ಲೇಖಕ: admin

ಕುಶಾಲನಗರ ಡಿ.13 NEWS DESK :  ಹನುಮ ಜಯಂತಿ ಅಂಗವಾಗಿ ಕುಶಾಲನಗರ ಆಂಜನೇಯ ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯಕ್ರಮ ನಡೆಯಿತು. ಮುಂಜಾನೆಯಿಂದಲೇ ಪಂಚಾಮೃತ ಅಭಿಷೇಕ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ಜರುಗಿತು. ನಂತರ ಮಹಾಮಂಗಳಾರತಿ, ಮಧ್ಯಾಹ್ನ ಭಕ್ತಾದಿಗಳಿಗೆ ಅನ್ನ ಪ್ರಸಾದ ವಿತರಣೆ ನಡೆಯಿತು. ದೇವಾಲಯದ ಅರ್ಚಕರಾದ ರಾಧಾಕೃಷ್ಣ ಭಟ್ ನೇತೃತ್ವದಲ್ಲಿ ಮಯೂರ ಭಟ್ ಮತ್ತು ಅರ್ಚಕರ ತಂಡದಿಂದ ಪೂಜಾ ಕಾರ್ಯಕ್ರಮಗಳು ಜರುಗಿದವು. ಸಂಜೆ ಅಲಂಕೃತ ಮಂಟಪದಲ್ಲಿ ಶ್ರೀ ಆಂಜನೇಯ ಸ್ವಾಮಿಯ ಉತ್ಸವ ಮೂರ್ತಿಯ ಮೆರವಣಿಗೆ ರಥ ಬೀದಿಯ ಮೂಲಕ ಸಾಗಿ ಬೈಚನಹಳ್ಳಿ ಮಾರಿಯಮ್ಮ ದೇವಾಲಯ ತನಕ ಸಾಗಿತು. ದೇವಾಲಯ ಸೇವಾ ಟ್ರಸ್ಟ್ ಅಧ್ಯಕ್ಷ ವಿ.ಡಿ.ಪುಂಡರಿಕಾಕ್ಷ ಕಾರ್ಯದರ್ಶಿ ರಾಜೀವ್ ಖಜಾಂಚಿ ಜಗದೀಶ್ ಮತ್ತಿತರರು ಇದ್ದರು. ಇದೆ ವೇಳೆ ಹನುಮ ಜಯಂತಿ ಅಂಗವಾಗಿ ಕುಶಾಲನಗರ ಹನುಮಂತೋತ್ಸವ ಆಚರಣೆ ಸಮಿತಿ ಆಶ್ರಯದಲ್ಲಿ ಕುಶಾಲನಗರ ಮತ್ತು ಸುತ್ತಮುತ್ತಲ ಗ್ರಾಮಗಳ 9 ಮಂಟಪಗಳ ಶೋಭಾ ಯಾತ್ರೆ ನಡೆಯಿತು. ಶ್ರೀ ರಾಮಾಂಜನೇಯ ಉತ್ಸವ ಸಮಿತಿ, ಕುಶಾಲನಗರ ಹೆಚ್  ಆರ್ ಪಿ…

