ಮಡಿಕೇರಿ ಡಿ.26 NEWS DESK : ವಿಶ್ವಕರ್ಮ ಅಮರ ಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನವನ್ನು ಜ.1 ರಂದು ಆಚರಿಸುವ ಸಂಬಂಧ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆಯ ನಡೆಯಿತು. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ನಗರದ ಗಾಂಧಿಭವನದಲ್ಲಿ ಅರ್ಥಪೂರ್ಣವಾಗಿ ಆಯೋಜಿಸಲು ತೀರ್ಮಾನಿಸಲಾಯಿತು. ಸರ್ಕಾರಿ ಪ್ರೌಢಶಾಲೆಯಲ್ಲಿನ ಚಿತ್ರಕಲಾ ಶಿಕ್ಷಕರು ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆಯನ್ನು ಪ್ರತ್ಯೇಕವಾಗಿ ಏರ್ಪಡಿಸಲು ಸಭೆಯಲ್ಲಿ ನಿರ್ಣಯಿಸಲಾಯಿತು. ಚಿತ್ರಕಲಾ ಸ್ಪರ್ಧೆಯನ್ನು ಪ್ರತ್ಯೇಕವಾಗಿ ಏರ್ಪಡಿಸಿ ಜ.1 ರಂದು ಚಿತ್ರಕಲಾ ಪ್ರದರ್ಶನಕ್ಕೆ ಅವಕಾಶ ಮಾಡಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಸಲಹೆ ನೀಡಿದರು. ವಿಶ್ವಕರ್ಮ ಸಮಾಜದ ಜಿಲ್ಲಾಧ್ಯಕ್ಷರಾದ ದೇವದಾಸ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಕುಮಾರ, ಪಂಚಾಯತ್ ರಾಜ್ ಎಂಜಿನಿಯರ್ ನಾಯಕ್, ನಗರಸಭೆಯ ತಾಹೀರ್, ಮಣಜೂರು ಮಂಜುನಾಥ್ ಇತರರು ಇದ್ದರು.
ಲೇಖಕ: admin
ಮಡಿಕೇರಿ ಡಿ.26 NEWS DESK : ಕ್ರೈಸ್ತರು ಶ್ರದ್ಧಾಭಕ್ತಿಯಿಂದ ಆರಾಧಿಸುವ ಯೇಸುಕ್ರಿಸ್ತರ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನ ಮಾಡಿದ್ದು, ಕಿಡಿಗೇಡಿಗಳನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಮತ್ತು ಅಸೋಸಿಯೇಷನ್ ನ ಘಟಕಗಳು ವಿವಿಧ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಿಸಿವೆ. ಮಡಿಕೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ ಮಾತನಾಡಿದ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ನ ಜಿಲ್ಲಾಧ್ಯಕ್ಷ ಜಾನ್ಸನ್ ಪಿಂಟೋ ಅವರು ಯೇಸುಕ್ರಿಸ್ತರನ್ನು ಅವಹೇಳನ ಮಾಡಿ ಕ್ರೈಸ್ತ ಸಮುದಾಯದ ಭಾವನೆಗೆ ದಕ್ಕೆ ತಂದಿರುವ ಪ್ರಕರಣವನ್ನು ತೀವ್ರವಾಗಿ ಖಂಡಿಸುವುದಾಗಿ ತಿಳಿಸಿದರು. ಕಳೆದ ಸಾವಿರಾರು ವರ್ಷಗಳಿಂದ ಶಾಂತಿಧೂತ ಯೇಸುಕ್ರಿಸ್ತರ ಜನ್ಮ ದಿನದಂದು ಕ್ರಿಸ್‍ಮಸ್ ಹಬ್ಬವನ್ನು ವಿಶ್ವದೆಲ್ಲೆಡೆ ಶ್ರದ್ಧಾಭಕ್ತಿಯಿಂದ ಆಚರಿಸಿಕೊಂಡು ಬರಲಾಗುತ್ತಿದೆ. ಆದರೆ ಕಿಡಿಗೇಡಿಯೊಬ್ಬ ಕ್ರಿಸ್‍ಮಸ್ ಹಬ್ಬದ ಕುರಿತು ಅಗೌರವದ ಪೋಸ್ಟ್ ಮಾಡಿರುವುದಲ್ಲದೆ ಯೇಸುಕ್ರಿಸ್ತರನ್ನು ಕೀಳಾಗಿ ಕಂಡಿದ್ದಾನೆ. ಈತನ ಹೇಳಿಕೆಗೆ ಬೆಂಬಲವಾಗಿ ಮತ್ತೊಬ್ಬ ಕಿಡಿಗೇಡಿ ಅವಹೇಳನಾಕಾರಿ ಪೋಸ್ಟ್ ಮಾಡಿದ್ದಾನೆ. ಇದು ಸಮಾಜದಲ್ಲಿ ಅಶಾಂತಿ ಮೂಡಿಸುವ ಪ್ರಯತ್ನವಾಗಿದ್ದು, ಪೊಲೀಸರು ತಪ್ಪಿತಸ್ಥರನ್ನು…
ಮಡಿಕೇರಿ ಡಿ.26 NEWS DESK : ಪೊನ್ನಂಪೇಟೆ ಮತ್ತು ವಿರಾಜಪೇಟೆ ತಾಲ್ಲೂಕಿನ ತಟ್ಟಳ್ಳಿ, ದಿಡ್ಡಳ್ಳಿ, ಕೊಲ್ಲಿಹಾಡಿ, ಬೊಮ್ಮಾಡು, ನಾಗರಹೊಳೆ, ಬಾಳೆಕೋವು, ಗೋಣಿಗದ್ದೆ, ಬೊಂಬುಕಾಡು, ಜಂಗಲ್ ಹಾಡಿ, ಚೀನಿಹಡ್ಲಿ, ಐಯಿರಸುಳಿ ಈ ಹಾಡಿಗಳಲ್ಲಿ ಕುಡಿಯುವ ನೀರು, ವಿದ್ಯುತ್ ಸಂಪರ್ಕ, ಇರುವ ರಸ್ತೆ ಅಭಿವೃದ್ಧಿ ಪಡಿಸುವುದು ಮತ್ತಿತರ ಮೂಲಸೌಲಭ್ಯಕ್ಕೆ ಯಾವುದೇ ಅಡ್ಡಿ ಮಾಡದಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಪೊನ್ನಂಪೇಟೆಯ ಸಾಮರ್ಥ್ಯ ಸೌಧದಲ್ಲಿ ನಡೆದ ತಾಲ್ಲೂಕು ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈಗಾಗಲೇ ಮುಖ್ಯಮಂತ್ರಿ ಅವರ ನೇತೃತ್ವದಲ್ಲಿ ಸಭೆ ನಡೆದಿದ್ದು, ಆದಿವಾಸಿಗಳಿಗೆ ಮೂಲ ಸೌಲಭ್ಯ ಕಲ್ಪಿಸಲು ತೊಂದರೆ ನೀಡಬಾರದು ಎಂದು ಮುಖ್ಯಮಂತ್ರಿ ಅವರು ನಿರ್ದೇಶನ ನೀಡಿದ್ದಾರೆ. ತೊಂದರೆ ನೀಡುವುದು ಅಥವಾ ಸತಾಯಿಸುವುದು ಕಂಡುಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಎ.ಎಸ್.ಪೊನ್ನಣ್ಣ ಎಚ್ಚರಿಸಿದರು. ಪೊನ್ನಂಪೇಟೆ ಮತ್ತು ವಿರಾಜಪೇಟೆ ತಾಲ್ಲೂಕಿನಲ್ಲಿ ಅರಣ್ಯ ಹಕ್ಕು ಕಾಯ್ದೆಯಡಿ 20 ಕಡೆಗಳಲ್ಲಿ…
