ಮಡಿಕೇರಿ ಡಿ.27 NEWS DESK : ಮಾಜಿ ಪ್ರಧಾನಮಂತ್ರಿ ಡಾ.ಮನಮೋಹನ್ ಸಿಂಗ್ ನಿಧನ ಹಿನ್ನೆಲೆ ಡಿ.29 ರಂದು ನಡೆಯಬೇಕಿದ್ದ ವಿಶ್ವಮಾನವ ದಿನಾಚರಣೆ ಹಾಗೂ ಜ.1 ನಡೆಯಬೇಕಾಗಿದ್ದ ಅಮರಶಿಲ್ಪಿ ಜಕಣಾಚಾರಿ ಸಂಸ್ಮಾರಣಾ ದಿನ ಕಾರ್ಯಕ್ರಮವನ್ನು ಸರ್ಕಾರದ ಆದೇಶದಂತೆ ರದ್ದುಪಡಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಲೇಖಕ: admin
ಮಡಿಕೇರಿ ಡಿ.27 NEWS DESK : ಮಾಜಿ ಪ್ರಧಾನಮಂತ್ರಿ ಡಾ.ಮನಮೋಹನ್ ಸಿಂಗ್ ನಿಧನ ಹಿನ್ನೆಲೆ ಒಂದು ವಾರದತನಕ ಶೋಕಾಚರಣೆ ಇರುವುದರಿಂದ ಇದೇ ಡಿ.29 ರಂದು ಮಾಯಮುಡಿಯಲ್ಲಿ ನಡೆಯಬೇಕಿದ್ದ ತೋಕ್ ನಮ್ಮೆ ಕಾರ್ಯಕ್ರಮವನ್ನು ಜ.5 ಕ್ಕೆ ಮುಂದೂಡಲಾಗಿದೆ ಎಂದು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಅಜ್ಜಿನಿಕಂಡ ಮಹೇಶ್ ನಾಚಯ್ಯ ತಿಳಿಸಿದ್ದಾರೆ.
ಮಡಿಕೇರಿ ಡಿ.27 NEWS DESK : ಕಂಡಕರೆಯ ಗಾಂಧಿ ಯುವಕ ಸಂಘದಿಂದ ಚೆಟ್ಟಳ್ಳಿ ಪ್ರೌಢಶಾಲಾ ಮೈದಾನದಲ್ಲಿ ಎರಡು ದಿನಗಳ ಕಾಲ ನಡೆದ ರಾಷ್ಟ್ರ ಮಟ್ಟದ ಅಂಡರ್ 20 ಕಾಲ್ಚೆಂಡು ಪಂದ್ಯಾವಳಿಯಲ್ಲಿ ಸುಂಟ್ಟಿಕೊಪ್ಪದ ಸನ್ಸಬೀಲ್ ತಂಡವು ಚಾಂಪಿಯನ್ ಪ್ರಶಸ್ತಿಯನ್ನು ಅಲಂಕರಿಸಿದೆ. ರನ್ನರ್ಸ್ ಪ್ರಶಸ್ತಿಗೆ ಚೋಕ್ ಸಿಟಿ ತಂಡವು ತೃಪ್ತಿಪಟ್ಟುಕೊಂಡಿದೆ. ಜಿದ್ದಾಜಿದ್ದಿನಿಂದ ಕೂಡಿದ್ದ ಫೈನಲ್ ಪಂದ್ಯದಲ್ಲಿ ಸನ್ಸಬೀಲ್ ತಂಡವು ಮೊದಲಾರ್ಧದಲ್ಲೇ ಆಟದಲ್ಲಿ ಸಂಪೂರ್ಣ ಹಿಡಿತವನ್ನು ಸಾಧಿಸಿತ್ತು. ಆಕ್ರಮಣಕಾರಿ ಆಟಕ್ಕೆ ಮುಂದಾಗಿತ್ತು. ಸನ್ಸಬೀಲ್ ತಂಡದ ಆಕ್ರಮಣಕಾರಿ ಆಟಕ್ಕೆ ಬ್ರೇಕ್ ನೀಡುವಲ್ಲಿ ವಿಫಲತೆ ಕಂಡ ಚೋಕ್ ಸಿಟಿ ತಂಡವು 3-0 ಗೋಲುಗಳ ಅಂತರದಿಂದ ಸೋಲುಕಂಡಿತ್ತು. ಇದಕ್ಕೂ ಮೊದಲು ನಡೆದ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಸನ್ಸಬೀಲ್ ತಂಡವು 4-0 ಗೋಲುಗಳ ಅಂತರದಿಂದ ಗಾಂಧಿ ಎಫ್.ಸಿ ತಂಡದ ವಿರುದ್ಧ ಗೆದ್ದು ಫೈನಲ್ ಪ್ರವೇಶಿಸಿತು. ಎರಡನೇ ಸೆಮಿಫೈನಲ್ ಪಂದ್ಯವು ಎಸ್.ಆರ್.ವಿ ಮಡಿಕೇರಿ ಹಾಗೂ ಚೋಕ್ ಸಿಟಿ ತಂಡಗಳ ನಡುವೆ ನಡೆಯಿತು. ಎರಡು ತಂಡಗಳ ಸಮಬಲ ಹೋರಾಟದಿಂದ 1-1 ಗೋಲುಗಳನ್ನು ದಾಖಲಿಸಿ ನಿಗದಿತ…
