ನಾಪೋಕ್ಲು ಡಿ.21 NEWS DESK : ಯಾವುದೇ ಭಾಷೆ ಮತ್ತು ಸಂಸ್ಕೃತಿ ಉಳಿಯಬೇಕಾದರೆ ಮಡಿವಂತಿಕೆ ಬಿಟ್ಟು ಸರ್ವರೊಳಗೆ ಒಂದಾಗಿ ಬೆರೆಯಬೇಕು ಎಂದು ಉಪನ್ಯಾಸಕ ಹಾಗೂ ಮೈಸೂರು ಗೌಡ ಸಮಾಜದ ನಿರ್ದೇಶಕ ಪಟ್ಟಡ ಶಿವಕುಮಾರ್ ಅಭಿಪ್ರಾಯಪಟ್ಟರು. ಮೈಸೂರಿನ ಕೊಡಗು ಗೌಡ ಸಮಾಜದಲ್ಲಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಆಕಾಡೆಮಿ ಹಾಗೂ ಮೈಸೂರಿನ ವಿವಿಧ ಗೌಡ ಸಂಘಟನೆಗಳ ಆಶ್ರಯದಲ್ಲಿ ನಡೆದ ಅರೆಭಾಷೆ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಸಭೆ ಸಮಾರಂಭ ಅಲ್ಲದೆ ಇತರರೊಂದಿಗೆ ತಮ್ಮ ಭಾಷೆಯಲ್ಲೇ ವ್ಯವಹರಿಸಿದರೆ ಭಾಷೆ ಮತ್ತು ಸಂಸ್ಕೃತಿ ಉಳಿಯುತ್ತದೆ. ಮಡಿವಂತಿಕೆ ತೋರಿದ ಯಾವುದೇ ಸಂಸ್ಕೃತಿಯಾಗಲಿ, ಭಾಷೆಯಾಗಲಿ, ಜನಾಂಗವಾಗಲಿ ಜಗತ್ತಿನಲ್ಲಿ ಉಳಿಯಲು ಸಾಧ್ಯವಾಗಿಲ್ಲ, ಇಡೀ ಜಗತ್ತನ್ನು ಒಂದು ಕಾಲದಲ್ಲಿ ಆಳಿದ ಇಂಗ್ಲೀಷರು ತಮ್ಮ ಭಾಷೆಯನ್ನು ಜಗತ್ತಿನಲ್ಲಿ ಹಂಚಿದ ಪರಿಣಾಮ ಅವರು ಹೋದ ಮೇಲೂ ಅವರ ಭಾಷೆ ಎಲ್ಲರನ್ನೂ ಆಳುತ್ತಿದೆ, ಆದುದರಿಂದ ಭಾಷೆ ಯಾವುದೇ ಜನಾಂಗಕ್ಕೆ ಸೀಮಿತವಾಗದೆ ಎಲ್ಲರೊಳಗೊಂದಾಗಬೇಕು ಎಂದು ಕಿವಿಮಾತು ಹೇಳಿದರು. ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ಭಾಷಣ ಮಾಡಿದ…
ಲೇಖಕ: admin
ನಾಪೋಕ್ಲು ಡಿ.21 NEWS DESK : ಬೇತು ಗ್ರಾಮದ ಶ್ರೀ ಮಕ್ಕಿ ಶಾಸ್ತಾವು ವಾರ್ಷಿಕ ಉತ್ಸವವು ಎರಡು ಪ್ರಮುಖ ಕೋಲಗಳೊಂದಿಗೆ ಶ್ರದ್ಧಾಭಕ್ತಿಯಿಂದ ನಡೆಯಿತು. ಶ್ರೀ ಮಕ್ಕಿ ಶಾಸ್ತಾವು ಸನ್ನಿಧಿಯಲ್ಲಿ ಮುಂಜಾನೆಯಿಂದಲೇ ವಿವಿಧ ಕೋಲಗಳು, ಶಾಸ್ತಾವು ದೇವರಿಗೆ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ನೆರವೇರಿತು. ಬೆಳಿಗ್ಗೆ ಅಜ್ಜಪ್ಪ ಕೋಲ ಹಾಗೂ ಮಧ್ಯಾಹ್ನ ವಿಷ್ಣುಮೂರ್ತಿ ಕೋಲಗಳು ನಡೆಯಿತು. ಭಕ್ತರು ಅಧಿಕ ಸಂಖ್ಯೆಯಲ್ಲಿ ಉತ್ಸವದಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ವೀಕ್ಷಿಸಿದರು. ಈ ಸಂದರ್ಭ ಭಕ್ತರಿಂದ ದೇವರಿಗೆ ವಿವಿಧ ರೀತಿಯ ಹರಕೆಗಳನ್ನು ಸಲ್ಲಿಸಲಾಯಿತು. ದೇವಾಲಯದ ವತಿಯಿಂದ ಉತ್ಸವ ವೀಕ್ಷಿಸಲು ಬಂದ ಭಕ್ತರಿಗೆ ಅನ್ನದಾನ ನಡೆಯಿತು. ಅಪರಾಹ್ನ ಜರುಗಿದ ವಿಷ್ಣುಮೂರ್ತಿ ಕೋಲದ ಮೇಲೇರಿಯನ್ನು ಭಕ್ತರು ವೀಕ್ಷಿಸಿದರು. ಬೆಳ್ಳಿಯ ಮುಖವಾಡ ಧರಿಸಿ ವಿಷ್ಣುಮೂರ್ತಿ ಕೋಲ ದೇವಾಲಯದ ಪ್ರಾಂಗಣದಲ್ಲಿ ಪ್ರದಕ್ಷಿಣೆ ಬರುವುದರೊಂದಿಗೆ ಉತ್ಸವಕ್ಕೆ ತೆರೆ ಬಿತ್ತು. ಉತ್ಸವದ ಅಂಗವಾಗಿ ಭಕ್ತರು ಹರಕೆಯ ಮಣ್ಣಿನ ನಾಯಿಯನ್ನು ಒಪ್ಪಿಸಿದರು. ಉತ್ಸವದ ಮುನ್ನ ಕೊಟ್ಟಿ ಹಾಡುವುದು, ದೀಪಾರಾಧನೆ (ಅಂದಿಬೊಳಕ್)ನೆರವೇರಿತು. ಕೇರಳದ ಚಂಡೆಯೊಂದಿಗೆ ತಿರುವಾಳ ನೃತ್ಯ ಗಮನ ಸೆಳೆಯಿತು.…
ಮಡಿಕೇರಿ ಡಿ.21 NEWS DESK : ಗೋಣಿಕೊಪ್ಪಲಿನ ಆಲ್ ಸ್ಟಾರ್ ಫುಟ್ಬಾಲ್ ಕ್ಲಬ್ ಗೌರವಾಧ್ಯಕ್ಷರಾಗಿ ಗೋಣಿಕೊಪ್ಪಲಿನ ಗ್ರಾಮ ಪಂಚಾಯಿತಿ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ ಅವಿರೋಧ ಆಯ್ಕೆಯಾಗಿದ್ದಾರೆ. ಆಲ್ ಸ್ಟಾರ್ ಎಫ್.ಸಿ ತಂಡದಿಂದ ಗೋಣಿಕೊಪ್ಪಲಿನಲ್ಲಿ ನ್ಮಾನವನ್ನು ಸ್ವೀಕರಿಸಿ ಮಾತನಾಡಿದ ಕುಲ್ಲಚಂಡ ಪ್ರಮೋದ್ ಗಣಪತಿ ಯುವ ಕ್ರೀಡಾಪಟುಗಳಿಗೆ ನನ್ನ ಎಲ್ಲಾ ರೀತಿಯ ಸಹಕಾರ ಮತ್ತು ಬೆಂಬಲ ಇರಲಿದೆ. ಮೇ ತಿಂಗಳ ಒಂದರಿಂದ ನಾಲ್ಕರವರೆಗೆ ಗೋಣಿಕೊಪ್ಪಲಿನ ಜಿ.ಎಂಪಿ ಶಾಲಾ ಮೈದಾನದಲ್ಲಿ ನಡೆಯಲಿರುವ ಆಲ್ ಸ್ಟಾರ್ ಎಫ್.ಸಿ ಕೊಡಗು ವರ್ಲ್ಡ್ ಕಪ್ ಫುಟ್ಬಾಲ್ ಪಂದ್ಯಾವಳಿಗೆ ಎಲ್ಲಾ ರೀತಿಯ ಸಹಕಾರ ನೀಡುತ್ತೇನೆ. ಕ್ರೀಡಾಕೂಟವೂ ಯಶಸ್ವಿಯಾಗಿ ನಡೆಯಲಿ ಎಂದು ಪ್ರಮೋದ್ ಗಣಪತಿ ಶುಭ ಹಾರೈಸಿದರು. ಈ ಸಂದರ್ಭ ಗೋಣಿಕೊಪ್ಪ ಗ್ರಾ.ಪಂ ಉಪಾಧ್ಯಕ್ಷೆ ಮಂಜುಳಾ, ಆಲ್ ಸ್ಟಾರ್ ಎಫ್.ಸಿ ತಂಡದ ಶೀಲಾ ಬೋಪಣ್ಣ, ಎಒನ್ ಶರತ್, ಚುಮ್ಮಿ, ಸಲೀಂ, ರನೀಸ್, ಶಾನಿಫ್,ಬೋಪಣ್ಣ, ಸುಮನ್, ವಿನ್ಸಿ, ಧನುಷ್ ಇದ್ದರು.