Read More

ಮಡಿಕೇರಿ ಡಿ.13 NEWS DESK : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಸ್ಥಾಪನೆಯಾಗಿ ಇದೇ ಡಿಸೆಂಬರ್, 15 ಕ್ಕೆ 14 ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನೆಲೆ ಇದೇ ಡಿ.15 ರಂದು ಕೊಡಗು, ದಕ್ಷಿಣ ಕನ್ನಡ ಮತ್ತು ಮೈಸೂರು ಜಿಲ್ಲೆಗಳಲ್ಲಿ ‘ಅರೆಭಾಷೆ ದಿನಾಚರಣೆ’ ಕಾರ್ಯಕ್ರಮಗಳು ಜರುಗಲಿವೆ ಎಂದು ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ತಿಳಿಸಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಕುಶಾಲನಗರ ಪಟ್ಟಣ ಮತ್ತು ಐಗೂರು ಗ್ರಾಮ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಳ್ಯ ಹಾಗೂ ಬೆಳ್ತಂಗಡಿ, ಹಾಗೆಯೇ ಮೈಸೂರಿನ ಕೊಡಗು ಗೌಡ ಸಮಾಜದಲ್ಲಿ ಅರೆಭಾಷೆ ದಿನಾಚರಣೆ ನಡೆಯಲಿದೆ ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರು ಹೇಳಿದರು. ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯವನ್ನು ಔನ್ನತ್ಯಕ್ಕೆ ಕೊಂಡೊಯ್ಯುವಲ್ಲಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಪ್ರಮುಖವಾಗಿ ಅರೆಭಾಷೆಯಲ್ಲಿ ಪುಸ್ತಕ ಪ್ರಕಟಣೆ, ಸಾಹಿತ್ಯ ಮತ್ತು ಸಂಸ್ಕೃತಿ ಕಾರ್ಯಕ್ರಮ ಹಾಗೂ ಅರೆಭಾಷೆ ಬರವಣಿಗೆಗೆ ಹೆಚ್ಚು ಒತ್ತು ನೀಡುವುದು. ಜೊತೆಗೆ…

Read More

ಮಡಿಕೇರಿ ಡಿ.13 NEWS DESK : ಆನೆ ತುಳಿತಕ್ಕೆ ಒಳಗಾಗಿ ಜಿಲ್ಲಾಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ, ಪೊನ್ನಂಪೇಟೆ ತಾಲೂಕಿನ ಬಿರುನಾಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪರಕಟಗೇರಿ ಗ್ರಾಮದ ನಿವಾಸಿ ಕರ್ತಮಾಡ ಪೂವಣ್ಣ ಅವರ ಪತ್ನಿ ಶಾರದಾ ಅವರ ಆರೋಗ್ಯವನ್ನು ಕೊಡಗು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಹಾಗೂ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ  ಧರ್ಮಜ ಉತ್ತಪ್ಪ ವಿಚಾರಿಸಿದರು.  ನಗರದ ಜಿಲ್ಲಾಸ್ಪತ್ರೆಗೆ ಆಗಮಿಸಿದ ಅವರು, ವೈದ್ಯರಿಂದ ಮಹಿಳೆಯ ಆರೋಗ್ಯ ಸ್ಥಿತಿಯ ಕುರಿತು ಮಾಹಿತಿ‌ ಪಡೆದುಕೊಂಡು ಕುಟುಂಬಕ್ಕೆ ಸ್ಥೈರ್ಯ ತುಂಬಿದರು.  ಸರ್ಕಾರದಿಂದ ತಕ್ಷಣವೇ ಆಸ್ಪತ್ರೆಯ ವೈದ್ಯಕೀಯ ವೆಚ್ಚ ಹಾಗೂ ಸಂತ್ರಸ್ತೆಗೆ ಪರಿಹಾರ ನೀಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅರಣ್ಯಾಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭ ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎ.ಇಸ್ಮಾಯಿಲ್, ಡಿಸಿಎಫ್  ನೆಹರು ಮತ್ತು ಅರಣ್ಯ ಸಿಬ್ಬಂದಿ ಹಾಜರಿದ್ದರು.    