ಮಡಿಕೇರಿ ಡಿ.27 NEWS DESK : ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ವತಿಯಿಂದ 2024-25 ನೇ ಸಾಲಿನಲ್ಲಿ ಬಿಎಡ್ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಪಾರ್ಸಿ, ಜೈನ್, ಬೌದ್ಧ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ ನೀಡಲು ಸೇವಾಸಿಂಧು ಪೋರ್ಟಲ್‍ನ ಆನ್‍ಲೈನ್‍ನಲ್ಲಿ (https://sevasindhu.karnataka.gov.in) ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜನವರಿ, 06 ರವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮೌಲಾನಾ ಆಜಾದ್ ಭವನ, ಎಫ್‍ಎಂಸಿ, ಕಾಲೇಜು ಹತ್ತಿರ, ಮಡಿಕೇರಿ ಹಾಗೂ ಕಚೇರಿ ದೂರವಾಣಿ ಸಂಖ್ಯೆ 08272 225528, ಮಾಹಿತಿ ಕೇಂದ್ರ, ಮಡಿಕೇರಿ 08272 -220214 ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಆರ್.ಕೃಷ್ಣಮೂರ್ತಿ ತಿಳಿಸಿದ್ದಾರೆ.
ಮಡಿಕೇರಿ ಡಿ.26 NEWS DESK : ಸರ್ಕಾರದ ಪ್ರಮುಖ ಗ್ಯಾರಂಟಿಯಲ್ಲಿ ಒಂದಾದ ‘ಯುವನಿಧಿ’ ಯೋಜನೆಯು ಜಾರಿಗೊಂಡು ಡಿಸೆಂಬರ್ 26 ಕ್ಕೆ ಒಂದು ವರ್ಷ ಪೂರ್ಣಗೊಂಡಿದೆ. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಜಾರಿಗೊಳಿಸಲಾಗಿರುವ ಯುವನಿಧಿ ಯೋಜನೆಯು ಯುವಜನತೆಯ ಉಜ್ವಲ ಭವಿಷ್ಯಕ್ಕಾಗಿ ಕರ್ನಾಟಕ ಸರ್ಕಾರ ಗ್ಯಾರಂಟಿ ಯೋಜನೆ ಜಾರಿಗೊಳಿಸಿದೆ. ಪ್ರತಿ ತಿಂಗಳು ನಿರುದ್ಯೋಗಿ ಪದವೀದರರಿಗೆ 3 ಸಾವಿರ ರೂ. ಮತ್ತು ಡಿಪ್ಲೋಮಾ ತೇರ್ಗಡೆಯಾದವರಿಗೆ 1500 ರೂ. ಎರಡು ವರ್ಷಗಳವರೆಗೆ ಭರಿಸಲಾಗುತ್ತದೆ. 