ಸಿದ್ದಾಪುರ ಡಿ.21 NEWS DESK : ಸಂತ ಅನ್ನಮ್ಮ ಹಿರಿಯ ಪ್ರಾಥಮಿಕ ಕನ್ನಡ ಮಾಧ್ಯಮ ಶಾಲೆಯ ಆವರಣದಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ಪೋಷಕರ ದಿನಾಚರಣೆಯನ್ನ ಸಂಭ್ರಮದಿಂದ ಆಚರಿಸಲಾಯಿತು. ಪರಿಸರ ಸಂರಕ್ಷಣೆ, ದೇಶಪ್ರೇಮ, ತಂದೆ ತಾಯಿಗಳ ಪ್ರೀತಿ ವಾತ್ಸಲ್ಯ, ಗುರು ಹಿರಿಯರಿಗೆ ಗೌರವ ಸಮರ್ಪಣೆ ಸೇರಿದಂತೆ ಕಿರು ನಾಟಕ ಹಾಗೂ ಹಾಡು, ಸಂಗೀತ ನೃತ್ಯದ ಮೂಲಕ ಹಲವು ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆಯಿತು. ಮಡಿಕೇರಿ ತಾಲ್ಲೂಕು ಶಿಕ್ಷಣಾಧಿಕಾರಿ ಡಾ. ಬಿ.ಸಿ.ದೊಡ್ಡೇಗೌಡ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಶೈಕ್ಷಣಿಕ ಮತ್ತು ಸಾಮಾಜಿಕ ಬೆಳವಣಿಗೆ ಆಟೋಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಮುಖ್ಯ. ಪೋಷಕರು ತಮ್ಮ ಮಕ್ಕಳಿಗೆ ಪ್ರೀತಿ ವಾತ್ಸಲ್ಯದಿಂದ ಶೈಕ್ಷಣಿಕ ಬೆಳವಣಿಗೆಗೆ ಹೆಚ್ಚು ಪ್ರೋತ್ಸಾಹ ನೀಡಿದ್ದಲ್ಲಿ ಪ್ರತಿಭಾನ್ವಿತರಾಗಿ ಗುರುತಿಸಿಕೊಳ್ಳಲು ಸಾಧ್ಯವಾಗಲಿದೆ ಎಂದರು. ಅತಿಯಾದ ಟಿವಿ, ಮೊಬೈಲ್ ಬಳಕೆಯಿಂದ ಪೋಷಕರು ಹಾಗೂ ಮಕ್ಕಳಲ್ಲಿ ಪ್ರೀತಿ ವಾತ್ಸಲ್ಯಗಳು ದೂರವಾಗಿ ಸಹಬಾಳ್ವೆಯ ನೆಮ್ಮದಿಯ ವಾತಾವರಣ ಇಲ್ಲದಂತಾಗುತ್ತದೆ. ಮಕ್ಕಳ ಶೈಕ್ಷಣಿಕ ಬಲ ವರ್ಧನೆ ಹಾಗೂ ಆರೋಗ್ಯವಂತ ಸಮಾಜ ನಿರ್ಮಾಣ ಮಾಡಲು ಪೋಷಕರು ಸಹಕಾರ…
ಮಡಿಕೇರಿ ಡಿ.21 NEWS DESK : ಕೊಡಗಿನ ಆದಿವಾಸಿ ಹೋರಾಟಗಾರ ಹಾಗೂ ಆದಿವಾಸಿಗಳ ಸಮನ್ವಯ ಸಮಿತಿಯ ಜಿಲ್ಲಾ ಸಂಚಾಲಕರಾಗಿದ್ದ ವೈ.ಕೆ.ಗಣೇಶ್ (49) ಇಂದು ಮುಂಜಾನೆ ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಗಣೇಶ್ ಅವರು ದೀರ್ಘಕಾಲ ಆದಿವಾಸಿಗಳು ಹಾಗೂ ಆದಿವಾಸಿ ಕಾರ್ಮಿಕರ ಪರವಾಗಿ ಹೋರಾಟಗಳನ್ನು ನಡೆಸಿದ್ದರು. ಗಣೇಶ್ ಅವರ ನಿಧನಕ್ಕೆ ಕಾರ್ಮಿಕ ಸಂಘಟನೆಗಳ ಮುಖಂಡರಾದ ಪಿ.ಆರ್.ಭರತ್ ಹಾಗೂ ಹೆಚ್.ಬಿ.ರಮೇಶ್ ಸಂತಾಪ ಸೂಚಿಸಿದ್ದಾರೆ.
