ಲೇಖಕ: admin

ಮಡಿಕೇರಿ ನ.22 NEWS DESK : ಕೊಡವಲ್ಯಾಂಡ್ ಹಕ್ಕೊತ್ತಾಯದ ಪ್ರತಿಪಾದನೆಯ ನಿರಂತರತೆಗಾಗಿ ನ.26 ರಂದು ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ 34ನೇ ವರ್ಷದ “ಕೊಡವ ನ್ಯಾಷನಲ್ ಡೇ” ಮತ್ತು ಭಾರತದ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಗುವುದು ಎಂದು ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಮಡಿಕೇರಿಯ ಹೊರ ವಲಯದ ಕ್ಯಾಪಿಟಲ್ ವಿಲೇಜ್ ನಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಎಲ್ಲಾ ಕೊಡವರು ಪಾಲ್ಗೊಳ್ಳುವ ಮೂಲಕ ಒಗ್ಗಟ್ಟನ್ನು ಪ್ರದರ್ಶಿಸಬೇಕು ಎಂದು ಮನವಿ ಮಾಡಿದ್ದಾರೆ. ಈ ಕೊಡವ ಸಮಾವೇಶ ಕೊಡವರ ರಾಜ್ಯಾಂಗದತ್ತ ಹಕ್ಕೊತ್ತಾಯದ ನಿರಂತರ, ಘಟನಾತ್ಮಕ ಅರಾಜಕೀಯ ಪ್ರಯಾಣವನ್ನು ಪುನರುಜ್ಜೀವನಗೊಳಿಸುತ್ತದೆ ಮತ್ತು ಪ್ರತಿಧ್ವನಿಸುತ್ತದೆ. ಭಾರತದ ಸಾರ್ವಭೌಮತ್ವ ಮತ್ತು ಪ್ರಭುತ್ವದಡಿಯಲ್ಲಿ ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆಯನ್ನು ಸಾಧಿಸಲು ಮತ್ತು ವಿಶ್ವರಾಷ್ಟ್ರ ಮಾನ್ಯತೆಯೊಂದಿಗೆ ಆದಿಮಸಂಜಾತ ಕೊಡವರಿಗೆ ಅಂತರರಾಷ್ಟ್ರೀಯ ಕಾನೂನಿನಡಿಯಲ್ಲಿ ಪರಿಗಣನೆ ಮತ್ತು ಕೊಡವರ ಇತರೆ ಹತ್ತು ಶಾಸನ ಬದ್ಧ ಗುರಿಗಳು ಮತ್ತು ಅಶೋತ್ತರಗಳಿಗಾಗಿ ಸಂವಿಧಾನಿಕ ಹಕ್ಕೊತ್ತಾಯಗಳನ್ನು ಸಿಎನ್‍ಸಿ ಪ್ರತಿಪಾದಿಸುತ್ತ ಬಂದಿದೆ. ಕೊಡವ ಲೋಕದ…

Read More

ಮಡಿಕೇರಿ ನ.22 NEWS DESK : ಕೊಡಗು ಜಿಲ್ಲಾ ಕಿವುಡರ ಸಂಘದ ಸಭೆಯು ನ.24 ರಂದು ಸಂಘದ ಅಧ್ಯಕ್ಷೆ ಗೌರು ಎಂ.ಸೋಮಣ್ಣ ಅಧ್ಯಕ್ಷತೆಯಲ್ಲಿ ನಡೆಯಲಿದೆ. ವಿರಾಜಪೇಟೆಯ ರೋಟರಿ ಪ್ರಾಥಮಿಕ ಶಾಲೆ ಸಭಾಂಗಣದಲ್ಲಿ ಬೆಳಿಗ್ಗೆ 10 ಗಂಟೆಯಿಂದ 1 ಗಂಟೆಯವರೆಗೆ ನಡೆಯಲಿರುವ ಸಭೆಗೆ ಸರ್ವ ಸದಸ್ಯರು ಹಾಜರಾಗುವಂತೆ ಕೊಡಗು ಜಿಲ್ಲಾ ಕಿವುಡರ ಸಂಘದ ಆಡಳಿತ ಮಂಡಳಿ ಕೋರಿದೆ.

