ಲೇಖಕ: admin

ವಿರಾಜಪೇಟೆ ನ.20 NEWS DESK : ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕರ್ನಾಟಕ ಸರ್ಕಾರ, ಬೆಂಗಳೂರು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ವತಿಯಿಂದ ಆಯೋಜಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿರಾಜಪೇಟೆಯ ಬಿಳುಗುಂದ ಸರ್ಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿ ರಹಿಯಾನ ದ್ವಿತೀಯ ಸ್ಥಾನ ಪಡೆದಿದ್ದಾರೆ. ‘ಬಾಪೂಜಿ ಮತ್ತುವಿಜ್ಞಾನ ಮತ್ತು ಟೆಕ್ನಾಲಜಿ” ಎಂಬ ವಿಷಯದ ಬಗ್ಗೆ ಕನ್ನಡದಲ್ಲಿ ಪ್ರಬಂಧ ಸ್ಪರ್ಧೆ ಆಯೋಜಿಸಲಾಗಿತ್ತು. ದ್ವಿತೀಯ ಸ್ಥಾನಕ್ಕೆ ರೂ. 2000 ನಗದು ಒಳಗೊಂಡಿದೆ. ದ್ವಿತೀಯ ಸ್ಥಾನ ಲಭಿಸಿದ್ದು ಸರಕಾರಿ ನಮ್ಮ ಶಾಲೆಗೆ ಹೆಮ್ಮೆ ತಂದಿದೆ ಎಂದು ಶಾಲೆಯ ಮುಖ್ಯಶಿಕ್ಷಕ ಡಾ.ಆರ್.ರವಿ ತಿಳಿಸಿದ್ದಾರೆ.

Read More

ನಾಪೋಕ್ಲು ನ.20 NEWS DESK : ಕೆನರಾ ಬ್ಯಾಂಕ್ ಸಂಸ್ಥಾಪಕ ಅಮ್ಮೆಂಬಳ ಸುಬ್ಬರಾವ್ ಪೈ ಅವರ 119ನೇ ಜನ್ಮದಿನಾಚರಣೆ (ಸಂಸ್ಥಾಪಕರ ದಿನಾಚರಣೆ) ಯನ್ನು ನಾಪೋಕ್ಲು ಶಾಖೆಯಲ್ಲಿ ಆಚರಿಸಲಾಯಿತು. ಖಾಸಗಿ ಶಾಲೆಯ ಮುಖ್ಯ ಶಿಕ್ಷಕಿ ಮೈನ ಕುಮಾರಿ ಮತ್ತು ಶಾಖೆಯ ವ್ಯವಸ್ಥಾಪಕ ಬಿ.ಎ.ಹಂಸ ಅಮ್ಮೆಂ ಬಾಲ್ ಸುಬ್ಬರಾವ್ ಪೈ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭ ಶಾಖೆಯ ವ್ಯವಸ್ಥಾಪಕ ಬಿ.ಎ.ಹಂಸ ದಿನದ ಮಹತ್ವದ ಬಗ್ಗೆ ಮಾತನಾಡಿದರು. ನಾಪೋಕ್ಲು ಶಾಖೆಯ ಸಿಬ್ಬಂದಿಗಳಾದ ಪ್ರವೀಣ್, ಅಜಿತ್, ಕಣ್ಣ ಬಾಬು, ದೇವಪ್ಪ ಬಿ.ಆರ್.ಥಾಮಸ್ ಕುಟ್ಟಿ, ಅನು, ಶೈನಿ ಮತ್ತು ಸುಧಾ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಗ್ರಾಹಕರು ಹಾಜರಿದ್ದರು. ಶಾಖೆಯ ನಿವೃತ ಸಿಬ್ಬಂದಿ ಪೌಲಸ್ ಅವರನ್ನು ಶಾಖೆಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಶಾಲಾ ವಿದ್ಯಾರ್ಥಿಗಳು ಹಾಗೂ ಗ್ರಾಹಕರಿಗೆ ಸಿಹಿ ಹಂಚಲಾಯಿತು. ವರದಿ : ದುಗ್ಗಳ ಸದಾನಂದ.

