ಲೇಖಕ: admin

ವಿರಾಜಪೇಟೆ ಡಿ.27 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಅರ್ಹ ಫಲಾನುಭವಿಗಳಿಗೆ ವಾತ್ಸಲ್ಯ ಕಿಟ್ ವಿತರಣೆ ಮಾಡಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ವಿರಾಜಪೇಟೆ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಶ್ರೀ ಕ್ಷೇತ್ರದ ಮಾತೃಶ್ರೀ ಡಾ. ವಿ.ಹೇಮಾವತಿ ಅವರ ವಾತ್ಸಲ್ಯಮಯಿ ಚಿಂತನೆಯಂತೆ ಸಮಾಜದಲ್ಲಿನ ಅತ್ಯಂತ ಆಶಕ್ತ ಹಿರಿಯರನ್ನು ಗುರುತಿಸಿ ತನ್ನ ಕಾರ್ಯಕರ್ತರ ಮೂಲಕ ಮಾಸಿಕವಾಗಿ ಒಂದು ಸಾವಿರದಂತೆ ಮಾಸಾಶನವನ್ನು ನೀಡಿ ವಾತ್ಸಲ್ಯ ಪೌಷ್ಠಿಕಾಂಶ ಭರಿತ ಆಹಾರವನ್ನು ಒದಗಿಸಿ ಒದಗಿಸಲಾಗುವುದು. ಅದರಂತೆ ವಿರಾಜಪೇಟೆ ಪೊನ್ನಂಪೇಟೆ ತಾಲೂಕಿನ ಹದಿನೆಂಟು ಕುಟುಂಬಗಳಿಗೆ ಗೃಹೋಪಯೋಗಿ ಅಗತ್ಯ ಸಾಮಾಗ್ರಿಗಳ ಕಿಟ್‍ಗಳನ್ನು ವಿತರಿಸಲಾಯಿತು. ಕೊಡಗು ಜಿಲ್ಲೆಯ ಜಿಲ್ಲಾ ನಿರ್ದೇಶಕರಾದ ಲೀಲಾವತಿ, ತಾಲ್ಲೂಕು ಯೋಜನಾಧಿಕಾರಿ ಬಿ.ದಿನೇಶ್ ಮತ್ತು ತಾಲ್ಲೂಕು ಜ್ಞಾನವಿಕಾಸ ಸಮನ್ವಯಾಧಿಕಾರಿ ಆರ್.ಶ್ರೇಯಾ ತಾಲೂಕಿನಾದ್ಯಂತ ಏಕಕಾಲದಲ್ಲಿ ವಿತರಿಸಿದರು.

Read More

ಮಡಿಕೇರಿ NEWS DESK ಡಿ.27 : ಯೇಸುಕ್ರಿಸ್ತರ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನ ಮಾಡಿರುವ ಕಿಡಿಗೇಡಿಗಳನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಸೌತ್ ಕೊಡಗು ಕ್ರಿಶ್ಚಿಯನ್ ಅಸೋಸಿಯೇಷನ್ ಗೋಣಿಕೊಪ್ಪಲು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ. ಕಿಡಿಗೇಡಿಯೊಬ್ಬ ಕ್ರಿಸ್‌ಮಸ್ ಹಬ್ಬದ ಕುರಿತು ಅಗೌರವದ ಪೋಸ್ಟ್ ಮಾಡಿರುವುದಲ್ಲದೆ ಯೇಸುಕ್ರಿಸ್ತರನ್ನು ಕೀಳಾಗಿ ಕಂಡಿದ್ದಾನೆ. ಈತನ ಹೇಳಿಕೆಗೆ ಬೆಂಬಲವಾಗಿ ಮತ್ತೊಬ್ಬ ಕಿಡಿಗೇಡಿ ಅವಹೇಳನಾಕಾರಿ ಪೋಸ್ಟ್ ಮಾಡಿದ್ದಾನೆ. ಇದು ಸಮಾಜದಲ್ಲಿ ಅಶಾಂತಿ ಮೂಡಿಸುವ ಪ್ರಯತ್ನವಾಗಿದ್ದು, ಪೊಲೀಸರು ತಪ್ಪಿತಸ್ಥರನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕ್ರಿಶ್ಚಿಯನ್ ಅಸೋಸಿಯೇಷನ್ ನ ಪ್ರಮುಖರು ಒತ್ತಾಯಿಸಿದರು. ಯೇಸುಕ್ರಿಸ್ತರನ್ನು ಅವಹೇಳನ ಮಾಡಿ ಕ್ರೆöÊಸ್ತ ಸಮುದಾಯದ ಭಾವನೆಗೆ ದಕ್ಕೆ ತಂದಿರುವ ಪ್ರಕರಣವನ್ನು ತೀವ್ರವಾಗಿ ಖಂಡಿಸುವುದಾಗಿ ತಿಳಿಸಿದರು. ದೂರು ನೀಡುವ ಸಂದರ್ಭ ಸೌತ್ ಕೊಡಗು ಕ್ರಿಶ್ಚಿಯನ್ ಅಸೋಸಿಯೇಷನ್ ನ ಅಧ್ಯಕ್ಷ ಎ.ಜೆ.ಬಾಬು, ಕಾರ್ಯದರ್ಶಿ ಸಿ.ಜೆ.ಆಂಟೋ, ಖಜಾಂಚಿ ಬೇಬಿ ಜಾರ್ಜ್, ನಿರ್ದೇಶಕರುಗಳಾದ ಅಂತೋಣಿ ರಾಬಿನ್, ವರ್ಗೀಸ್ ಪಿ.ಒ, ದಾದು ಜೋಸೆಫ್, ಥಾಮಸ್ ಮನ್ನಾರತ್ ಮತ್ತಿತರರು…