Read More

ಕುಶಾಲನಗರ, ನ.22 NEWS DESK : ಬೀದರ್ ನ ಕಲ್ಯಾಣ ಕರ್ನಾಟಕ ಪ್ರತಿಷ್ಠಾನದ ವತಿಯಿಂದ ಸುವರ್ಣ ಕರ್ನಾಟಕ ಸಂಭ್ರಮ: 50 ರ ಅಂಗವಾಗಿ ರಾಜ್ಯಾದ್ಯಂತ ಸಂಚರಿಸುತ್ತಿರುವ  ಅಕ್ಷರ ಜ್ಯೋತಿ ಯಾತ್ರೆ ಗೆ ಕುಶಾಲನಗರ ಪಟ್ಟಣದಲ್ಲಿ ಭವ್ಯ ಸ್ವಾಗತ ಕೋರಲಾಯಿತು. ನೆರೆಯ ಮೈಸೂರು ಜಿಲ್ಲೆಯಿಂದ  ಆಗಮಿಸಿದ ಆಗಮಿಸಿದ ಅಕ್ಷರ ಜ್ಯೋತಿ ಯಾತ್ರೆಯನ್ನು ಕುಶಾಲನಗರ ಅನುಗ್ರಹ ಪದವಿ ಪೂರ್ವ ಹಾಗೂ ಪದವಿ ಕಾಲೇಜು ಬಳಿ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ‌ ಬರ ಮಾಡಿಕೊಂಡರು. ಅಕ್ಷರ ಜ್ಯೋತಿ ಯಾತ್ರೆಯ ಉದ್ದೇಶ ಕುರಿತು ಪ್ರತಿಷ್ಠಾನದ ಅಧ್ಯಕ್ಷ ಬಸವಕುಮಾರ್ ಪಾಟೀಲ್ ಮಾತನಾಡಿ, ಕಲ್ಯಾಣ ಕರ್ನಾಟಕ ಪ್ರತಿಷ್ಠಾನದ ವತಿಯಿಂದ ರಾಜ್ಯದ ಎಲ್ಲಾ ಗಡಿ ಪ್ರದೇಶಗಳು ಹಾಗೂ 34 ಶೈಕ್ಷಣಿಕ ಜಿಲ್ಲೆಗಳಲ್ಲಿ ಒಟ್ಟು 63 ದಿನಗಳ ಕಾಲ ಅಕ್ಷರ ಜ್ಯೋತಿ ಯಾತ್ರೆ ನಡೆಯಲಿದ್ದು, ಪ್ರೌಢ ಹಾಗೂ ಪಿಯು ತರಗತಿಗಳ ವಿದ್ಯಾರ್ಥಿಗಳಲ್ಲಿ ದೇಶ ಪ್ರೇಮ, ಮಾತೃ ಪ್ರೇಮ ಮೂಡಿಸುವುದು. ಒಳ್ಳೆಯ ಹವ್ಯಾಸ ಹಾಗೂ ಅಭ್ಯಾಸಗಳ ಮೂಲಕ ಉತ್ತಮ ಚಾರಿತ್ರ್ಯ ವುಳ್ಳವರಾಗಿ ಅವರನ್ನು ರೂಪಿಸಲು…

