ಲೇಖಕ: admin

ಮಡಿಕೇರಿ ನ.20 NEWS DESK  : ನವೆಂಬರ್ 19 ರಿಂದ ಡಿಸೆಂಬರ್ 05 ರವರೆಗೆ ಜಿಲ್ಲೆಯಾದ್ಯಂತ ‘ನಮ್ಮ ಶೌಚಾಲಯ ನಮ್ಮ ಗೌರವ’ ವಿಶೇಷ ಆಂದೋಲನ ನಡೆಯಲಿದೆ ಎಂದು ಕೊಡಗು ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ್ ಪ್ರಕಾಶ್ ಮೀನಾ ಅವರು ತಿಳಿಸಿದರು. ನಗರದ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಗಿಡಕ್ಕೆ ನೀರೆರೆಯುವ ಮೂಲಕ ಆಂದೋಲನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸ್ವಚ್ಛ ಭಾರತ್ ಮಿಷನ್(ಗ್ರಾ.) ಯೋಜನೆಯಡಿಯಲ್ಲಿ ಈ ಆಂದೋಲನ ಜಿಲ್ಲೆಯಾದ್ಯಂತ ನಡೆಯಲಿದೆ ಎಂದರು. ಪ್ರತಿ ನಾಗರಿಕರು ಸಹ ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ನೀಡಬೇಕು. ದೈನಂದಿನ ಜೀವನದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಜೊತೆಗೆ ನಮ್ಮ ಸುತ್ತಮುತ್ತಲಿನ ಪರಿಸರವನ್ನು ಶುಚಿಯಾಗಿಟ್ಟುಕೊಳ್ಳಬೇಕು ಎಂದು ತಿಳಿಸಿದರು. ಗ್ರಾಮೀಣ ಜನರಲ್ಲಿ ಸುರಕ್ಷಿತ ನೈರ್ಮಲ್ಯ, ಶುಚಿತ್ವದ ಬಗ್ಗೆ ಅರಿವು ಮೂಡಿಸಿ ಪ್ರತಿಯೊಬ್ಬರು ಶೌಚಾಲಯ ಬಳಸುವಂತೆ ಪ್ರೇರೇಪಿಸಲು ನಮ್ಮ ಶೌಚಾಲಯ ನಮ್ಮ ಗೌರವ ಆಂದೋಲನ ಸಹಕಾರಿಯಾಗಲಿದೆ ಎಂದರು. ಜಿಲ್ಲೆಯಲ್ಲಿ ಶೌಚಾಲಯ ರಹಿತ ಕುಟುಂಬಗಳಿದ್ದರೆ ಅವರನ್ನು ಗುರುತಿಸಿ ಅರ್ಹ ಫಲಾನುಭವಿಗಳಿಗೆ ಶೌಚಾಲಯ…