Read More

ಸುಂಟಿಕೊಪ್ಪ ಡಿ.13 NEWS DESK  : ಯೇಸುಕ್ರಿಸ್ತರ ಜನನದ ಕ್ಯಾರೋಲ್ಸ್ ಅಂಗವಾಗಿ ಸುಂಟಿಕೊಪ್ಪ ಸಂತ ಅಂತೋಣಿ ದೇವಾಲಯದ ವತಿಯಿಂದ ಸಾಂತಕ್ಲಾಸ್ ವೇಷಧಾರಿ, ಧರ್ಮಗುರುಗಳು, ಕನ್ಯಾಸ್ತ್ರೀಯರು ಹಾಗೂ ಗಾಯನ ವೃಂದವರು ಮನೆಮನೆಗೆ ತೆರಳಿ ಪ್ರಾರ್ಥಿಸಿ, ಕ್ರಿಸ್ತರ ಶುಭಸಂದೇಶವನ್ನು ಸಾರಿದರು. ಕ್ರೈಸ್ತ ಭಾಂದವರು ಡಿಸೆಂಬರ್ ಮಾಸದಲ್ಲಿ ಮನೆಗಳಿಗೆ ಸುಣ್ಣ ಬಣ್ಣ ಬಳಿದು ವಿವಿಧ ಬಗೆಯ ನಕ್ಷತ್ರಗಳನ್ನು ಮನೆಯ ಮೇಲ್ಚಾವಣಿಗಳ ಮೇಲೆ ಅಳವಡಿಸುವುದು. ಮನೆಗಳಲ್ಲಿ ಕ್ರಿಸ್ತನ ಜನನದ ಸ್ಥಳವಾದ ಗೋದಾಲಿ (ದನದಕೊಟ್ಟಿಗೆ) ನಿರ್ಮಾಣವಾದರೆ, ಮಹಿಳೆಯರು ವಿವಿಧ ಬಗೆ ಬಗೆಯ ತಿಂಡಿ ಖಾದ್ಯಗಳನ್ನು ತಯಾರಿಸುವ ಸಡಗರ ಸಂಭ್ರಮಕ್ಕೆ ಅಣಿಯಾಗುತ್ತಿರುವಂತೆಯೇ ಸಾಂತಕ್ಲಾಸ್ ಅವರನ್ನು ಒಳಗೊಂಡ ಕ್ಯಾರೋಲ್ಸ್ ತಂಡವು ಆಗಮಿಸಿ ಮನೆಗಳಿಗೆ ಆರ್ಶಿವಚನ ನೀಡಿ ಮನೆಯ ಮಂದಿಗೆ ಶುಭಾಶಯಗಳನ್ನು ವಿನಿಮಯ ಮಾಡಿಕೊಳ್ಳುವುದೇ ಈ ಹಬ್ಬದ ವಿಶೇಷತೆಯಾಗಿದೆ. ವಿಶ್ವದಾದ್ಯಂತ 2024 ರ ಕ್ರಿಸ್ತರ ಜನನದ ಹಬ್ಬವನ್ನು ಸಡಗರ ಸಂಭ್ರಮದಲ್ಲಿ ಆಚರಿಸಲು ಅಣಿಗೊಳ್ಳುತ್ತಿದೆ. ಅದೇ ರೀತಿಯ ಸುಂಟಿಕೊಪ್ಪ ದೇವಾಲಯದಲ್ಲಿಯೂ ಕ್ರೈಸ್ತ ಧರ್ಮಗರುಗಳು, ಕ್ರೈಸ್ತ ದೇವಾಲಯ ಕ್ರೈಸ್ತ ಬಾಂಧವರು ಭರದ ಸಿದ್ಧತೆಯಲ್ಲಿ ತೊಡಗಿಸಿಕೊಂಡಿದ್ದಾರೆ. ದೇವಾಲಯದಲ್ಲಿ…