Read More

ಮಡಿಕೇರಿ ನ.22 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮೂರ್ನಾಡು ಹೋಬಳಿ ಘಟಕದ ವತಿಯಿಂದ ನ.29 ರಂದು ಮೂರ್ನಾಡುವಿನಲ್ಲಿ 69ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುವುದು ಎಂದು ಕ.ಸಾ.ಪ ಮೂರ್ನಾಡು ಘಟಕದ ಅಧ್ಯಕ್ಷೆ ಈರಮಂಡ ಹರಿಣಿ ವಿಜಯ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂತೂರು ಮೂರ್ನಾಡು ಗ್ರಾ.ಪಂ, ಪಿ.ಎಂ ಶ್ರೀ ಸರಕಾರಿ ಮಾದರಿ ಕಿರಿಯ ಪ್ರಾಥಮಿಕ ಶಾಲೆ ಹಾಗೂ ಮೂರ್ನಾಡು ಹೋಬಳಿ ಘಟಕದ ವಿವಿಧ ಶಾಲೆ, ಕಾಲೇಜು, ಸಂಘ ಸಂಸ್ಥೆಗಳ ಸಹಯೋಗದಲ್ಲಿ ಪಿ.ಎಂ ಶ್ರೀ ಸರಕಾರಿ ಮಾದರಿ ಕಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದರು. ಬೆಳಿಗ್ಗೆ 11 ಗಂಟೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ಮೂರ್ನಾಡು ಹೋಬಳಿ ಘಟಕದ ಅಧ್ಯಕ್ಷೆ ಈರಮಂಡ ಹರಿಣಿ ವಿಜಯ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಹಾಗೂ ಮಾಜಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಅವರು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕ.ಸಾ.ಪ ಜಿಲ್ಲಾಧ್ಯಕ್ಷ ಎಂ.ಪಿ.ಕೇಶವ…

Read More

ಮಡಿಕೇರಿ ನ.22 NEWS DESK : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ಬೋಧಕ ಆಸ್ಪತ್ರೆಯ ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ (ಕಭಿ) ಕ್ಲಿನಿಕ್ , ಸಾಮಾನ್ಯ ವೈದ್ಯ ಶಾಸ್ತ್ರ ವಿಭಾಗ ಹಾಗೂ ಕುಶಾಲನಗರ ತಾಲ್ಲೂಕಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರಾಷ್ಟ್ರೀಯ ಅಪಸ್ಮಾರ (ಮೂರ್ಛೆರೋಗ) ದಿನಾಚರಣೆಯನ್ನು ಆಚರಿಸಲಾಯಿತು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ, ಬೆಂಗಳೂರು ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರವಿಜ್ಞಾನ ಸಂಸ್ಥೆ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ಮಡಿಕೇರಿ  ಬೋಧಕ ಆಸ್ಪತ್ರೆಯ  ಸಹಯೋಗದಲ್ಲಿ ಅಪಸ್ಮಾರದ ಪ್ರಯಾಣದಲ್ಲಿ ಮೈಲಿಗಲ್ಲುಗಳು ಎಂಬ 2024ರ ಘೋಷ ವಾಕ್ಯದೊಂದಿಗೆ ಕಾರ್ಯಕ್ರಮ ನಡೆಯಿತು. ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮತ್ತು ಬೋಧಕ ಆಸ್ಪತ್ರೆಯ ಸಂಸ್ಥೆಯ ಸಾಮಾನ್ಯ ವೈದ್ಯಕಿಯ ವಿಭಾಗದ ಮುಖ್ಯ ವೈದ್ಯಧಿಕಾರಿ ಡಾ.ಚೇತನ್,  ಅಪಾಸ್ಮಾರ ಖಾಯಿಲೆಯ ಬಗ್ಗೆ  ಅರಿವು  ಮೂಡಿದರು. ಕಾರ್ಯಕ್ರಮಕ್ಕೆ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮತ್ತು ಬೋಧಕ ಆಸ್ಪತ್ರೆಯ ಆಡಳಿತಧಿಕಾರಿ ರೋಹಿಣಿ, ವೈದ್ಯರಾದ ಡಾ.ಅಜಯ್, ಕರ್ನಾಟಕ…