Read More

ಮಡಿಕೇರಿ ಡಿ.27 NEWS DESK : ನಗರದ ಹೊಸ ಬಡಾವಣೆಯಲ್ಲಿರುವ ಶ್ರೀ ಪ್ರಸನ್ನ ಗಣಪತಿ ದೇವಾಲಯದ ಇಪ್ಪತ್ತನಾಲ್ಕನೇ ವಾರ್ಷಿಕೋತ್ಸವವು ಡಿ.29 ರಂದು ನಡೆಯಲಿದೆ. ಅಂದು ಬೆಳಿಗ್ಗೆ 7 ಗಂಟೆಗೆ ಪ್ರಸನ್ನ ಗಣಪತಿಗೆ ಎಳನೀರು ಅಭಿಷೇಕ, ಪಂಚಾಮೃತ ಅಭಿಷೇಕ, ಕ್ಷೇರಾಭಿಷೇಕ ಮತ್ತು ಅಲಂಕಾರ ಪೂಜೆ ನಡೆಯಲಿದ್ದು, 9.30 ಗಂಟೆಗೆ ಸ್ಥಳ ಶುದ್ಧಿ, ಪುಣ್ಯಾಹ, 10 ಗಂಟೆಗೆ ಮಹಾಗಣಪತಿ ಹೋಮ ಹಾಗೂ ನವಕ ಕಳಸ ಪೂಜೆ ಜರುಗಲಿದೆ. ಮಧ್ಯಾಹ್ನ 12 ಗಂಟೆಗೆ ಮಹಾಪೂಜೆ, 1 ಗಂಟೆಗೆ ಅನ್ನ ಸಂತರ್ಪಣೆ ನೆರವೇರಲಿದ್ದು, ಸಂಜೆ 5 ಗಂಟೆಗೆ ಭಜನಾ ಕಾರ್ಯಕ್ರಮ, 7 ಗಂಟೆಗೆ ರಂಗಪೂಜೆ, 7.30 ಗಂಟೆಗೆ ಮಹಾಪೂಜೆ, 8 ಗಂಟೆಗೆ ಪ್ರಸಾದ ವಿತರಣೆ ನಡೆಯಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಾಲಯದ ಅಧ್ಯಕ್ಷರು, ಆಡಳಿತಮಂಡಳಿ ಸದಸ್ಯರು ಮನವಿ ಮಾಡಿದ್ದಾರೆ.

Read More

ಮಡಿಕೇರಿ ಡಿ.27 NEWS DESK :  ಮಾಜಿ ಪ್ರಧಾನಮಂತ್ರಿ ಡಾ.ಮನಮೋಹನ್ ಸಿಂಗ್ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಸಂತಾಪ ಸೂಚಿಸಿದ್ದಾರೆ. ಬೆಳಗಾವಿಯಲ್ಲಿ ನಡೆದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಶಾಸಕ ಎ.ಎಸ್.ಪೊನ್ನಣ್ಣ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ  ಡಿ.ಕೆ.ಶಿವಕುಮಾರ್ ಹಾಗೂ ಸಚಿವರುಗಳು, ಸಂಸದರು, ಶಾಸಕರು, ಪಕ್ಷದ ನಾಯಕರುಗಳೊಂದಿಗೆ ಪಾಲ್ಗೊಂಡು ಡಾ.ಮನಮೋಹನ್ ಸಿಂಗ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಅಂತಿಮ ನಮನ ಸಲ್ಲಿಸಿದರು.