ಮಡಿಕೇರಿ ಡಿ.27 NEWS DESK : ಕ್ರೀಡಾಕೂಟಗಳಿಂದ ನಾಯಕತ್ವ ಗುಣದೊಂದಿಗೆ ಪರಸ್ಪರ ಸಹೋದರತೆ ಬೆಳೆಯುತ್ತದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಹೊಸಮನಿ ಪುಂಡಲೀಕ ಹೇಳಿದರು. ಕೊಡಗು ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಕಳೆದ ಮೂರು ದಿನಗಳಿಂದ ನಡೆದ ಪೊಲೀಸ್ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು. ಪ್ರಜಾಪ್ರಭುತ್ವ ವ್ಯವಸ್ಥೆಯಡಿ ಸಮಾಜದ ಆರೋಗ್ಯ ಕಾಪಾಡುವುದು ಕಾನೂನಿನ ಉದ್ದೇಶವಾಗಿರುತ್ತದೆ. ಕಾನೂನು ಕಾಪಾಡುತ್ತಲೇ ತಮ್ಮ ಆರೋಗ್ಯ ಕಾಪಾಡಿಕೊಳ್ಳುವ ಕಡೆ ಗಮನ ಹರಿಸುವುದು ಪೊಲೀಸರಿಗೆ ಕಷ್ಟಕರ. ಇಂತಹ ಕಾರ್ಯಕ್ರಮಗಳು ಆರೋಗ್ಯ ಕಾಪಾಡಿಕೊಳ್ಳಲು ಸಹಕಾರಿಯಾಗಲಿದೆ ಎಂದರು. ಕ್ರೀಡಾಕೂಟಗಳಿಂದ ನಾಯಕತ್ವದ ಬೆಳವಣಿಗೆಯೊಂದಿಗೆ ಸಹೋದರತೆ ಭಾವನೆ ಬೆಳೆಯುತ್ತದೆ. ಎಲ್ಲರೂ ಒಂದೇ ಕುಟುಂಬದಂತೆ ಕೆಲಸ ಮಾಡಲು ಪ್ರೋತ್ಸಾಹ ನೀಡಿದಂತಾಗುತ್ತದೆ ಎಂದರು. ಪ್ರಾಸ್ತಾವಿಕವಾಗಿ ಮಾತನಾಡಿದ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಪ್ರತಿವರ್ಷ ಕ್ರೀಡಾಕೂಟ ಹಮ್ಮಿಕೊಂಡು ಬರಲಾಗುತ್ತಿದ್ದು, ಇದರಿಂದಾಗಿ ಒಂದು ತಂಡ ರಚನೆಯೊಂದಿಗೆ ಎಲ್ಲರೂ ಒಂದೇ ಕುಟುಂಬ ಎಂಬಂತೆ ಬೆರೆಯಲು ಸಾಧ್ಯವಾಗುತ್ತದೆ. ದೈಹಿಕ ಶಕ್ತಿ ವೃದ್ಧಿಯೊಂದಿಗೆ ಇತರರಿಗೂ ಮಾದರಿಯಾಗಿ ಎಲ್ಲರೂ…