Read More

ಮಡಿಕೇರಿ ನ.22 NEWS DESK : ಭಾರತ ದೇಶ ಕಂಡ ವೀರ ಸೇನಾನಿಗಳಾದ ಫೀ.ಮಾ.ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಹೇಳಿಕೆ ನೀಡಿರುವ ವ್ಯಕ್ತಿಯನ್ನು ತಕ್ಷಣ ಬಂಧಿಸಬೇಕೆಂದು ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಶ್ರೀವತ್ಸ ಭಟ್ ಎಂಬ ಹೆಸರಿನ ಖಾತೆ ಮೂಲಕ ಭಾರತೀಯ ಸೇನೆಯ ಪಿತಾಮಹ ಫೀ.ಮಾ.ಕಾರ್ಯಪ್ಪ ಹಾಗೂ ಜನರಲ್ ಗಳ ಜನರಲ್ ಖ್ಯಾತಿಯ ಜನರಲ್ ತಿಮ್ಮಯ್ಯ ಅವರನ್ನು ಅವಮಾನಿಸಲಾಗಿದೆ. ಇದು ಕೊಡಗು ಮಾತ್ರವಲ್ಲದೆ ಇಡೀ ದೇಶದ ಜನರಿಗೆ ನೋವನ್ನುಂಟು ಮಾಡಿದೆ. ಭಾರತೀಯ ಸೇನೆಯ ಬಗ್ಗೆ ಗೌರವವಿಲ್ಲದ ದೇಶದ್ರೋಹಿ ವೀರ ಸೇನಾನಿಗಳ ಬಗ್ಗೆ ಕೇವಲವಾಗಿ ಪ್ರತಿಕ್ರಿಯೆ ನೀಡಿದ್ದಾನೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಭಾರತೀಯ ಸೇನೆಯಲ್ಲಿ ಅಮೋಘ ಸೇವೆ ಸಲ್ಲಿಸಿ ವಿಶ್ವದ ಗಮನ ಸೆಳೆದಿದ್ದ ಇಬ್ಬರು ವೀರ ಸೇನಾಧಿಕಾರಿಗಳ ಬಗ್ಗೆ ಅವಹೇಳನ ಮಾಡಿರುವುದನ್ನು ಸಹಿಸಿಕೊಂಡು ಇರಲು ಸಾಧ್ಯವಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಕಿಡಿಗೇಡಿಯನ್ನು ಕೊಡಗು…

Read More

ಮಡಿಕೇರಿ ನ.22 NEWS DESK : ಮೂರ್ನಾಡು ಫ್ರೆಂಡ್ಸ್ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ 2023-2024ನೇ ಸಾಲಿನ ವಾರ್ಷಿಕ ಮಹಾಸಭೆಯು ಸಂಘದ ಕಚೇರಿಯಲ್ಲಿ ನಡೆಯಿತು. ಸಂಘದ ಅಧ್ಯಕ್ಷ ರಿಯಾಜ್ ಅಹಮದ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವಿವಿಧ ವಿಷಯಗಳ ಕುರಿತು ಚರ್ಚಿಸಿ, ಮುಂದಿನ ವರ್ಷದಲ್ಲಿ ಹಲವಾರು ಸಮಾಜಮುಖಿ ಕಾರ್ಯಗಳನ್ನು ನಡೆಸುವಂತೆ ತೀರ್ಮಾನಿಸಲಾಯಿತು. ಸಭೆಯಲ್ಲಿ ಸಂಘದ ಕಾರ್ಯದರ್ಶಿ ಎನ್.ಕೆ.ಶಶಿಧರ್ ಪ್ರಾರ್ಥಿಸಿದರು. ನಿರ್ದೇಶಕರಾದ ರಶೀಕ ಉತ್ತಪ್ಪ ವಂದಿಸಿದರು. ಸಭೆಯಲ್ಲಿ 2024 -25ನೇ ಸಾಲಿನ ನೂತನ ಆಡಳಿತ ಮಂಡಳಿಯನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ನೂತನ ಅಧ್ಯಕ್ಷರಾಗಿ ಕೆ.ಎ.ಖಾದರ್ ಹಾಗೂ ಕಾರ್ಯದರ್ಶಿಯಾಗಿ ಎನ್. ಕೆ.ಶಶಿಧರ್ ಪುನರ್ ಆಯ್ಕೆಯಾದರು. ಉಳಿದ ಕಾರ್ಯಕಾರಿ ಸಮಿತಿಯಲ್ಲಿ ಉಪಾಧ್ಯಕ್ಷರಾಗಿ ಆರ್.ವಿನೋದ್, ಗೌರವ ಅಧ್ಯಕ್ಷರಾಗಿ ಟಿ.ಎಸ್.ಭೀಮಯ್ಯ,  ಸಹ ಕಾರ್ಯದರ್ಶಿಯಾಗಿ ರಾಜೇಶ್ ಪಾರೇಮಜಲು, ಖಜಾಂಚಿಯಾಗಿ ಇಲಿಯಾಸ್, ಉಳಿದ ನಿರ್ದೇಶಕರಾಗಿ ಪಿ.ಎ.ಅಬೂಬಕ್ಕರ್, ರಶೀಕ ಉತ್ತಪ್ಪ, ದೊಡ್ಡ ಸ್ವಾಮಿ, ಸಾದಿರ್, ಮುರುಗೇಶ್, ನಿಚ್ಚು, ಎಂ.ಎಂ.ಉಮೇಶ, ಸತೀಶ, ರಾಜು ಜೋಷ್ ಆಯ್ಕೆಯಾದರು.  