Read More

ಮಡಿಕೇರಿ ಡಿ.13 NEWS DESK : ಜಿಲ್ಲಾ ವ್ಯಾಪ್ತಿಯ ಸಿ ಮತ್ತು ಡಿ ವರ್ಗದ ಭೂಮಿಯಲ್ಲಿ ಕೃಷಿ ಚಟುವಟಿಕೆಗಳನ್ನು ನಡೆಸಿಕೊಂಡು ಬದುಕು ಕಟ್ಟಿಕೊಂಡಿರುವ ಬಡ ಕೃಷಿಕರ ಕೃಷಿ ಭೂಮಿಯನ್ನು ಮೀಸಲು ಅರಣ್ಯವೆಂದು ಘೋಷಿಸಕೂಡದೆಂದು ಆಗ್ರಹಿಸಿ ‘ನಮ್ಮ ಭೂಮಿ ನಮ್ಮ ಹಕ್ಕು’ ಘೋಷಣೆಯಡಿ ಸೋಮವಾರಪೇಟೆಯ ರೈತ ಹೋರಾಟ ಸಮಿತಿಯಿಂದ ಡಿ.20 ರಂದು ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ಸಮಿತಿಯ ಅಧ್ಯಕ್ಷ ಸುರೇಶ್ ಚಕ್ರವರ್ತಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಿ ಮತ್ತು ಡಿ ಜಮೀನುಗಳನ್ನು ಈ ಹಿಂದೆಯೇ ಕ್ರಮ ಬದ್ಧವಲ್ಲದ ರೀತಿಯಲ್ಲಿ ಅರಣ್ಯ ಇಲಾಖೆಗೆ ವರ್ಗಾಯಿಸಲಾಗಿದೆ. ಇದೀಗ ಈ ಜಾಗವನ್ನು ಮೀಸಲು ಅರಣ್ಯವೆಂದು ಘೋಷಣೆ ಮಾಡುವ ಆದೇಶ ಹೊರಡಿಸುವ ಪ್ರಯತ್ನ ನಡೆದಿದೆ. ಇದನ್ನು ರದ್ದುಪಡಿಸಬೇಕೆಂದು ಆಗ್ರಹಿಸಿದರು. ಈ ಸಮಸ್ಯೆ ಕೇವಲ ಸೋಮವಾರಪೇಟೆ ತಾಲ್ಲೂಕಿಗೆ ಮಾತ್ರ ಸೀಮಿತವಾಗಿಲ್ಲ. ಜಿಲ್ಲೆಯ ಎಲ್ಲಾ ಭಾಗಗಳಲ್ಲು ಈ ಸಂಕಷ್ಟವನ್ನು ಕೃಷಿಕರು ಎದುರಿಸುತ್ತಿದ್ದಾರೆ. ಸಿ ಮತ್ತು ಡಿ ಭೂಮಿಯನ್ನು ಮೀಸಲು ಅರಣ್ಯವೆಂದು ಘೋಷಿಸಿದಲ್ಲಿ ಕೊಡಗಿನ…

Read More

ಮಡಿಕೇರಿ ಡಿ.13 NEWS DESK : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಬರುವ ವಿವಿಧ ನಿಗಮಗಳಿಗೆ ಸೂಕ್ತ ಅನುದಾನ ಬಿಡುಗಡೆಯಾಗುತ್ತಿಲ್ಲವೆಂದು ಆರೋಪಿಸಿ ಕೊಡಗು ಜಿಲ್ಲಾ ಬಿಜೆಪಿಯ ಹಿಂದುಳಿದ ವರ್ಗಗಳ ಮೋರ್ಚಾ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿತು. ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾಧ್ಯಕ್ಷ ಅಪ್ರು ರವೀಂದ್ರ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರಮುಖರು ಹಾಗೂ ಕಾರ್ಯಕರ್ತರು ರಾಜ್ಯ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ರಾಜ್ಯ ಸರಕಾರ ಹಿಂದುಳಿದ ವರ್ಗಗಳ ಬಗ್ಗೆ ಕಾಳಜಿ ತೋರುತ್ತಿಲ್ಲವೆಂದು ಆರೋಪಿಸಿದ ಪ್ರತಿಭನಾಕಾರರು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಬರುವ ವಿವಿಧ ನಿಗಮಗಳಿಗೆ ಅಗತ್ಯ ಅನುದಾನ ಬಿಡುಗಡೆ ಮಾಡುವಂತೆ ಒತ್ತಾಯಿಸಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಮಾತನಾಡಿ, ಹಿಂದುಳಿದ ಸಮೂಹಗಳ ನೆರವಿನಿಂದ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಪ್ರಸ್ತುತ ಅವರನ್ನೆ ಕಡೆಗಣಿಸುತ್ತಿದೆ. ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಘೋಷಿಸಿರುವ ಭಾಗ್ಯಗಳನ್ನು ಪೂರೈಸುವ ಏಕಮಾತ್ರ ಉದ್ದೇಶದಿಂದ ವಿವಿಧ…

