ಕುಶಾಲನಗರ ಮೇ 19 NEWS DESK : ವಿದ್ಯಾರ್ಥಿಗಳು ತರಗತಿಯಪಾಠಗಳಿಗೆ ಮಾತ್ರ ಸೀಮಿತವಾಗದೇ ಸಂಗೀತ, ಕಲೆ, ನೃತ್ಯ ಸೇರಿದಂತೆ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಿ ತಮ್ಮ ಕೌಶಲ್ಯ, ಸಾಮಥ್ರ್ಯವನ್ನು ಪ್ರದರ್ಶಿಸಬೇಕು. ಅದಕ್ಕೆ ಈ ಯುವ ವೈಭವ ಕಾರ್ಯಕ್ರಮ ಅತ್ಯುತ್ತಮ ವೇದಿಕೆ ಕಲ್ಪಿಸಿಕೊಟ್ಟಿದೆ. ಸಾಂಸ್ಕೃತಿಕ ಸ್ಪರ್ಧೆಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ರಹದಾರಿ. ಇಂತಹ ಪ್ರಯತ್ನಗಳು ಹೀಗೆಯೇ ಮುಂದುವರೆಯಲಿ ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾಕ್ಟರ್ ಮಂತರ್ ಗೌಡ ಅಭಿಮತ ವ್ಯಕ್ತಪಡಿಸಿದರು. ಚಿಕ್ಕ ಅಳುವಾರದ ಜ್ಞಾನ ಕಾವೇರಿ ಆವರಣದ ಕೊಡಗು ವಿಶ್ವವಿದ್ಯಾಲಯದ ವತಿಯಿಂದ ಹಮ್ಮಿಕೊಂಡಿದ್ದ ಅಂತರ್ ಕಾಲೇಜು ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಉತ್ಸವ “ಯುವ ವೈಭವ” ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಕೊಡಗು ಜಿಲ್ಲೆಯಲ್ಲಿ ವಿಶ್ವವಿದ್ಯಾಲಯ ಇದ್ದರೂ ಎಲ್ಲ ಮಕ್ಕಳು ಉನ್ನತ ಶಿಕ್ಷಣಕ್ಕಾಗಿ ಬೇರೆ ಜಿಲ್ಲೆಯ ವಿಶ್ವವಿದ್ಯಾಲಯಗಳತ್ತ ಮುಖ ಮಾಡುತ್ತಿರುವುದು ಬೇಸರದ ಸಂಗತಿ. ನಮ್ಮ ಜಿಲ್ಲೆಯ ವಿಶ್ವವಿದ್ಯಾಲಯ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಪಾಲಕರು, ಶಿಕ್ಷಕರು ಮಕ್ಕಳಿಗೆ ನಮ್ಮ ವಿಶ್ವವಿದ್ಯಾಲಯದಲ್ಲಿ ಕಲಿಯಲು ಪ್ರೋತ್ಸಾಹ ನೀಡಿ ವಿವಿಯನ್ನುಹೆಮ್ಮರವಾಗಿ…
ಲೇಖಕ: admin
ಮಡಿಕೇರಿ ಮೇ 19 NEWS DESK : ಕೇರಳದಲ್ಲಿ (ಯುಡಿಎಫ್ ) ದಾಖಲಿಸಿದ ಐತಿಹಾಸಿಕ ಜಯದ ಹಿನ್ನೆಲೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸದಸ್ಯ ಕೆ.ಎ.ಯಾಕುಬ್ ಅವರು ಅಭಿನಂದನೆ ಸಲ್ಲಿಸಿದರು. ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (IUML) ರಾಷ್ಟ್ರೀಯ ಸಮಿತಿಯ ಅಧ್ಯಕ್ಷರು ಹಾಗೂ ಕೇರಳ ಮುಸ್ಲಿಂ ಲೀಗ್ ಅಧ್ಯಕ್ಷ ಸೈಯದ್ ಸಾದಿಕ್ ಆಲಿ ಶಿಹಾಬ್ ತಂಗಳ್ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿ ಸಮಾಲೋಚಿಸಿದರು. ನಂತರ ಮಾತನಾಡಿದ ಕೆ.ಎ.ಯಾಕುಬ್ 2026ರ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮೈತ್ರಿಕೂಟವು 140 ಸ್ಥಾನಗಳಲ್ಲಿ 102 ಸ್ಥಾನಗಳನ್ನು ಗೆದ್ದು ಭರ್ಜರಿ ಜಯ ಸಾಧಿಸಿದೆ. ಇದು 1977ರ ನಂತರದ ಅತಿದೊಡ್ಡ ಜನಾದೇಶವಾಗಿದ್ದು, ಸುಮಾರು ಒಂದು ದಶಕದ LDF ಆಡಳಿತಕ್ಕೆ ತೆರೆ ಎಳೆದಿದೆ ಎಂದರು. ಈ ಐತಿಹಾಸಿಕ ವಿಜಯದಲ್ಲಿ ಕಾಂಗ್ರೆಸ್ 63 ಸ್ಥಾನಗಳನ್ನು ಮತ್ತು ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ 22 ಸ್ಥಾನಗಳನ್ನು ಗೆದ್ದು ಮೈತ್ರಿಕೂಟದ ಬಲಿಷ್ಠ ಏಕತೆ ಹಾಗೂ ಜನರ ವಿಶ್ವಾಸವನ್ನು ಮತ್ತೊಮ್ಮೆ ಸಾಬೀತುಪಡಿಸಿದೆ.…
ಮಡಿಕೇರಿ ಮೇ 19 NEWS DESK : 2025-26ನೇ ಸಾಲಿನ 10ನೇ ತರಗತಿ ಪರೀಕ್ಷೆಯಲ್ಲಿ ಶೇ.100ರಷ್ಟು ಫಲಿತಾಂಶ ಗಳಿಸಿದ ಜಿಲ್ಲೆಯ ಪ್ರೌಢ ಶಾಲೆಗಳಿಗೆ ಕನ್ನಡಸಿರಿ ಸ್ನೇಹ ಬಳಗದ ಕೊಡಗು ಜಿಲ್ಲಾ ಘಟಕದ ವತಿಯಿಂದ ಸಾಧನಸಿರಿ ಪ್ರಶಸ್ತಿ ಪ್ರದಾನ ಸಮಾರಂಭ ಮೇ 22 ರಂದು ಮಡಿಕೇರಿಯ ಗಾಂಧಿ ಭವನದಲ್ಲಿ ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕನ್ನಡಸಿರಿ ಸ್ನೇಹ ಬಳಗದ ಜಿಲ್ಲಾಧ್ಯಕ್ಷ ಲೋಕೇಶ್ ಸಾಗರ್ ಬಿ.ಎಸ್ ಅವರು ಬೆಳಿಗ್ಗೆ 10.30 ಗಂಟೆಗೆ ತಮ್ಮ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು. ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಶಿಕ್ಷಣ ಇಲಾಖೆಯ ನಿವೃತ್ತ ಉಪ ನಿರ್ದೇಶಕ ಪೆರಿಗ್ರಿನ್ ಎಸ್.ಮಚಾಡೊ ಅವರು ಅಭಿನಂದನಾ ನುಡಿಯಾಡಲಿದ್ದಾರೆ. ರೋಟರಿ ಸಂಸ್ಥೆ ಕುಶಾಲನಗರದ ಸಹಾಯಕ ರಾಜ್ಯಪಾಲ ಎಂ.ಡಿ.ರಂಗಸ್ವಾಮಿ ಅವರು ಪ್ರಾಸ್ತಾವಿಕ ನುಡಿಗಳಾಡಲಿದ್ದಾರೆ. ಅತಿಥಿಗಗಳಾಗಿ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಬಸವರಾಜ್,…