Read More

ನಾಪೋಕ್ಲು ಡಿ.27 NEWS DESK : ನಾಪೋಕ್ಲು ಕೊಡವ ಸಮಾಜದ ಬೆಳ್ಳಿ ಹಬ್ಬ ಡಿ.28 ಮತ್ತು 29ರಂದು ವಿಜೃಂಭಣೆಯಿಂದ ನಡೆಯಲಿದೆ ಎಂದು ಕೊಡವ ಸಮಾಜದ ಅಧ್ಯಕ್ಷ ಮುಂಡಂಡ ಸಿ.ನಾಣಯ್ಯ ಹೇಳಿದರು. ಕೊಡವ ಸಮಾಜದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ನಾಪೋಕ್ಲು ಕೊಡವ ಸಮಾಜ 1997 ರಲ್ಲಿ ಸ್ಥಾಪನೆಯಾಗಿದ್ದು, 2022ಕ್ಕೆ 25 ವರ್ಷಗಳನ್ನು ಪೂರೈಸಿದೆ. ಕಾರಣಾಂತರಗಳಿಂದ ಬೆಳ್ಳಿ ಹಬ್ಬವನ್ನು ಆಚರಿಸಲು ಸಾಧ್ಯವಾಗಲಿಲ್ಲ. ಇದೀಗ ಹೊಸ ಆಡಳಿತ ಮಂಡಳಿಯು ಬೆಳ್ಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲು ಕಾರ್ಯ ಪ್ರವೃತ್ತವಾಗಿದೆ ಎಂದರು. ಬೆಳ್ಳಿ ಮಹೋತ್ಸವದ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮಾಜಿ ಮಂತ್ರಿ ಮೇರಿಯಂಡ ಸಿ.ನಾಣಯ್ಯ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಕೊಡವ ಸಮಾಜ ಒಕ್ಕೂಟದ ಅಧ್ಯಕ್ಷ ಕಳ್ಳಿಚಂಡ ವಿಷ್ಣು ಕಾರ್ಯಪ್ಪ, ಅಖಿಲ ಕೊಡವ ಸಮಾಜದ ಅಧ್ಯಕ್ಷ ಪರದಂಡ ಕೆ. ಸುಬ್ರಮಣಿ, ಕೊಡವ ಸಮಾಜದ ಮಾಜಿ ಅಧ್ಯಕ್ಷ ಮಣವಟ್ಟಿರ ಬಿ.ಮಾಚಯ್ಯ, ಬ್ಲೂ ಡಾರ್ಟ್ ಈ ಕಾಮರ್ಸ್ ಗುಂಪಿನ ದಕ್ಷಿಣ ಭಾರತದ ಪ್ರಾದೇಶಿಕ ನಿವೃತ್ತ ಮುಖ್ಯಸ್ಥ ಬಾಳೆಯಡ ಕರುಣ್ ಕಾಳಪ್ಪ ಪಾಲ್ಗೊಳ್ಳಲಿದ್ದಾರೆ…