ಮಡಿಕೇರಿ ಡಿ.27 NEWS DESK : ಪ್ರಸಕ್ತ(2024-25) ಸಾಲಿಗೆ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ (ಪಿಯುಸಿ ಮತ್ತು ಪಿಯುಸಿ ಸಮಾನಾಂತರ ಕೋರ್ಸಿನ, ಸಾಮಾನ್ಯ ಪದವಿ ಮಟ್ಟದ ಕೋರ್ಸು, ವೃತ್ತಿಪರ ಕೋರ್ಸು ಮತ್ತು ಸ್ನಾತಕೋತ್ತರ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಾತಿಗಾಗಿ ರಾಜ್ಯ ವಿದ್ಯಾರ್ಥಿ ನಿಲಯ ತಂತ್ರಾಂಶದ ಆನ್‍ಲೈನ್” ಮೂಲಕ ಅರ್ಜಿ ಆಹ್ವಾನಿಸಲಾಗಿದೆ. 2024-25 ನೇ ಸಾಲಿಗೆ ಕೊಡಗು ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯ ಮಡಿಕೇರಿ ಹಾಗೂ ಕುಶಾಲನಗರದ ವಿದ್ಯಾರ್ಥಿ ನಿಲಯಗಳ (ಪಿಯುಸಿ ಮತ್ತು ಪಿಯುಸಿ ಸಮಾನಾಂತರ ಕೋರ್ಸಿನ, ಸಾಮಾನ್ಯ ಪದವಿ ಮಟ್ಟದ ಕೋರ್ಸು, ವೃತ್ತಿಪರ ಕೋರ್ಸು ಮತ್ತು ಸ್ನಾತಕೋತ್ತರ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಾತಿಗಾಗಿ ರಾಜ್ಯ ವಿದ್ಯಾರ್ಥಿ ನಿಲಯ ತಂತ್ರಾಂಶದ https://shp.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜನವರಿ, 10 ರವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಕಛೇರಿ ದೂರವಾಣಿ ಸಂಖ್ಯೆ: 08272-225528/220214, ನಿಲಯಪಾಲಕರು 9742116601, 9945960004 ನ್ನು ಸಂಪರ್ಕಿಸಬಹುದು. ಅರ್ಹ ವಿದ್ಯಾರ್ಥಿಗಳು ಕೂಡಲೇ…
ಕುಶಾಲನಗರ ಡಿ.27 NEWS DESK : ಜಿಲ್ಲಾಡಳಿತ, ಜಿಲ್ಲಾ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕರ ಆಯೋಗ ಹಾಗೂ ಕುಶಾಲನಗರದ ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಕುಶಾಲನಗರ ತಾಲ್ಲೂಕಿನ ಕೂಡಿಗೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ರಾಷ್ಟ್ರೀಯ ಗ್ರಾಹಕರ ದಿನಾಚರಣೆ: 2024 ನಡೆಯಿತು. ಗ್ರಾಹಕರ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಸದಸ್ಯರಾದ ಗೌರಮ್ಮಣಿ, ಗ್ರಾಹಕರ ಹಕ್ಕುಗಳು ಮತ್ತು ಹಿತರಕ್ಷಣೆ ಎಲ್ಲರ ಹೊಣೆಯಾಗಿದೆ.