Read More

ಮಡಿಕೇರಿ ಡಿ.13 NEWS DESK : 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು 2024ರ ಡಿ.20, 21 ಮತ್ತು  22 ರಂದು ಮಂಡ್ಯದಲ್ಲಿ ನಡೆಯಲಿದೆ. ಈ ಸಮ್ಮೇಳನದಲ್ಲಿ ಮೂರು ವೇದಿಕೆಗಳಿದ್ದು, 27 ವಿಚಾರಗೋಷ್ಠಿಗಳಲ್ಲಿ 150 ವಿದ್ವಾಂಸರು ನಾಡಿಗೆ ಸಂಬಂಧಿಸಿದ ವಿವಿಧ ವಿಚಾರಗಳ, ಸಮಸ್ಯೆಗಳ ಕುರಿತು ವಿಚಾರ ಮಂಡನೆ ಮಾಡಲಿದ್ದಾರೆ. “ಮಂಡ್ಯ ಜಿಲ್ಲೆಗೆ ಕೊಡುಗೆ ನೀಡಿದ ಮಹನೀಯರ ಕುರಿತು”, ಕನ್ನಡ ನಾಡಿನ ಜಲ ನೆಲ ಸಾಕ್ಷರತೆಯ ಕುರಿತು ಅವಲೋಕನ, “ಸಾಹಿತ್ಯದಲ್ಲಿ ರಾಜಕೀಯ – ರಾಜಕೀಯದಲ್ಲಿ ಸಾಹಿತ್ಯ” ಕರ್ನಾಟಕ 50 ಹಿನ್ನೋಟ- ಮುನ್ನೋಟ, ಕರ್ನಾಟಕದ ಮೌಖಿಕ ಪರಂಪರೆಗಳ ಪ್ರದರ್ಶನ ಮತ್ತು ವಿವರಣೆ, ಸಮ್ಮೇಳನ ಅಧ್ಯಕ್ಷರ ಜೊತೆಗೆ ಸಂವಾದ, ಜಾಗತಿಕ ನೆಲೆಯಲ್ಲಿ ಕನ್ನಡ ಕಟ್ಟುವ ಬಗ್ಗೆ, ಸರಕಾರಿ ಶಾಲೆಗಳ ಸಬಲೀಕರಣ ಹೀಗೆ ಹತ್ತು ಹಲವು ವಿಷಯದಲ್ಲಿ ವಿಚಾರಗೋಷ್ಠಿ ಯೋಜನೆಗೊಂಡಿವೆ. ನಾಲ್ಕು ಕವಿಗೋಷ್ಠಿಯನ್ನು ಆಯೋಜಿಸಲಾಗಿದ್ದು 83 ಕವಿಗಳು ಪಾಲ್ಗೊಳ್ಳಲಿದ್ದಾರೆ. ಈ ಬಾರಿ ವಿಶೇಷವಾಗಿ ಅಂಧರ ಕೈಗೋಷ್ಠಿ ಏರ್ಪಡಿಸಲಾಗಿದ್ದು 10 ಮಂದಿ ಅಂದ ಕವಿಗಳು ಕವನವಾಚನ ಮಾಡಲಿದ್ದಾರೆ.…