Read More

ಮಡಿಕೇರಿ NEWS DESK ಡಿ.27 : ಅಪರಾಧ ಪ್ರಕರಣಗಳ ಪತ್ತೆಯಲ್ಲಿ ಪೊಲೀಸ್ ಇಲಾಖೆಗೆ ಹೆಚ್ಚು ಪರಿಣಾಮಕಾರಿಯಾಗಿ ಸಹಾಯ ಮಾಡಬಲ್ಲ ವಿಭಾಗಗಳಲ್ಲಿ ಶ್ವಾನದಳವೂ ಒಂದು. ಕ್ಲಿಷ್ಟಕರ ಪ್ರಕರಣಗಳನ್ನು ಸುಲಭವಾಗಿ ಬೇಧಿಸಲು ಕೊಡಗು ಜಿಲ್ಲೆಯ ದಕ್ಷ ಪೊಲೀಸ್ ಅಧಿಕಾರಿಗಳಿಗೆ ಶ್ವಾನದಳದ ಕಾಪರ್ ಹಾಗೂ ಬ್ರೂನೊ ಶ್ವಾನಗಳು ಹೆಚ್ಚು ಸಹಕಾರಿಯಾಗಿವೆ. ಮಾದಕ ವಸ್ತುಗಳ ಅಪರಾಧ ಪ್ರಕರಣಗಳನ್ನು ಪತ್ತೆ ಹಚ್ಚುವಲ್ಲಿ ಕಾಪರ್ ರಾಜ್ಯದಲ್ಲಿಯೇ ಮೊದಲ ಸ್ಥಾನದಲ್ಲಿದ್ದು, ಪೊಲೀಸ್ ಇಲಾಖೆಯಿಂದ ಚಿನ್ನದ ಪದಕವನ್ನು ಮುಡಿಗೇರಿಸಿಕೊಂಡಿದೆ. ಅಪರಾಧ ಪತ್ತೆಯಲ್ಲಿ ಬ್ರೂನೊ ಶ್ವಾನ ರಾಜ್ಯದಲ್ಲಿಯೇ ಅತ್ಯುತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸಿ ಕಂಚಿನ ಪದಕಕ್ಕೆ ಭಾಜನವಾಗಿದೆ.NEWS DESK ಕೊಡಗು ಜಿಲ್ಲಾ ಪೊಲೀಸ್ ನ ಜಿಲ್ಲಾ ಮಟ್ಟದ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಎರಡು ಶ್ವಾನಗಳಿಗೆ ಪದಕ ಹಾಗೂ ಪ್ರಶಂಸನಾ ಪತ್ರ ಪ್ರದಾನ ಮಾಡಿದರು. ಸ್ವತ: ಕಾಪರ್ ಹಾಗೂ ಬ್ರೂನೊ ಪದಕ ಪಡೆದುಕೊಳ್ಳುವ ಮೂಲಕ ನೆರೆದಿದ್ದವರ ಚಪ್ಪಾಳೆ ಗಿಟ್ಟಿಸಿಕೊಂಡವು. ಮುAದಿನ ವರ್ಷ ಫೆಬ್ರವರಿ ತಿಂಗಳಿನಲ್ಲಿ ಜಾರ್ಕಂಡ್ ರಾಜ್ಯದ ರಾಂಚಿಯಲ್ಲಿ…

Read More

ನಾಪೋಕ್ಲು ಡಿ.27 NEWS DESK : ಮೈಸೂರು ಕೊಡಗು ಗೌಡ ಸಮಾಜದ ವತಿಯಿಂದ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಮಾಡಲಾಯಿತು. ಸಮಾಜದ ಅಧ್ಯಕ್ಷ ಕೊಂಬಾರನ ಬಸಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೈಸೂರಿನ ವಕೀಲರು ಹಾಗೂ ಪತ್ರಿಕಾ ಪ್ರತಿನಿಧಿ ಜವರೇ ಗೌಡರು ಕ್ಯಾಲೆಂಡರ್ ಬಿಡುಗಡೆ ಮಾಡಿ ಸಮಾಜ ಕೈಗೊಂಡಿರುವ ಉತ್ತಮ ಕಾರ್ಯಕ್ರಮದ ಜೊತೆಗೆ ಕ್ಯಾಲೆಂಡರ್ ಕೂಡ ಮಾಡಿರುವುದು ಸಂತೋಷದಾಯಕ ಎಂದರು. ಕಾರ್ಯಕ್ರಮದಲ್ಲಿ ಸಮಾಜದ ಉಪಾಧ್ಯಕ್ಷ ಕುದುಪಜೆ ಚಂದ್ರಶೇಖರ್, ಕಾರ್ಯದರ್ಶಿ ಪೊನ್ನೇಟಿ ನಂದ, ಖಜಾಂಚಿ ನಡುಬೆಟ್ಟಿ ಲಕ್ಷ್ಮಣ, ನಿರ್ದೇಶಕರಾದ ಪಟ್ಟಡ ಶಿವಕುಮಾರ್, ಪಾಣತ್ತಲೆ ವಸಂತ, ಹೊಸೂರು ರಾಘವಯ್ಯ, ಕುಂಟುಪುಣಿ ರಮೇಶ್, ಕುಂಟುಪುಣಿ ಶೀಲಾ, ತೋಂಟಬೈಲು ಇಂದಿರಾ, ವ್ಯವಸ್ಥಾಪಕ ದಾಯನ ನಾಮಧೆಯ, ಮಾಜಿ ಸೈನಿಕ ಸಂಘದ ಅಧ್ಯಕ್ಷ ಚಂಡಿರ ಬಸಪ್ಪ, ಗೌಡ ಮಹಿಳಾ ಸಂಘದ ಅಧ್ಯಕ್ಷ ನಡುಬೆಟ್ಟು ಗೀತಾ ಲಕ್ಷ್ಮಣ, ಗೌಡ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಪೊನ್ನಚ್ಚನ ಅಪ್ಪಯ್ಯ ಮೊದಲಾದವರು ಉಪಸ್ಥಿತರಿದ್ದರು. ವರದಿ : ದುಗ್ಗಳ ಸದಾನಂದ.