Read More

ಮಡಿಕೇರಿ ನ.20 NEWS DESK : ವಕ್ಫ್ ಮಂಡಳಿಯ ನೀತಿಯನ್ನು ಖಂಡಿಸಿ ಕೊಡಗು ಜಿಲ್ಲಾ ಭಾರತೀಯ ಜನತಾ ಪಾರ್ಟಿ ವತಿಯಿಂದ ನ.22 ರಂದು ಮಡಿಕೇರಿಯಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 10 ಗಂಟೆಗೆ “ನಮ್ಮ ಭೂಮಿ, ನಮ್ಮ ಹಕ್ಕು” ಎಂಬ ಘೋಷವಾಕ್ಯದೊಂದಿಗೆ ನಗರದ ಶ್ರೀ ಚೌಡೇಶ್ವರಿ ದೇವಾಲಯದಿಂದ ಜಿಲ್ಲಾಧಿಕಾರಿಗಳ ಕಚೇರಿ ವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಲಿದ್ದು, ನಂತರ ಸಂಜೆ 5 ಗಂಟೆಯವರೆಗೆ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಯಲಿದೆ ಎಂದು ತಿಳಿಸಿದರು. ಪ್ರತಿಭಟನೆಯಲ್ಲಿ ರಾಜ್ಯದ ಪ್ರಮುಖರು, ಸಂಸದರು ಹಾಗೂ ಜಿಲ್ಲೆಯ ಹಾಲಿ ಮತ್ತು ಮಾಜಿ ಜನಪ್ರತಿನಿಧಿಗಳು, ಪ್ರಮುಖರು ಭಾಗವಹಿಸಲಿದ್ದು, ಬಿಜೆಪಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಬಿಜೆಪಿಯ ಜನಪರ ಹೋರಾಟಕ್ಕೆ ಬೆಂಬಲ ಸೂಚಿಸುವಂತೆ ನಾಪಂಡ ರವಿ ಕಾಳಪ್ಪ ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಬಿಜೆಪಿ ವಕ್ತಾರ ಬಿ.ಕೆ.ಅರುಣ್ ಕುಮಾರ್, ತಳೂರು ಕಿಶೋರ್ ಕುಮಾರ್,  ಪ್ರಧಾನ…

Read More

ಮಡಿಕೇರಿ ನ.20 NEWS DESK : ವಿಶ್ವ ಶೌಚಾಲಯ ದಿನಾಚರಣೆಯ ಅಂಗವಾಗಿ ಕೊಡಗು ಜಿಲ್ಲಾ ಪಂಚಾಯಿತಿಯಲ್ಲಿ ಸ್ವಚ್ಛ ಭಾರತ್ ಮಿಷನ್-ಗ್ರಾ ಯೋಜನೆಯಡಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಮುಖ್ಯಕಾರ್ಯನಿರ್ವಾಹಣಾ ಅಧಿಕಾರಿ ಆನಂದ್ ಪ್ರಕಾಶ್ ಮೀನಾ ಉದ್ಘಾಟಿಸಿದರು. ಜಿಲ್ಲಾ ಸಮಾಲೋಚಕರಾದ ಹರ್ಷಿತಾ ಪ್ರತಿಜಾವಿಧಿಯನ್ನು ಬೋಧಿಸಿದರು. ಇದೇ ಸಂದರ್ಭ ಜಿಲ್ಲಾ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆ ನಡೆಯಿತು. ಸಭೆಯಲ್ಲಿ ಅಭಿಯಾನದ ರೂಪು ರೇಷೆಯ ಕುರಿತು ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾನೋಡಲ್ ಅಧಿಕಾರಿ, ಕಾರ್ಯಪಾಲಕ ಅಭಿಯಂತರರು, ಡಿಹೆಚ್‌ಒ, ಡಿಡಿಪಿಐ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ, ಜಿಲ್ಲಾ ಸಮಾಲೋಚಕರು, ಜೆಜೆಎಂ ತಂಡದವರು ಹಾಜರಿದ್ದರು.

