ಲೇಖಕ: admin

ಮಡಿಕೇರಿ ಜ.2 NEWS DESK : ಕುಶಾಲನಗರದಿಂದ ಸೋಮವಾರಪೇಟೆಗೆ ಹಾದು ಹೋಗುವ 33ಕೆವಿ ಮಾರ್ಗದ ನಿರ್ವಹಣೆ ಕಾಮಗಾರಿಯನ್ನು ಹಮ್ಮಿಕೊಂಡಿದ್ದು ಜ.3 ರಂದು ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ಯಡವನಾಡು, ಸೋಮವಾರಪೇಟೆ, ಶಾಂತಳ್ಳಿ, ಐಗೂರು, ದೊಡ್ಡಮಳ್ತೆ, ಅಬ್ಬೂರುಕಟ್ಟೆ, ಮಸಗೋಡು, ಕರ್ಕಳ್ಳಿ, ಹಾನಗಲ್ಲು, ಬೆಳೂರು, ಯಡವಾರೆ ಹಾಗೂ ಸುತ್ತಮುತ್ತಲ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್  ಕೋರಿದ್ದಾರೆ.

Read More

ವಿರಾಜಪೇಟೆ ಜ.2 NEWS DESK : ವಿರಾಜಪೇಟೆಯ ತ್ರಿವೇಣಿ ಶಾಲೆಯ 3ನೇ ತರಗತಿ ವಿದ್ಯಾರ್ಥಿನಿ ಎನ್.ಆರ್.ಹನ್ಸಿನಿಗೆ ಕರುನಾಡ ಭೂಷಣ ಪ್ರಶಸ್ತಿ ಲಭಿಸಿದೆ. ವಿರಾಜಪೇಟೆಯ ನಾಟ್ಯ ಮಯೂರಿ ನೃತ್ಯ ಟ್ರಸ್ಟ್ ವತಿಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ನಯನ ಸಭಾಂಗಣದಲ್ಲಿ ನಡೆದ ನೃತ್ಯೋತ್ಸವ ಕಾರ್ಯಕ್ರಮದಲ್ಲಿ ಹನ್ಸಿನಿಗೆ ಕರುನಾಡ ಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಸಂದರ್ಭ ಶಶಿಧರ್ ಕೋಟೆ, ಡಾ.ಕೆಂಚನೂರು ಶಂಕರ್, ಡಾ.ಶ್ರೀಧರ್, ಕಾಂತಿ ಶೆಟ್ಟಿ, ತೋತಾಪುರಿ ಸೋಮಶೇಖರ ಗುರೂಜಿ, ಮಲ್ಲಿಕಾ ಕೇಶವ್, ವೆಂಕಟರಾಜು, ವಿರಾಜಪೇಟೆಯ ನಾಟ್ಯ ಮಯೂರಿ ನೃತ್ಯ ಟ್ರಸ್ಟ್‌ನ ಪ್ರೇಮಾಂಜಲಿ ಇದ್ದರು. ಇವಳು ವಿರಾಜಪೇಟೆಯ ಚಿತ್ರ ಹಾಗೂ ರಾಜೇಶ್ ದಂಪತಿಯ ಪುತ್ರಿ.  

Read More

ಮಡಿಕೇರಿ ಜ.2 NEWS DESK :  ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ ಡಿ.31 ರಂದು ನಿವೃತ್ತಿ ಹೊಂದಿದ ಎಎಸ್ಐ ಕೆ.ಎಂ.ತಮ್ಮಯ್ಯ ಹಾಗೂ ಪೊಲೀಸ್ ನಿರೀಕ್ಷಕ ಉಮೇಶ್ ಉಪ್ಪಳಿಕೆ ಅವರನ್ನು ಕೊಡಗು ಜಿಲ್ಲಾ ಪೊಲೀಸ್ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಡಲಾಯಿತು.  ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ನಿವೃತ್ತರನ್ನು ಸನ್ಮಾನಿಸಿ ನಿವೃತ್ತ ಜೀವನ ಶುಭಪ್ರದವಾಗಿರಲೆಂದು ಹಾರೈಸಿದರು.