2023 ರಲ್ಲಿ ಪದವಿ, ಡಿಪ್ಲೋಮಾ ಉತ್ತೀರ್ಣರಾದ ವಿದ್ಯಾರ್ಥಿಗಳು, ಪದವಿ ಡಿಪ್ಲೋಮಾ ನಂತರ ಕನಿಷ್ಠ 6 ತಿಂಗಳ ವರೆಗೆ ಸರ್ಕಾರಿ/ ಖಾಸಗಿ ಉದ್ಯೋಗ ಹೊಂದಿಲ್ಲದವರು, ಸ್ವಯಂ ಉದ್ಯೋಗ ಹೊಂದಿಲ್ಲದವರು, ಉನ್ನತ ವಿದ್ಯಾಭ್ಯಾಸ ಮುಂದುವರೆಸದೆ ಇರುವವರು, ರಾಜ್ಯದಲ್ಲಿ ವಾಸವಿರುವ ಕನಿಷ್ಠ 6 ವರ್ಷದವರೆಗೆ ಪದವಿ/ ಡಿಪ್ಲೋಮಾ ಉತ್ತೀರ್ಣರಾದವರಿಗೆ ಯುವನಿಧಿ ಸೌಲಭ್ಯ ದೊರೆಯುತ್ತಿದೆ. ಕೊಡಗು ಜಿಲ್ಲೆಯಲ್ಲಿ ಡಿಸೆಂಬರ್, 23 ಕ್ಕೆ ಕೊನೆಗೊಂಡಂತೆ 1262 ಮಂದಿ ಹೆಸರು ನೋಂದಾಯಿಸಿದ್ದಾರೆ. ತಾಲ್ಲೂಕುವಾರು ಗಮನಿಸಿದಾಗ ಮಡಿಕೇರಿ 325, ಕುಶಾಲನಗರ…
ಸುಂಟಿಕೊಪ್ಪ ಡಿ.26 NEWS DESK : ಸುಂಟಿಕೊಪ್ಪ ಶ್ರೀಪುರಂ ಅಯ್ಯಪ್ಪ ಸ್ವಾಮಿ ಕ್ಷೇತ್ರದಲ್ಲಿ ಮಂಡಲ ಪೂಜೋತ್ಸವವು ಶ್ರದ್ಧಾಭಕ್ತಿಯಿಂದ ನಡೆಯಿತು. ಗಣಪತಿ ಹೋಮ, ಕನ್ನಿಮೂಲ ಗಣಪತಿಗೆ ಎಳನೀರು ಅಭಿಷೇಕ, ಚಂಡೆಮೇಳ, ಶ್ರೀ ಅಯ್ಯಪ್ಪ ಸ್ವಾಮಿಗೆ ಪಂಚಾಮೃತ ಅಭಿಷೇಕ, ಲಕ್ಷಾರ್ಚನೆ, ಪಲ್ಲಪೂಜೆ, ಬಿಲ್ವಪತ್ರೆ ಅರ್ಚನೆ, ತುಳಸಿಅರ್ಚನೆ, ಪಂಚಾಮೃತ ಅಭಿಷೇಕ, ದೂರ್ವಾರ್ಚನೆ ನೆರವೇರಿತು. ನಂತರ ಭಕ್ತಾಧಿಗಳಿಗೆ ಅನ್ನಸಂಪರ್ತಣೆ ನೆರವೇರಿತು. ನೂರಾರು ಸಂಖ್ಯೆಯಲ್ಲಿ ಅಯ್ಯಪ್ಪಸ್ವಾಮಿ ವೃತ್ತಧಾರಿಗಳು ಹಾಗೂ ಭಕ್ತಾಧಿಗಳು ಪಾಲ್ಗೊಂಡು ವಿಶೇಷ ಪೂಜೆ ಸಲ್ಲಿಸಿದರು. ದೇವಸ್ಥಾನದ ಅರ್ಚಕರಾದ ಗಣೇಶ ಉಪಾಧ್ಯಾಯ ಅವರ ನೇತೃತ್ವದಲ್ಲಿ ಮಂಜುನಾಥ ಭಟ್, ರಾಘವೇಂದ್ರ ಭಟ್, ಮಹಾಭಲೇಶ್ವರ ಭಟ್, ಮನೋಜ್ ಭಟ್, ಎಲ್ಲಾ ವಿಶೇಷ ಪೂಜಾ ಕೈಂಕರ್ಯಗಳನ್ನು ನೇರವೇರಿಸಿದರು. ಈ ಸಂದರ್ಭ ದೇವಾಲಯ ಸಮಿತಿ ಅಧ್ಯಕ್ಷ ಬಿ.ಎಂ.ಸುರೇಶ್ ಪುಟ್ಟ, ಉಪಾಧ್ಯಕ್ಷರುಗಳಾದ ಎಂ.ಮಂಜುನಾಥ್, ಬಿ.ಎ.ಪುನೀತ್, ಬಿ.ಕೆ.ಪ್ರಶಾಂತ್ ಕುಮಾರ್, ಬಿ.ಎಲ್.ಆನಂದ, ಪ್ರಧಾನ ಕಾರ್ಯದರ್ಶಿ ಎಂ.ಚಂದ್ರ, ಸಹ ಕಾರ್ಯದರ್ಶಿ ವಿ.ಕೆ.ರಾಜು, ಕೆ.ಕನಿಸ್, ಮಣಿಕಂಠ, ಖಜಾಂಚಿ ಎಂ.ಆರ್.ಶಶಿಕುಮಾರ್, ಸಂಘಟನಾ ಕಾರ್ಯದರ್ಶಿಗಳಾದ ಪಿ.ಆರ್.ಬಿಜುಕುಮಾರ್, ಪೃಥ್ವಿರಾಜ್, ಡಿ.ಕೆ.ರಾಕೇಶ್, ಶೇಖರ್(ಅಣ್ಣು), ಎಂ.ಉದಯ, ಕೆ.ರವಿ, ಬಿ.ಪಿ.ಸಜಿತ್,…