ಸಿದ್ದಾಪುರ ಡಿ.21 NEWS DESK : ವಿರಾಜಪೇಟೆ ತಾಲ್ಲೂಕಿನ ಚೆನ್ನಯ್ಯನಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಏಳನೇ ತರಗತಿ ವಿದ್ಯಾರ್ಥಿನಿ ನೇತ್ರ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
ಮಡಿಕೇರಿ NEWS DESK ಡಿ.20 : ರೈತರ ಸಿ ಮತ್ತು ಡಿ ಜಮೀನನ್ನು ಮೀಸಲು ಅರಣ್ಯವನ್ನಾಗಿ ಪರಿವರ್ತಿಸುವ ಆದೇಶವನ್ನು ವಿರೋಧಿಸಿ, ‘ನಮ್ಮ ಭೂಮಿ ನಮ್ಮ ಹಕ್ಕು’ ಘೋಷಣೆಯೊಂದಿಗೆ ಸಹಸ್ರಾರು ಕೃಷಿಕರು ರೈತ ಹೋರಾಟ ಸಮಿತಿ ಮತ್ತು ಕೊಡಗು ಜಿಲ್ಲಾ ರೈತ ಸಂಘದ ನೇತೃತ್ವದಲ್ಲಿ ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನಾ ಜಾಥ ನಡೆಸಿದರು. ಜನರಲ್ ತಿಮ್ಮಯ್ಯ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಅಸಮಾಧಾನ ವ್ಯಕ್ತಪಡಿಸಿದರು. ರೈತ ಹೋರಾಟ ಸಮಿತಿಯ ಅಧ್ಯಕ್ಷ ಸುರೇಶ್ ಚಕ್ರವರ್ತಿ ಹಾಗೂ ಜಿಲ್ಲಾ ರೈತ ಸಂಘದ ಜಿಲ್ಲಾಧ್ಯಕ್ಷ ಮನು ಸೋಮಯ್ಯ ಅವರುಗಳ ನೇತೃತ್ವದಲ್ಲಿ ಪಕ್ಷಾತೀತವಾದ ಬೃಹತ್ ಜಾಥ ನಗರದ ಫೀ.ಮಾ.ಕಾರ್ಯಪ್ಪ ವೃತ್ತದಿಂದ ಆರಂಭಗೊಂಡು ನಗರದ ಖಾಸಗಿ ಬಸ್ ನಿಲ್ದಾಣವನ್ನು ಹಾದು, ಗಾಂಧಿ ಮೈದಾನದವರೆಗೆ ಸಾಗಿತು. ನಗರ ಸಾವಿರಾರು ಪ್ರತಿಭಟನಾಕಾರರಿಂದಾಗಿ ಹಸಿರುಮಯವಾಯಿತು, ಅಲ್ಲದೆ ವಾಹನಗಳ ಸಂಚಾರ ಒಂದು ಗಂಟೆಗೂ ಹೆಚ್ಚು ಕಾಲ ಸ್ಥಗಿತಗೊಂಡಿತು. ಗಾಂಧಿ ಮೈದಾನದಲ್ಲಿ ನಡೆದ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಿದ ರೈತರ ಪರ ಹೋರಾಟಗಾರ ಶೃಂಗೇರಿಯ ಸುಧೀರ್ ಕುಮಾರ್…
