ಮಡಿಕೇರಿ ಡಿ.23 NEWS DESK : ಕರ್ನಾಟಕ ಸರ್ಕಾರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನ ಆರೋಗ್ಯ ಸಂಸ್ಥೆ, ಎಪಿಡಿಮಿಯಾಲಾಜಿ ವಿಭಾಗ, ನಿಮ್ಹಾನ್ಸ್, ಬೆಂಗಳೂರು ಇವರ ಸಹಯೋಗದಲ್ಲಿ ಅನುಷ್ಠಾನಗೊಳ್ಳುತ್ತಿರುವ ಹಾಗೂ ರಾಜ್ಯ ಸರ್ಕಾರದ ಅನುದಾನಿತ ಯೋಜನೆಯಾದ “ಯುವ ಸ್ಪಂದನ”ಯೋಜನೆ-ಯುವಜನರ ಮಾನಸಿಕ ಆರೋಗ್ಯಕ್ಕೆ ಪೂರಕ ಸೇವೆಗಳನ್ನು ಒದಗಿಸಲು ಹಾಗೂ ಸಮಗ್ರ ಅಭಿವೃದ್ಧಿ ಮತ್ತು ಅನುಷ್ಠಾನದಡಿಯಲ್ಲಿ ಕಚೇರಿ ಕೆಲಸಕ್ಕೆ ಯುವ ಸಮಾಲೋಚಕರು ಹಾಗೂ ಯುವ ಪರಿವರ್ತಕರಾಗಿ ಕಾರ್ಯನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆದ್ದರಿಂದ 21 ರಿಂದ 35ವರ್ಷದೊಳಗಿನ ಪದವಿ ಹಾಗೂ ಮೇಲ್ಪಟ್ಟು ವಿದ್ಯಾಭ್ಯಾಸ ಮಾಡಿರುವ, ಕನ್ನಡವನ್ನು ಬರೆಯುವ ಹಾಗೂ ಸ್ಪಷ್ಟವಾಗಿ ಮಾತನಾಡುವ, ಸಮುದಾಯದಲ್ಲಿ ಕೆಲಸ ಮಾಡಲು ಆಸಕ್ತಿ ಹಾಗೂ ಹುಮ್ಮಸ್ಸು, ಉತ್ತಮ ಅಂರ್ತವ್ಯಕ್ತಿತ್ವ, ಸಂವಹನ ಕೌಶಲ್ಯದ ಜೊತೆಗೆ ಸಂವಾದ ಕೌಶಲ್ಯವನ್ನು ಹೊಂದಿರುವ, ಕೊಡಗು ಜಿಲ್ಲೆಯಲ್ಲಿ ಪ್ರಯಾಣಿಸುವಂತಹ, ಸೇವಾ ಮನೋಭಾವ ಹೊಂದಿರುವ ಅಭ್ಯರ್ಥಿಗಳು ತಮ್ಮ ಸ್ವ ವಿವರಗಳು ಮತ್ತು ಅಂಕಪಟ್ಟಿಗಳೊಂದಿಗೆ ಜನವರಿ, 08 ರಂದು ನೇರ ಸಂದರ್ಶನಕ್ಕೆ ಯುವ ಸಬಲೀಕರಣ ಮತ್ತು ಕ್ರೀಡಾ…
ಲೇಖಕ: admin
ಮಡಿಕೇರಿ ಡಿ.23 NEWS DESK : ತಿತಿಮತಿ ಸಮೀಪದ ಭದ್ರಗೋಳದಲ್ಲಿ ಅಪಘಾತದಲ್ಲಿ ಸಾವನ್ನಪ್ಪಿದ ಹರೀಶ್ ಮತ್ತು ಸನತ್ ಅವರ ಮನೆಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಕುಟುಂಬಕ್ಕೆ ಆಧಾರವಾಗಿದ್ದ ಹರೀಶ್ ಮತ್ತು ಸನತ್ ಸಾವನ್ನಪ್ಪಿದ ವಿಚಾರ ತಿಳಿದ ಶಾಸಕರು, ಕುಟುಂಬಸ್ಥರಿಗೆ ರೂ 25,000 ನಗದು ನೀಡಿ ವಾಹನದ ಮಾಲೀಕ ಮತ್ತು ಚಾಲಕನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಇದೇ ಸಂದರ್ಭದಲ್ಲಿ ಮೃತ ಹರೀಶ್ ಅವರ ಪತ್ನಿ ಜೀವಿತ ಅವರಿಗೆ ಉದ್ಯೋಗ ನೀಡುವಂತೆ ಕುಟುಂಬಸ್ಥರು ಮನವಿ ಮಾಡಿದರು. ಈ ಸಂದರ್ಭ ಮೃತ ಸನತ್ ಮತ್ತು ಹರೀಶ್ ಅವರ ತಂದೆ ನಾರಾಯಣ್, ತಾಯಿ ಶಾರದ, ಹರೀಶ್ ಪತ್ನಿ ಜೀವಿತ ಸೇರಿದಂತೆ ಕುಟುಂಬಸ್ಥರಿದ್ದರು.
