ಮಡಿಕೇರಿ ಡಿ.14 NEWS DESK : ವಿರಾಜಪೇಟೆ ಸಮೀಪದ ಹೆಗ್ಗಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾರದ ಪೂಜೆಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಬೆಳಿಗ್ಗೆಯಿಂದಲೇ ವಿವಿಧ ಧಾರ್ಮಿಕ ಪೂಜಾಕೈಂಕರ್ಯಗಳು ಸೇರಿದಂತೆ ಸಂಕಲ್ಪ ಪೂಜೆ, ಶಾರದ ಮಾತೆಗೆ ಕುಂಕುಮಾರ್ಚನೆ, ಪುಷ್ಪರ್ಚನೆ, ಅಲಂಕಾರ ಪೂಜೆ ಯನ್ನು ನಡೆಸಿದರು. ಸರಸ್ವತಿ ಸ್ತೋತ್ರವನ್ನು ಪಠಿಸಿ ನೈವೇದ್ಯ ಪ್ರಸಾದವನ್ನು ಸಮರ್ಪಿಸಿದರು. ನಂತರ ವಿಶೇಷ ಪ್ರಾರ್ಥನೆ ಸಲ್ಲಿಸಿ, ಮಹಾ ಮಂಗಳಾರತಿ ನೆರವೇರಿಸಲಾಯಿತು. ಪೂಜಾ ಕಾರ್ಯಕ್ರಮವನ್ನು ಅರ್ಚಕರಾದ ವಾಮನಮೂರ್ತಿ ಭಟ್ ನೆರವೇರಿಸಿದರು. ಈ ಸಂದರ್ಭದ ಶಾಲೆಯ ಮುಖ್ಯ ಶಿಕ್ಷಕಿ ಹೇಮಲತಾ, ಎಸ್.ಡಿ.ಎಂ.ಸಿ. ಅಧ್ಯಕ್ಷ ರಾಜೇಶ್, ಸದಸ್ಯರುಗಳು, ಶಿಕ್ಷಕರು, ಸಿಬ್ಬಂದಿಗಳು, ವಿದ್ಯಾರ್ಥಿಗಳು ಹಾಗೂ ಪೋಷಕರು ಪಾಲ್ಗೊಂಡಿದ್ದರು.
ಲೇಖಕ: admin
ಮಡಿಕೇರಿ ಡಿ.14 NEWS DESK : ವಿಶಿಷ್ಟ ಸಂಸ್ಕೃತಿಯ ಕೊಡವ ಜನಾಂಗದ ಪ್ರಧಾನ ಹಬ್ಬಗಳಲ್ಲಿ ಒಂದಾದ ಪುತ್ತರಿಯನ್ನು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ದಕ್ಷಿಣ ಕೊಡಗಿನ ಪತ್ ಕಟ್ ನಾಡ್ ನ ಬಾಳೆಲೆ ಬಳಿಯ ಬಿಳೂರು ಗ್ರಾಮದಲ್ಲಿ ಸಂಭ್ರಮದಿಂದ ಆಚರಿಸಿತು. ಹುಣ್ಣಿಮೆಯ ದಿನವಾದ ಇಂದು ಬೆಳಗ್ಗೆ ಬಿಳೂರು ಗ್ರಾಮದ ಕಾಂಡೇರ ಸುರೇಶ್ ಅವರ ಭತ್ತದ ಗದ್ದೆಯಲ್ಲಿ ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಸಾಂಪ್ರದಾಯಿಕವಾಗಿ ನವ ಧಾನ್ಯ ಭತ್ತದ ಕದಿರು ಕೊಯ್ಯುವ ಮೂಲಕ 31ನೇ ವರ್ಷದ ಹಬ್ಬವನ್ನು ಅರ್ಥಪೂರ್ಣಗೊಳಿಸಿದರು.