ಸಹಯೋಗದಲ್ಲಿ ನ.29 ರಂದು ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ ಸಾಂಸ್ಕೃತಿಕ ಕಲರವ ಎಂಬ ಜಿಲ್ಲಾಮಟ್ಟದ ವಿವಿಧ ಜಾನಪದ ಸ್ಪರ್ಧೆ ನಡೆಸಲಾಗುವುದು ಎಂದು ಕಾಲೇಜಿನ ಪ್ರಾಂಶುಪಾಲರಾದ ಬೆನೆಡಿಕ್ಟ್ ಆರ್.ಸಲ್ದಾನ ತಿಳಿಸಿದರು. ಕಾಲೇಜಿನ ಕೌಸ್ತುಬ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಲೇಜಿನ ಆವರಣದಲ್ಲಿ ಸಾಂಸ್ಕೃತಿಕ ಕಲರವ ನಡೆಯಲಿದ್ದು, ಆಧುನಿಕ ಮಾಧ್ಯಮದಿಂದ ಮಕ್ಕಳ ಗಮನ ಭಾರತೀಯ ಹಾಗೂ ಸ್ಥಳೀಯ ಸಂಸ್ಕೃತಿಯಿಂದ ದೂರವಾಗುತ್ತಾ ಪಾಶ್ಚಿಮಾತ್ಯದ ಕಡೆಗೆ ಸಾಗುತ್ತಿದೆ. ಈ ಸಮಾಜದಲ್ಲಿ ನಮ್ಮ ಮೂಲ ಸಂಸ್ಕೃತಿ ನೀಡುವ ಮೌಲ್ಯವು ದಿನೇ ದಿನೇ ಕ್ಷೀಣಿಸುತ್ತಿದೆ. ವಿದ್ಯಾರ್ಥಿಗಳಲ್ಲಿ ನಿರ್ದಿಷ್ಟವಾದ ಗುರಿ ಹಾಗೂ ಗುರಿ ತಲುಪಲು ಬೇಕಾದ ಪ್ರಯತ್ನ ಕಾಣುತ್ತಿಲ್ಲ. ಎಲ್ಲಾ ಕ್ಷೇತ್ರಗಳಲ್ಲೂ ನಿರಾಸಕ್ತಿ ಹೆಚ್ಚುತ್ತಾ ಹೋಗುತ್ತಿದೆ . ಆದ್ದರಿಂದ ಮಕ್ಕಳಲ್ಲಿ ಮೂಲ ಸಂಸ್ಕೃತಿಯ ಬಗ್ಗೆ ಅರಿವು ಮೂಡಿಸಲು ಹಾಗೂ ನಮ್ಮ ಜಾನಪದ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಈ ಜಿಲ್ಲಾ ಮಟ್ಟದ ಸಾಂಸ್ಕೃತಿಕ…

Read More

ವಿರಾಜಪೇಟೆ ನ.23 NEWS DESK : ಕಾಸರಗೋಡು ಬದಿಯಡ್ಕ ಗಡಿನಾಡ ಗಾನಕೋಗಿಲೆ ಕಲಾವಿದರ ವೇದಿಕೆ ಹಾಗೂ ಕೋಲಾರ ಸ್ವರ್ಣಭೂಮಿ ಫೌಂಡೇಶನ್ ವತಿಯಿಂದ ಕೊಡಗಿನ ಹಿನ್ನೆಲೆ ಗಾಯಕಿ ಕಬ್ಬಚ್ಚಿರ ರಶ್ಮಿ ಕಾರ್ಯಪ್ಪ ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಬ್ಬಚ್ಚಿರ ರಶ್ಮಿ ಕಾರ್ಯಪ್ಪ ಅವರ ಸಂಗೀತ ಹಾಗೂ ಸಾಹಿತ್ಯ ಸೇವೆಯನ್ನು ಗುರುತಿಸಿ ಕಾಸರಗೋಡಿನ ಬಾರಡ್ಕದಲ್ಲಿ ನಡೆದ ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಗಣ್ಯರು ಪ್ರಶಸ್ತಿ ಪ್ರದಾನ ಮಾಡಿದರು.  