ಮಡಿಕೇರಿ, ಡಿ.23 NEWS DESK : ಗ್ರಾಮೀಣ ಜನಪದ ಕ್ರೀಡೆಗಳು, ಹಳ್ಳಿಯ ಸೊಗಡು ಕಲೆ, ಸಂಸ್ಕೃತಿ ಹಾಗೂ ಪರಂಪರೆಯನ್ನು ಜೀವಂತವಾಗಿ ಉಳಿಸಿ ಬೆಳಸುವ ಜತೆಗೆ ಮುಂದಿನ ತಲೆಮಾರಿಗೂ ತಿಳಿಸಿಕೊಡಬೇಕಾಗಿದೆ ಎಂದು ಜಿಲ್ಲಾ ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ( ಗ್ರೇಡ್ – 1 ) ದ ಅಧ್ಯಕ್ಷರೂ ಆದ ಜನಪದ ಕ್ರೀಡೆಯ ಸಂಪನ್ಮೂಲ ವ್ಯಕ್ತಿ ಡಾ ಸದಾಶಿವಯ್ಯ ಎಸ್.ಪಲ್ಲೇದ್ ಹೇಳಿದರು. ಕೊಡಗು ಜಿಲ್ಲಾಮಟ್ಟದ ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳ ಮೇಳ( ಖಚಿಟಟಥಿ ) ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕೊಡಗು ಜಿಲ್ಲಾ ಸಂಸ್ಥೆ, ಕುಶಾಲನಗರ ಸ್ಥಳೀಯ ಸಂಸ್ಥೆ ವತಿಯಿಂದ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಕುಶಾಲನಗರ ಪಟ್ಟಣದ ಪಿ.ಎಂ.ಶ್ರೀ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಿದ್ದ ಜಿಲ್ಲಾಮಟ್ಟದ ಸ್ಕೌಟ್ಸ್, ಗೈಡ್ಸ್ ಮಕ್ಕಳ ಮೇಳ (ರ‍್ಯಾಲಿ)ದ ಅಂಗವಾಗಿ ಏರ್ಪಡಿಸಲಾಗಿದ್ದ ಗ್ರಾಮೀಣ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. ಗ್ರಾಮೀಣ ಕ್ರೀಡೆಗಳಲ್ಲಿ ಪ್ರತಿ ಆಟದಲ್ಲಿ ಮಾನವೀಯ ಮೌಲ್ಯವಿದೆ. ಇದರಿಂದ ಮಕ್ಕಳಲ್ಲಿ ಸಾಮಾಜಿಕ ಬೆಳೆಸಲು ಸಹಕಾರಿಯಾಗಿವೆ.…
ಮಡಿಕೇರಿ ಡಿ.23 NEWS DESK : ದುಶ್ಚಟ ದೂರ ಮಾಡಲು ಕ್ರೀಡೆ ಸಾಧನ ಎಂದು ಮಡಿಕೇರಿ ಉಪವಿಭಾಗ ಪೊಲೀಸ್ ಅಧೀಕ್ಷಕ ಮಹೇಶ್ ಕುಮಾರ್ ಹೇಳಿದರು. 5ನೇ ಆವೃತ್ತಿಯ ಇಬ್ನಿವಳವಾಡಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಗೆ ನಗರದ ಜ. ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಚಾಲನೆ ನೀಡಿ ಮಾತನಾಡಿದರು. ಕ್ರೀಡೆ ಮಾನಸಿಕ ಹಾಗೂ ದೈಹಿಕ ಆರೋಗ್ಯ ಕಾಪಾಡಲು ಪೂರಕವಾಗಿದೆ. ಇತ್ತೀಚಿನ ದಿನಗಳಲ್ಲಿ ಯುವಜನತೆ ತಪ್ಪು ದಾರಿ ಹಿಡಿಯುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ದುಶ್ಚಟಗಳಿಂದ ವೈಯಕ್ತಿಕ ಆರೋಗ್ಯದೊಂದಿಗೆ ಸಮಾಜದ ಸ್ವಾಸ್ಥ್ಯವೂ ಹದಗೆಡುತ್ತದೆ. ಕ್ರೀಡಾ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವುದರಿಂದ ದುಶ್ಚಟದಿಂದ ದೂರ ಉಳಿಯಲು ಸಾಧ್ಯ ಎಂದು ಪ್ರತಿಪಾದಿಸಿದರು. ಕ್ರೀಡಾಪಟುಗಳಲ್ಲಿ ಕ್ರೀಡಾ ಸ್ಫೂರ್ತಿ ಇರಬೇಕು. ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕಿ ಎಂದು ಹೇಳಿದರು. ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಬೊಳ್ಳಜಿರ ಅಯ್ಯಪ್ಪ ಮಾತನಾಡಿ, ಕೊಡಗು ಕ್ರೀಡೆ ಹಾಗೂ ಸೈನ್ಯ ಕ್ಷೇತ್ರಕ್ಕೆ ಹೆಸರುವಾಸಿಯಾಗಿದೆ. ಆದರೆ, ರಾಷ್ಟ್ರೀಯ ತಂಡಗಳಿಗೆ ಕೊಡಗಿನಿಂದ ಆಯ್ಕೆಯಾಗುವರ ಸಂಖ್ಯೆ ಕ್ಷೀಣಿಸುತ್ತಿರುವುದು ವಿಷಾದನೀಯ. ಸಾಧನೆ ಮಾಡುವ ನಿಟ್ಟಿನಲ್ಲಿ ಜಿಲ್ಲೆಯ ಕ್ರೀಡಾಪಟುಗಳು ಸಾಗಬೇಕು ಎಂದು…
ಮಡಿಕೇರಿ NEWS DESK ಡಿ.22 : ತಾಲ್ಲೂಕು ಕೇಂದ್ರವಾದ ಕುಶಾಲನಗರ ಪಟ್ಟಣದ ಪಿ.ಎಂ.ಶ್ರೀ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಭಾರತೀಯ ಸ್ಕೌಟ್ಸ್, ಗೈಡ್ಸ್ ಕೊಡಗು ಜಿಲ್ಲಾ ಸಂಸ್ಥೆ, ಕುಶಾಲನಗರ ಸ್ಥಳೀಯ ಸಂಸ್ಥೆಯ ವತಿಯಿಂದ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಎರಡು ದಿನಗಳ ಕಾಲ ಏರ್ಪಡಿಸಿದ್ದ ಜಿಲ್ಲಾಮಟ್ಟದ ಸ್ಕೌಟ್ಸ್, ಗೈಡ್ಸ್ ಮಕ್ಕಳ ಮೇಳ( Rally ) : 2024 ದ ಅಂಗವಾಗಿ ಭಾನುವಾರ ( ಡಿ.22 ರಂದು ) ಸರ್ವಧರ್ಮ ಪ್ರಾರ್ಥನೆ ನೆರವೇರಿಸಲಾಯಿತು. ಸರ್ವಧರ್ಮ ಪ್ರಾರ್ಥನೆಗೆ ಚಾಲನೆ ನೀಡಿದ ಸ್ಕೌಟ್ಸ್, ಗೈಡ್ಸ್ ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ.ಬೇಬಿಮ್ಯಾಥ್ಯೂ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಸರ್ವಧರ್ಮಗಳ ಬಗ್ಗೆ ಹೆಚ್ಚಿನ ಜ್ಞಾನ ಬೆಳೆಸುವ ಮೂಲಕ ಅವರಲ್ಲಿ ಪರಸ್ಪರ ಪ್ರೀತಿ- ವಿಶ್ವಾಸ ಹಾಗೂ ಸೌಹಾರ್ದತೆ ಬೆಳೆಸಲು ಸಹಕಾರಿಯಾಗಿದೆ ಎಂದರು. *ರಾಷ್ಟ್ರಧ್ವಜ , ರಾಷ್ಟ್ರಗೀತೆ ಬಗ್ಗೆ ಮಾಹಿತಿ*: ಮಕ್ಕಳ ರ್‍ಯಾಲಿಯಲ್ಲಿ ಜಿಲ್ಲಾ ಸ್ಕೌಟ್ಸ್ ಆಯುಕ್ತ ಜಿಮ್ಮಿ ಸಿಕ್ವೇರಾ, ಮಕ್ಕಳಿಗೆ ರಾಷ್ಟ್ರಧ್ವಜ ಮತ್ತು ರಾಷ್ಟ್ರಗೀತೆಯ ಇತಿಹಾಸ ಮತ್ತು ಮಹತ್ವದ ಬಗ್ಗೆ ಮಾಹಿತಿ ನೀಡಿದರು. ವಿದ್ಯಾರ್ಥಿಗಳು…