ಮಡಿಕೇರಿ ಡಿ.20 NEWS DESK : ನಗರದ ಕೋಟೆ ಆವರಣದಿಂದ ಗಾಂಧಿ ಮೈದಾನದ ವರೆಗೆ ಕೈಗೊಂಡ ಸಿರಿಧಾನ್ಯ ನಡಿಗೆ ಹಾಗೂ ಪಾಕ ಸ್ಪರ್ಧೆಯನ್ನು ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಸ್ಪರ್ಧೆಯಲ್ಲಿ ಭಾಗವಹಿಸಿರುವ ರೈತ ಮಹಿಳೆಯರಿಗೆ ಜಿಲ್ಲಾ ಪಂಚಾಯತ್ ವತಿಯಿಂದ ಎನ್‍ಆರ್‍ಎಲ್‍ಎಂ ಯೋಜನೆಯಡಿ ಸಹಾಯಧನ ನೀಡಿ ಮಾರಾಟಕ್ಕೆ ಸಂಪರ್ಕ ಕಲ್ಪಿಸುವ ಬಗ್ಗೆ ಸಹಕಾರ ನೀಡುವುದಾಗಿ ತಿಳಿಸಿದರು. ಜಂಟಿ ಕೃಷಿ ನಿರ್ದೇಶಕರ ಕಚೇರಿ ಆವರಣದಲ್ಲಿ ಏರ್ಪಡಿಸಲಾಗಿದ್ದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆಯಲ್ಲಿ ಜಿಲ್ಲೆಯ 5 ತಾಲ್ಲೂಕುಗಳಿಂದ ಒಟ್ಟು 58 ಸ್ಪರ್ಧಿಗಳು ಭಾಗವಹಿಸಿ, 90ಕ್ಕೂ ಹೆಚ್ಚು ತಿನಿಸುಗಳನ್ನು ಪ್ರದರ್ಶಿಸಿದರು. ಸಿರಿಧಾನ್ಯದಿಂದ ತಯಾರಿಸಿದ ಸಿಹಿ ತಿನಿಸುಗಳಲ್ಲಿ ಸಿರಿಧಾನ್ಯ ಫಿಗ್(ಅಂಜೂರ) ಡಿಲೈಟ್, ರಾಗಿ ಗಿಣ್ಣು ಹಾಗೂ ಖಾರ ತಿನಿಸುಗಳಲ್ಲಿ ಸಿರಿಧಾನ್ಯ ಪಾಸ್ತಾ ಜೊತೆಗೆ ಕೊಡಗು ಜಿಲ್ಲೆಯ ಮರೆತು ಹೋದ ಖಾದ್ಯಗಳಲ್ಲಿ ಪ್ರಮುಖವಾಗಿ ಎಲಗದ ಮರದ ಚಕ್ಕೆಯ ಗಿಣ್ಣು, ಹುರುಳಿ ಕಡುಬು ಹಾಗೂ ಕೆಂಜಿಗ ಕುಡಿ ಎಲೆ ಚಟ್ನಿ ಪ್ರಮುಖವಾಗಿ…
ಮಡಿಕೇರಿ ಡಿ.20 NEWS DESK : ಪ್ರಸಕ್ತ (2024-25) ಸಾಲಿಗೆ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿವಿಧ ಶಾಲೆ ಮತ್ತು ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹೊಸದಾಗಿ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆಯ ವೆಬ್‍ಸೈಟ್ https://ssp.karnataka.gov.in ಮೂಲಕ ಆನ್‍ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದು. ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿಯ ಜಾತಿ ಪ್ರಮಾಣ ಪತ್ರ ಮತ್ತು ಆದಾಯ ಪ್ರಮಾಣ ಪತ್ರ(ಆದಾಯದ ಮಿತಿ 2.50 ಲಕ್ಷ), ಆಧಾರ್ ಕಾರ್ಡ್ ಬ್ಯಾಂಕ್‍ಖಾತೆಗೆ ಆಧಾರ್ ಸಂಖ್ಯೆಯನ್ನು ಎನ್‍ಪಿಸಿಐ ಮೂಲಕ ಕಡ್ಡಾಯವಾಗಿ ಲಿಂಕ್ ಮಾಡಿರಬೇಕು ಅಥವಾ ಅಂಚೆ ಕಚೇರಿಯಲ್ಲಿ ಐಪಿಪಿಬಿ ಖಾತೆ ಹೊಂದಿರಬೇಕು(ಆಧಾರ್ ಕಾರ್ಡ್ ಇ-ಕೆವೈಸಿ ಆಗಿರಬೇಕು). ದೂರವಾಣಿ ಸಂಖ್ಯೆ (ಚಾಲ್ತಿಯಲ್ಲಿರುವ ಆಧಾರ್ ಲಿಂಕ್ ಆಗಿರುವ ದೂರವಾಣಿ ಸಂಖ್ಯೆ ಕಡ್ಡಾಯವಾಗಿರಬೇಕು). ವಿದ್ಯಾರ್ಥಿಯ ಹಿಂದಿನ ವರ್ಷದ ಅಂಕಪಟ್ಟಿ, ವಿದ್ಯಾರ್ಥಿಯ ಇತ್ತೀಚಿನ ಭಾವಚಿತ್ರ, ಅಧ್ಯಯನ-ಬೋನೋಪೈಡ್ ಪ್ರಮಾಣ ಪತ್ರ, ಪ್ರಸಕ್ತ…
ಮಡಿಕೇರಿ ಡಿ.20 NEWS DESK : ಮಹಿಳೆಯರು ಎಂದರೆ ಶಕ್ತಿ ಸ್ವರೂಪ. ಆದರೆ ಇಂತಹ ಮಹಿಳೆಯರಿಗೆ ಹೆಚ್ಚಿನ ದೌರ್ಜನ್ಯವಾಗುತ್ತಿದೆ. ಎಲ್ಲಿ ಮಹಿಳೆಯರಿಗೆ ಗೌರವ ಸಿಗುತ್ತದೋ ಅಲ್ಲಿ ದೇವತೆಗಳು ಇರುತ್ತಾರೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ತಿಳಿಸಿದರು. ರಾಷ್ಟ್ರೀಯ ಮಹಿಳಾ ಆಯೋಗ, ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದೊಂದಿಗೆ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ನಗರದ ಬಾಲಭವನದಲ್ಲಿ ನಡೆದ ಮಹಿಳೆಯರಿಗಾಗಿ ಕಾನೂನು ಅರಿವು ವಿಧಾನ ಸೆ ಸಮಾದಾನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಹಿಳೆಯರಿಗೆ ಹೆಚ್ಚಿನ ಒತ್ತು ನೀಡಿದರೂ ಸಹ ಸಾಕಷ್ಟು ಅನ್ಯಾಯಗಳು ನಡೆಯುತ್ತಿವೆ. ಹಾಗೆಯೇ ಮಹಿಳೆಯರಿಗಾಗಿ ವಿಶೇಷ ಕಾನೂನು ಕಾರ್ಯಕ್ರಮಗಳಿವೆ. ಅದನ್ನು ಬಳಸಿಕೊಳ್ಳಬೇಕು ಎಂದು ತಿಳಿಸಿದರು. ಮಹಿಳೆಯರ ಹಕ್ಕುಗಳ ಬಗ್ಗೆ ಹೆಚ್ಚಿನ ಧ್ವನಿ ಎತ್ತಿದವರು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಎಂದು ಹೇಳಿದರು. ಮೊದಲು ಹೆಣ್ಣು ಮಕ್ಕಳಿಗೆ ಪಿತ್ರಾರ್ಜಿತ ಆಸ್ತಿಯಲ್ಲಿ…