Read More

ಮಡಿಕೇರಿ ಡಿ.13 NEWS DESK  : ನಾಪೋಕ್ಲುವಿನ ಪೊನ್ನಾಡ್ ಫಾರ್ಮರ್ ಪ್ರೊಡ್ಯೂಸರ್ ಕಂಪನಿ ಲಿಮಿಟೆಡ್ ಗೆ ಪ್ರತಿಷ್ಠಿತ ಸಿಐಐ – ಎಫ್‍ಪಿಒ ಎಕ್ಸಲೆನ್ಸ್ ರಾಷ್ಟ್ರೀಯ ಪ್ರಶಸ್ತಿ ಲಭಿಸಿದ್ದು, ಇದು ಕೊಡಗು ಜಿಲ್ಲೆಗೆ ಹೆಮ್ಮೆಯ ವಿಚಾರವೆಂದು ಸಂಸ್ಥೆಯ ಅಧ್ಯಕ್ಷ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ ಹರ್ಷ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರಶಸ್ತಿಗಾಗಿ ಅರ್ಹತೆ ಪಡೆದ ದೇಶದ 144 ಉತ್ತಮ ರೈತ ಉತ್ಪಾದಕ ಕಂಪನಿಗಳಲ್ಲಿ ಈಶಾ ಫೌಂಡೇಶನ್ ನ 25 ಎಫ್‍ಪಿಒಗಳಲ್ಲಿ ಒಂದಾದ ಪೊನ್ನಾಡ್ ಫಾರ್ಮರ್ ಪ್ರೊಡ್ಯೂಸರ್ ಕಂಪನಿ ಲಿಮಿಟೆಡ್ ಪ್ರತಿಷ್ಠಿತ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ನಾಲ್ಕು ಮಾದರಿಯ ಪ್ರಶಸ್ತಿಗಳಲ್ಲಿ ಖರೀದಿ ಮತ್ತು ಮಾರಾಟ ವ್ಯವಹಾರದ ಯಶಸ್ಸಿಗಾಗಿ ನಮ್ಮ ಸಂಸ್ಥೆಗೆ ಪ್ರಶಸ್ತಿ ಲಭಿಸಿದೆ ಎಂದರು. ಭಾರತದಾದ್ಯಂತದ ರೈತ ಉತ್ಪಾದಕ ಕಂಪನಿಗಳೊಂದಿಗೆ ಸ್ಪರ್ಧಿಸಿ, ಕಠಿಣ ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ಭಾಗವಹಿಸಿ ಪೊನ್ನಾಡ್ ಎಫ್‍ಪಿಒ ವಿಜಯಶಾಲಿಯಾಗಿ ಹೊರಹೊಮ್ಮಿದೆ. ಇತ್ತೀಚೆಗೆ ನವದೆಹಲಿಯಲ್ಲಿ ನಡೆದ ಸಿಐಐ – ಎಫ್‍ಪಿಒ ಶೃಂಗಸಭೆಯಲ್ಲಿ ಕೇಂದ್ರ ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಮಿನಾಜ್…

Read More

ಸೋಮವಾರಪೇಟೆ ಡಿ.13 NEWS DESK : ಮಕ್ಕಳಿಗೆ ಸಂಸ್ಕಾರ ನೀಡಿ, ಉತ್ತಮ ಪ್ರಜೆಗಳನ್ನಾಗಿ ಮಾಡಿ ಎಂದು ಬಸವಪಟ್ಟಣದ ತೋಂಟದಾರ್ಯ ಸಂಸ್ಥಾನ ಮಠದ ಶ್ರೀ ಸ್ವತಂತ್ರ ಬಸವಲಿಂಗ ಸ್ವಾಮೀಜಿ ತಿಳಿಸಿದರು. ಸೋಮವಾರಪೇಟೆಯ ಕರ್ಕಳ್ಳಿಯಲ್ಲಿರುವ ಅಕ್ಕನ ಬಳಗದ ಸಭಾಂಗಣದಲ್ಲಿ ಆಡಳಿತ ಮಂಡಳಿಯ ಸದಸ್ಯರಿಗೆ ಮಾರ್ಗದರ್ಶನ ನೀಡಿ ಮಾತನಾಡಿದರು. ಇಂದು ಮಕ್ಕಳಿಗೆ ಸಂಸ್ಕಾರದ ಅಗತ್ಯವಿದೆ. ತಾಯಂದಿರು ಜವಾಬ್ದಾರಿ ತೆಗೆದುಕೊಳ್ಳಬೇಕು, ಆಧುನಿಕತೆ ಬೆಳೆದಂತೆ ಆದ್ಯಾತ್ಮ, ಸಂಸ್ಕಾರ ಮರೆಯಾಗುತ್ತಿದೆ ಎಂದರು.  ಮಾಸಿಕ ಪೂಜೆಯ ದಿನ ಎಲ್ಲಾ ತಾಯಂದಿರು ತಮ್ಮ ಮಕ್ಕಳೊಂದಿಗೆ ವಚನಗಳ ಅಭ್ಯಾಸ, ಸಾಮೂಹಿಕ ಇಷ್ಟಲಿಂಗ ಪೂಜೆ ಮಾಡಿ ಆ ಮೂಲಕ ಧಾರ್ಮಿಕ ಜಾಗೃತಿ ಮೂಡಿಸಿ ಹಾಗೂ ಸಮಾಜದಲ್ಲಿ ಅಕ್ಕಮಹಾದೇವಿ ಮತ್ತು ವಚನಕಾರರ ಬಗ್ಗೆ ಅರಿವು ಮೂಡಿಸುವ ಕೆಲಸವಾಗಲಿ ಎಂದು ತಿಳಿಸಿದರು. ಬೆಂಗಳೂರಿನ ಸ್ತ್ರೀರೋಗ ತಜ್ಞ ವೈದ್ಯರಾದ, ಡಾ.ಬಿ.ಎಂ.ಲತಾ ಸಾರ್ವಜನಿಕರ ಉಪಯೋಗಕ್ಕೆ ನೀಡಿದ್ದ ಅಡುಗೆ ಪಾತ್ರೆಗಳನ್ನು ತಪೂಕ್ಷೇತ್ರ ಮನೆಹಳ್ಳಿ ಮಠದ ಶ್ರೀ.ಮಹಾಂತ ಶಿವಲಿಂಗ ಸ್ವಾಮೀಜಿ ಅಕ್ಕನ ಬಳಗಕ್ಕೆ ಹಸ್ತಾಂತರಿಸಿ ಆಶೀರ್ವದಿಸಿದರು.  ಈ ಸಂದರ್ಭ ಅಕ್ಕನ ಬಳಗದ ಅಧ್ಯಕ್ಷೆ ಗೀತಾರಾಜು,…

Read More

ಮಡಿಕೇರಿ ಡಿ.13 NEWS DESK  : ಕೊಡಗು ಜಿಲ್ಲೆಯ ನ್ಯಾಷನಲ್ ಮೆಡಿಕೋಸ್ ಸಂಸ್ಥೆ, ಸಂಸ್ಕೃತಿ ಸಿರಿ ಬಳಗ ಮತ್ತು ಟ್ರಸ್ಟ್, ಸ್ವಸ್ಥ ಕೂರ್ಗ್ ಫೌಂಡೇಶನ್ ಸಹಯೋಗದಲ್ಲಿ ಗಣರಾಜ್ಯೋತ್ಸವದ ಪ್ರಯುಕ್ತ ಜ.26 ರಂದು ಕೃತಕ ಅಂಗಾಂಗಗಳ ಉಚಿತ ಜೋಡಣೆ, ವಿತರಣೆ ಮತ್ತು ಆರೋಗ್ಯ ತಪಾಸಣೆ ನಡೆಯಲಿದೆ ಎಂದು ಖ್ಯಾತ ಇ.ಎನ್.ಟಿ ವೈದ್ಯರು ಹಾಗೂ ಸಂಸ್ಕೃತಿ ಸಿರಿ ಬಳಗದ ಟ್ರಸ್ಟಿ ಡಾ.ಕೋಲೆಯಂಡ ಮೋಹನ್ ಅಪ್ಪಾಜಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಡಿಕೇರಿಯ ಪೊಲೀಸ್ ಮೈತ್ರಿ ಭವನದಲ್ಲಿ ಉಚಿತ ಜೋಡಣೆ, ವಿತರಣೆ, ಆರೋಗ್ಯ ತಪಾಸಣೆ ಮತ್ತು ತಜ್ಞ ವೈದ್ಯರುಗಳ ಸಮ್ಮುಖದಲ್ಲಿ ಸಮಾಲೋಚನೆ ಶಿಬಿರ ನಡೆಯಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದರು. ಐ.ಎಂ.ಎ ಕೊಡಗು, ಎ.ಓ.ಐ ಕೊಡಗು (ಇ.ಎನ್.ಟಿ ಸರ್ಜನ್ಸ್), ಸ್ವಸ್ಥ ಕೂರ್ಗ್, ಡಿಆರ್‍ಎಂ ಆಸ್ಪತ್ರೆ ಮೈಸೂರು, ಎನ್‍ಜಿಒ, ಕೊಡಗು ಕಾಫಿ ಪ್ಲಾಂಟರ್ಸ್ ಸದಸ್ಯರು ಕೊಡಗು ಇವರುಗಳ ಸಹಯೋಗದೊಂದಿಗೆ ನಡೆಸಲಾಗುವ ಉಚಿತ ಶಿಬಿರದಲ್ಲಿ 2ಆ ಇಕೋ ಮತ್ತು ಉಚಿತ ಲ್ಯಾಬ್…

Read More