ಮಡಿಕೇರಿ ಡಿ.26 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಪೊನ್ನಂಪೇಟೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು, ಹುದಿಕೇರಿ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಸಂಯುಕ್ತ ಆಶ್ರಯದಲ್ಲಿ ಡಿ.30 ರಂದು ಬಿರುನಾಣಿಯಲ್ಲಿ ಕೈಬುಲಿರ ಪಾರ್ವತಿ ಬೋಪಯ್ಯ ದತ್ತಿ ಕಾರ್ಯಕ್ರಮ ನಡೆಯಲಿದೆ. ಬಿರುನಾಣಿಯ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಬೆಳಿಗ್ಗೆ 10.30 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ದತ್ತಿದಾನಿಗಳ ಆಶಯದಂತೆ 2023-24ನೇ ಸಾಲಿನಲ್ಲಿ ಕೊಡಗು ಜಿಲ್ಲೆಯ 10ನೇ ತರಗತಿಯ ಕನ್ನಡ ಮಾಧ್ಯಮ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಮಾದಾಪುರದ ಶ್ರೀಮತಿ ಚೆನ್ನಮ್ಮ ಪ್ರೌಢಶಾಲೆಯ ವಿದ್ಯಾರ್ಥಿನಿ ಕುಮಾರಿ ಅದವಿಯಾ ಯು. ಇವರನ್ನು ಗೌರವಿಸಲಾಗುವುದು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹುದಿಕೇರಿ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಬಾನಂಗಡ ಅರುಣ್ ರವರು ವಹಿಸಲಿದ್ದು, ಉದ್ಘಾಟನೆಯನ್ನು ಬಿರುನಾಣಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಅಮ್ಮತ್ತಿರ ರಾಜೇಶ್ ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕವಾಗಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಎಂ.ಪಿ ಕೇಶವ ಕಾಮತ್ ಮಾತನಾಡಲಿದ್ದಾರೆ. ಕಾರ್ಯಕ್ರಮದ ಮುಖ್ಯ…
ಮಡಿಕೇರಿ ಡಿ.26 NEWS DESK : ಪಾಲೂರು ಗ್ರಾಮದ ವಾರ್ಷಿಕ ಊರೊರ್ಮೆ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು. ‘ಪಾಲೂರ್ ಕೊಡವಾಮೆ ಕೂಟ’ ಏರ್ಪಡಿಸಿದ್ದ 19ನೇ ವರ್ಷದ ಕಾರ್ಯಕ್ರಮದಲ್ಲಿ ಪಾಲೂರಿನಲ್ಲಿ ನೆಲೆಸಿರುವ ಮಂದನೆರವಂಡ, ನೆರವಂಡ, ಚೆರುವಾಳಂಡ, ಮೇಪಾಡಂಡ, ಪೊದುವಡ, ಪೈಕೇರ, ಬೊಳ್ಳಿಯಂಡ, ಬಲ್ಲಂಡ ಕುಟುಂಬದ ಸದಸ್ಯರು ಭಾಗಿಯಾಗಿದ್ದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮೇಪಾಡಂಡ ವೇಣು ಉತ್ತಪ್ಪ, ಕೊಡವ ಸಂಸ್ಕೃತಿ, ಆಚಾರ, ವಿಚಾರಗಳನ್ನು ಮುಂದಿನ ಯುವ ಪೀಳಿಗೆಗೆ ಉಳಿಸಿ ಬೆಳೆಸಬೇಕೆಂದು ಕರೆ ನೀಡಿದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಸಸ್ಯತಳಿ ಸಂರಕ್ಷಕ ನಾಪಂಡ ಪೂಣಚ್ಚ ನಾಣಿಯಪ್ಪ, ಕೊಡಗಿನ ಕಾಡು ಹಣ್ಣು, ಕರಿಮೆಣಸು ಮತ್ತು ಗಂಡು ರೆಕ್ಕೆಯಿಂದ ಕಾಫಿ ಗಿಡ ಉತ್ಪತ್ತಿ ಮಾಡುವ ಬಗ್ಗೆ ಮಾಹಿತಿ ನೀಡಿದರು. ::: ಸನ್ಮಾನ ::: ಕಾರ್ಯಕ್ರಮದಲ್ಲಿ ಸಸ್ಯತಳಿ ಸಂರಕ್ಷಕ ನಾಪಂಡ ಪೂಣಚ್ಚ ನಾಣಿಯಪ್ಪ, ಮಾಜಿ ಸೈನಿಕ ಹಾಗೂ ಗ್ರಾಮದ ಕಾಫಿಬೆಳೆಗಾರ ಚೆರುವಾಳಂಡ ರವೀಂದ್ರ, ನಿವೃತ್ತ ಶಿಕ್ಷಕಿ ಮಂದನೆರವಂಡ ವಾಣಿ ಸೋಮಣ್ಣ, ಸಿಎಪಿಎಫ್(ಸಿಎಸ್‍ಎಫ್)ನಲ್ಲಿ ಸೇವೆ ಸಲ್ಲಿಸುತ್ತಿರುವ, ರಾಷ್ಟ್ರಪತಿ ಪದಕ ವಿಜೇತ…
ಮಡಿಕೇರಿ ಡಿ.26 NEWS DESK : ಔಷಧಿಗಳನ್ನು ಮನೆ ಬಾಗಲಿಗೆ ತಲುಪಿಸಲು ಕೋವಿಡ್ ಸಂದರ್ಭ ನೀಡಲಾಗಿದ್ದ ವಿಶೇಷ ಅನುಮತಿ ದುರುಪಯೋಗವಾಗುತ್ತಿರುವುದರಿಂದ ತಕ್ಷಣ ಈ ಅನುಮತಿಯನ್ನು ಹಿಂಪಡೆಯಬೇಕೆಂದು ಕೊಡಗು ಜಿಲ್ಲಾ ಔಷಧ ವ್ಯಾಪಾರಿಗಳ ಸಂಘ ಆರೋಗ್ಯ ಇಲಾಖೆಯನ್ನು ಒತ್ತಾಯಿಸಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಸಂಘದ ಜಿಲ್ಲಾಧ್ಯಕ್ಷ ಎ.ಕೆ.ಜೀವನ್ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಕಾರ್ಯದರ್ಶಿಗಳಿಗೆ ಮೂರನೇ ಬಾರಿಗೆ ಪತ್ರ ಬರೆದು ಅನುಮತಿಯನ್ನು ರದ್ದುಪಡಿಸಬೇಕೆಂದು ಕೋರಿಕಂಡಿದ್ದೇವೆ ಎಂದು ತಿಳಿಸಿದ್ದಾರೆ. ಅಕ್ರಮ ಆನ್‍ಲೈನ್ ಪ್ಲಾಟ್‍ಫಾರ್ಮ್‍ಗಳಿಂದ ವಿಶೇಷ ಅನುಮತಿಯ ನಿಯಮ ದುರುಪಯೋಗವಾಗುತ್ತಿದ್ದು, ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಬಹುದು. 