ಲೇಖಕ: admin

ಮಡಿಕೇರಿ ಡಿ.13 NEWS DESK : ನೆಲ್ಲಿಹುದಿಕೇರಿಯ ಶ್ರೀ ಮುತ್ತಪ್ಪ ದೇವಾಲಯದಲ್ಲಿ ಡಿ.14 ರಂದು ಶ್ರೀ ಮುತ್ತಪ್ಪನ ಪುತ್ತರಿ ವೆಳ್ಳಾಟಂ ನಡೆಯಲಿದೆ. ಸಂಜೆ 6 ಗಂಟೆಗೆ ಪುತ್ತರಿ ವೆಳ್ಳಾಟಂ ನಡೆಯಲಿದ್ದು, ರಾತ್ರಿ 8.30 ಗಂಟೆಗೆ ಕದಿರು ತೆಗೆಯಲಾಗುವುದು. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಾಲಯ ಸಮಿತಿಯ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿ ಕೋರಿದೆ.

Read More

ಮಡಿಕೇರಿ ಡಿ.13 NEWS DESK : ಕರ್ನಾಟಕ ಸರ್ಕಾರ ಕೃಷಿ ಇಲಾಖೆ ವತಿಯಿಂದ ಅಂತರರಾಷ್ಟ್ರೀಯ ಸಿರಿಧಾನ್ಯ ಮತ್ತು ಸಾವಯವ ಮೇಳ 2025 ರ ಅಂಗವಾಗಿ ಕೊಡಗು ಜಿಲ್ಲೆಯಲ್ಲಿ ಜಿಲ್ಲಾ ಮಟ್ಟದ ಸಿರಿಧಾನ್ಯ ರೋಡ್ ಶೋ ಕಾರ್ಯಕ್ರಮವು ಡಿ.20 ರಂದು ನಡೆಯಲಿದ್ದು, ಬೆಳಗ್ಗೆ 7 ಗಂಟೆಗೆ ಕೊಡಗು ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಉದ್ಘಾಟಿಸಲಿದ್ದಾರೆ. ಕಾಲ್ನಡಿಗೆ ಜಾಥಾ ಕಾರ್ಯಕ್ರಮವು ನಗರದ ಕೋಟೆ ಆವರಣದಿಂದ ಗಾಂಧಿ ಮೈದಾನವರೆಗೆ ಆಯೋಜಿಸಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲೆಯ ರೈತರು ಜಾಥಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕೋರಿದೆ. “ಸಿರಿಧಾನ್ಯ” ಮತ್ತು “ಮರೆತು ಹೋದ ಖಾದ್ಯಗಳ’ ಪಾಕ ಸ್ಪರ್ಧೆಯನ್ನು ಕೃಷಿ ಇಲಾಖೆಯಿಂದ ಡಿ.20 ರಂದು ಬೆಳಗ್ಗೆ 10 ಗಂಟೆಗೆ ಜಂಟಿ ಕೃಷಿ ನಿರ್ದೇಶಕರ ಕಚೇರಿ, ಕೆಎಸ್‍ಎಫ್‍ಸಿ ಕಟ್ಟಡ, ಇಂಡಸ್ಟ್ರೀಯಲ್ ಪ್ರದೇಶ ಇಲ್ಲಿ ನಡೆಯಲಿದೆ. ಈ ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಚಿಸುವ ಅಭ್ಯರ್ಥಿಗಳು ಡಿಸೆಂಬರ್, 18 ರ ಸಂಜೆ 5 ಗಂಟೆಯೊಳಗೆ ಖುದ್ದಾಗಿ ಸಂಬಂಧಪಟ್ಟ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅಥವಾ…

Read More

ಸೋಮವಾರಪೇಟೆ ಡಿ.13 NEWS DESK : ಕಳೆದ ಅಕ್ಟೋಬರ್‍ನಲ್ಲಿ ನಡೆದ ವಾಣಿಜ್ಯ ಮಳಿಗೆಗಳ ಹರಾಜನ್ನು ರದ್ದುಪಡಿಸಿ, ಮರು ಇ-ಟೆಂಡರ್ ಮಾಡಬೇಕೆಂದು ಪಟ್ಟಣ ಪಂಚಾಯಿತಿ ಸರ್ವ ಸದಸ್ಯರು ಆಗ್ರಹಿಸಿದರು. ಪಂಚಾಯಿತಿ ಅಧ್ಯಕ್ಷೆ ಜಯಂತಿ ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಟೆಂಡರ್‍ನಲ್ಲಿ ಅಕ್ರಮ ನಡೆದಿದೆ ಎಂದು ಎಲ್ಲಾ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದರು. ಟೆಂಡರ್‌ದಾರರ ಹೆಸರು, ಮಳಿಗೆ ಸಂಖ್ಯೆಗಳು ಮಧ್ಯವರ್ತಿಗಳ ಕೈಸೇರಿವೆ. ಪಂಚಾಯಿತಿ ಕಚೇರಿಯಲ್ಲಿ ಗೌಪ್ಯವಾಗಿರಬೇಕಾದ ಮಾಹಿತಿಗಳು ಸೋರಿಕೆಯಾಗಿರುವ ಕಾರಣ ಮಧ್ಯವರ್ತಿಗಳು ಡೀಲ್‍ಗೆ ಇಳಿಯಲು ಕಾರಣವಾಗಿದೆ. ಪಂಚಾಯಿತಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳೇ ಮಾಹಿತಿ ಸೋರಿಕೆ ಮಾಡಿದ್ದಾರೆ. ಈ ಬಗ್ಗೆ ಅಧ್ಯಕ್ಷರು ವಿವರಣೆ ನೀಡಬೇಕು. ಸೂಕ್ತ ಕ್ರಮಕೈಗೊಳ್ಳಬೇಕೆಂದು ಸರ್ಕಾರಿ ನಾಮನಿರ್ದೇಶನ ಸದಸ್ಯರಾದ ಡಿ.ಯು.ಕಿರಣ್, ವಿನಯ್, ಸದಸ್ಯರಾದ ಶೀಲಾ ಡಿಸೋಜ, ಬಿ.ಸಿ.ವೆಂಕಟೇಶ್, ಬಿ.ಸಂಜೀವ, ಜೀವನ್ ಆಗ್ರಹಿಸಿದರು. ನಿಯಮದಂತೆ ಟೆಂಡರ್ ನಡೆಸಲು ಅಧಿಕಾರಿಗಳಿಗೆ ಸೂಚಿಸಿದ್ದೆ, ಬಿಡ್‍ದಾರರ ಹೆಸರು ಸೋರಿಕೆಯಾಗಿರುವುದು ತಮ್ಮ ಗಮನಕ್ಕೆ ಬಂದಿದೆ. ಸದಸ್ಯರ ಆರೋಪವೂ ಸರಿಯಾಗಿದೆ. ಸದಸ್ಯರ ತೀರ್ಮಾನದಂತೆ ನಿರ್ಣಯ ಕೈಗೊಳ್ಳಲಾಗುವುದು ಎಂದು…

Read More