Read More

ಮಡಿಕೇರಿ ಜ.2 NEWS DESK : ಕಳೆದ 72 ವರ್ಷಗಳಿಂದ ರೋಟರಿ ಮಡಿಕೇರಿ ಸಮಾಜಕ್ಕೆ ಹಲವು ಕೊಡುಗೆ ಹಾಗೂ ಸೇವೆಗಳನ್ನು ನೀಡುತ್ತಾ ಬಂದಿದ್ದು, ಈ ಬಾರಿಯೂ ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ನೀಡಿದೆ ಎಂದು ರೋಟರಿ 3181 ಜಿಲ್ಲಾ ಗವರ್ನರ್ ವಿಕ್ರಂದತ್ತ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪೊಲೀಯೋ ನಿರ್ಮೂಲನೆ ಕಾರ್ಯಕ್ರಮದಲ್ಲಿ ಪ್ರಮುಖ ಪಾತ್ರವಾಹಿಸಿರುವ ರೋಟರಿ ಕ್ಲಬ್ ಉತ್ತಮ ಸೇವೆಗಳನ್ನು ಸಲ್ಲಿಸುವ ಮೂಲಕ ಸಮಾಜದಲ್ಲಿ ತನ್ನದೇ ಛಾಪನ್ನು ಮೂಡಿಸುತ್ತಾ ಬಂದಿದೆ ಎಂದರು. ಕೊಡಗಿನಲ್ಲಿ 14 ಕ್ಲಬ್‍ಗಳನ್ನು ಹೊಂದಿದ್ದು, 700 ಸದಸ್ಯರಿದ್ದಾರೆ. ರೋಟರಿಯ ನಾಲ್ಕು ಜಿಲ್ಲೆಗಳಲ್ಲಿ ರೂ.15 ಕೋಟಿ ವೆಚ್ಚದ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಕಳೆದ 6 ತಿಂಗಳಿನಲ್ಲಿ 3 ರಕ್ತದಾನ ಶಿಬಿರಗಳನ್ನು ಆಯೋಜಲಾಗಿದೆ. ಮಡಿಕೇರಿಯ ಅಶ್ವಿನಿ ಆಸ್ಪತ್ರೆಗೆ ಕೆಲವು ಸಲಕರಣೆಗಳನ್ನು ನೀಡಲಾಗಿದೆ. ಪ್ರಾಕೃತಿಕ ವಿಕೋಪದ ಸಂದರ್ಭ ಸೋಮವಾರಪೇಟೆಯಲ್ಲಿ ಸಂತ್ರಸ್ತರಿಗೆ ಮನೆಗಳನ್ನು ನೀಡಿದೆ ಎಂದು ಹೇಳಿದರು. ಹಿರಿಯ ನಾಗರೀಕರಿಗೆ ಸಂಧ್ಯಾ ಸುರಕ್ಷಯೋಜನೆಯ ಮೂಲಕ ಉಪಕರಣಗಳನ್ನು ನೀಡಿದೆ, ಹಲವು ಅಂಗನವಾಡಿ ಕೇಂದ್ರ ಹಾಗೂ ಸರಕಾರಿ ಶಾಲೆಗಳಿಗೆ…