Read More

ಮಡಿಕೇರಿ ನ.22 NEWS DESK : ನಾಪೋಕ್ಲು ನಿವಾಸಿ ಕಲಿಯಂಡ ಸಾಬು ಅಯ್ಯಣ್ಣ (80) ಇಂದು ನಿಧನರಾದರು. ನಾಪೋಕ್ಲುವಿನ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕ್ರೀಡಾ ಅಕಾಡೆಮಿಯ ಸ್ಥಾಪಕ ಅಧ್ಯಕ್ಷ, ಹಾಕಿ ಎನ್‌ಐಎಸ್ ತರಬೇತಿದಾರ, ಬಿಇಎಂಎಲ್ ಆಟಗಾರ ಸಾಬು ಅಯ್ಯಣ್ಣ ಅವರ ಅಂತ್ಯಕ್ರಿಯೆ ಇಂದು (ನ.22) ಸಂಜೆ 5 ಗಂಟೆಗೆ ನಾಪೋಕ್ಲು ಸ್ವಗೃಹದಲ್ಲಿ ಜರುಗಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

Read More

ಮಡಿಕೇರಿ ನ.22 NEWS DESK : ರಾಜ್ಯದಲ್ಲಿ ಗೊಂದಲ ಸೃಷ್ಟಿಸಿರುವ “ವಕ್ಫ್ ಕಾಯ್ದೆ” ಯನ್ನು ಹಿಂಪಡೆಯಬೇಕು ಮತ್ತು ವಿವಿಧ ಹಗರಣಗಳ ಆರೋಪ ಎದುರಿಸುತ್ತಿರುವ ರಾಜ್ಯ ಸರ್ಕಾರವನ್ನು ತಕ್ಷಣ ವಜಾಗೊಳಿಸಬೇಕೆಂದು ಒತ್ತಾಯಿಸಿ ಕೊಡಗು ಜಿಲ್ಲಾ ಬಿಜೆಪಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಚೌಡೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ವಕ್ಫ್ ಕಾಯ್ದೆಗೆ ಸಂಬಂಧಿಸಿದಂತೆ ಕೇಂದ್ರ ಜಂಟಿ ಸಮಿತಿಯನ್ನು ರಚಿಸಿದ್ದು, ಅದು ಸೂಚಿಸುವ ಬದಲಾವಣೆಗಳಿಗೆ ರಾಜ್ಯ ಒಪ್ಪಿಗೆಯನ್ನು ನೀಡಬೇಕು. ಮಡಿಕೇರಿಯ ರಾಜರ ಗದ್ದುಗೆ ಆಸ್ತಿಯ ಅತಿಕ್ರಮಣವನ್ನು ತೆರವುಗೊಳಿಸಬೇಕು. ಜಿಲ್ಲೆಯ ಸಿ ಮತ್ತು ಡಿ ಜಮೀನನ್ನು ಅರಣ್ಯವೆಂದು ಘೋಷಣೆ ಮಾಡುವ ಪ್ರಯತ್ನವನ್ನು ಸರ್ಕಾರ ಕೈಬಿಡಬೇಕೆಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಮಾಜಿ ಸಂಸದ ಪ್ರತಾಪ್ ಸಿಂಹ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ಧಾಳಿ ನಡೆಸಿದರು. ಕಳೆದ ಚುನಾವಣೆಯ ಸಂದರ್ಭವೆ ಬಿಜೆಪಿ ಪಕ್ಷವು, ಚುನಾವಣೆಯಲ್ಲಿ ಕಾಂಗ್ರೆಸ್‍ನ್ನು ಬೆಂಬಲಿಸಿದಲ್ಲಿ ಉಂಟಾಗುವ ಸಂಕಷ್ಟಗಳ ಬಗ್ಗೆ ಜನರಿಗೆ ಎಚ್ಚರಿಕೆಯನ್ನು ನೀಡಿತ್ತು.…