Read More

ಮಡಿಕೇರಿ ನ.20 NEWS DESK : ಮಡಿಕೇರಿ ಕೊಡವ ಸಮಾಜದ ಸಹಯೋಗದಲ್ಲಿ ನಗರದ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯಲ್ಲಿ 2024-25ನೇ ವಾರ್ಷಿಕ ಬಹುಮಾನ ದಿನವನ್ನು ಆಚರಿಸಲಾಗುವುದು ಎಂದು ಶಾಲಾ ಆಡಳಿತ ಮಂಡಳಿ ಪತ್ರಿಕಾ ಪ್ರಕಟಣೆ ನೀಡಿದೆ. ನ.23 ರಂದು ಬೆಳಿಗ್ಗೆ 9.30 ಗಂಟೆಗೆ ಶಾಲಾ ಆವರಣದಲ್ಲಿ ಕೊಡವ ಸಮಾಜ ಹಾಗೂ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ಅಧ್ಯಕ್ಷ ಎಂ.ಪಿ.ಮುತ್ತಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಅರುಣಾಚಲ ಪ್ರದೇಶದ ರಾಜೀವ್ ಗಾಂಧಿ ಕೇಂದ್ರೀಯ ವಿಶ್ವವಿದ್ಯಾಲಯದ ನಿವೃತ್ತ ಉಪಕುಲಪತಿ ಪ್ರೊ.ಕೆ.ಸಿ.ಬೆಳ್ಯಪ್ಪ ಪಾಲ್ಗೊಳ್ಳಲಿದ್ದಾರೆ.

Read More

ನವದೆಹಲಿ NEWS DESK ನ.20 : ಬ್ರೆಜಿಲ್‌ನಲ್ಲಿ ಭಾರತೀಯ ಸಂಸ್ಕೃತಿ ಅನಾವರಣಗೊಂಡಿತು. ವೇದಾಂತ ಮತ್ತು ಸಂಸ್ಕೃತವನ್ನು ಪಸರಿಸಲು ಮೀಸಲಾಗಿರುವ ಬ್ರೆಜಿಲಿಯನ್‌ ಸಂಸ್ಥೆಯಾದ ವಿಶ್ವ ವಿದ್ಯಾಲಯದ ವಿದ್ಯಾರ್ಥಿಗಳು ಪ್ರಸ್ತುತ ಪಡಿಸಿದ ರಾಮಾಯಣದ ಆಕರ್ಷಕ ಪ್ರದರ್ಶನವನ್ನು ಪ್ರಧಾನಿ ನರೇಂದ್ರ ಮೋದಿ ಅವರು ವೀಕ್ಷಿಸಿದರು.

Read More

ಸೋಮವಾರಪೇಟೆ ನ.20 NEWS DESK  : ಸೋಮವಾರಪೇಟೆ ಪಟ್ಟಣದ ದೇವಾಲಯಗಳಲ್ಲಿ ಮಂಗಳವಾರದಂದು ಅಂಗಾರಕ ಸಂಕಷ್ಟಿ ಪೂಜೆಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ನಗರದ ಖಾಸಗಿ ಬಸ್ಸು ನಿಲ್ದಾಣದಬಳಿ ಇರುವ ವಿದ್ಯಾಗಣಪತಿ ದೇವಾಲಯದಲ್ಲಿ ನವಿಲುಗರಿಗಳಿಂದ ವಿಶೇಷವಾಗಿ ಅಲಂಕರಿಸಲಾಗಿತ್ತು. ಅರ್ಚಕ ಚಂದ್ರಶೇಖರ ಶಾಸ್ತ್ರಿಗಳ ನೇತೃತ್ವದಲ್ಲಿ ರಾಕೇಶ್ ಶಾಸ್ತ್ರಿ ಹಾಗೂ ರಾಜಣ್ಣ ದೇವರಿಗೆ ಅರ್ಚನೆ,ಅಷ್ಟೋತ್ತರ,ಷೋಡಶೋಪಚಾರ ನಂತರ ಮಹಾಮಂಗಳಾರತಿ ನೆರವೇರಿಸಿದರು. ಬಸವೇಶ್ವರ ದೇವಾಲಯದಲ್ಲಿ ಗಣಪತಿ ಮೂರ್ತಿಯನ್ನು ಶ್ರೀಗಂಧದಿಂದ ಅಲಂಕರಿಸಿ ಅರ್ಚಕ ಶೇಖಯ್ಯ ಶಾಸ್ತ್ರಿಗಳು ವಿಶೇಷ ಪೂಜೆ, ಮಂಗಳಾರತಿ ನಡೆಸಿದರು. ಸೋಮೇಶ್ವರ ದೇವಾಲಯದಲ್ಲಿ ಅರ್ಚಕ ಚಿತ್ರಕುಮಾರ ಭಟ್ಟ್ ಹಾಗೂ ರವಿಶಂಕರ್ ದೇವರಿಗೆ ವಿಶೇಷ ಪೂಜೆಯೊಂದಿಗೆ ಮಹಾಮಂಗಳಾರತಿ ನೆರವೇರಿಸಿದರು, ನಗರದ ವಿವಿಧೆಡೆಯಿಂದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವಿಶೇಷ ಪೂಜೆ ಸಲ್ಲಿಸಿದರು.   