ಗ್ರಾಹಕರು ತಮ್ಮ ಹಕ್ಕುಗಳು ಹಾಗೂ ಜವಾಬ್ದಾರಿಗಳ ಬಗ್ಗೆ ಹೆಚ್ಚಿನ ಜ್ಞಾನ ಬೆಳೆಸಿಕೊಳ್ಳುವ ಮೂಲಕ ಗ್ರಾಹಕರ ಹಿತರಕ್ಷಣೆಯನ್ನು ಕಾಪಾಡಬೇಕು ಎಂದರು. ಗ್ರಾಹಕರು ಅಂದರೆ ನಾವೆಲ್ಲರೂನಾವು ಇಂದು ನಮ್ಮ ಗ್ರಾಹಕ ಹಕ್ಕುಗಳ ಬಗ್ಗೆ ತಿಳಿಯುವುದು ಬಹಳ ಮುಖ್ಯವಾಗುತ್ತದೆ. ಖರೀದಿದಾರನ ಯೋಗಕ್ಷೇಮದ ದೃಷ್ಟಿ ಗ್ರಾಹಕ ಹಕ್ಕುಗಳು ಅವಶ್ಯಕತೆ ಇದೆ. ಮಾರುಕಟ್ಟೆ ವ್ಯವಸ್ಥೆಯು ಇಂದು ನೈತಿಕತೆಗಳು ಹಾಗೂ ಮೌಲ್ಯಗಳ ಮೇಲೆ ನಡೆಯಬೇಕು. ಆಗ ಮಾತ್ರ ಗ್ರಾಹಕರಿಗೆ ಉತ್ತಮ ಸೇವೆ ಸಲ್ಲಿಸಲು ಸಾಧ್ಯವಾಗುತ್ತದೆ ಎಂದರು.…
ಮಡಿಕೇರಿ ಡಿ.27 NEWS DESK : ಓವರ್ ಲ್ಯಾಂಡರ್ ಅಸೋಸಿಯೇಷನ್ ವತಿಯಿಂದ ಡಿ.29 ರಂದು ಬೆಳಗ್ಗೆ 9 ಗಂಟೆಯಿಂದ ಸುಂಟಿಕೊಪ್ಪ ಬಳಿಯ ಕಾನ್‍ಬೈಲು ಗ್ರಾಮದಲ್ಲಿ ಆರೋಗ್ಯ ಉಚಿತ ಚಿಕಿತ್ಸಾ ಶಿಬಿರ ನಡೆಯಲಿದೆ. ಎಲ್ಲಾ ರೀತಿಯ ಆರೋಗ್ಯ ಸಮಸ್ಯೆಗೆ ಸಂಬಂಧಿಸಿದಂತ ತಜ್ಞ ವೈದ್ಯರು ಈ ಶಿಬಿರದಲ್ಲಿ ಪಾಲ್ಗೊಂಡು ರೋಗಿಗಳ ತಪಾಸಣೆ ನಡೆಸಿ ಅಗತ್ಯವಿದ್ದವರಿಗೆ ಚಿಕಿತ್ಸೆ ನೀಡಲಿದ್ದಾರೆ. ಸಾಮಾಜಿಕ ಹೊಣೆಯುಳ್ಳ ಸಂಸ್ಥೆಯಾಗಿರುವ ಓವರ್ ಲ್ಯಾಂಡರ್ ಅಸೋಸಿಯೇಷನ್‍ನ ಈ ಆರೋಗ್ಯ ಶಿಬಿರದ ಪ್ರಯೋಜನವನ್ನು ಸಾರ್ವಜನಿಕರು ಪಡೆದುಕೊಳ್ಳುವಂತೆ ಪ್ರಕಟಣೆ ತಿಳಿಸಿದೆ, ಹೆಚ್ಚಿನ ಮಾಹಿತಿಗೆ ಕಾರ್ಸನ್ ಕಾರ್ಯಪ್ಪ 9448380234 ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸದೆ.
*ಡಿ.27 ರಂದು ಕರ್ನಾಟಕದಲ್ಲಿ ಸರಕಾರಿ ರಜೆ ಘೋಷಣೆ*
ನವದೆಹಲಿ NEWS DESK ಡಿ.26 : ಆರ್ಥಿಕ ಸುಧಾರಣೆ, ಉದಾರೀಕರಣ ನೀತಿಗಳನ್ನು ಜಾರಿಗೆ ತರುವ ಮೂಲಕ ಭಾರತದ ಅರ್ಥ ವ್ಯವಸ್ಥೆಗೆ ಹೊಸ ದಿಕ್ಕು ತೋರಿಸಿದ್ದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ (92) ಅವರು ಇಂದು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾದರು. 2004 ರಿಂದ 2014 ರವರೆಗೆ ಪ್ರಧಾನಿಯಾಗಿ ಸೇವೆ ಸಲ್ಲಿಸಿದ ಮನಮೋಹನ್ ಸಿಂಗ್ ಅವರು ಈ ವರ್ಷದ ಆರಂಭದಲ್ಲಿ ರಾಜ್ಯಸಭೆಯಿಂದ ನಿವೃತ್ತರಾಗಿದ್ದರು. ಸಿಂಗ್ ಅವರು ಮೇ 22, 2004 ರಂದು ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. 