Read More

ಮಡಿಕೇರಿ ನ.20 NEWS DESK : ಕೊಡಗು ಜಿಲ್ಲಾ ಸಹಕಾರ ಯೂನಿಯನ್ ವತಿಯಿಂದ ಜಿಲ್ಲೆಯ ನಾಲ್ವರಿಗೆ ಶ್ರೇಷ್ಠ ಸಹಕಾರಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕೊಡಗು ಜಿಲ್ಲಾ ಸಹಕಾರ ಯೂನಿಯನ್, ಸಹಕಾರ ಇಲಾಖೆಯಿಂದ ಕರ್ನಾಟಕ ಇನ್ಸ್‍ಸಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ಹಾಗೂ ಸ್ಥಳೀಯ ಸಹಕಾರ ಸಂಘಗಳ ಸಂಯುಕ್ತಾಶ್ರಯದಲ್ಲಿ ನಗರದ ಬಾಲಭವನದಲ್ಲಿ ನಡೆದ 71ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ನಂದಿನೆರವಂಡ ರವಿ ಬಸಪ್ಪ, ಕಾಯಪಂಡ ಟಾಟ ಚಂಗಪ್ಪ, ಪಾಸುರ ಎನ್.ಉತ್ತಪ್ಪ, ಹಾಗೂ ಶ್ರೇಷ್ಠ ಮಹಿಳಾ ಸಹಕಾರಿ ಮೊಳ್ಳೆರ ಸರಸು ಪೊನ್ನಪ್ಪ ಅವರಿಗೆ ‘ಶ್ರೇಷ್ಠ ಸಹಕಾರಿ’ ಪ್ರಶಸ್ತಿಯನ್ನು ಪ್ರದಾನ ಮಾಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಸಹಕಾರ ಯೂನಿಯನ್‍ನ ಅಧ್ಯಕ್ಷರಾದ ಎ.ಕೆ.ಮನುಮುತ್ತಪ್ಪ, ಹಿರಿಯ ಸಹಕಾರಿಗಳು ಹಾಗೂ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ರಾಣಿ ಮಾಚಯ್ಯ, ಸಹಕಾರ ಸಂಘಗಳ ಉಪ ನಿಬಂಧಕರಾದ ಜಿ.ಆರ್.ವಿಜಯ್, ಕೆಐಸಿಎಂನ ನಿವೃತ್ತ ಪ್ರಾಂಶುಪಾಲರಾದ ಎಂ.ಎಂ.ಶ್ಯಾಮಲ ಕೊಡಗು ಜಿಲ್ಲಾ ಸಹಕಾರ ಯೂನಿಯನ್‍ನ ಉಪಾಧ್ಯಕ್ಷರಾದ ಪಟ್ಟಡ ಮನು…

Read More

ಮಡಿಕೇರಿ ನ.20 NEWS DESK : ಸಹಕಾರ ಕ್ಷೇತ್ರದಲ್ಲಿ ರಾಜಕೀಯ ಹಸ್ತಕ್ಷೇಪ ಇರಬಾರದು ಎಂದು ಹೇಳುತ್ತಾರೆ. ಆದರೆ ಸಹಕಾರ ಕ್ಷೇತ್ರ ಸೇರಿದಂತೆ ಪ್ರತಿಯೊಂದು ರಂಗದಲ್ಲಿಯೂ ಸಹ ಜಾತಿ, ಸಮಾಜ, ರಾಜಕಾರಣ ಇದ್ದೇ ಇದೆ. ಇದರ ನಡುವೆಯೂ ಹಿಂದಿನವರು ಕಟ್ಟಿಕೊಂಡು ಬಂದಿರುವ ಸಹಕಾರ ಕ್ಷೇತ್ರವನ್ನು ಬಲಪಡಿಸುವುದು ಅತ್ಯವಶ್ಯಕ ಎಂದು ಕೊಡಗು ಜಿಲ್ಲಾ ಸಹಕಾರ ಯೂನಿಯನ್‍ನ ಅಧ್ಯಕ್ಷರಾದ ಎ.ಕೆ.ಮನುಮುತ್ತಪ್ಪ ಪ್ರತಿಪಾದಿಸಿದ್ದಾರೆ. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕೊಡಗು ಜಿಲ್ಲಾ ಸಹಕಾರ ಯೂನಿಯನ್, ಸಹಕಾರ ಇಲಾಖೆಯಿಂದ ಕರ್ನಾಟಕ ಇನ್ಸ್‍ಸಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ಹಾಗೂ ಸ್ಥಳೀಯ ಸಹಕಾರ ಸಂಘಗಳ ಸಂಯುಕ್ತಾಶ್ರಯದಲ್ಲಿ ನಗರದ ಬಾಲಭವನದಲ್ಲಿ 71 ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭ ಹಾಗೂ ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಪ್ರಾಯೋಜಿತ ಕೊಡಗಿನ ಶ್ರೇಷ್ಠ ಸಹಕಾರಿಗಳಿಗೆ ಪ್ರಶಸ್ತಿ ಪ್ರಧಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಹಕಾರ ಕ್ಷೇತ್ರದಲ್ಲಿ ಯಾರೂ ಸಹ ಮೂಗು ತೂರಿಸಬಾರದು ಎಂದು ಹೇಳುತ್ತಾರೆ. ಆದರೆ ಎಲ್ಲಾ ರಂಗದಲ್ಲಿಯೂ ಒಂದಲ್ಲ ಒಂದು ರೀತಿಯ…