Read More

ಮಡಿಕೇರಿ ಡಿ.27 NEWS DESK : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನಕ್ಕೆ ಕೊಡಗು ಜಿಲ್ಲಾ ಕಾಂಗ್ರೆಸ್ ವತಿಯಿಂದ ಸಂತಾಪ ಸೂಚಿಸಲಾಯಿತು. ನಗರದ ಕೊಡಗು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಮನಮೋಹನ್ ಸಿಂಗ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಸಂತಾಪ ಸೂಚಿಸಿದರು. ಈ ಸಂದರ್ಭ ಕಾಂಗ್ರೆಸ್ ಮುಖಂಡ ಟಿ.ಪಿ.ರಮೇಶ್, ಮಂದ್ರಿರ ಮೋಹನ್‍ದಾಸ್, ವಿಧಾನ ಪರಿಷತ್ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ, ಮೂಡ ಅಧ್ಯಕ್ಷ ಬಿ.ವೈ.ರಾಜೇಶ್, ಮಾಜಿ ಅಧ್ಯಕ್ಷ ಚುಮ್ಮಿ ದೇವಯ್ಯ, ಮಡಿಕೇರಿ ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಆರ್.ಪಿ.ಚಂದ್ರಶೇಖರ್, ಸೇವಾದಳದ ಅಧ್ಯಕ್ಷ ಕಾನೆ ಹಿತ್ಲು ಮೊಣ್ಣಪ್ಪ, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಕೆ.ಜಿ.ಪೀಟರ್, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಸುರಯ್ಯ ಅಬ್ರಾರ್, ಪ್ರಧಾನ ಕಾರ್ಯದರ್ಶಿ ಮಿನಾಜ್ ಪ್ರವೀಣ್, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ.ಹಂಸ, ಮಾಜಿ ನಗರಸಭಾ ಸದಸ್ಯ ಪ್ರಕಾಶ್ ಆಚಾರ್ಯ, ಪ್ರಮುಖರಾದ ವಿ.ಪಿ.ಸುರೇಶ್, ಸದಾಮುದ್ದಪ್ಪ, ಲೀಲಶೇಷಮ್ಮ ಉಪಸ್ಥಿತರಿದ್ದು, ಮನಮೋಹನ್ ಸಿಂಗ್ ಅವರಿಗೆ…

Read More

ಬೆಳಗಾವಿ ಡಿ.27 NEWS DESK : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಬದುಕು , ಆರ್ಥಿಕ ನೀತಿಗಳು ನಮ್ಮೆಗೆಲ್ಲ ಪ್ರೇರಣೆ. ಶ್ರೇಷ್ಠ ಆರ್ಥಿಕ ತಜ್ಞರಾಗಿದ್ದ ಅವರು, 2013-18 ರವರೆಗೆ ಕರ್ನಾಟಕದ ಆರ್ಥಿಕ ಸ್ಥಿತಿ ಉತ್ತಮವಾಗಿದೆ ಎಂದು ಬಣ್ಣಿಸಿದ್ದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಮರಿಸಿದರು. ಇಂದು ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ನಿಧನಕ್ಕೆ ಸಂತಾಪ ಸೂಚಿಸಿದ ಮುಖ್ಯಮಂತ್ರಿಗಳು, ಈಗಿನ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಜನಿಸಿದ ಮನಮೋಹನ್ ಸಿಂಗ್ ರವರು ಜಗತ್ತಿನ ಖ್ಯಾತ ಅರ್ಥಶಾಸ್ತ್ರಜ್ಞರಾಗಿ ಬೆಳೆದವರು. ಪಿ.ವಿ. ನರಸಿಂಹರಾವ್ ಅವರ ಸಂಪುಟದಲ್ಲಿ ಆರ್ಥಿಕ ಕಾರ್ಯದರ್ಶಿಗಳಾಗಿ ಸೇವೆ ಸಲ್ಲಿಸಿದ್ದರು. ಉದಾರೀಕರಣದ ಮೂಲಕ ಭಾರತವನ್ನು ವಿಶ್ವಮಟ್ಟಕ್ಕೆ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರ ವಹಿಸಿದವರು. ಅವರ ಅಪಾರ ಜ್ಞಾನ ಹಾಗೂ ದೂರದೃಷ್ಟಿಯ ಯೋಜನೆಗಳು, ಭಾರತವು ಆರ್ಥಿಕ ಮುಗ್ಗಟ್ಟಿನಿಂದ ಹೊರಬರಲು ಕಾರಣವಾಯಿತು ಎಂದರು. ದೇಶದ ಆರ್ಥಿಕತೆಯಲ್ಲಿ ಮನಮೋಹನ್ ಸಿಂಗ್ ರ ಹೆಜ್ಜೆಗುರುತು ::  2004 ರಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಸಾಧಿಸಿ, ಸೋನಿಯಾ ಗಾಂಧಿಯವರು…

Read More

ಮಡಿಕೇರಿ ಡಿ.27 NEWS DESK : ಪ್ರಸ್ತುತ ದಿನಗಳಲ್ಲಿ ಯುವಕರಿಗೆ ಕ್ರೀಡಾಕ್ಷೇತ್ರದಲ್ಲಿ ಹೆಚ್ಚಿನ ಅವಕಾಶಗಳಿದ್ದು,ಕ್ರೀಡಾಪಟುಗಳು ಕ್ರೀಡೆಯ ಮೂಲಕ ಬದುಕಟ್ಟಿಕೊಳ್ಳಬೇಕೆಂದು ಕೊಡಗು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ.ಕೆ ಲೋಕೇಶ್ ಕರೆ ನೀಡಿದರು. ಕಂಡಕರೆಯ ಗಾಂಧಿ ಯುವಕ ಸಂಘದಿಂದ ಚೆಟ್ಟಳ್ಳಿ ಪ್ರೌಢಶಾಲಾ ಮೈದಾನದಲ್ಲಿ ನಡೆದ ರಾಷ್ಟ್ರ ಮಟ್ಟದ ಅಂಡರ್ 20 ಕಾಲ್ಚೆಂಡು ಪಂದ್ಯಾವಳಿಯ ಫೈನಲ್‌ ಪಂದ್ಯವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ನಮ್ಮ ದೇಶದಲ್ಲಿ ಕ್ರೀಡಾಚಟುವಟಿಕೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದೆ. ಕೊಡಗು ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಫುಟ್ಬಾಲ್ ಕ್ರೀಡೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ತೊಡಗಿಕೊಂಡಿದ್ದಾರೆ. 20 ವರ್ಷದೊಳಗಿನ ಯುವಕರಿಗಾಗಿ ನಡೆಯುತ್ತಿರುವ ಕಾಲ್ಚೆಂಡು ಪಂದ್ಯಾವಳಿಯಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಯುವ ಫುಟ್ಬಾಲ್ ಪಟುಗಳಿಗೆ ಸೂಕ್ತ ವೇದಿಕೆಯಾಗಿದೆ. ಗಾಂಧಿ ಯುವಕ ಸಂಘವು ನಿರಂತರವಾಗಿ ಕ್ರೀಡೆ ಮತ್ತು ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಾ ಚೆಟ್ಟಳ್ಳಿ ಭಾಗದಲ್ಲಿ ಹೆಸರುವಾಸಿಯಾಗಿದೆ ಎಂದು ವಿ.ಕೆ.ಲೋಕೇಶ್ ಹೇಳಿದರು‌. ಕೊಡಗು ಜಿಲ್ಲಾ ಯುವ ಕಾಂಗ್ರೆಸ್ ಮುಖಂಡ ಹಕೀಂ ಸುಂಟ್ಟಿಕೊಪ್ಪ ಮಾತನಾಡಿ, ಗಾಂಧಿ ಯುವಕ ಸಂಘವು…

Read More