Read More

ವಿರಾಜಪೇಟೆ ಜ.2 NEWS DESK : ವಿರಾಜಪೇಟೆ ಮಲೆತಿರಿಕೆ ಶ್ರೀ ಅಯ್ಯಪ್ಪ ಸೇವಾ ಸಮಿತಿ ವತಿಯಿಂದ ಮಲೆತಿರಿಕೆ ಶ್ರೀ ಅಯ್ಯಪ್ಪ ಸ್ವಾಮಿಯ ವಾರ್ಷಿಕ ಮಹೋತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ರಾತ್ರಿ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳೊಂದಿಗೆ ಆಚರಿಸಲಾಯಿತು. ಡಿ.25 ರಂದು ಕ್ಷೇತ್ರ ಪಾಲಕ ಗುಳಿಗನ ಪೂಜೆಯೊಂದಿಗೆ ಆರಂಭವಾಯಿತು. ಡಿ.26 ರಂದು ಧ್ವಜಾರೋಹಣ ಮತ್ತು ಮಂಡಲ ಪೂಜೆ ನಡೆಯಿತು. ಡಿ.30, 31 ರಂದು ಸಂಜೆ ವಿಶೇಷ ಪೂಜೆಗಳು ನಡೆಯಿತು. ಜ.1 ರಂದು ಮುಂಜಾನೆ ಗಣಪತಿ ಹೋಮ, ಲಕ್ಷ್ಮೀ ಪೂಜೆ, ಸರಸ್ವತಿ ಪೂಜೆ ಸೇರಿದಂತೆ ವಿವಿಧ ವಿಶೇಷ ಪೂಜೆಗಳು ನಡೆಯಿತು. ನಂತರ ತುಲಾಭಾರ ಸೇವೆ, ಶ್ರೀ ಅಯ್ಯಪ್ಪ ನ ಮಾಲಧಾರಿಗಳಿಂದ ಲಕ್ಷಾರ್ಚನೆ ಸೇವೆ ಜರುಗಿತು. ಪಡಿಹಾಡು ನಂತರ ಶ್ರೀ ಅಯ್ಯಪ್ಪ ಸ್ವಾಮಿಗೆ ಮಾಹಾಪೂಜೆ, ಮಹಾಮಂಗಳಾರತಿ ಸೇವೆ ನಡೆಯಿತು. ಬಳಿಕ ನೆರೆದಿದ್ದ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನೆರವೇರಿತು. ರಾತ್ರಿ ಬಾಲ ಅಯ್ಯಪ್ಪನ ಚಲನವಲನ ಉಳ್ಳ ಉತ್ಸವ ಮೂರ್ತಿಯ ಶೋಭಾಯತ್ರೆ ನಡೆಯಿತು. ಶೋಭಾಯಾತ್ರೆಗೆ ಮತ್ಸ್ಯ ಅವತಾರದ ಸ್ತಬ್ಧಚಿತ್ರವು, ಕೇರಳದ ಚಂಡೆಮದ್ದಳೆ,…

Read More

ಮಡಿಕೇರಿ ಜ.2 NEWS DESK : ಕಳೆದ 72 ವರ್ಷಗಳಿಂದ ರೋಟರಿ ಮಡಿಕೇರಿ ಸಮಾಜಕ್ಕೆ ಹಲವು ಕೊಡುಗೆ ಹಾಗೂ ಸೇವೆಗಳನ್ನು ನೀಡುತ್ತಾ ಬಂದಿದ್ದು, ಈ ಬಾರಿಯೂ ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ನೀಡಿದೆ ಎಂದು ರೋಟರಿ 3181 ಜಿಲ್ಲಾ ಗವರ್ನರ್ ವಿಕ್ರಂದತ್ತ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪೊಲೀಯೋ ನಿರ್ಮೂಲನೆ ಕಾರ್ಯಕ್ರಮದಲ್ಲಿ ಪ್ರಮುಖ ಪಾತ್ರವಾಹಿಸಿರುವ ರೋಟರಿ ಕ್ಲಬ್ ಉತ್ತಮ ಸೇವೆಗಳನ್ನು ಸಲ್ಲಿಸುವ ಮೂಲಕ ಸಮಾಜದಲ್ಲಿ ತನ್ನದೇ ಛಾಪನ್ನು ಮೂಡಿಸುತ್ತಾ ಬಂದಿದೆ ಎಂದರು. ಕೊಡಗಿನಲ್ಲಿ 14 ಕ್ಲಬ್‍ಗಳನ್ನು ಹೊಂದಿದ್ದು, 700 ಸದಸ್ಯರಿದ್ದಾರೆ. ರೋಟರಿಯ ನಾಲ್ಕು ಜಿಲ್ಲೆಗಳಲ್ಲಿ ರೂ.15 ಕೋಟಿ ವೆಚ್ಚದ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಕಳೆದ 6 ತಿಂಗಳಿನಲ್ಲಿ 3 ರಕ್ತದಾನ ಶಿಬಿರಗಳನ್ನು ಆಯೋಜಲಾಗಿದೆ. ಮಡಿಕೇರಿಯ ಅಶ್ವಿನಿ ಆಸ್ಪತ್ರೆಗೆ ಕೆಲವು ಸಲಕರಣೆಗಳನ್ನು ನೀಡಲಾಗಿದೆ. ಪ್ರಾಕೃತಿಕ ವಿಕೋಪದ ಸಂದರ್ಭ ಸೋಮವಾರಪೇಟೆಯಲ್ಲಿ ಸಂತ್ರಸ್ತರಿಗೆ ಮನೆಗಳನ್ನು ನೀಡಿದೆ ಎಂದು ಹೇಳಿದರು. ಹಿರಿಯ ನಾಗರೀಕರಿಗೆ ಸಂಧ್ಯಾ ಸುರಕ್ಷಯೋಜನೆಯ ಮೂಲಕ ಉಪಕರಣಗಳನ್ನು ನೀಡಿದೆ, ಹಲವು ಅಂಗನವಾಡಿ ಕೇಂದ್ರ ಹಾಗೂ ಸರಕಾರಿ ಶಾಲೆಗಳಿಗೆ…