Read More

ಕರಿಕೆ ನ.20 : ಕೊಡಗಿನ ಗಡಿ ಭಾಗದ ಕರಿಕೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಚ್ಚೆಪಿಲಾವ್, ದೊಡ್ಡಚೇರಿ, ಪಳ್ಳಿಕಳ ಮತ್ತಿತರ ಕಡೆ ಕಳೆದ ಒಂದು ತಿಂಗಳಿನಿoದ ಉಪಟಳ ನೀಡುತ್ತಿರುವ ಚಿರತೆ ಇನ್ನೂ ಕೂಡ ಸೆರೆಯಾಗಿಲ್ಲ. ಮಂಗಳವಾರ ಪಚ್ಚೆಪಿಲಾವ್ ಭಾಗದಲ್ಲಿ ಸಾಕು ನಾಯಿಯೊಂದರ ಮೇಲೆ ಚಿರತೆ ಮತ್ತೆ ದಾಳಿ ಮಾಡಿದ್ದು, ಈ ದೃಶ್ಯ ಅರಣ್ಯ ಇಲಾಖೆ ಅಳವಡಿಸಿದ್ದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಘಟನೆ ನಡೆದ ಸ್ಥಳಕ್ಕೆ ಇಂದು ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ಚಿರತೆ ದಾಳಿ ಕುರಿತು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿ ತಕ್ಷಣ ಸೆರೆ ಹಿಡಿಯಬೇಕೆಂದು ಒತ್ತಾಯಿಸಿದರು. ಚಿರತೆ ಸೆರೆಗೆ ಬೋನ್ ಅಳವಡಿಸುವುದಾಗಿ ಅರಣ್ಯಾಧಿಕಾರಿಗಳು ಭರವಸೆ ನೀಡಿದರು. (ವರದಿ : ಶಿವಗಿರಿ ರಾಜೇಶ್)

Read More

ಸೋಮವಾರಪೇಟೆ ನ.20 NEWS DESK : ಕ್ಲಾಸ್ ಆಫ್ 99 ಗ್ರೂಪ್ ಮತ್ತು ಇನ್ನರ್ ವ್ಹೀಲ್ ಕ್ಲಬ್ ಆಫ್ ಸೋಮವಾರಪೇಟೆ ಗೋಲ್ಡ್ ಆಶ್ರಯದಲ್ಲಿ ಮಹಿಳಾ ಸಮಾಜದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ಬೃಹತ್ ರಕ್ತದಾನ ಶಿಬಿರ ನಡೆಯಿತು. ದಂತ ವೈದ್ಯ ರಾಕೇಶ್ ಪಟೇಲ್ ಶಿಬಿರಕ್ಕೆ ಚಾಲನೆ ನೀಡಿದರು. ಬೆಂಗಳೂರಿನ ವೈದೇಹಿ ಆಸ್ಪತ್ರೆಯ ಡಾ. ದುರ್ಗಾಪ್ರಸಾದ್ ಹೃದಯ ಆರೋಗ್ಯ ತಪಾಸಣೆ ಮಾಡಿದರು. ರೋಗಿಗಳಿಗೆ ಇಸಿಜಿ, ಇಕೊ ತಪಾಸಣೆ ನಡೆಸಲಾಯಿತು. ಸಾಮಾನ್ಯ ವೈದ್ಯಕೀಯ ತಪಾಸಣೆಯನ್ನು ಮಡಿಕೇರಿ ಜಿಲ್ಲಾಸ್ಪತ್ರೆಯ ಡಾ. ಧನುಂಜಯ ಮೇದಪ್ಪ ಮತ್ತು ಡಾ. ಎನ್.ಅಮೂಲ್ಯ ನಡೆಸಿದರು. ನೇತ್ರ ತಜ್ಞ ಕಿರಣ್ ಭಟ್, ಮೂಳೆತಜ್ಞ ಜೀವನ್ ರವಿ ತಪಾಸಣೆ ನಡೆಸಿ, ಔಷಧಿಗಳನ್ನು ವಿತರಿಸಿದರು. ಮಡಿಕೇರಿ ಜಿಲ್ಲಾಸ್ಪತ್ರೆಯ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಕರುಂಬಯ್ಯ ರಕ್ತದಾನದ ಪ್ರಾಮುಖ್ಯತೆಯನ್ನು ತಿಳಿಸಿದರು. ಮಡಿಕೇರಿಯ ಪಶು ವೈದ್ಯರಾದ ವಿಭಾ ರಘುರಾಮ್ ಸಾಕುಪ್ರಾಣಿಗಳಿಗೆ ಚಿಕಿತ್ಸೆ ಮತ್ತು ನಾಯಿ ಬೆಕ್ಕುಗಳಿಗೆ ಉಚಿತ ರೇಬಿಸ್ ನಿಯಂತ್ರಣ ಲಸಿಕೆ ನೀಡಿದರು. 346 ಮಂದಿ ಚಿಕಿತ್ಸೆ ಪಡೆದರು.…