ಮಡಿಕೇರಿ NEWS DESK ಡಿ.22 : ಕೊಡಗು ವಿದ್ಯಾಲಯದಲ್ಲಿ ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿಗೆ . ರಾಷ್ಟ್ರಮಟ್ಟದ ಹಾಕಿ ಆಟಗಾರ ಹಾಗೂ ರಾಜ್ಯಮಟ್ಟದ ಟೇಬಲ್ ಟೆನ್ನಿಸ್ ಆಟಗಾರ ಮಂಜುನಾಥ್ ಪಿ. ಎಲ್ ಚಾಲನೆ ನೀಡಿದರು. ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿದ ಮಂಜುನಾಥ್, ಯಾವುದೇ ಕ್ರೀಡೆಯಲ್ಲಿ ಮಕ್ಕಳಿಗೆ ಶಿಸ್ತು ಬಹಳ ಮುಖ್ಯ, ಹಾಗೆಯೇ ಪ್ರತಿ ಆಟದಲ್ಲೂ ಸೋಲು ಗೆಲುವು ಎಂಬುದು ಇದ್ದೇ ಇರುತ್ತದೆ, ಆದರೆ ಸೋಲನ್ನು ಒಪ್ಪಿಕೊಳ್ಳುವ ಮನೋಭಾವ ಮಕ್ಕಳಲ್ಲಿ ಇರಬೇಕು ಎಂದು ಕಿವಿ ಮಾತು ಹೇಳಿದರು. ಈ ಪಂದ್ಯಾವಳಿಯಲ್ಲಿ ಕೊಡಗಿನ ವಿವಿಧ ಶಾಲೆಗಳ 210 ಸ್ಪರ್ಧಿಗಳು ಪಾಲ್ಗೊಂಡಿದ್ದರು. ಶಾಲೆಯ ಪ್ರಾಂಶುಪಾಲರಾದ ಸುಮಿತ್ರ ಕೆ.ಎಸ್ ಆಡಳಿತ ನಿರ್ವಹಣಾಧಿಕಾರಿ ರವಿ ಪಿ ಟೇಬಲ್ ಟೆನ್ನಿಸ್ ತರಬೇತುದಾರ ರಚನ್ ಪೊನ್ನಪ್ಪ ಹಾಗೂ ಪಂದ್ಯಾವಳಿ ಸಂಚಾಲಕ ದಿನೇಶ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಗುಂಡ್ಲುಪೇಟೆ NEWS DESK ಡಿ.22 : ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ಅಭಯಾರಣ್ಯದ ಕುಂದುಕೆರೆ ವಲಯದ ಯಲಚೆಟ್ಟಿ ಶಾಖೆಯ ಕುಂದುಕೆರೆ ಗಸ್ತಿನ ಸಿದ್ದರಾಮನಕಟ್ಟೆ ಹಳ್ಳದ ಅರಣ್ಯ ಪ್ರದೇಶದಲ್ಲಿ ಸುಮಾರು 30-35 ವರ್ಷದ ಗಂಡಾನೆಯೊಂದರ ಕಳೇಬರ ಪತ್ತೆಯಾಗಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಾಡಾನೆಯ ದೇಹದಲ್ಲಿ ಗಾಯದ ಗುರುತುಗಳು ಕಂಡುಬಂದಿದೆ. ಆನೆಗಳ ಕಾದಾಟದಿಂದ ಗಾಯಗೊಂಡು ಸ್ವಾಭಾವಿಕವಾಗಿ ಮೃತಪಟ್ಟಿದೆ ಎಂದು ಪಶು ವೈದ್ಯಾಧಿಕಾರಿ ಡಾ.ಮಿರ್ಜಾ ವಾಸೀಂ ತಿಳಿಸಿದ್ದಾರೆ. ಆನೆಯ 2 ದಂತಗಳನ್ನು ಅರಣ್ಯ ಇಲಾಖೆ ವಶಪಡಿಸಿಕೊಂಡಿದೆ.
