ಲೇಖಕ: admin

ಮಡಿಕೇರಿ ಡಿ.26 NEWS DESK : ಮಡಿಕೇರಿ ತಾಲ್ಲೂಕಿನ ಕಟ್ಟೆಮಾಡು ಗ್ರಾಮದ ಶ್ರೀ ಮಹಾಮೃತ್ಯುಂಜಯ ಮಹದೇಶ್ವರ ಕ್ಷೇತ್ರದ ಜಾತ್ರೋತ್ಸವದ ಪ್ರಯುಕ್ತ ಇಂದು ವಿಶೇಷ ಪೂಜಾ ಕೈಂಕರ್ಯಗಳೊಂದಿಗೆ ದೇವಾಲಯದಲ್ಲಿರುವ ಬಸವನಿಗೆ ಬೆಳ್ಳಿ ಕವನವನ್ನು ಅರ್ಪಿಸಲಾಯಿತು. ಡಿ.25 ರಂದು ಮುಂಜಾನೆ ನೈರ್ಮಾಲ್ಯ ಬಲಿ (ಇರುಬೆಳಕು), ಮಧ್ಯಾಹ್ನ ಧ್ವಜಸ್ತಂಭ ಪೂಜೆ, ಮಹಾಪೂಜೆ, ತೀರ್ಥಪ್ರಸಾದ ವಿತರಣೆ ನಡೆಯಿತು. ಸಂಜೆ ಶ್ರೀ ಭೂತಬಲಿ (ತೂಚಂಬಲಿ), ಧ್ವಜಸ್ತಂಭ ಪೂಜೆ, ಮಹಾಪೂಜೆ, ತೀರ್ಥಪ್ರಸಾದ ವಿತರಣೆ ನೆರವೇರಿತು. ಇಂದು ಮುಂಜಾನೆ ನೈರ್ಮಾಲ್ಯ ಬಲಿ (ಇರುಬೆಳಕು), ತುಲಾಭಾರ ಸೇವೆ, ಮಧ್ಯಾಹ್ನ ಧ್ವಜಸ್ತಂಭ ಪೂಜೆ, ಮಹಾಪೂಜೆ, ತೀರ್ಥಪ್ರಸಾದ ವಿತರಣೆ ನೆರವೇರಿತು. ವಿವಿಧ ಗ್ರಾಮಗಳಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವಿಶೇಷ ಪೂಜೆ ಸಲ್ಲಿಸಿದರು. ಪ್ರತಿದಿನವೂ ಮಧ್ಯಾಹ್ನ ಹಾಗೂ ರಾತ್ರಿ ನೆರೆದಿದ್ದ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ. ಇಂದು ಸಂಜೆ 5 ಗಂಟೆಗೆ ನೃತ್ಯ ಬಲಿ (ನೆರಪು), 6 ಗಂಟೆಗೆ ವಸಂತಪೂಜೆ, 7.45ಕ್ಕೆ ಧ್ವಜಸ್ತಂಭ ಪೂಜೆ, ರಾತ್ರಿ 8 ಗಂಟೆಗೆ ಮಹಾಪೂಜೆ, ತೀರ್ಥಪ್ರಸಾದ ವಿತರಣೆ, 8.45ಕ್ಕೆ ದೇವರ ಶಯನೋತ್ಸವ,…

Read More

ಮಡಿಕೇರಿ ಡಿ.26 NEWS  DESK : ವಿರಾಜಪೇಟೆ ತಾಲ್ಲೂಕಿನ ತಾಲ್ಲೂಕು ಪಂಚಾಯತ್ ತ್ರೈಮಾಸಿಕ ಕೆಡಿಪಿ ಸಭೆಯು ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಪೊನ್ನಂಪೇಟೆ ತಾಲ್ಲೂಕು ಪಂಚಾಯತ್ ಸಾಮರ್ಥ್ಯ ಸೌಧದ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಕಂದಾಯ, ಅರಣ್ಯ, ಸಮಾಜ ಕಲ್ಯಾಣ, ಕೃಷಿ, ITDP ಇಲಾಖೆಯ ಹಾಗೂರಾಜ್ಯ ಸರ್ಕಾರದ ಮಹತ್ವಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿಯ ವರದಿ ಪರಿಶೀಲಿಸಿದರು. ಈ ಸಂದರ್ಭ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ  ಧರ್ಮಜ ಉತ್ತಪ್ಪ, ವಿಧಾನಪರಿಷತ್ ಸದಸ್ಯ ಸುಜಾ ಕುಶಲಪ್ಪ, ಪೊನ್ನಂಪೇಟೆ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕಾಳೆಮಾಡ ಪ್ರಶಾಂತ್ ಹಾಗೂ ವಿರಾಜಪೇಟೆ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಪಿ.ವಿ.ಜಾನ್ಸನ್, ಪೊನ್ನಂಪೇಟೆ ಹಾಗೂ ವಿರಾಜಪೇಟೆ ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿ ಅಪ್ಪಣ್ಣ, ಮಿದೇರೀರ ನವೀನ್ ಹಾಗೂ ಎಲ್ಲಾ ಹಿರಿಯ ಅಧಿಕಾರಿಗಳು ಹಾಜರಿದ್ದರು.