Read More

ಮಡಿಕೇರಿ ನ.20 NEWS DESK : ಪುಸ್ತಕಗಳ ಅಧ್ಯಯನದಿಂದ ಜ್ಞಾನ ವಿಸ್ತಾರ ಹೆಚ್ಚಾಗಲಿದೆ. ಆದ್ದರಿಂದ ಒಳ್ಳೆಯ ಪುಸ್ತಕಗಳನ್ನು ಅಧ್ಯಯನ ಮಾಡುವಂತಾಗಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ತಿಳಿಸಿದ್ದಾರೆ. ಸಾರ್ವಜನಿಕ ಗ್ರಂಥಾಲಯ ಇಲಾಖೆ, ಕೊಡಗು ಜಿಲ್ಲಾ ಕೇಂದ್ರ ಗ್ರಂಥಾಲಯ, ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಪ್ರಯುಕ್ತ ಕೊಡಗು ಜಿಲ್ಲಾ ಕೇಂದ್ರ ಗ್ರಂಥಾಲಯದಲ್ಲಿ ನಡೆದ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಇತಿಹಾಸ ತಿಳಿಯಬೇಕಿದ್ದಲ್ಲಿ ಪುಸ್ತಕಗಳ ಅಧ್ಯಯನ ಅತ್ಯಗತ್ಯ. ರಾಜ್ಯ, ರಾಷ್ಟ್ರ, ಅಂತರ ರಾಷ್ಟ್ರೀಯ, ವಿಜ್ಞಾನ, ತಂತ್ರಜ್ಞಾನ, ಆಧುನಿಕತೆ ಹೀಗೆ ಪ್ರತಿಯೊಂದು ವಿಚಾರಗಳನ್ನು ತಿಳಿದುಕೊಳ್ಳುವಂತಾಗಲು ಪುಸ್ತಕಗಳ ಅಧ್ಯಯನ ಅತ್ಯಗತ್ಯ ಎಂದು ಹೇಳಿದರು. ಯುವ ಜನರಲ್ಲಿ ಓದಿನ ಬಗ್ಗೆ ಹಂಬಲ ಇರಬೇಕು. ಇಂದಿನ ಆಧುನಿಕ ಯುಗದಲ್ಲಿ ಡಿಜಿಟಲ್ ಲೈಬ್ರರಿ ಸಹ ಇದ್ದು, ಇವುಗಳನ್ನು ಬಳಸಿಕೊಳ್ಳಬೇಕು. ಪುಸ್ತಕ ಅಧ್ಯಯನ ಕಡೆ ಹೆಚ್ಚಿನ ಗಮನಹರಿಸಬೇಕು ಎಂದು ಆರ್.ಐಶ್ವರ್ಯ ಸಲಹೆ ನೀಡಿದರು. ಗಂಧದ ಮರದ ಮಹತ್ವ ಗೊತ್ತಿದ್ದಲ್ಲಿ ಯಾವುದಕ್ಕೆ ಬಳಸಬೇಕು ಎಂದು ತಿಳಿಯುತ್ತದೆ. ಇಲ್ಲದಿದ್ದರೆ ಕಟ್ಟಿಗೆಗೆ ಬಳಸಬೇಕಾಗುತ್ತದೆ.…