Read More

ಮಡಿಕೇರಿ ನ.20 NEWS DESK : ವಿರಾಜಪೇಟೆಯ ಕಾವೇರಿ ಶಾಲೆಯಲ್ಲಿ ಸಂಸ್ಥಾಪಕರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಶಾಲೆಯ ಸಂಸ್ಥಾಪಕರುಗಳಾದ ದಿವಂಗತ ನಂದಾ ಗಣಪತಿ ಹಾಗೂ ಕಾಂತಿ ಗಣಪತಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಅರ್ಪಿಸಿ, ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಬಿ.ಎಸ್.ಸುದೇಶ್ ಕಾರ್ಯಕ್ರಮದ ಬಗ್ಗೆ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಧನಲಕ್ಷ್ಮಿ ಕಾವೇರಿ ಶಾಲೆಯ ಸಂಸ್ಥಾಪಕರುಗಳೊಂದಿಗೆ ಸೇವೆ ಸಲ್ಲಿಸಿದ ಸುದೀರ್ಘ 25 ವರ್ಷಗಳನ್ನು ನೆನೆದು ಭಾವುಕರಾದರು. ಕಾವೇರಿ ಶಾಲೆಯ ಕಾರ್ಯದರ್ಶಿ ಪಿ.ಎನ್.ವಿನೋದ್ ಮಾತನಾಡಿ ವಿದ್ಯಾರ್ಥಿಗಳಿಗೆ ಶಾಲೆಯ ಗುರಿ ಹಾಗೂ ಪ್ರಸಿದ್ಧ ವ್ಯಕ್ತಿಯಾಗಲು ಇರಬೇಕಾದ ಚಾಣಾಕ್ಷತೆಯನ್ನು ಬೆಳೆಸಿಕೊಳ್ಳುವ ರೀತಿಯನ್ನು ಸಣ್ಣ ಕಥೆಯ ಮೂಲಕ ತಿಳಿಸಿದರು. ಕಾರ್ಯಕ್ರಮದಲ್ಲಿ 2024-25ನೇ ಶೈಕ್ಷಣಿಕ ವರ್ಷದ ಚುನಾಯಿತ ಪದಾಧಿಕಾರಿಗಳಿಗೆ ಪೋಷಕರ ಉಪಸ್ಥಿತಿಯಲ್ಲಿ ಅತಿಥಿಗಳು ಪದವಿ ಪ್ರದಾನ ಮಾಡಿದರು. ನಂತರ ವಿದ್ಯಾರ್ಥಿಗಳಿಂದ ಶಾಲೆಯ ಬಗ್ಗೆ ಸಾಮೂಹಿಕ ಗೀತೆ ಹಾಡಲಾಯಿತು. 2024 -25ರ ಸಾಲಿನ ಕಾವೇರಿ ಶಾಲೆಯ ಆಯೋಜಕತ್ವದಲ್ಲಿ ನಡೆದ ವಲಯ ಮಟ್ಟದ ಕ್ರೀಡಾಕೂಟಕ್ಕೆ ಸಹಾಯ ಹಸ್ತ ನೀಡಿದ…

Read More