2009ರಲ್ಲಿ ಅದೇ ದಿನಾಂಕದಂದು ಮತ್ತೊಮ್ಮೆ ಪ್ರಧಾನಿಯಾಗಿ 2 ನೇ ಅವಧಿಗೆ ಪ್ರಮಾಣವಚನ ಸ್ವೀಕರಿಸಿದ್ದರು. ಸಿಂಗ್ ಅವರ ರಾಜಕೀಯ ಜೀವನ 1991ರಲ್ಲಿ ಅವರು ರಾಜ್ಯಸಭೆಗೆ ಪ್ರವೇಶಿಸಿದಾಗ ಪ್ರಾರಂಭವಾಯಿತು. ಕೇವಲ ನಾಲ್ಕು ತಿಂಗಳ ನಂತರ, ಅಂದಿನ ಪ್ರಧಾನಿ ಪಿ.ವಿ.ನರಸಿಂಹ ರಾವ್ ಸರ್ಕಾರದಲ್ಲಿ ಕೇಂದ್ರ ಹಣಕಾಸು ಸಚಿವರಾಗಿ ನೇಮಕಗೊಂಡು ಭಾರತದ ಆರ್ಥಿಕತೆಯಲ್ಲಿ ಪರಿವರ್ತನೆಗೆ ಕಾರಣರಾಗಿದ್ದರು. 1990 ರಲ್ಲಿ ಆರ್ಥಿಕ ಸುಧಾರಣೆಗಳು, ಉದಾರೀಕರಣ ನೀತಿಗಳನ್ನು ಜಾರಿಗೆ ತರುವ ಮೂಲಕ ಭಾರತದ…
ಮಡಿಕೇರಿ NEWS DESK ಡಿ.26 : ಮಡಿಕೇರಿ ನಗರದ ಶ್ರೀ ಮುತ್ತಪ್ಪ ದೇವಾಲಯದ ಆವರಣದಲ್ಲಿರುವ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಡಿ.28 ರಂದು ಶ್ರೀ ಅಯ್ಯಪ್ಪ ಸ್ವಾಮಿ ಉತ್ಸವ ನಡೆಯಲಿದೆ ಎಂದು ಶ್ರೀ ಅಯ್ಯಪ್ಪ ದೀಪಾರಾಧನಾ ಸಮಿತಿ ತಿಳಿಸಿದೆ. ಬೆಳಿಗ್ಗೆ 6 ಗಂಟೆಗೆ ನಡೆ ತೆಗೆಯುವುದು, 6.5 ಕ್ಕೆ ನಿರ್ಮಲ್ಯ ಪೂಜೆ, 6.30ಕ್ಕೆ ಗಣಪತಿ ಹೋಮ, 8ಕ್ಕೆ ಅಷ್ಟಾಭಿಷೇಕ ಸೇವೆ, 10.30ಕ್ಕೆ ಭಕ್ತರೊಡಗೂಡಿ ತುಳಸಿ ಸಹಸ್ರನಾಮಾರ್ಚನೆ, ಮಧ್ಯಾಹ್ನ 12 ಗಂಟೆಗೆ ಮಹಾಪೂಜೆ ಮಂಗಳಾರತಿ, ಪ್ರಸಾದ ವಿತರಣೆಯಾಗಲಿದೆ. 1 ಗಂಟೆಗೆ ಪಾಲಕೊಂಬು ಪ್ರತಿಷ್ಠಾಪನೆ, 1.30ಕ್ಕೆ ತಾಯಂಬಕಂ (ಚಂಡೆಸೇವೆ), ಸಂಜೆ 4 ಕ್ಕೆ ಪಾಲಕೊಂಬು ಮೆರವಣಿಗೆ, ಅಶ್ವಿನಿ ಗಣಪತಿ ದೇವಸ್ಥಾನದಿಂದ ಶ್ರೀ ಅಯ್ಯಪ್ಪ ಸ್ವಾಮಿಯ ಉತ್ಸವ ಮೂರ್ತಿಯನ್ನು ಅಲಂಕೃತ ಮಂಟಪದಲ್ಲಿ ಕುಳ್ಳಿರಿಸಿ ಚಂಡೆ ಮೇಳದೊಂದಿಗೆ ನಗರದ ಮುಖ್ಯ ಬೀದಿಗಳಲ್ಲಿ ಮೆರವಣಿಗೆ, 6.30 ಗಂಟೆಗೆ ದೀಪಾರಾಧನೆ, ಅಲಂಕಾರ ಪೂಜೆ, ರಾತ್ರಿ 7.30ಕ್ಕೆೆ ಪಡಿ ರಂಗಪೂಜೆ, ದುರ್ಗಾಪೂಜೆ, ಸುಬ್ರಹ್ಮಣ್ಯ ಪೂಜೆ, 8.30ಕ್ಕೆ ಮಹಾಪೂಜೆ, ತೀರ್ಥ ಪ್ರಸಾದ ವಿತರಣೆ…