ನವದೆಹಲಿ NEWS DESK ಡಿ.22 : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 20ನೇ ಅಂತರರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕುವೈತ್ ನ ಅತ್ಯುನ್ನತ ಗೌರವವಾದ “ದಿ ಆರ್ಡರ್ ಆಫ್ ಮುಬಾರಕ್ ಅಲ್ ಕಬೀರ್” ಪ್ರಶಸ್ತಿಯನ್ನು ಮೋದಿ ಸ್ವೀಕರಿಸಿದ್ದಾರೆ. ಕುವೈತ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕುವೈತ್ ನ ರಾಜ ಶೇಕ್ ಮಿಶಾಲ್ ಅಲ್ ಅಹಮದ್ ಅಲ್ ಜಾಬೆರ್ ಸಬಾ ಅವರು ಪ್ರಧಾನಿ ಮೋದಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು. ವಿದೇಶಿ ಗಣ್ಯರು ಮತ್ತು ರಾಜಮನೆತದ ಸದಸ್ಯರಿಗೆ ಸ್ನೇಹದ ಸಂಕೇತವಾಗಿ ಈ ಪ್ರಶಸ್ತಿ ನೀಡಿ ಸನ್ಮಾನಿಸಲಾಗುತ್ತದೆ ಎಂದು ಕುವೈತ್ ಅಧಿಕಾರಿಗಳು ತಿಳಿಸಿದ್ದಾರೆ. ಎರಡು ದಿನಗಳ ಭೇಟಿಗಾಗಿ ಶನಿವಾರ ಕುವೈತ್ ಗೆ ತೆರಳಿದ ಪ್ರಧಾನಿ ಮೋದಿ ಅವರು ಭಾನುವಾರ ಕುವೈತ್ ರಾಜ ಶೇಕ್ ಮಿಶಾಲ್ ಅಲ್ ಅಹಮದ್ ಅಲ್ ಜಾಬೆರ್ ಅಲ್ ಸಾಬಾ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದರು.
ನವದೆಹಲಿ NEWS DESK ಡಿ.22 : ಭಾರತೀಯರ ಶ್ರದ್ಧಾಭಕ್ತಿಯ ಮಹಾಕಾವ್ಯಗಳಾದ ರಾಮಾಯಣ ಮತ್ತು ಮಹಾಭಾರತ ಅರೇಬಿಕ್ ಭಾಷೆಗೆ ಅನುವಾದವಾಗಿದೆ. ಕುವೈತ್ ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಹಾಭಾರತ ಮತ್ತು ರಾಮಾಯಣವನ್ನು ಅರೇಬಿಕ್ ಭಾಷೆಗೆ ಅನುವಾದಿಸಿ ಪ್ರಕಟಿಸಿದ ಇಬ್ಬರು ಲೇಖಕರನ್ನು ಭೇಟಿ ಮಾಡಿದ್ದು, ಈ ಫೋಟೋ ಭಾರೀ ವೈರಲ್ ಆಗಿದೆ. ಎರಡು ದಿನಗಳ ಕಾಲ ಕುವೈತ್ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಅವರು ಲೇಖಕರನ್ನು ಭೇಟಿ ಮಾಡಿ ಎರಡು ಮಹಾಕಾವ್ಯಗಳ ಅರೇಬಿಕ್ ಆವೃತ್ತಿಗಳಿಗೆ ಸಹಿ ಹಾಕಿದರು. “ರಾಮಾಯಣ ಮತ್ತು ಮಹಾಭಾರತದ ಅರೇಬಿಕ್ ಭಾಷಾಂತರಗಳನ್ನು ನೋಡಲು ನನಗೆ ಸಂತೋಷವಾಗುತ್ತಿದೆ. ನಾನು ಅಬ್ದುಲ್ಲಾ ಅಲ್-ಬರೂನ್ ಮತ್ತು ಅಬ್ದುಲ್ ಲತೀಫ್ ಅಲ್-ನೆಸೆಫ್ ಅವರ ಅನುವಾದ ಮತ್ತು ಪ್ರಕಟಣೆಯಲ್ಲಿ ಅವರ ಪ್ರಯತ್ನಗಳಿಗಾಗಿ ಅಭಿನಂದಿಸುತ್ತೇನೆ. ಅವರ ಈ ಕ್ರಮವು ಜಾಗತಿಕವಾಗಿ ಭಾರತೀಯ ಸಂಸ್ಕೃತಿಯ ಜನಪ್ರಿಯತೆಯನ್ನು ಎತ್ತಿ ತೋರಿಸುತ್ತದೆ ಎಂದು ಪ್ರಧಾನಿ ಮೋದಿ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಸುಮಾರು 43 ವರ್ಷಗಳ ನಂತರ ಗಲ್ಫ್ ರಾಷ್ಟ್ರಕ್ಕೆ ಭಾರತದ ಪ್ರಧಾನಿಯೊಬ್ಬರು…
ಮಡಿಕೇರಿ NEWS DESK ಡಿ.22 : ಕ್ರೀಡೆ ಸೇರಿದಂತೆ ಯಾವುದೇ ಕ್ಷೇತ್ರದಲ್ಲಿ ಖ್ಯಾತಿ ಗಳಿಸಿದ ಸಾಧಕರ ಸಾಧನೆ ಪುಸ್ತಕದ ರೂಪದಲ್ಲಿ ದಾಖಲೀಕರಣಗೊಂಡರೆ ಮುಂದಿನ ಯುವ ಪೀಳಿಗೆಗೆ ಅದು ಸ್ಫೂರ್ತಿಯಾಗಿ ಉಳಿದುಕೊಳ್ಳಲಿದೆ ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶ ಚೆಪ್ಪುಡೀರ ಎಂ.ಪೂಣಚ್ಚ ಅಭಿಪ್ರಾಯಪಟ್ಟಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ನಡೆದ ಕೊಡವ ಮಕ್ಕಡ ಕೂಟದ 105ನೇ ಪುಸ್ತಕ, ಹಾಕಿ ಆಟಗಾರ, ಬರಹಗಾರ ಚೆಪ್ಪುಡೀರ ಎ.ಕಾರ್ಯಪ್ಪ ಅವರು ರಚಿಸಿರುವ “ಕೊಡಗಿನ ಕ್ರೀಡಾಪಟುಗಳ ಜೀವನ ಚರಿತ್ರೆ” ಬಿಡುಗಡೆ ಸಮಾರಂಭದವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪತ್ರಿಕೆಗಳಲ್ಲಿ ಸಾಧಕರ ಸಾಧನೆ ಪ್ರಕಟಗೊಂಡರೆ ಇಂದು ಓದಿ ನಾಳೆ ಮರೆಯುತ್ತೇವೆ. ಆದರೆ ಪುಸ್ತಕದ ರೂಪದಲ್ಲಿ ಹೊರ ಬಂದರೆ ದಾಖಲೆಯ ರೂಪದಲ್ಲಿ ಸಾಧಕರ ನೆನಪು ಸದಾ ಇರುವುದಲ್ಲದೆ ಯುವ ಸಮೂಹದಲ್ಲಿ ಹೊಸ ಸ್ಫೂರ್ತಿಯನ್ನು ತುಂಬುತ್ತದೆ. ಕ್ರೀಡಾ ಜಿಲ್ಲೆ ಕೊಡಗು ಈಗ ಕೇವಲ ಕ್ರೀಡೆಗೆ ಮಾತ್ರ ಸೀಮಿತವಾಗಿಲ್ಲ, ಎಲ್ಲಾ ಕ್ಷೇತ್ರಗಳಲ್ಲು ಕೊಡಗಿನ ಸಾಧಕರು ಗುರುತಿಸಿಕೊಳ್ಳುತ್ತಿದ್ದಾರೆ. ಶಿಸ್ತಿಗೆ ಹೆಸರಾದ ಕೊಡಗಿನಿಂದ ಅನೇಕ ಕ್ರೀಡಾಪಟುಗಳು ರಾಜ್ಯ, ರಾಷ್ಟç ಮತ್ತು…