2020 ಮಾರ್ಚ್ ತಿಂಗಳಿನಲ್ಲಿ ಕೆಲವು ಷರತ್ತುಗಳೊಂದಿಗೆ ಮನೆ ಬಾಗಿಲಿಗೆ ಔಷಧಿಗಳ ಪೂರೈಕೆಯನ್ನು ಅನುಮತಿಸಲಾಗಿದೆ. ತುರ್ತು ಸಂದರ್ಭಗಳಲ್ಲಿ ಔಷಧಿಗಳನ್ನು ತಲುಪಿಸುವುದು ಈ ಅಧಿಸೂಚನೆಯ ಮುಖ್ಯ ಉದ್ದೇಶವಾಗಿದೆ. ಆದರೆ ಪ್ರಸ್ತುತ ಡಿಜಿಟಲ್ ಪ್ಲಾಟ್‍ಫಾರ್ಮ್‍ಗಳು ಅಗತ್ಯ ನಿಯಂತ್ರಣವನ್ನು ಅನುಸರಿಸದೆ ಔಷಧಿಗಳನ್ನು ಮನೆಗೆ ತಲುಪಿಸುತ್ತಿವೆ. ವೈದ್ಯರ ಚೀಟಿ ಇಲ್ಲದೆ ಔಷಧಿಗಳನ್ನು ಮಾರಾಟ ಮಾಡುತ್ತಿದ್ದು, ಸ್ವಯಂ-ಔಷಧಿ, ಮಾದಕ ವ್ಯಸನ ಮತ್ತು…
ವಿರಾಜಪೇಟೆ ಡಿ.26 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ವಿರಾಜಪೇಟೆ ವತಿಯಿಂದ ಬಿಳುಗುಂದ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ದೇವಣಗೇರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಕ ಹೆಚ್.ಡಿ.ಲೋಕೇಶ್ ಮಾತನಾಡಿ, ಹದಿಹರೆಯದ ಮಕ್ಕಳು ದುಶ್ಚಟಕ್ಕೆ ಬಲಿಯಾಗುತ್ತಿದ್ದು, ಅತಿಯಾದ ಮೊಬೈಲ್ ಬಳಕೆಯಿಂದ ಮಕ್ಕಳ ದೈಹಿಕ ಮತ್ತು ಮನಸಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ಗುಟ್ಕಾ ಸೇವನೆ, ಮಧ್ಯಪಾನ, ಅಮಲು ಪದಾರ್ಥಗಳ ಸೇವನೆಯಿಂದ ಆರೋಗ್ಯಕ್ಕೆ ಹಾನಿಕಾರಕ ಆದರಿಂದ ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗದೆ ತಮ್ಮ ಅಮೂಲ್ಯವಾದ ಸಮಯವನ್ನು ವಿದ್ಯಾರ್ಜನೆಗೆ ಮೀಸಲಿಡಬೇಕು. ಇಂದಿನ ಮಕ್ಕಳು ಭವಿಷ್ಯದ ಪ್ರಜೆಗಳು, ಪರೀಕ್ಷಾ ಸಮಯ ಹತ್ತಿರವಾಗುತ್ತಿರುವುದರಿಂದ ಉತ್ತಮ ಅಂಕಗಳಿಸುವ ನಿಟ್ಟಿನಲ್ಲಿ ಅಂದಿನ ಪಾಠವನ್ನು ಅಂದೇ ಓದುವುದರ ಮೂಲಕ ಹೆಚ್ಚು ಅಂಕ ಗಳಿಸುವಂತಾಗಬೇಕು ಎಂದು ಸಲಹೆ ನೀಡಿದರು. ಶಾಲೆಯ ಮುಖ್ಯ ಶಿಕ್ಷಕಿ ಅರುಣ ಅನ್ಸಿ ಡಿಸೋಜ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಶಾಲೆಯ ಶಿಕ್ಷಕರಾದ…