Read More

ಮಡಿಕೇರಿ ಡಿ.26 NEWS DESK : ಮೀನುಗಾರಿಕಾ ಇಲಾಖೆಯಿಂದ ಫಲಾನುಭವಿಗಳಿಗೆ ಮೀನು ಹಿಡಿಯುವ ಸಲಕರಣೆಗಳ ವಿತರಣೆಗಳನ್ನು ವಿತರಿಸಲಾಯಿತು. ಪೊನ್ನಂಪೇಟೆಯ ಶಾಸಕ ಕಚೇರಿಯಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಫಲಾನುಭವಿಗಳಿಗೆ ಸಲಕರಣೆ ವಿತರಿಸಿ ಮಾತನಾಡಿ, ಇಲಾಖೆಯಿಂದ ದೊರೆಯುವ ಸೌಲಭ್ಯಗಳನ್ನು ಫಲಾನುಭವಿಗಳು ಸದುಪಯೋಗ ಪಡಿಸಿಕೊಂಡು ಜೀವನದಲ್ಲಿ ಉತ್ತಮ ಪ್ರಗತಿ ಕಾಣುವಂತೆ  ಹಾರೈಸಿದರು. ಈ ಸಂದರ್ಭ  ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಧರ್ಮಜ ಉತ್ತಪ್ಪ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಿದೇರೀರ ನವೀನ್ ಮತ್ತು ಮೀನುಗಾರಿಕಾ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

Read More

ವಿರಾಜಪೇಟೆ ಡಿ.26 NEWS DESK : ಕ್ರಿಸ್‍ಮಸ್ ಹಬ್ಬದ ಪ್ರಯುಕ್ತ ನಗರದ ಯುವಕರೊಬ್ಬರು ಕಳೆದ ಹಲವು ವರ್ಷಗಳಿಂದ ಯೇಸು ಕ್ರಿಸ್ತರ ಬದುಕಿನ ವಿವಿಧ ಹಂತಗಳನ್ನು ಪ್ರತಿಬಿಂಬಿಸುವ ‘ಗೋದಲಿ’ ನಿರ್ಮಿಸಿ ಗಮನ ಸೆಳೆಯುತ್ತಿದ್ದಾರೆ. ನಗರದ ವಿಜಯ ನಗರದ ನಿವಾಸಿ ಜೇಮ್ಸ್ ಸಲ್ಡಾನ ಮತ್ತು ಪೌಲಿನಿ ಸಲ್ಡಾನ ಅವರ ಪುತ್ರ 32ರ ಪ್ರಾಯದ ಡೇನಿಯಲ್ ಸಲ್ಡಾನ ವೈಶಿಷ್ಟ್ಯಪೂರ್ಣವಾದ ಗೋದಲಿಗಳನ್ನು ನಿರ್ಮಿಸುವ ಮೂಲಕ ಪ್ರಸಿದ್ಧರಾಗಿದ್ದಾರೆ. ಪ್ರಭು ಯೇಸು ಕ್ರಿಸ್ತರ ಜಯಂತಿ ಅಂಗವಾಗಿ ಗೋದಲಿ ನಿರ್ಮಾಣ ಮಾಡುವುದು ಕ್ರೈಸ್ತ ಬಾಂಧವರಿಗೊಂದು ಸಂಭ್ರಮದ ವಿಚಾರ. ಯೇಸು ಕ್ರಿಸ್ತರ ಜನನವನ್ನು ಆತ್ಮೀಯವಾಗಿ, ಸಂತೋಷದಿಂದ ಕಾಣುವುದು ಹಬ್ಬದ ಪ್ರತೀಕವಾಗಿದೆ ಎಂದು ಡೇನಿಯಲ್ ಅವರು ಹೇಳುತ್ತಾರೆ. ಗೋದಲಿ ನಿರ್ಮಾಣದ ಬಗ್ಗೆ ಮಾತನಾಡಿದ ಡೇನಿಯಲ್, ಯೇಸು ಸ್ವಾಮಿಯ ಜನನವು ಬೇತ್ಲೆಹ್ಯಾಂನ ಹಳ್ಳಿಯೊಂದರಲ್ಲಿ ನಡೆಯಿತು. ಈ ಅಂಶವನ್ನು ಆಧರಿಸಿ ಜಯಂತಿಯ ಹತ್ತು ದಿನಗಳಿಗಿಂತ ಮುಂಚಿತವಾಗಿ ಕಾಲ್ಪನಿಕ ರೇಖಾ ಚಿತ್ರಗಳನ್ನು ಬರೆದು ಮಂಗಳೂರಿನಿಂದ ತಂದಿರುವ ಬೊಂಬೆಗಳನ್ನು ಸ್ಥಳಕ್ಕೆ ಅನುಗುಣವಾಗಿ ಪ್ರತಿಷ್ಠಾಪಿಸಲಾಗಿದೆ. ಕ್ರಿಸ್‍ಮಸ್‍ನ ಮೂರು ದಿನಗಳ ಬಳಿಕ ಗೋದಲಿಯನ್ನು…

