ಲೇಖಕ: admin

ಮಡಿಕೇರಿ ಡಿ.5 NEWS DESK : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪ್ರಸಕ್ತ ವರ್ಷದಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ ಅಡಿಯಲ್ಲಿ ಇಲಾಖೆ ಪ್ರಮುಖ ಕಾರ್ಯಕ್ರಮಗಳಾದ ಯುವಜನ ಮೇಳ ಹಾಗೂ ಯುವಜನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಉತ್ತೇಜಿಸುವ ದೃಷ್ಠಿಯಿಂದ ಪರಿಶಿಷ್ಟ ಜಾತಿ ಯುವ ಜನರಿಗೆ ಜಾನಪದ ಕಲಾ ಪ್ರಾಕಾರಗಳ ತರಬೇತಿ ಶಿಬಿರವನ್ನು 50 ಶಿಬಿರಾರ್ಥಿಗಳಿಗೆ ಡಿ.10 ರಿಂದ 17 ರವರೆಗೆ 8 ದಿನಗಳ ಕಾರ್ಯಕ್ರಮವನ್ನು ನಿಯಮಾನುಸಾರ ಮಾರ್ಗಸೂಚಿಗಳನ್ವಯ ಆಯೋಜನೆ ಮಾಡಲು ಕೇಂದ್ರ ಕಚೇರಿಯಿಂದ ಅರ್ಜಿ ಆಹ್ವಾನಿಸಲಾಗಿದೆ. ಅದರಂತೆ ತರಬೇತಿ ಪಡೆಯಲು ಇಚ್ಚಿಸುವ ಪರಿಶಿಷ್ಟ ಜಾತಿ ಯುವ ಜನರಿಗೆ ತರಬೇತಿ ಶಿಬಿರಗಳ ಅರ್ಜಿ ಸಲ್ಲಿಸಲು ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣ, ಮಡಿಕೇರಿ ಈ ಕಚೇರಿಯಿಂದ ಪಡೆದು ಡಿ.8 ರೊಳಗೆ ಅರ್ಜಿಗಳನ್ನು ಈ ಕಚೇರಿಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 08272-2220986 ರಲ್ಲಿ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಯುವ…

Read More

ಮಡಿಕೇರಿ ಡಿ.5 NEWS DESK : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕೊಡಗು ಜಿಲ್ಲಾ ಶಾಖೆಗೆ ನಡೆದ (2024 2029 ರ ಅವಧಿಯ) ಚುನಾವಣೆಯಲ್ಲಿ ಜಿಲ್ಲಾಧ್ಯಕ್ಷರಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅರುಣ್ ಮುಕ್ಕಾಟಿ ಆಯ್ಕೆಯಾಗಿದ್ದಾರೆ. ಖಜಾಂಚಿಯಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪುಲಿಯಂಡ ಡಿ.ರಾಜೇಶ್, ರಾಜ್ಯ ಪರಿಷತ್ ಸದಸ್ಯರಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪಿ.ಎಂ.ಬಾಬು ಬಹುಮತದಿಂದ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ  ತಿಳಿಸಿದ್ದಾರೆ.

Read More

ಮಡಿಕೇರಿ ಡಿ.5 NEWS DESK : ಕುಶಾಲನಗರದಲ್ಲಿ ಶ್ರೀ ಗಣಪತಿ ರಥೋತ್ಸವದ ಪ್ರಯುಕ್ತ ಕರ್ನಾಟಕ ಅಮೇಚೂರ್ ಬಾಡಿಬಿಲ್ಡರ್ಸ್ ಅಸೋಸಿಯೇಷನ್ ಆಶ್ರಯದಲ್ಲಿ ನ್ಯೂಜೆನ್ ಫಿಟ್ನೆಸ್ ಕುಶಾಲನಗರ ಮತ್ತು ಟೀಮ್ ಕಾವೇರಿ ಕ್ಲಾಸಿಕ್ ಸಹಯೋಗದಲ್ಲಿ ಕುಶಾಲನಗರದ ರೈತ ಸಹಕಾರ ಭವನದಲ್ಲಿ ನಡೆದ ದೇಹದಾರ್ಢ್ಯ ಸ್ಪರ್ಧೆಯಲ್ಲಿ “ಕಾವೇರಿ ಕ್ಲಾಸಿಕ್” (ರಾಜ್ಯಮಟ್ಟ) ವಿಭಾಗದಲ್ಲಿ ಬೆಸ್ಟ್ ಪೋಸರ್ ಪ್ರಶಸ್ತಿಯನ್ನು ಮೈಸೂರಿನ ನಜೀಬುಲ್ಲಾ ಖಾನ್ ಪಡೆದುಕೊಂಡರು. ಮೋಸ್ಟ್ ಮಸ್ಕ್ಯೂಲ್ ಮ್ಯಾನ್ ಪ್ರಶಸ್ತಿಯನ್ನು ಮೈಸೂರಿ‌ನ ಎಬ್ನೆಜರ್ ಕೆ ಪಡೆದುಕೊಂಡರು. ಕಾವೇರಿ ಕ್ಲಾಸಿಕ್ ಟೈಟಲ್ ಪ್ರಶಸ್ತಿಯನ್ನು ದಾವಣಗೆರೆಯ ಬಿ.ಕೆ.ಸುಶಿಲ್ ಕುಮಾರ್ ಪಡೆದುಕೊಂಡರು. ಕಾವೇರಿ ಕ್ಲಾಸಿಕ್ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ರಾಜ್ಯದ ವಿವಿಧ ಭಾಗದ 25ಕ್ಕೂ ಹೆಚ್ಚು ಸ್ಪರ್ಧಿಗಳು ಭಾಗವಹಿಸಿದ್ದರು. ಮಿಸ್ಟರ್ ಕಾವೇರಿ ಮೆನ್ಸ್ ಫಿಸಿಕ್ಸ್ ಸ್ಪರ್ಧೆಯಲ್ಲಿ ಟೈಟಲ್ ವಿನ್ನರ್ ಪ್ರಶಸ್ತಿಯನ್ನು ಫ್ಯೂಚರ್ ಫಿಟ್ನೆಸ್ ಹಾಸನ ಜಿಲ್ಲೆಯ ಸ್ಪರ್ಧಿ ಇರ್ಫಾನ್ ಎ. ಪಡೆದುಕೊಂಡರು. ರನ್ನರ್ಸ್ ಪ್ರಶಸ್ತಿಯನ್ನು ಬೆಂಗಳೂರಿನ‌ ಶ್ರೆಡ್ ಫಿಟ್ನೆಸ್ ಎಂ. ಶರತ್ ಕುಮಾರ್ ಪಡೆದುಕೊಂಡರು. ಮಿಸ್ಟರ್ ಕಾವೇರಿ ಮೆನ್ಸ್ ಫಿಸಿಕ್ಸ್ ನಲ್ಲಿ ರಾಜ್ಯದ ವಿವಿಧ…