ದುಡಿಕೊಟ್ಟ್-ಪಾಟ್ ಮೂಲಕ ಗದ್ದೆಗೆ ಮೆರವಣಿಗೆಯಲ್ಲಿ ತೆರಳಿ ತೆನೆ ತುಂಬಿದ ಕದಿರುಗಳಿಗೆ ವಿಶೇಷ ಪೂಜೆ ಸಲ್ಲಿಸಿದ ಅವರು ಪ್ರಕೃತಿ ದೇವಿಗೆ ನಮಿಸಿದರು. ಗಾಳಿಯಲ್ಲಿ ಗುಂಡು ಹಾರಿಸಿ ಪುತ್ತರಿಯ ಆಚಾರ, ವಿಚಾರಗಳನ್ನು ಆರಂಭಿಸಿದರು. ಕೊಯ್ದ ಕದಿರನ್ನು “ಪೊಲಿಯೇ ಬಾ, ಪೊಲಿ ಪೊಲಿಯೇ ಬಾ” ಎಂದು ಧಾನ್ಯಲಕ್ಷ್ಮಿಯನ್ನು ಘೋಷವಾಕ್ಯದ ಮೂಲಕ ಆಹ್ವಾನಿಸುತ್ತಾ ಮನೆ ತುಂಬಿಕೊಂಡರು. ನಂತರ ನವ ಧಾನ್ಯವನ್ನು ಪೂಜ್ಯಸ್ಥಾನದಲ್ಲಿಟ್ಟು ವಿಶೇಷ ಪೂಜೆ ಸಲ್ಲಿಸಿ ಕೊಡವ ಜನಾಂಗ ಹಾಗೂ ನಾಡಿನ…
ನಾಪೋಕ್ಲು ಡಿ.14 NEWS DESK : ಪುತ್ತರಿ ಹಬ್ಬವೆಂದರೆ ಗ್ರಾಮೀಣ ಪ್ರದೇಶದಲ್ಲಿ ಅತೀವ ಸಂಭ್ರಮ. ಧಾನ್ಯಲಕ್ಷ್ಮಿಯನ್ನು ಕರೆತರುವ ಈ ಹಬ್ಬದಲ್ಲಿ ಸಿಡಿಮದ್ದುಗಳದ್ದೇ ದರ್ಬಾರ್. ರಾಜ್ಯದ ಇತರೆಡೆಗಳಲ್ಲಿ ದೀಪಾವಳಿಯನ್ನು ಬೆಳಕಿನ ಹಬ್ಬವಾಗಿ ಆಚರಿಸಿದರೆ ಕೊಡಗಿನಲ್ಲಿ ಪುತ್ತರಿಯನ್ನು ಬೆಳಕಿನ ಹಬ್ಬವಾಗಿ ಆಚರಿಸುತ್ತಾರೆ ಅಂತೆಯೇ ಪಟಾಕಿಗಳಿಗೆ, ಸುಡು ಮದ್ದುಗಳಿಗೆ ಅಧಿಕ ಬೇಡಿಕೆ. ನಾಪೋಕ್ಲುವಿನ ಸಂತೆ ಮೈದಾನದಲ್ಲಿ ಪಟಾಕಿಗಳ ಮಾರಾಟ ಬಿರುಸಿನಿಂದ ನಡೆಯಿತು. ಗ್ರಾಹಕರು ಇಲ್ಲಿನ ಐದು ಮಳಿಗೆಗಳಿಂದ ಪಟಾಕಿಗಳನ್ನು ಖರೀದಿಸಿದರು. ಪುತ್ತರಿ ಹಬ್ಬದಂದು ಭತ್ತದ ಗದ್ದೆಗಳಲ್ಲಿ ಕದಿರು ಕೊಯ್ಯುವಲ್ಲಿಂದ ಹಿಡಿದು ರಾತ್ರಿಯಿಡೀ ಪಟಾಕಿ ಸಿಡಿಸುತ್ತಾರೆ. ಅದಕ್ಕೂ ಮುನ್ನ ಕತ್ತಲೆ ಆವರಿಸುತ್ತಿದ್ದಂತೆ ನೆರೆಕಟ್ಟುವ ಕಾರ್ಯ ಆರಂಭಗೊಳ್ಳುತ್ತದೆ. ಇಡೀ ದಿನ ಪಟಾಕಿಗಳ ಸದ್ದು ಮಾರ್ದನಿಸುತ್ತದೆ. ಬಾಣಬಿರುಸುಗಳ ಸದ್ದಿನೊಂದಿಗೆ ಮಕ್ಕಳು,ಹಿರಿಯರು ಖುಷಿ ಪಡುತ್ತಾರೆ. ಹಬ್ಬದಲ್ಲಿ ಸಾವಿರಾರು ರೂಪಾಯಿಗಳ ಪಟಾಕಿಗಳನ್ನು ಬೆಲೆ ಲೆಕ್ಕಿಸದೆ ಗ್ರಾಹಕರು ಖರೀದಿಸಿ, ಸಿಡಿಸಿ ಸಂಭ್ರಮಿಸುತ್ತಾರೆ. ವರದಿ : ದುಗ್ಗಳ ಸದಾನಂದ.