Read More

ಮಡಿಕೇರಿ ಡಿ.26 NEWS DESK : ಕೊಡಗು ಗೌಡ ವಿದ್ಯಾ ಸಂಘ ಹಾಗೂ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಸಹಯೋಗದಲ್ಲಿ ಡಿ.29 ರಂದು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ ಸಮಾರಂಭ ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೊಡಗು ಗೌಡ ವಿದ್ಯಾ ಸಂಘದ ಅಧ್ಯಕ್ಷ ಅಂಬೆಕಲ್ಲು ನವೀನ್ ನಗರದ ಕೊಡಗು ಗೌಡ ಸಮಾಜದಲ್ಲಿ ಬೆಳಿಗ್ಗೆ 10 ಗಂಟೆಗೆ ತಮ್ಮ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಉದ್ಘಾಟಿಸಲಿದ್ದಾರೆ ಎಂದರು. ಮುಖ್ಯ ಅತಿಥಿಗಳಾಗಿ ಸೋಮವಾರಪೇಟೆ ಸಾಂದೀಪನಿ ಪ್ರೌಢಶಾಲೆಯ ಅಧ್ಯಕ್ಷ ಹಾಗೂ ಜಿ.ಪಂ ಮಾಜಿ ಸದಸ್ಯ ಮೂಡಗದ್ದೆ ದಾಮೋದರ, ಅತಿಥಿಗಳಾಗಿ ವಿದ್ಯಾನಿಧಿಯ ದಾನಿಗಳಾದ ಕಾಫಿ ಬೆಳೆಗಾರ ಅಚ್ಚುಡ ಅನಂತ ಕುಮಾರ್, ತಳೂರು ಮುತ್ತಮ್ಮ ರಾಜಗೋಪಾಲ, ಮದೆನಾಡು ನಿವೃತ್ತ ಮುಖ್ಯೋಪಾಧ್ಯಾಯ ಬಾರಿಯಂಡ ಜೋಯಪ್ಪ ಹಾಗೂ ಕಾಫಿ ಮಂಡಳಿಯ ನಿವೃತ್ತ ಸಂಪರ್ಕಾಧಿಕಾರಿ ಬಾರಿಕೆ ಎನ್.ಅಯ್ಯಪ್ಪ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು. ಕೊಡಗು ಗೌಡ…

Read More

ಮಡಿಕೇರಿ ಡಿ.26 NEWS DESK : ಕಂಡಕರೆಯ ಗಾಂಧಿ ಯುವಕ ಸಂಘದಿಂದ ಚೆಟ್ಟಳ್ಳಿ ಪ್ರೌಢಶಾಲಾ ಮೈದಾನದಲ್ಲಿ ನಡೆದ ರಾಷ್ಟ್ರ ಮಟ್ಟದ ಅಂಡರ್ 20 ಕಾಲ್ಚೆಂಡು ಪಂದ್ಯಾವಳಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತ ಸಂಘದ ಉಪಾಧ್ಯಕ್ಷ, ಕೊಡಗು ಪ್ರೆಸ್ ಕ್ಲಬ್ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷ ಹಾಗೂ ಕೊಡಗು ಪ್ರೆಸ್ ಕ್ಲಬ್ ಮಾಜಿ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಅವರಮಾಧ್ಯಮ ಸೇವೆಯನ್ನು ಗುರುತಿಸಿ ಗಾಂಧಿ ಯುವಕ ಸಂಘದಿಂದ “ಮಾದರಿ ಪತ್ರಕರ್ತ” ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದ ಅಜ್ಜಮಾಡ ರಮೇಶ್ ಕುಟ್ಟಪ್ಪ, ಜಾತಿ,ಧರ್ಮ ಎಲ್ಲವನ್ನೂ ಮೀರಿ ಕ್ರೀಡೆ ಎಲ್ಲರನ್ನೂ ಒಂದುಗೂಡಿಸುತ್ತೆ ಎಂದರು‌. ಈ ಸಂದರ್ಭ ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಅಧ್ಯಕ್ಷ ಜಾನ್ಸನ್ ಪಿಂಟೋ, ಗಾಂಧಿ ಯುವಕ ಸಂಘದ ಅಧ್ಯಕ್ಷ ಇಸ್ಮಾಯಿಲ್ ಕಂಡಕರೆ,ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಸಿ‌.ಇ‌ ತೀರ್ಥಕುಮಾರ್,ಚೆಟ್ಟಳ್ಳಿ ಪ್ರೌಢಶಾಲಾ ಆಡಳಿತ ಮಂಡಳಿಯ ಸಂಚಾಲಕ ರತ್ತು ಚಂಗಪ್ಪ ಇದ್ದರು.