Read More

ಮಡಿಕೇರಿ ನ.23 NEWS DESK : ಸಂಸ್ಕಾರವಂತ ಸಮಾಜ ನಿರ್ಮಾಣದ ರೂವಾರಿಗಳು ಅಂಗನವಾಡಿ ತಾಯಂದಿರು ಎಂದು ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ದ ತೆನ್ನಿರ ಮೈನಾ ಶ್ಲಾಘಿಸಿದ್ದಾರೆ. ಬೋಯಿಕೆರಿ ಅಂಗನವಾಡಿಯಲ್ಲಿ ನಿವೃತ್ತ ಅಂಗನವಾಡಿ ಕಾರ್ಯಕರ್ತೆಯರಿಗೆ ಬೋಳ್ಕೊಡುಗೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು. ಅಂಗನವಾಡಿ ಕಾರ್ಯಕರ್ತೆಯರು ತಾವು ಪಡೆಯುವ ಗೌರವಧನಕ್ಕೆ ಮೀರಿ ನಿಸ್ವಾರ್ಥ ಸೇವೆಯನ್ನು ಮಾಡುತ್ತಿರುವವರು,ಇವರಿಂದ ಮಕ್ಕಳು ಸಂಸ್ಕಾರ ಮತ್ತು ಶಿಸ್ತನ್ನು ಪಡೆದು ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ರೂಪಗೊಳ್ಳುತ್ತಿದ್ದಾರೆ. ಇಂತಹ ಕಾರ್ಯಕರ್ತೆಯರ ಬೀಳ್ಕೊಡುಗೆ ಸಮಾರಂಭಕ್ಕೆ ಪಾಲ್ಗೊಂಡು ಭೂಮಿ ತೂಕದ ವ್ಯಕ್ತಿತ್ವದ ತಾಯಿಯಂದಿರನ್ನು ಸನ್ಮಾನಿಸಿದ್ದು ತುಂಬಾ ಸಂತೋಷವನ್ನು ಉಂಟು ಮಾಡಿದ್ದು ಇದೊಂದು ಅವಿಸ್ಮರಣೀಯ ಕ್ಷಣ ಎಂದು ತಿಳಿಸಿದರು. ಸರ್ಕಾರದ ಎಲ್ಲಾ ಯೋಜನೆಗಳನ್ನು ಮಹಿಳೆಯರಿಗೆ ಮಕ್ಕಳಿಗೆ ಗ್ರಾಮಸ್ಥರಿಗೆ ತಲುಪಿಸುವಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರಿಗೆ ಸಮಾಜದ ಪರವಾಗಿ ಧನ್ಯವಾದಗಳು ಅರ್ಪಿಸಿದರು. ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಮೇಪಾಡಂಡ ಸವಿತಾ ಕೀರ್ತನ್ ಮಾತನಾಡಿ, 30 ರಿಂದ 32…

Read More

ಮಡಿಕೇರಿ ನ.23 NEWS DESK : ನಗರದ ವ್ಯಾಂಡಮ್ ಎಂಟರ್‌ಪ್ರೈಸಸ್  ನ 29ನೇ ವಾರ್ಷಿಕೋತ್ಸವದ ಪ್ರಯುಕ್ತ ಆಯೋಜಿಸಲಾದ ಪ್ರತೀ 2,000 ಖರೀದಿಗೆ ನೀಡಲಾದ ಉಚಿತ ಕೂಪನ್ “ಲಕ್ಕಿ ಡ್ರಾ ಸಮಾರಂಭವು ನ.24 ರಂದು ನಡೆಯಲಿದೆ. ವ್ಯಾಂಡಮ್ ಎಂಟರ್‌ಪ್ರೈಸಸ್ ನಲ್ಲಿ ಬೆಳಿಗ್ಗೆ 11 ಗಂಟೆಗೆ ಲಯನ್ಸ್ ಕ್ಲಬ್ ಇಂಟನ್ರ್ಯಾಷನಲ್ ನಿಕಟ ಪೂರ್ವ ಪ್ರಾಂತೀಯ ಅಧ್ಯಕ್ಷ ಲಯನ್ ಪಟ್ರಪಂಡ ಪಿ.ಸೋಮಣ್ಣ (ಎಂಜೆಎಫ್) ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮದೆನಾಡು ಮದೆ ಮಹೇಶ್ವರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಬಿ.ಸಿದ್ದರಾಜು ಪಾಲ್ಗೊಳ್ಳಲಿದ್ದಾರೆ. ಮಕ್ಕಂದೂರು ಪ್ರೌಢಶಾಲಾ ಶಿಕ್ಷಕಿ ಲಯನ್ ಜಿ.ವನಜಾಕ್ಷಿ ದಾಮೋದ್ ಗೌರವ ಉಪಸ್ಥಿತರಿರಲಿದ್ದಾರೆ.  

Read More