ಮಡಿಕೇರಿ NEWS DESK ಮೇ 19 : ದುಬಾರೆ ಸಾಕಾನೆ ಶಿಬಿರದಲ್ಲಿ ಸಾಕಾನೆ “ಕಂಜನ್” ನಿಂದ ದಾಳಿಗೊಳಗಾಗಿದ್ದ ಮಕ್ನಾ ಆನೆ ಮಾರ್ತಾಂಡ (34) ಚಿಕಿತ್ಸೆ ಫಲಿಸದೆ ಇಂದು ಮೃತಪಟ್ಟಿದೆ. ದುಬಾರೆ ಸಾಕಾನೆ ಶಿಬಿರ ವ್ಯಾಪ್ತಿಯ ನದಿಯಲ್ಲಿ ಸೋಮವಾರ “ಕಂಜನ್” ಏಕಾಏಕಿ ಮಾರ್ತಾಂಡನ ಮೇಲೆ ದಾಳಿ ಮಾಡಿತ್ತು. “ಕಂಜನ್” ನಿಂದ ತಿವಿತಕ್ಕೊಳಗಾಗಿ ತೀವ್ರವಾಗಿ ಘಾಸಿಗೊಂಡಿದ್ದ ಮಾರ್ತಾಂಡನಿಗೆ ದುಬಾರೆ ಸಾಕಾನೆ ಶಿಬಿರದ ವೈದ್ಯಾಧಿಕಾರಿ ಡಾ.ಮುಜೀಬ್ ಅವರು ಚಿಕಿತ್ಸೆ ನೀಡುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೆ ಮಾರ್ತಾಂಡ ಕೊನೆಯುಸಿರೆಳೆದಿದೆ. “ಕಂಜನ್” ಮಾರ್ತಾಂಡನ ಮೇಲೆ ದಾಳಿ ಮಾಡುವ ಸಂದರ್ಭ ಮಾವುತರು ಹಾಗೂ ಕಾವಡಿಗರು ನಿಯಂತ್ರಿಸುವ ಪ್ರಯತ್ನ ಮಾಡಿದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಮಾರ್ತಾಂಡ ಬಿದ್ದ ಪರಿಣಾಮ ಚೆನ್ನೈ ಮೂಲದ ಪಲ್ಲಾವರಂ ನ ನಿವಾಸಿ ಜುನೆಸ್ಸಿ (33) ಮೃತಪಟ್ಟಿದ್ದರು. ಮೃತ ಮಹಿಳೆಯ ಕುಟುಂಬಕ್ಕೆ ರೂ.20 ಲಕ್ಷ ಪರಿಹಾರ ನೀಡಲಾಗುವುದು ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ. ದುರ್ಘಟನೆಯ ಹಿನ್ನೆಲೆ ಪ್ರವಾಸಿತಾಣ ದುಬಾರೆಗೆ ಪ್ರವಾಸಿಗರ ಪ್ರವೇಶವನ್ನು ಎರಡು ದಿನಗಳ ಕಾಲ ನಿರ್ಬಂಧಿಸಲಾಗಿದೆ. ಅನಾಹುತಕ್ಕೆ ಕಾರಣನಾದ “ಕಂಜನ್” ನನ್ನು…
ಮಡಿಕೇರಿ ಮೇ 18 NEWS DESK : ಐಗೂರು ಸೊಸೈಟಿ ಹಾಲ್ ನಲ್ಲಿ ಅಭಿನಯ ನೃತ್ಯ ಕೇಂದ್ರದ ವಿದ್ಯಾರ್ಥಿಗಳ ಗೆಜ್ಜೆ ಪೂಜೆ ಕಾರ್ಯಕ್ರಮ ನಡೆಯಿತು. ನಾಟ್ಯ ದೇವತೆ ನಟರಾಜನ ಪೂಜೆ ಮಾಡಿದ ನಂತರ ನೃತ್ಯ ಗುರುಗಳಾದ ಭವ್ಯ ಸುಕನ್ ಅವರಿಂದ ವಿದ್ಯಾರ್ಥಿಗಳಿಗೆ ಗೆಜ್ಜೆ ಹಸ್ತಾಂತರಿಸಲಾಯಿತು. ಬಳಿಕ ವಿದ್ಯಾರ್ಥಿಗಳಿಂದ ನೃತ್ಯ ಪ್ರದರ್ಶನ ನೆರವೇರಿತು. ಮಕ್ಕಳ ಪೋಷಕರು, ಸ್ಥಳೀಯರು ಹಾಗು ಹಿರಿಯ ನೃತ್ಯ ಕಲಾವಿದರು ಈ ಸಂದರ್ಭದಲ್ಲಿ ಹಾಜರಿದ್ದರು. ಕೊಡಗಿನಾದ್ಯಂತ ನೃತ್ಯ ವಿದ್ಯಾರ್ಥಿಗಳನ್ನು ಹೊಂದಿರುವ ಅಭಿನಯ ನೃತ್ಯ ಶಾಲೆಯ ವಿದ್ಯಾರ್ಥಿಗಳು ರಾಜ್ಯ, ದೇಶ ಮಟ್ಟದಲ್ಲಿ ನೃತ್ಯದಲ್ಲಿ ಛಾಪು ಮೂಡಿಸಿದ್ದು, ಈಗ ಇನ್ನಷ್ಟು ಹೊಸ ವಿದ್ಯಾರ್ಥಿಗಳು ಗೆಜ್ಜೆ ಪೂಜೆಯ ಮೂಲಕ ನೃತ್ಯವೈಭವದ ಮುನ್ನುಡಿ ಬರೆಯಲು ಮೆಟ್ಟಿಲೇರಿದ್ದಾರೆ.
ಮಡಿಕೇರಿ ಮೇ 18 NEWS DESK : ವಿರಾಜಪೇಟೆ 66/33/11 ಕೆ.ವಿ.ವಿದ್ಯುತ್ ವಿತರಣಾ ಉಪ ಕೇಂದ್ರ ಮಗ್ಗುಲದಲ್ಲಿ ಮೇ, 19 ರಂದು ಬೆಳಗ್ಗೆ 10 ರಿಂದ 05 ಗಂಟೆಯವರೆಗೆ ತುರ್ತು ನಿರ್ವಹಣಾ ಕಾಮಗಾರಿ ನಡೆಸಬೇಕಿದ್ದು, ವಿರಾಜಪೇಟೆ, ಸಿದ್ದಾಪುರ ಮತ್ತು ಅಮ್ಮತ್ತಿ ಶಾಖಾ ವ್ಯಾಪ್ತಿಯಲ್ಲಿ ಬರುವ ವಿದ್ಯುತ್ ಮಾರ್ಗಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ವಿರಾಜಪೇಟೆ ಪಟ್ಟಣ, ಕಾಕೋಟುಪರಂಬು, ಕದನೂರು, ಕೆದಮುಳ್ಳೂರು, ಬಿಟ್ಟಂಗಾಲ, ಬಿ ಶೆಟ್ಟಿಗೇರಿ, ಆರ್ಜಿ, ಬೇಟೋಳಿ, ಸಿದ್ದಾಪುರ ಪಟ್ಟಣ, ಮಾಲ್ದಾರೆ, ಕರಡಿಗೋಡು, ಗುಹ್ಯ, ಅಮ್ಮತ್ತಿ, ಚೆಂಬೆಬೆಳ್ಳೂರು, ಹಾಲುಗುಂದ, ಕಣ್ಣಂಗಾಲ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಹಾಗೆಯೇ ಮಗ್ಗುಲ 66/33/11 ಕೆ.ವಿ.ವಿರಾಜಪೇಟೆ ವಿದ್ಯುತ್ ವಿತರಣಾ ಉಪ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕೈಗೆತ್ತಿಕೊಂಡಿರುವುದರಿಂದ 33ಕೆವಿ ಮೂರ್ನಾಡು ಮಾರ್ಗದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು 33/11 ಕೆವಿ ಮೂರ್ನಾಡು ವಿದ್ಯುತ್ ವಿತರಣಾ ಉಪ ಕೇಂದ್ರದಿಂದ ಹೊರಹೊಮ್ಮುವ ಪಾರಾಣೆ, ನಾಪೋಕ್ಲು, ಮೂರ್ನಾಡು, ಹೊದ್ದೂರು ಹಾಗೂ ಮರಗೋಡು ಫೀಡರ್‍ನಲ್ಲಿ ಮೇ, 19 ರಂದು ಬೆಳಗ್ಗೆ…