Read More

ಮಡಿಕೇರಿ ಜ.2 NEWS DESK :  ವಿರಾಜಪೇಟೆ ವಿಧಾನಸಭಾ ವ್ಯಾಪ್ತಿಗೆ ಒಳಪಟ್ಟ ನಾಪೋಕ್ಲು ಹೋಬಳಿಯ ಕಕ್ಕಬ್ಬೆ-ಚೆಯ್ಯಂಡಾಣೆ ರಸ್ತೆಯ ದುರಸ್ತಿ ಕಾಮಗಾರಿಯು ಪ್ರಗತಿಯಲ್ಲಿದೆ. ಮಳೆಯಿಂದಾಗಿ ಈ ಭಾಗದ ರಸ್ತೆ ತೀವ್ರ ಹಾನಿಯಾಗಿತ್ತು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಅವರ ವಿಶೇಷ ಕಾಳಜಿ ಹಾಗೂ ಅನುದಾನದಿಂದ ಈ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ಶಾಸಕರ ಕಾಳಜಿಗೆ ಗ್ರಾಮಸ್ಥರು ಹಾಗೂ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Read More

ಮಡಿಕೇರಿ ಜ.2 NEWS DESK  : ಕೊಡ್ಲಿಪೇಟೆ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ  ನೂತನ ಅಧ್ಯಕ್ಷರಾಗಿ ಎಸ್.ಡಿ.ತಮ್ಮಯ್ಯ, ಉಪಾದ್ಯಕ್ಷರಾಗಿ ಹೆಚ್.ಜೆ.ಪ್ರವೀಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕೊಡ್ಲಿಪೇಟೆ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ಇಂದು ನಡೆದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆಯಲ್ಲಿ  ಹನ್ನೊಂದು ಸದಸ್ಯ ಬಲದ ಬ್ಯಾಂಕಿನಲ್ಲಿ ತಮ್ಮಯ್ಯ ನವರ ತಂಡದ 8 ಮಂದಿ ಭರ್ಜರಿ ವಿಜಯ ಸಾಧಿಸಿದ್ದಾರೆ. ಈ ಸಂದರ್ಭ ನಿರ್ದೇಶಕರುಗಳಾದ ಯತೀಶ್, ಮಹಾಬ್, ನಾಗರಾಜ್, ಮಲ್ಲೇಶ, ರಂಜಿತಾ, ದೊಡ್ಡಯ್ಯ ಹಾಗೂ ಸಂಘದ ವ್ಯವಸ್ಥಾಪಕರು ಉಪಸ್ಥಿತರಿದ್ದರು. ಚುನಾವಣಾಧಿಕಾರಿಯಾಗಿ ಮೋಹನ್ ಕಾರ್ಯ ನಿರ್ವಹಿಸಿದರು.