ನಾಪೋಕ್ಲು ಡಿ.14 NEWS DESK : ಕಕ್ಕಬ್ಬೆಯ ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ಪುತ್ತರಿ ಮುನ್ನಾ ದಿನ ವಾರ್ಷಿಕ ಕುಂಬ್ಯಾರ್ ಕಲಾಡ್ಚ ಹಬ್ಬವನ್ನು ತಕ್ಕ ಮುಖ್ಯಸ್ಥರು, ಊರಿನ ಪರವೂರಿನ ಭಕ್ತರು ಸೇರಿ ಸಾಂಪ್ರದಾಯಿಕವಾಗಿ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಇಗ್ಗುತ್ತಪ್ಪ ಸನ್ನಿಧಿಯಲ್ಲಿ ದೇವತಕ್ಕರಾದ ಪರದಂಡ ಕುಟುಂಬಸ್ಥರ ಎತ್ತುಪೋರಾಟದೊಂದಿಗೆ ದೇವಾಲಯಕ್ಕೆ ತಲುಪಿ ಎತ್ತುಪೋರಾಟವನ್ನು ಒಪ್ಪಿಸಲಾಯಿತು. ನಂತರ ಭಕ್ತಾದಿಗಳಿಂದ ತುಲಾಭಾರ ಸೇವೆ ಸೇರಿದಂತೆ ಹಾಲು ಬಲಿವಾಡು, ಹರಕೆ ಇನ್ನಿತರ ಪೂಜೆಗಳನ್ನು ನೆರವೇರಿಸಲಾಯಿತು. ಬಳಿಕ ಮಹಾಪೂಜೆ ಜರುಗಿ ಭಕ್ತಾದಿಗಳಿಗೆ ತೀರ್ಥ, ಪ್ರಸಾದ, ಅನ್ನಸಂತರ್ಪಣೆ ನೆರವೇರಿತು. ದೇವರ ನಡೆಯಲ್ಲಿ ನಿಂತು ತಕ್ಕ ಮುಖ್ಯಸ್ಥರು ನಾಡಿನ ಸುಭಿಕ್ಷಗಾಗಿ ಪ್ರಾರ್ಥನೆ ಸಲ್ಲಿಸಿದ ಬಳಿಕ ದೇವರ ಪ್ರದರ್ಶನ, ಬಲಿ ನಡೆದಯ ಎತ್ತುಪೋರಾಟ ದೊಂದಿಗೆ ತಕ್ಕ ಮುಖ್ಯಸ್ಥರು ಭಕ್ತಾದಿಗಳು ಇಗ್ಗುತ್ತಪ್ಪ ದೇವರ ಆದಿ ಸ್ಥಳವಾದ ಮಲ್ಮ ಬೆಟ್ಟಕ್ಕೆ ತೆರಳಿದರು. ಈ ಸಂದರ್ಭ ಪೇರೂರು ಹಾಗೂ ನೆಲಜಿ ಶ್ರೀ ಇಗ್ಗುತ್ತಪ್ಪ ದೇವಾಲಯದ ತಕ್ಕ ಮುಖ್ಯಸ್ಥರು ಎತ್ತುಪೋರಾಟದೊಂದಿಗೆ ಮಲ್ಮಕ್ಕೆ ಆಗಮಿಸಿದರು. ಅರ್ಚಕರು ಶುದ್ಧಕಲಶ ಪೂಜಾಕಾರ್ಯಗಳನ್ನು ನೆರವೇರಿಸಿ ಎತ್ತುಪೋರಾಟ ದುಡಿಕೊಟ್ಟ್…
ಮಡಿಕೇರಿ ಡಿ.14 NEWS DESK : ಭಾರತೀಯ ಸೇನೆಯ ಆರ್ಮಿ ಮೆಡಿಕಲ್ ಕಾಪ್ ಈ (ಎಎಂಸಿ)ಯಲ್ಲಿ ಜಿಲ್ಲೆಯ ಯುವತಿ ಡಾ.ಮಂಡುವಂಡ ಕನ್ನಿಕಾ ಕಾವೇರಮ್ಮ ಕ್ಯಾಪ್ಟನ್ ಆಗಿ ಆಯ್ಕೆಗೊಂಡಿದ್ದಾರೆ. ಎಂಬಿಬಿಎಸ್ ಪದವಿ ಪಡೆದಿರುವ ಇವರು ಕಳೆದ ಏಪ್ರಿಲ್‍ನಲ್ಲಿ ಆರ್ಮಿ ಮೆಡಿಕಲ್ ಕಾರ್ಪ್‍ಗೆ ಆಯ್ಕೆಗೊಂಡಿದ್ದರು. ಇದೀಗ ತರಬೇತಿ ಬಳಿಕ ಕ್ಯಾಪ್ಟನ್ ಆಗಿ ನೇಮಕಗೊಂಡಿದ್ದಾರೆ. 400ಕ್ಕೂ ಅಧಿಕ ಅಭ್ಯರ್ಥಿಗಳಲ್ಲಿ ಇವರು 57ನೇ ರ್ಯಾಂಕ್ ಮೂಲಕ ಈ ಸಾಧನೆ ಮಾಡಿದ್ದು, ಇದೀಗ ಚೆನ್ನೈ ಮಿಲಿಟರಿ ಆಸ್ಪತ್ರೆಗೆ ನಿಯೋಜಿತರಾಗಿದ್ದಾರೆ. ಕನ್ನಿಕಾ ಕಾವೇರಮ್ಮ ಮೂಲತಃ ಬಿಳಿಗೇರಿಯವರಾದ ಸುಂಟಿಕೊಪ್ಪ ಕೊಡಗರಗಳ್ಳಿಯಲ್ಲಿ ನೆಲಸಿರುವ ನಿವೃತ್ತ ಎ.ಸಿ.ಎಫ್ ಮಂಡುವಂಡ ಸುರೇಶ್ ಚಂಗಪ್ಪ ಹಾಗೂ ಮಂಗಳೂರಿನಲ್ಲಿ ಡಿ.ಎಚ್.ಓ ಕಚೇರಿಯಲ್ಲಿ ಉದ್ಯೋಗದಲ್ಲಿರುವ ಧನುಮತಿ (ತಾಮನೆ ಕಾವಾಡಿಚಂಡ) ದಂಪತಿಯ ಪುತ್ರಿ.