ಮಡಿಕೇರಿ ಮೇ 18 NEWS DESK : ನಾಕೂರು-ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೇರೂರು ಗ್ರಾಮದಲ್ಲಿ ನಿರಂತರವಾಗಿ ಮತಾಂತರ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಆದ್ದರಿಂದ ಮತಾಂತರ ಮಾಡುವವರ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಹೇರೂರು ಗ್ರಾಮಸ್ಥರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ. ನಾಕೂರು ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೇರೂರು ಗ್ರಾಮದಲ್ಲಿ ಮತಾಂತರ ಮಾಡಲು ತಮಿಳುನಾಡಿನಿಂದ ಬಂದು ಸರ್ಕಾರಿ ಜಾಗದಲ್ಲಿ ಪಂಚಾಯಿತಿ ಪರವಾನಿಗೆ ಇಲ್ಲದೆ ಅನಧಿಕೃತವಾಗಿ ಚರ್ಚ್ ನಿರ್ಮಾಣ ಮಾಡಲಾಗುತ್ತಿದೆ ಎಂದು ಆರೋಪಿಸಿದ ಗ್ರಾಮಸ್ಥರು, ಈ ಬಗ್ಗೆ ಪರಿಶೀಲಿಸಿ ಸಂಬಂಧಿಸಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸೋಮಶೇಖರ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಹೇರೂರು ಗ್ರಾಮದ ಸರ್ಕಾರಿ ಜಾಗದಲ್ಲಿ ಪಂಚಾಯಿತಿ ಪರವಾನಿಗೆ ಇಲ್ಲದೆ ಅನಧಿಕೃತವಾಗಿ ನಿರ್ಮಾಣ ಮಾಡಿರುವ ಚರ್ಚ್ ಅನ್ನು ತೆರವುಗೊಳಿಸಿ, ಹೊರರಾಜ್ಯದಿಂದ ಬಂದು ಇಲ್ಲಿಯವರೊಂದಿಗೆ ಸೇರಿಕೊಂಡು ಮತಾಂತರ ಮಾಡುವವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.…
ವಿರಾಜಪೇಟೆ ಮೇ 18 NEWS DESK : ಪ್ರತಿಭಾ ಪ್ರದರ್ಶನಕ್ಕೆ ಕ್ರೀಡಾಕೂಟಗಳು ವೇದಿಕೆಗಳಾಗಿವೆ ಎಂದು ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ಪ್ರಧಾನ ಗುರುಗಳು ಹಾಗೂ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕರಾದ ರೆ.ಫಾ.ಜೇಮ್ಸ್ ಡೊಮಿನಿಕ್ ಅಭಿಪ್ರಾಯಪಟ್ಟರು. ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ಮಹಿಳಾ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಪ್ರಪ್ರಥಮ ಬಾರಿಗೆ ಸಂತ ಅನ್ನಮ್ಮ ವಿದ್ಯಾಸಂಸ್ಥೆಯ ಮೈದಾನದಲ್ಲಿ ಕ್ರಿಶ್ಚಿಯನ್ ಕಪ್ ಸೀಸನ್ 1 ಪ್ರಯುಕ್ತ ಜಿಲ್ಲಾ ಮಟ್ಟದ ಮಹಿಳೆಯರ ಥ್ರೋ ಬಾಲ್ ಪಂದ್ಯಾವಳಿಗೆ ಶುಭಹಾರೈಸಿ ಅವರು, ಮಾತನಾಡಿದರು. ನಮ್ಮ ಧರ್ಮ ಕೇಂದ್ರದ ವತಿಯಿಂದ ಪ್ರಪ್ರಥಮ ಬಾರಿಗೆ ಮಹಿಳೆಯರ ಥ್ರೋ ಬಾಲ್ ಪಂದ್ಯಾವಳಿಯನ್ನು ಮಹಿಳೆಯರೇ ಆಯೋಜಿಸಿದ್ದು ಗಮನಾರ್ಹವಾಗಿದೆ. ಮಹಿಳೆಯರು ಕ್ರೀಡಾ ಕ್ಷೇತ್ರದಲ್ಲಿ ತಮ್ಮ ಪ್ರತಿಭೆಯನ್ನು ಹೊರ ಹೊಮ್ಮಿಸಲು ಇಂತಹ ಕ್ರೀಡಾಕೂಟಗಳ ಅಗತ್ಯವಿದೆ ಎಂದು ಹೇಳಿದರು. ಅಮ್ಮತ್ತಿಯ ಸಂತ ಅಂತೋಣಿ ಚರ್ಚ್ ನ ಗುರುಗಳು ಹಾಗೂ ಸಂತ ಅನ್ನಮ್ಮ ಪಿಯು ಕಾಲೇಜಿನ ಪ್ರಾಂಶುಪಾಲ ರೆ.ಫಾ.ಮದಲೈ ಮುತ್ತು ಅವರು ಮಾತನಾಡಿ, ಇಂದು ಸಮಾಜದಲ್ಲಿ ಅನೇಕ ಕ್ಲಬ್ ಗಳನ್ನು ಕಾಣುತ್ತಿದ್ದೇವೆ.…
ಸೋಮವಾರಪೇಟೆ ಮೇ 18 NEWS DESK : ಮಕ್ಕಳಗುಡಿ ಬೆಟ್ಟ ಸಂರಕ್ಷಣಾ ಮತ್ತು ಅಭಿವೃದ್ಧಿ ಸಮಿತಿ ಸಭೆ ತಾಲ್ಲೂಕಿನ ಕಿರಗಂದೂರು ಗ್ರಾಮದ ಮಕ್ಕಳಗುಡಿ ಬೆಟ್ಟದಲ್ಲಿ ಸಮಿತಿ ಅಧ್ಯಕ್ಷ ಸುರೇಶ್ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಪಾಲ್ಗೊಂಡಿದ್ದ ಶಾಸಕ ಡಾ.ಮಂತರ್ ಗೌಡ ಮಾತನಾಡಿ, ಪ್ರವಾಸಿ ತಾಣ ಮಕ್ಕಳಗುಡಿ ಬೆಟ್ಟದಲ್ಲಿ ಕೆಲವೊಂದು ಅಭಿವೃದ್ಧಿ ಕೆಲಸಗಳಾಗಿವೆ. ಇನ್ನೂ ಹೆಚ್ಚಿನ ಅಭಿವೃದ್ಧಿ ಕಾಣಬೇಕು. ಮುಂದಿನ ದಿನಗಳಲ್ಲಿ ಮಕ್ಕಳಿಗೆ ಉದ್ಯಾನ ಸೇರಿದಂತೆ ಅಭಿವೃದ್ಧಿ ಕೆಲಸಗಳಿಗೆ ಒತ್ತು ನೀಡಲಾಗುವುದು. ಸಮಿತಿ ಸದಸ್ಯರು ಸಭೆ ಸೇರಿ ಅಭಿವೃದ್ಧಿ ಬಗ್ಗೆ ಸೂಕ್ತ ಯೋಜನೆಗಳನ್ನು ರೂಪಿಸಬೇಕಿದೆ ಎಂದು ಹೇಳಿದರು. ಮಕ್ಕಳ ಗುಡಿ ಬೆಟ್ಟದ ಪ್ರದೇಶವನ್ನು ಸರ್ವೆ ಮಾಡಿಸಿ, ಮಕ್ಕಳಗುಡಿ ಬೆಟ್ಟದ ಗಡಿ ಗುರುತಿಸುವ ಕೆಲಸ ಮಾಡಿಸಿಕೊಡಲು ಜಿಲ್ಲಾಧಿಕಾರಿಗಳಿಗೆ ತಿಳಿಸಲಾಗುವುದು. ಮಕ್ಕಳ ಗುಡಿ ಬೆಟ್ಟದ ಸುತ್ತಲೂ ಸಾಕಷ್ಟು ತ್ಯಾಜ್ಯ ಕಂಡುಬರುತ್ತಿದ್ದು, ಒಂದು ವಾರದಲ್ಲಿ ಸ್ವಚ್ಛ ಮಾಡಿಸುವಂತೆ ಕಿರಗಂದೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವೇಣುಗೋಪಾಲ್ ಅವರಿಗೆ ಸೂಚಿಸಿದರು. ತ್ಯಾಜ್ಯ ಸಂಗ್ರಹಿಸಲು ಅಲ್ಲಲ್ಲಿ ತೊಟ್ಟಿಗಳು, ಆಯ್ದ ಸ್ಥಳಗಳಲ್ಲಿ ಸಿಸಿ…
ಮಡಿಕೇರಿ ಮೇ 18 NEWS DESK : ವಿರಾಜಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ 2025 ನೇ ಸಾಲಿನ ವಾರ್ಷಿಕ ಪ್ರಶಸ್ತಿಯನ್ನು ಪ್ರಕಟಿಸಲಾಗಿದ್ದು, ಆರು ಪತ್ರಕರ್ತರು ಪ್ರಶಸ್ತಿಗೆ ಭಾಜನರಾಗಿದ್ದಾರೆ. ವಿರಾಜಪೇಟೆ ಕ್ಷೇತ್ರದ ಶಾಸಕರಾದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್. ಪೊನ್ನಣ್ಣ ಅವರು ತಮ್ಮ ತಂದೆ ಎ.ಕೆ. ಸುಬ್ಬಯ್ಯ ಹಾಗೂ ತಾಯಿ ಎ.ಎಸ್. ಪೊನ್ನಮ್ಮ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಅತ್ಯುತ್ತಮ ಕ್ರೀಡಾ ವರದಿ ಪ್ರಶಸ್ತಿಗೆ ಶಕ್ತಿ ಪತ್ರಿಕೆಯಲ್ಲಿ ಪ್ರಕಟವಾದ “ರಾಷ್ಟ್ರಮಟ್ಟದ ಫುಟ್ಬಾಲ್ ತೀರ್ಪುಗಾರ ಧೀರಜ್ ರೈ ಶ್ರೀನಿವಾಸ್’ ವರದಿಗೆ ಕೆ.ಎಂ. ಇಸ್ಮಾಯಿಲ್ ಕಂಡಕ್ಕರೆ ಪಡೆದುಕೊಂಡಿದ್ದಾರೆ. ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿದ್ದ ಬಿ.ಆರ್. ಸವಿತಾ ರೈ ಅವರು ತಮ್ಮ ತಂದೆ ಕೃಷಿಕರಾಗಿದ್ದ ಬಿ.ಎಸ್. ರಂಗನಾಥ ರೈ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಅತ್ಯುತ್ತಮ ಕೃಷಿ ವರದಿ ಪ್ರಶಸ್ತಿಗೆ ಇಬ್ಬರು ವರದಿಗಾರರು ಜಂಟಿಯಾಗಿ ಆಯ್ಕೆಯಾಗಿದ್ದಾರೆ. ವಿಜಯವಾಣಿ ಪತ್ರಿಕೆಯಲ್ಲಿ ಪ್ರಕಟವಾದ “ಸಮಗ್ರ ಕೃಷಿಯಲ್ಲಿ ಯಶ ಕಂಡ ರೈತ” ವರದಿಗೆ ಪಿ.ವಿ. ಅಂತೋಣಿ ಹಾಗೂ ಟಿ.ವಿ.1 ವಾಹಿನಿಯಲ್ಲಿ…