Read More

ವಿರಾಜಪೇಟೆ ಜ.2 NEWS DESK : ಸಂಘ-ಸಂಸ್ಥೆಗಳ ವ್ಯವಹಾರಗಳು ಬಲಿಷ್ಟವಾಗುವುದು ಗ್ರಾಹಕ ಧರ್ಮದಿಂದಾಗಿ. ಸಿಬ್ಬಂದಿಗಳು ಗ್ರಾಹಕರ ನಡುವೆ ಉತ್ತಮ ಬಾಂಧವ್ಯ ಕಲ್ಪಿಸಿದಲ್ಲಿ ಸಹಕಾರ ಕ್ಷೇತ್ರದಲ್ಲಿ ಹೆಸರು ಅಜರಾಮರವಾಗುತ್ತದೆ ಎಂದು ನಿವೃತ್ತ ವಾಯು ಸೇನಾಧಿಕಾರಿ ಬಾಳೆಯಡ ಶಂಭು ಮಂದಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು. ವಿರಾಜಪೇಟೆಯ ಗಾಂಧಿನಗರದ ಲಯನ್ಸ್ ಕ್ಲಬ್ ಕಟ್ಟಡದಲ್ಲಿ ನೂತನವಾಗಿ ಆರಂಭಿಸಿರುವ ಶ್ರೀ ಪಾವನಿ ಸೌಹಾರ್ದ ಸಹಕಾರಿ ಸಂಸ್ಥೆಯ ಕಚೇರಿಯನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು. ಸಹಕಾರಿ ಕ್ಷೇತ್ರವು ಗ್ರಾಹಕ, ಠೇವಣಿದಾರ ಮತ್ತು ಆಡಳಿತ ಮಂಡಳಿ, ಸಿಬ್ಬಂದಿಗಳನ್ನು ಅಡಕಗೊಂಡಿರುವ ಸಂಸ್ಥೆಯಾಗಿದೆ. ಕಾನೂನು ಮತ್ತು ಸಂಸ್ಥೆಯ ನಿಬಂಧನೆಗಳಿಗೆ ಅನುಗುಣವಾಗಿ ಗ್ರಾಹಕರು ಸಾಲ ಪಡೆದು ಕ್ರಮಬದ್ಧವಾಗಿ ಹಿಂದಿರುಗಿಸಲು ಶಕ್ತರಾಗಿರಬೇಕು, ಸಂಸ್ಥೆಯು ಗ್ರಾಹಕ ಮತ್ತು ಠೇವಣಿದಾರರನ್ನು ಸರಿಸಮಾನವಾಗಿ ಕಾಣವಂತಾಗಬೇಕು, ಇದರಿಂದ ಸಂಸ್ಥೆಯ ಅಭಿವೃದ್ಧಿ ಸಾಧ್ಯ ಎಂದು ಹೇಳಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪಟ್ಟಣ ಸಹಕಾರ ಬ್ಯಾಂಕ್ ನ ಮಾಜಿ ಅಧ್ಯಕ್ಷ ಮತ್ತು ಉದ್ಯಮಿ ಕೋಲತಂಡ ಬೋಪಯ್ಯ, ಸಹಕಾರ ಸಂಘದ ಉನ್ನತ್ತಿಗಾಗಿ ಸದಸ್ಯರ ಪರಿಪೂರ್ಣ ಸಹಕಾರ ಅತ್ಯವಶ್ಯಕ. ಸಹಕಾರ ಸಂಘ…

Read More

ಸಕಲೇಶಪುರ NEWS DESK ಜ.2 : ಶಾರ್ಟ್ ಸರ್ಕ್ಯೂಟ್‌ನಿಂದ ಬಸ್ ವೊಂದು ಅಗ್ನಿಗಾಹುತಿಯಾದ ಘಟನೆ ಸಕಲೇಶಪುರ ತಾಲ್ಲೂಕಿನ ಶಿರಾಡಿಘಾಟ್ ರಸ್ತೆಯ ಎತ್ತಿನಹಳ್ಳ ಬಳಿ ನಡೆದಿದೆ. ಇಂದು ಬೆಳಿಗ್ಗೆ ಸುಮಾರು 5 ಗಂಟೆ ವೇಳೆಯಲ್ಲಿ ಬೆಂಗಳೂರಿನಿoದ ಸುಬ್ರಮಣ್ಯಕ್ಕೆ ತೆರಳುತ್ತಿದ್ದ ಸ್ಲೀಪಿಂಗ್ ಕೋಚ್ ಎಸಿ ಬಸ್ ನ ಇಂಜಿನ್‌ನಲ್ಲಿ ಬೆಂಕಿ ಕಾಣಸಿಕೊಂಡಿದೆ. ತಕ್ಷಣ ಎಚ್ಚೆತ್ತುಕೊಂಡ ಬಸ್ ನ ಚಾಲಕ ಯೋಗೀಶ್ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ನೋಡುನೋಡುತ್ತಿದ್ದಂತೆಯೇ ಬಸ್ ಹೊತ್ತಿ ಉರಿದಿದೆ. ಸುಮಾರು ಮೂವತ್ತು ಪ್ರಯಾಣಿಕರು ಬಸ್ ನಲ್ಲಿ ಪ್ರಯಾಣಿಸುತ್ತಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಬೆಂಕಿಯನ್ನು ನಿಯಂತ್ರಿಸುವ ಪ್ರಯತ್ನ ಮಾಡಿದರು.

Read More