ಬೆಳಗಾವಿ ಡಿ.14 NEWS DESK : ಇಡೀ ದೇಶದಲ್ಲಿ ಕರ್ನಾಟಕವು ಸಿರಿಧಾನ್ಯ ಉತ್ಪಾದನೆಯಲ್ಲಿ ಮೂರನೇ ಸ್ಥಾನದಲ್ಲಿದೆ. ರೈತರು ಹೆಚ್ಚಿನ ಸಂಖ್ಯೆಯಲ್ಲಿ ಸಿರಿಧಾನ್ಯ ಕೃಷಿಯಲ್ಲಿ ತೊಡಗಿಕೊಳ್ಳಬೇಕು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದರು. ಬೆಳಗಾವಿಯ ಸುವರ್ಣಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಅಂತಾರಾಷ್ಟ್ರೀಯ ಸಾವಯವ ಮತ್ತು ಸಿರಿಧಾನ್ಯ ವಾಣಿಜ್ಯ ಮೇಳದ ಪೂರ್ವಭಾವಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಇದೇ ಡಿಸೆಂಬರ್ 23, 24, 25 ರಂದು ಬೆಂಗಳೂರಿನ ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ಅಂತಾರಾಷ್ಟ್ರೀಯ ಸಾವಯವ ಮತ್ತು ಸಿರಿಧಾನ್ಯ ವಾಣಿಜ್ಯ ಮೇಳ ನಡೆಯಲಿದೆ. ದೇಶ ವಿದೇಶಗಳಲ್ಲಿ ಸಿರಿಧಾನ್ಯಗಳ ಬೇಡಿಕೆ ಹೆಚ್ಚಾಗುತ್ತಿದೆ. ವಿಶ್ವದಲ್ಲಿ 903.61 ಲಕ್ಷ ಟನ್ ಗಳಷ್ಟು ಸಿರಿಧಾನ್ಯವನ್ನು ಬೆಳೆಯಲಾಗುತ್ತಿದೆ. ಭಾರತದಲ್ಲಿ 31.50 ರಷ್ಟು ಬೆಳೆಯುತ್ತಿದ್ದು, ವಿಶ್ವದಲ್ಲಿ ಅತ್ಯಂತ ಹೆಚ್ಚು ಸಿರಿಧಾನ್ಯ ಬೆಳೆಯುವ ದೇಶವಾಗಿದೆ. ಸುಮಾರು 18.38 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 22.16 ಲಕ್ಷ ಟನ್ ಗಳಷ್ಟು ಸಿರಿಧಾನ್ಯವನ್ನು ರಾಜ್ಯದಲ್ಲಿ ಬೆಳೆಯಲಾಗುತ್ತಿದೆ. ಇದರಲ್ಲಿ ಪ್ರೊಟೀನ್ ಹಾಗೂ ನಾರಿನ ಅಂಶ ಹೆಚ್ಚಾಗಿದೆ. ಜನರಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು…