Read More

ಮಡಿಕೇರಿ ನ.20 NEWS DESK : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ಬೋಧಕ ಆಸ್ಪತ್ರೆಯ ಮಹಿಳಾ ಮತ್ತು ಮಕ್ಕಳ ವಿಭಾಗ, ಮಡಿಕೇರಿ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಸಂಯುಕ್ತ ಆಶ್ರಯದಲ್ಲಿ ನವಜಾತ ಶಿಶು ಆರೈಕೆ ಸಪ್ತಾಹ ಕಾರ್ಯಕ್ರಮವು “ನವಜಾತ ಶಿಶುಗಳಲ್ಲಿ ಆಂಟಿ ಮೈಕ್ರೋಬಿಯಲ್ ಪ್ರತಿರೋಧಕವನ್ನು ತಡೆಗಟ್ಟಲು ಆಂಟಿ ಮೈಕ್ರೋಬಿಯಲ್ ಔಷಧಗಳನ್ನು ಸಮರ್ಪಕವಾಗಿ ಬಳಸುವುದು” ಎಂಬ ಘೋಷವಾಕ್ಯದೊಂದಿಗೆ ನಡೆಯಿತು. ನವೆಂಬರ್-15 ರಿಂದ ನವೆಂಬರ್-21 ರವರೆಗೆ ವಿಶ್ವದಾದ್ಯಂತ ನವಜಾತ ಶಿಶು ಆರೈಕೆ ಸಪ್ತಾಹ ಆಚರಿಸಲಾಗುತ್ತಿದೆ. ಶಿಶುಗಳ ಉಳಿವು ಮತ್ತು ಅಭಿವೃದ್ಧಿಗೆ ನವಜಾತ ಶಿಶುವಿನ ಆರೈಕೆಯ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವುದು, ಆರೈಕೆ ಮೂಲಕ ಶಿಶು ಮರಣವನ್ನು ತಡೆಗಟ್ಟುವುದು ಇದರ ಮುಖ್ಯ ಉದ್ದೇಶವಾಗಿದೆ. ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ.ಮಧುಸೂಧನ್ ಮಾತನಾಡಿ, ನವಜಾತ ಅವಧಿಯು ಮಕ್ಕಳ ಉಳಿವಿನ ನಿರ್ಣಾಯಕ ಅವಧಿಯಾಗಿದೆ. ಆರೋಗ್ಯವಂತ ನವಜಾತ ಶಿಶುಗಳು, ಆರೋಗ್ಯವಂತ ವಯಸ್ಕರಾಗಿ ಬೆಳೆದು ಸಮುದಾಯ ಸಮಾಜ ಮತ್ತು ದೇಶದ ಅಭಿವೃದ್ಧಿಗೆ ಉತ್ತಮ ಕೊಡುಗೆ ಆಗಬಹುದು.…

Read More

ಮಡಿಕೇರಿ ನ.20 NEWS DESK : ಕೃಷಿ ಟುವಟಿಕೆಗಳ ಮೂಲಕ ಬದುಕು ಕಟ್ಟಿಕೊಂಡಿರುವ ರೈತ ಸಮುದಾಯದ ಬದುಕಿಗೆ ಆತಂಕ ಮೂಡಿಸಿರುವ ಕರಾಳ “ವಕ್ಫ್ ಕಾಯ್ದೆ”ಯನ್ನು ಹಿಂಪಡೆಯಬೇಕು ಮತ್ತು ಹಗರಣಗಳಲ್ಲಿ ಮುಳುಗಿರುವ ರಾಜ್ಯದ ಕಾಂಗ್ರೆಸ್ ಸರ್ಕಾರವನ್ನು ವಜಾಗೊಳಿಸಬೇಕೆಂದು ಆಗ್ರಹಿಸಿ ನ.22 ರಂದು ಕೊಡಗು ಜಿಲ್ಲಾ ಬಿಜೆಪಿಯಿಂದ ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಮತ್ತು ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ದಿನಪೂರ್ತಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 10 ಗಂಟೆಗೆ ನಗರದ ಶ್ರೀ ಚೌಡೇಶ್ವರಿ ದೇಗುಲದ ಬಳಿಯಿಂದ ಪ್ರತಿಭಟನಾ ಮೆರವಣಿಗೆ ಆರಂಭಗೊಂಡು, ನಗರದ ಹಳೇ ಖಾಸಗಿ ಬಸ್ ನಿಲ್ದಾಣ, ಜ.ತಿಮ್ಮಯ್ಯ ವೃತ್ತವನ್ನು ಹಾದು ಜಿಲ್ಲಾಧಿಕಾರಿಗಳ ಕಚೇರಿ ತಲುಪಲಿದೆ. ಬಳಿಕ ಸಂಜೆ 5 ಗಂಟೆಯವರೆಗೆ ಧರಣಿ ಮುಷ್ಕರ ನಡೆಸಲಾಗುವುದು ಎಂದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಒಂದಿಲ್ಲ ಒಂದು ಹಗರಣಗಳು ನಡೆಯುತ್ತಲೆ ಇದೆ. ಒಂದು ಸಮುದಾಯದ ಓಲೈಕೆಗಾಗಿ…

Read More

ಮಡಿಕೇರಿ ನ.20 NEWS DESK : ರಾಜ್ಯದ ವಿವಿಧೆಡೆ ರೈತರ ಆಸ್ತಿಯನ್ನು ವಕ್ಫ್ ಆಸ್ತಿ ಎಂದು ಪ್ರತಿಬಿಂಬಿಸಲ್ಪಟ್ಟಿರುವ ವಕ್ಫ್ ನೋಟೀಸ್ ನಿಂದಾಗಿ ಕೃಷಿಕರಲ್ಲಿ ಆತಂಕ ಸೃಷ್ಟಿಯಾಗಿದೆ. ಈ ಪ್ರಕರಣದಿಂದಲಾದರೂ ಕೊಡಗಿನ ಬೆಳೆಗಾರರು ಎಚ್ಚೆತ್ತುಕೊಂಡು ಜಮ್ಮಾ ಜಾಗದ ಮೇಲಿನ ತಮ್ಮ ಹಕ್ಕನ್ನು ಗಟ್ಟಿಗೊಳಿಸಿಕೊಳ್ಳಬೇಕು ಎಂದು ಕೊಡಗು ಜಿಲ್ಲಾ ಬಿಜೆಪಿಯ ಎಸ್‍ಟಿ ಮೋರ್ಚಾದ ಜಿಲ್ಲಾಧ್ಯಕ್ಷ ಎಂ.ಎಂ.ಪರಮೇಶ್ವರ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ವಕ್ಫ್ ಆಸ್ತಿ ಎಂಬ ನೋಟೀಸ್ ಎಚ್ಚರಿಕೆಯ ಗಂಟೆಯಾಗಿದ್ದು, ಉತ್ತರ ಕರ್ನಾಟಕದ ಹಲವು ಭಾಗಗಳ ರೈತರು ಆತಂಕದಲ್ಲಿದ್ದಾರೆ. ಇನ್ನಾದರೂ ಕೊಡಗಿನ ಬೆಳೆಗಾರರು ಜಾಗೃತರಾಗಲೇಬೇಕಾಗಿದೆ. ಭೂಮಿಯ ಹಕ್ಕಿನ ಬಗ್ಗೆ ನಿರ್ಲಕ್ಷ್ಯ ವಹಿಸಿದರೆ ಮುಂದೊಂದು ದಿನ ಜಮ್ಮಾ ಜಾಗದ ಮೇಲೆ ಮತ್ಯಾರೋ ಅಧಿಕಾರ ಚಲಾಯಿಸಬಹುದಾದ ಸಾಧ್ಯತೆಗಳಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ತಲೆತಲಾಂತರಗಳಿಂದ ಕೊಡಗು ಜಿಲ್ಲೆಯ ಎಲ್ಲಾ ಜಾತಿ, ಜನಾಂಗ, ಧರ್ಮದವರು ಜಮ್ಮಾಭೂಮಿಯನ್ನು ಅನುಭವಿಸಿಕೊಂಡು ಬರುತ್ತಿದ್ದಾರೆ. ಕೃಷಿ ಕಾರ್ಯ ಮಾಡುತ್ತಾ ಜೀವನ ಸಾಗಿಸುತ್ತಿದ್ದಾರೆ. ಆದರೆ ಜಮ್ಮಾಭೂಮಿಯ ಕುರಿತು ಇರುವ ಗೊಂದಲಗಳು ಇಲ್ಲಿಯವರೆಗೆ ಸರ್ಕಾರದ ಮಟ್ಟದಲ್ಲಿ ಬಗೆಹರಿದಿಲ್ಲ. ರಾಜ್ಯದಲ್ಲಿ…