Read More

ಮಡಿಕೇರಿ ಡಿ.26 NEWS DESK : ಸುಮಾರು 25 ವರ್ಷಗಳಿಂದ ದುರಸ್ತಿ ಕಾಣದೆ ಸಾರ್ವಜನಿಕರಿಂದ ನಿರಂತರ ಟೀಕೆಗಳಿಗೆ ಒಳಗಾಗಿದ್ದ ರಸ್ತೆಗೆ ಕೊನೆಗೂ ದುರಸ್ತಿ ಭಾಗ್ಯ ದೊರೆತಿದೆ. ಮಡಿಕೇರಿ ನಗರಸಭೆಯ ವಾರ್ಡ್ ನಂ.19ರ ರೈಫಲ್ ರೆಂಜಿನ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ವಾಹನ ಸವಾರರು ಹಾಗೂ ಪಾದಚಾರಿಗಳು ಓಡಾಡಲು ಪರದಾಡುವಂತಾಗಿತ್ತು. ಇದೀಗ ವಾರ್ಡ್ ಸದಸ್ಯ ಕಾಳಚಂಡ ಅಪ್ಪಣ್ಣ ಅವರ ಮುತುವರ್ಜಿಯಿಂದ ರೂ.5 ಲಕ್ಷ ವೆಚ್ಚದಲ್ಲಿ ಸುಮಾರು 85 ಮೀಟರ್ ಉದ್ದ ಮತ್ತು 3 ಮೀಟರ್ ಅಗಲ ರಸ್ತೆಯನ್ನು ಕಾಂಕ್ರೀಟ್ ಮಾಡಲಾಗಿದ್ದು,  ರಸ್ತೆ ದುರಸ್ತಿ ಕಾರ್ಯಕ್ಕೆ ಶ್ರಮಿಸಿದ ಸದಸ್ಯ ಕಾಳಚಂಡ ಅಪ್ಪಣ್ಣ ಮತ್ತು ವಾರ್ಡ್ ಪ್ರಮುಖರಾದ ಸುರೇಶ್ ಕುಲಾಲ್ ಅವರ ಕಾರ್ಯಕ್ಕೆ ಸಾರ್ವಜನಿಕರು ಹಾಗೂ ವಾರ್ಡ್ ನಿವಾಸಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Read More

ಬೆಳಗಾವಿ ಡಿ.26 NEWS DESK : ಗಂಗಾಧರ ರಾವ್ ದೇಶಪಾಂಡೆ ಸ್ಮಾರಕ ಭವನ, ಫೋಟೋ ಗ್ಯಾಲರಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು. ಇಂದು ಬೆಳಗಾವಿಯ ರಾಮತೀರ್ಥ ನಗರದಲ್ಲಿರುವ ಗಂಗಾಧರ ರಾವ್ ದೇಶಪಾಂಡೆ ಸ್ಮಾರಕ ಭವನ ಹಾಗೂ ಫೋಟೋ ಗ್ಯಾಲರಿಯನ್ನು ಉದ್ಘಾಟಿಸಿದ ಸಿಎಂ ಅವರು, ಭವನದಲ್ಲಿ ಇರುವ ಫೋಟೋಗಳನ್ನು ವೀಕ್ಷಣೆ ಮಾಡಿದರು.‌ ಈ ವೇಳೆ ಸಿಎಂ ಸಿದ್ದರಾಮಯ್ಯ ಅವರಿಗೆ ಸಚಿವರಾದ, ಸತೀಶ್ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳ್ಕರ್, ಶಿವರಾಜ್ ತಂಗಡಗಿ, ದಿನೇಶ್ ಗುಂಡೂರಾವ್ ಸೇರಿ ಹಲವು ಮಂದಿ ಗಣ್ಯರು, ಶಾಸಕರು ಉಪಸ್ಥಿತರಿದ್ದರು.