ವಿರಾಜಪೇಟೆ ಡಿ.14 NEWS DESK : ಕೊಡಗಿನ ಜ್ವಲಂತ ಸಮಸ್ಯೆಗಳಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಯಾವುದೇ ಕ್ರಮಕ್ಕೆ ಮುಂದಾಗಲಿಲ್ಲಾ. ಕಾರ್ಮಿಕರ ಸಮಸ್ಯೆಗಳು ಇನ್ನೂ ಜೀವಂತವಾಗಿದೆ. ಸಮಸ್ಯೆಗಳಿ ಪರಿಹಾರ ಕಾಣಬೇಕು ಎನ್ನುವ ಮನೋಭಿಲಾಶೆಯಿಂದ ಸಿ.ಪಿ.ಐ.(ಮಾರ್ಕ್ಸ್‌ವಾದಿ) ಪಕ್ಷದ ವತಿಯಿಂದ ಡಿ.16 ಮತ್ತು 17 ರಂದು ವಿರಾಜಪೇಟೆಯಲ್ಲಿ ಜಿಲ್ಲಾ ಸಮ್ಮೇಳವನ್ನು ಆಯೋಜಿಸಲಾಗಿದೆ ಎಂದು ಪಕ್ಷದ ರಾಜ್ಯ ಸಮಿತಿ ಸದಸ್ಯ ಎಸ್.ವೈ.ಗುರುಶಾಂತ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿರಾಜಪೇಟೆಯ ದೊಡ್ಡಟ್ಟಿ ಚೌಕಿಯಲ್ಲಿರುವ ಪಕ್ಷದ ಶಾಖಾ ಕಚೇರಿಯಲ್ಲಿ 9ನೇ ಕೊಡಗು ಜಿಲ್ಲಾ ಸಮ್ಮೇಳನ ಮತ್ತು ಬಹಿರಂಗ ಅಧಿವೇಶನ ನಡೆಯಲಿದೆ ಎಂದು ತಿಳಿಸಿದರು. ಕೊಡಗಿನಲ್ಲಿ ನೆಲೆಸಿರುವ ಕಾರ್ಮಿಕರು ಇಂದಿಗೂ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಆನೆ ಮಾನವ ಸಂಘರ್ಷ, ನಿರ್ಗತಿಕ ಕಾರ್ಮಿಕರಿಗೆ ಪುನರ್ ವಸತಿ, ನಿವೇಶನ, ರೈತರು ಎದುರಿಸುತ್ತಿರುವ ಕೃಷಿ ಪದ್ದತಿಗಳ ನೀತಿಗಳು, ಬೆಳೆ ಪರಿಹಾರ ಹೀಗೆ ಹಲವು ಸಮಸ್ಯೆಗಳಿಗೆ ಪರಿಹಾರ ಕಾಣುವ ನಿಟ್ಟಿನಲ್ಲಿ ಬಹಿರಂಗ ಸಭೆ ಹಾಗೂ ಮೂರು ವರ್ಷಗಳಿಗೊಮ್ಮೆ ನಡೆಯುವ ಪ್ರತಿನಿಧಿಗಳ ಸಮಿತಿಗಳ ರಚನೆ ನಡೆಯಲಿದೆ…
ಮಡಿಕೇರಿ ಡಿ.14 NEWS DESK : ಪ್ರಸಕ್ತ(2024-25) ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉಪ ಯೋಜನೆ ಅಡಿಯಲ್ಲಿ 2023ನೇ ವರ್ಷದಲ್ಲಿ (01-01-2023 ರಿಂದ 31-12-2023) ರ ರಾಷ್ಟ್ರೀಯ, ಅಂತರ್‍ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪದಕ ವಿಜೇತರಾದ ರಾಜ್ಯದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ನೀಡಲಾಗುತ್ತದೆ. ಕರ್ನಾಟಕವನ್ನು ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಅಧಿಕೃತವಾಗಿ ಪ್ರತಿನಿಧಿಸಿ ಪದಕ ಪಡೆದ ಅರ್ಹ ಕ್ರೀಡಾಪಟುಗಳು ರಾಷ್ಟ್ರೀಯ, ಅಂತರ್‍ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಕ್ರೀಡೆಯಲ್ಲಿ ಭಾಗವಹಿಸಿದ ಕೊಡಗು ಜಿಲ್ಲೆಯ ಆಸಕ್ತ ಕ್ರೀಡಾಪಟುಗಳು ಅರ್ಜಿ ನಮೂನೆಗಳನ್ನು ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣ, ಮಡಿಕೇರಿಯಲ್ಲಿ ಪಡೆದು ಡಿಸೆಂಬರ್, 20 ರೊಳಗೆ ಅರ್ಜಿಯನ್ನು ಕಚೇರಿಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ ದೂ.ಸಂ.08272-220986 ಮತ್ತು ತರಬೇತುದಾರರು 9980887499 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ ಅವರು ತಿಳಿಸಿದ್ದಾರೆ.
ಮಡಿಕೇರಿ ಡಿ.14 NEWS DESK : ಭಾಗಮಂಡಲದಲ್ಲಿರುವ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ಡಿಸೆಂಬರ್, 15 ರಂದು ಸಂಜೆ 4 ಗಂಟೆಯಿಂದ “ಸಾಮೂಹಿಕ ಸತ್ಯನಾರಾಯಣ” ಪೂಜೆ ನಡೆಯಲಿದೆ. ಆದ್ದರಿಂದ ಸಾರ್ವಜನಿಕ ಭಕ್ತಾದಿಗಳು ದೇವಾಲಯಗಳಲ್ಲಿ ನಡೆಯಲಿರುವ “ಸಾಮೂಹಿಕ ಸತ್ಯನಾರಾಯಣ” ಪೂಜೆಯಲ್ಲಿ ಭಾಗವಹಿಸಿ, ಪೂಜೆಯನ್ನು ಯಶಸ್ವಿಗೊಳಿಸುವಂತೆ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಎನ್.ಜಿ. ಚಂದ್ರಶೇಖರ್ ಕೋರಿದ್ದಾರೆ.
ಮಡಿಕೇರಿ ಡಿ.14 NEWS DESK : ಕೊಡಗು ಜಿಲ್ಲೆಯಲ್ಲಿರುವ ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ 2024-25 ನೇ ಸಾಲಿನ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ವಿದ್ಯಾರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ವೆಬ್‍ಸೈಟ್ ವಿಳಾಸ https://ssp.postmatric.karnataka.gov.in ನಲ್ಲಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ವೆಬ್‍ಸೈಟ್ ವಿಳಾಸ https://ssp.karnataka.gov.in ನಲ್ಲಿ ಪರಿಶೀಲಿಸಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಪೊನ್ನಂಪೇಟೆ- 9901482763, ಸಹಾಯಕ ನಿರ್ದೇಶಕರು(ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ-9482894676, ಸಹಾಯಕ ನಿರ್ದೇಶಕರು(ಗ್ರೇಡ್-2), ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ-7259552655 ನ್ನು ಸಂಪರ್ಕಿಸಬಹುದು ಎಂದು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ಇಲಾಖೆಯ ಯೋಜನಾ ಸಮನ್ವಯಾಧಿಕಾರಿ ಎಸ್.ಹೊನ್ನೇಗೌಡ ತಿಳಿಸಿದ್ದಾರೆ.