Read More

ಮಡಿಕೇರಿ ನ.20 NEWS DESK : ಶಿಶು ಅಭಿವೃದ್ದಿ ಯೋಜನೆ ಇಲಾಖೆ ವತಿಯಿಂದ ವಿಶ್ವ ವಿಶೇಷಚೇತನರ ದಿನಾಚರಣೆ ಅಂಗವಾಗಿ ಮಡಿಕೇರಿ ತಾಲ್ಲೂಕಿನ ವಿಶೇಷ ಚೇತನರಿಗೆ ನಗರದ ಗಾಂಧಿ ಮೈದಾನದಲ್ಲಿ ನ.22 ರಂದು ಬೆಳಗ್ಗೆ 10 ಗಂಟೆಗೆ ಆಟೋಟ ಸ್ಪರ್ಧೆ ನಡೆಯಲಿದೆ. ಮಡಿಕೇರಿ ತಾಲ್ಲೂಕಿನ ಎಲ್ಲಾ ವಿಶೇಷಚೇತನರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕೋರಿದ್ದಾರೆ.

Read More

ಮಡಿಕೇರಿ ನ.20 NEWS DESK : ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಮತ್ತು ಜೆಸಿಐ ಪೊನ್ನಂಪೇಟೆ ನಿಸರ್ಗದ ಸಂಯುಕ್ತಾಶ್ರಯದಲ್ಲಿ ಡಿ.8 ರಂದು ಮಾಯಮುಡಿ ಶಾಲಾ ಮೈದಾನದಲ್ಲಿ “ತೋಕ್ ನಮ್ಮೆ” ಪ್ರಯುಕ್ತ ರಾಜ್ಯ ಮಟ್ಟದ “ಕೋಕನಟ್ ಶೂಟಿಂಗ್” ಸ್ಪರ್ಧೆಯನ್ನು ಆಯೋಜಿಸಲಾಗಿದೆಯೆಂದು ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಮಹೇಶ್ ನಾಚಯ್ಯ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಕೊಡವ ಸಮುದಾಯದಲ್ಲಿ ತೋಕ್ ಇಲ್ಲವೆ ಕೋವಿಗೆ ಪೂಜನೀಯ ಸ್ಥಾನವನ್ನು ನೀಡಲಾಗಿದೆಯಲ್ಲದೆ, ಧಾರ್ಮಿಕ ಆಚರಣೆಗಳಲ್ಲು ಕೋವಿ ಎನ್ನುವುದು ಅವಿಭಾಜ್ಯ ಅಂಗವಾಗಿದೆ. ಈ ಹಿನ್ನೆಲೆ ಅಕಾಡೆಮಿ ವತಿಯಿಂದ ಪ್ರಥಮ ಬಾರಿಗೆ ಜೆಸಿಐ ಸೇವಾ ಸಂಸ್ಥೆಯ ಸಹಕಾರದೊಂದಿಗೆ ಶೂಟಿಂಗ್ ಸ್ಪರ್ಧೆಯನ್ನು ಆಯೋಜಿಸಲಾಗಿದೆಯೆಂದು ತಿಳಿಸಿದರು. ಶೂಟಿಂಗ್ ಸ್ಪರ್ಧೆ .22 ಬಂದೂಕು, ಟುವೆಲ್ತ್ ಬೋರ್ ಬಂದೂಕು ಮತ್ತು ಏರ್ ಗನ್ ವಿಭಾಗಗಳಲ್ಲಿ ನಡೆಯಲಿದೆ. ಮೊದಲ ಎರಡು ಸ್ಪರ್ಧೆಗಳು 18 ವರ್ಷ ಮೇಲ್ಪಟ್ಟವರಿಗೆ ನಡೆಯಲಿದೆ. ಏರ್ ಗನ್ ಸ್ಪರ್ಧೆ ಮುಕ್ತವಾಗಿರಲಿದೆ. ಈಗಾಗಲೆ 150 ಕ್ಕೂ ಹೆಚ್ಚಿನ ಸ್ಪರ್ಧಿಗಳು ಹೆಸರನ್ನು ನೋಂದಾಯಿಸಿಕೊಂಡಿದ್ದು, 400 ಸ್ಪರ್ಧಿಗಳು…