Read More

ಮಡಿಕೇರಿ ನ.22 NEWS DESK : ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳ ಮನವಿಗೆ ತಕ್ಷಣವೇ ಸ್ಪಂದಿಸಿ ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ  ಸ್ಥಳದಲ್ಲೇ ಪರಿಹಾರ ಒದಗಿಸಿದ್ದಾರೆ.  ಮಡಿಕೇರಿಯಿಂದ ದೇವಸ್ತೂರು ಕಾಲೂರು, ನಿಡವಟ್ಟು , ಬಾರಿ ಬೆಳ್ಳಚ್ಚು ಗ್ರಾಮಕ್ಕೆ  ಬಸ್ ಸಂಚಾರವಿಲ್ಲದೆ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುವಂತಾಗಿತ್ತು. ದೇವಸ್ತೂರಿನಿಂದ ಬಾರಿಬೆಳ್ಳಚ್ಚು ವರೆಗಿನ ಪ್ರದೇಶ ದುರ್ಗಮವಾಗಿದ್ದು, ವಿಪರೀತ ಮಳೆ ಹಾಗೂ ಮಾಂದಲಪಟ್ಟಿಗೆ ಪ್ರವಾಸಿಗರನ್ನು ಕರೆದೊಯ್ಯುವ ಸಲುವಾಗಿ ಜೀಪ್ ಓಡಾಟ ಹೆಚ್ಚಾಗಿ ರಸ್ತೆ ಸಂಪೂರ್ಣ ಹದಗೆಟ್ಟು ಹದಗೆಟ್ಟಿದ್ದರಿಂದ ಕಳೆದ ಮೂರು ದಿನಗಳಿಂದ ಬಸ್ ಅರ್ಧ ದಾರಿಗೆ ಮಾತ್ರ ಸಂಚರಿಸುತ್ತಿದ್ದು, ಇದರಿಂದ ವಿದ್ಯಾರ್ಥಿಗಳು ಸುಮಾರು ಎರಡು ಕಿ.ಮೀ.ದೂರದಿಂದ ನಡೆದುಕೊಂಡು ಬಂದು ಬಸ್ ಹತ್ತಬೇಕಾಯಿತು.  ಆದ್ದರಿಂದ ವಿದ್ಯಾರ್ಥಿಗಳೆಲ್ಲಾ ಸೇರಿ ಕಾಂಗ್ರೆಸ್ ಪ್ರಮುಖ ತೆನ್ನಿರ ಮೈನಾ ಅವರ ಮೂಲಕ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರಿಗೆ ಮನವಿಯನ್ನು ಸಲ್ಲಿಸಿ, ತಮ್ಮ ಅಳಲನ್ನು ತೋಡಿಕೊಂಡರು. ಮಕ್ಕಳ ಕೋರಿಕೆಯನ್ನು ಗಂಭೀರವಾಗಿ ಪರಿಗಣಿಸಿದ ಶಾಸಕರು ಲೋಕೋಪಯೋಗಿ ಅಧಿಕಾರಿಗಳಿಗೆ ತಕ್ಷಣವೇ ರಸ್ತೆ…

Read More