Read More

ಮಡಿಕೇರಿ ಡಿ.26 NEWS DESK : ಪಾಲಿಬೆಟ್ಟದ ಚೆಶೈರ್ ಹೋಮ್ಸ್ ಇಂಡಿಯಾ ಕೂರ್ಗ್ ವಿಶೇಷ ಶಾಲೆಯಲ್ಲಿ “ವಿಶ್ವ ಧ್ಯಾನ ದಿನಾಚರಣೆ”ಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕ ಶಿವರಾಜ್ ಧ್ಯಾನದ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿ, ಧ್ಯಾನ ಮಾಡಿಸಿದರು. ಸ್ವಯಂ ಸೇವಕರಾದ ಲೀನಾ ಮಂದಣ್ಣ, ಬ್ರೈಟ್ ಬಿಗಿನಿಂಗ್ ಪ್ರಿಸ್ಕೂಲ್ ನ ಮುಖ್ಯ ಶಿಕ್ಷಕರಾದ ಸೋನಿಯಾ ಜೋಸೆಫ್, ಪಾಲಿಬೆಟ್ಟದ ಲೂಡ್ಸ್ ಹಿಲ್ ಕಾನ್ವೆಂಟ್  ಶಿಕ್ಷಕರಾದ ಪವಿತ್ರ, ನರ್ಸರಿ ಶಿಕ್ಷಕರ ತರಬೇತಿಯ ಪ್ರಶಿಕ್ಷಣಾರ್ಥಿಗಳು, ವಿಶೇಷ ಚೇತನ ವಿದ್ಯಾರ್ಥಿಗಳು, ಲೂಡ್ಸ್ ಕಾನ್ವೆಂಟ್ ವಿದ್ಯಾರ್ಥಿಗಳು, ಚೆಶೈರ್ ಹೋಮ್ ನ ಸಿಬ್ಬಂದಿ ವರ್ಗದವರು, ಸ್ಥಳೀಯರು ಭಾಗವಹಿಸಿದ್ದರು.

Read More

ಬೆಳಗಾವಿ ಡಿ.26 NEWS DESK : ಜಮ್ಮು ಕಾಶ್ಮೀರದಲ್ಲಿ ಅಪಘಾತಕ್ಕೆ ಈಡಾಗಿ ಹುತಾತ್ಮರಾದ ಪಾರ್ಥಿವ ಶರೀರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂತಿಮ ಗೌರವ ಸಲ್ಲಿಸಿದರು. ಬೆಳಗಾವಿಯ ಸೇನಾ ಯುದ್ಧ ಸ್ಮಾರಕದಲ್ಲಿ ಸುಬೇದಾರ್ ದಯಾನಂದ ತಿರುಕಣ್ಣನವರ್, ಮಹೇಶ್ ಮಾರಿಗೊಂಡ ಅವರ ಪಾರ್ಥಿವ ಶರೀರಕ್ಕೆ ಪುಷ್ಪ ನಮನ ಸಲ್ಲಿಸಿ ಅಂತಿಮ ಗೌರವ ಸಲ್ಲಿಸಿದರು. ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಮುಖ್ಯಮಂತ್ರಿಗಳು, ಯೋಧರ ಬದುಕು, ಜೀವನ, ವೃತ್ತಿ ಅತ್ಯಂತ ಉನ್ನತವಾದದು. ನಮ್ಮ ರಾಜ್ಯದ ಯೋಧರು ಅಪಘಾತದಲ್ಲಿ ಹುತಾತ್ಮರಾಗಿರುವುದು ಅತ್ಯಂತ ನೋವಿನ ಸಂಗತಿ. ನಾಲ್ವರು ಯೋಧರ ಆತ್ಮಕ್ಕೆ ಶಾಂತಿ ಕೋರುತ್ತಾ, ಅವರ ಕುಟುಂಬದವರ ನೋವಿನಲ್ಲಿ ನಾನು ಭಾಗಿಯಾಗುತ್ತೇನೆ ಎಂದರು. ಸರಕಾರದಿಂದ ನಿಯಮಾನುಸಾರ ಹುತಾತ್ಮರ ಕುಟುಂಬಕ್ಕೆ ಸಲ್ಲಬೇಕಾದ ಸಕಲ ನೆರವನ್ನೂ ಒದಗಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಅವರು ಭರವಸೆ ನೀಡಿದರು.

Read More