Read More

ಸೋಮವಾರಪೇಟೆ ನ.20 NEWS DESK : ಮನುಷ್ಯ ಸಾಮಾಜಿಕ ಸ್ವಾಸ್ಥ್ಯದೊಂದಿಗೆ ಸುಂದರವಾದ ಜೀವನ ನಡೆಸಲು ವಚನ ಸಾಹಿತ್ಯ ದೀವಿಗೆ ಇದ್ದಂತೆ ಎಂದು ಹೆಬ್ಬಾಲೆ ಪ್ರೌಢಶಾಲೆಯ ಕನ್ನಡ ಶಿಕ್ಷಕರೂ ಹಾಗೂ ವಾಗ್ಮಿ ಮೆ.ನಾ.ವೆಂಕಟನಾಯಕ್ ಹೇಳಿದರು. ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ವತಿಯಿಂದ ತೋಳೂರು ಶೆಟ್ಟಳ್ಳಿಯ ಡಾ.ಬಿ.ಆರ್.ಅಂಬೇಡ್ಕರ್ ವಿದ್ಯಾರ್ಥಿನಿಯರ ವಸತಿ ಶಾಲೆಯಲ್ಲಿ ನಡೆದ “ಶರಣ ಸಂಸ್ಕೃತಿ” ವಿಚಾರ ಗೋಷ್ಠಿಯಲ್ಲಿ ಪ್ರವಚನ ನೀಡಿದ ಅವರು, ಹನ್ನೆರಡನೇ ಶತಮಾನದಲ್ಲಿ ಕನ್ನಡದ ನೆಲದಲ್ಲಿ ನಡೆದ ಶರಣರ ಕ್ರಾಂತಿ ಸಮಾಜದಲ್ಲಿ ಸಾಮಾಜಿಕ ಬದಲಾವಣೆಗೆ ಕಾರಣವಾಯಿತು. ಅಂದಿನ ಸಮಾಜದಲ್ಲಿ ತಾಂಡವವಾಡುತ್ತಿದ್ದ ಸಾಮಾಜಿಕ ಸಂಘರ್ಷಗಳನ್ನು ತಡೆಗಟ್ಟಲು ವಚನಕಾರರು ಕಲ್ಯಾಣದ ಅನುಭವ ಮಂಟಪದಲ್ಲಿ ಮೊಳಗಿಸಿದ ವಿಚಾರ ಲಹರಿಗಳ ಕಹಳೆ ಇಂದಿಗೂ ಹಾಗೂ ಎಂದೆಂದಿಗೂ ಚಿರಸ್ಥಾಯಿ. ಅಂದಿನ ಶರಣರ ಶ್ರೇಷ್ಠ ಚಿಂತನೆಗಳು ಇಂದು ನೊಂದವರು, ದೀನ ದಲಿತರು ಹಾಗೂ ಜನಸಾಮಾನ್ಯರ ಪಾಲಿಗೆ ಆಶಾಕಿರಣಗಳಾಗಿವೆ ಎಂದರು. ಸ್ವಾತಂತ್ರ್ಯಾನಂತರ ದೇಶದಲ್ಲಿ ಜಾರಿಗೆ ಬಂದ ಸಮಾನತೆ, ಮಹಿಳಾ ಸ್ವಾತಂತ್ರ್ಯ ಹಾಗೂ ವಾಕ್ ಸ್ವಾತಂತ್ರ್ಯದ ಮೂಲ ಕಾರಣಿಕರೇ ಅಂದಿನ ಶರಣರು.…

Read More