Read More

ಮಡಿಕೇರಿ ಡಿ.5 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದ ಬಳಿ ಇರುವ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ನಿವೇಶನದಲ್ಲಿ ಕನ್ನಡ ಸಾಹಿತ್ಯ ಭವನ ನಿರ್ಮಾಣ ಸಂಬಂಧ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರ ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಮತ್ತು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಎಂ.ಪಿ.ಕೇಶವ ಕಾಮತ್ ಅವರ ನೇತೃತ್ವದಲ್ಲಿ ಭೇಟಿಯಾಗಿ ಭವನ ನಿರ್ಮಾಣ ಸಮಿತಿಯ ಮಹಾಪೋಷಕರಾಗಿ ಕಾರ್ಯನಿರ್ವಹಿಸುವಂತೆ ಮತ್ತು ಭವನ ನಿರ್ಮಾಣದ ಕಾರ್ಯದಲ್ಲಿ ಸಹಕರಿಸುವಂತೆ ಕೋರಿದರು. ಈ ಕುರಿತು ಪ್ರತಿಕ್ರಿಯಿಸಿದ ಶಾಸಕರುಗಳು ಸಾಹಿತ್ಯ ಪರಿಷತ್ತಿನ ಭವನಕ್ಕೆ ಸಂಪೂರ್ಣ ಸಹಕಾರ ನೀಡುವುದರೊಂದಿಗೆ ಸರಕಾರದ ಮಟ್ಟದಲ್ಲಿ ಮುಖ್ಯಮಂತ್ರಿಗಳಿಂದ ಅನುದಾನ ಕೊಡಿಸುವುದಲ್ಲದೆ ಜಿಲ್ಲಾ ಮಟ್ಟದಲ್ಲಿಯೂ ಸಂಪೂರ್ಣ ಸಹಕರಿಸುವುದಾಗಿ ತಿಳಿಸಿದರು. ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್, ಗೌರವ ಕಾರ್ಯದರ್ಶಿ ಎಸ್.ಐ ಮುನಿರ್ ಅಹಮದ್, ಸಹ ಕಾರ್ಯದರ್ಶಿ…

Read More

ಮಡಿಕೇರಿ ಡಿ.4 NEWS DESK : ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಬೋಧಕ ಆಸ್ಪತ್ರೆಯಲ್ಲಿ ‘ಅರೆ ವಿಶೇಷ ಕೊಠಡಿ’ಯನ್ನು ಶಾಸಕರಾದ ಡಾ.ಮಂತರ್ ಗೌಡ ಉದ್ಘಾಟಿಸಿದರು. ನಗರದ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಬೋಧಕ ಆಸ್ಪತ್ರೆಯ ಮಹಿಳಾ ಮತ್ತು ಮಕ್ಕಳ ವಿಭಾಗದ ಹಳೇ ಕಟ್ಟಡದಲ್ಲಿ ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕವಾಗಿ ಅರೆ ವಿಶೇಷ ಕೊಠಡಿಯನ್ನು ಸ್ಥಾಪಿಸಲಾಗಿದ್ದು, ಆರೋಗ್ಯಕ್ಕೆ ಸಂಬಂಧಿಸಿದಂತೆ ವಿಶೇಷ ಆರೋಗ್ಯ ಸೇವೆ ಕಲ್ಪಿಸಲು ಮುಂದಾಗಲಾಗಿದೆ. ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಹೊಸದಾಗಿ ಒಳರೋಗಿಗಳಿಗೆ ಚೀಟಿ ಬದಲಾಗಿ ರೋಗಿಗೆ ಎಲ್ಲಾ ರೀತಿಯ ಆರೋಗ್ಯ ಸೇವೆಗೆ ಸಂಬಂಧಿಸಿದಂತೆ ಮಾಹಿತಿ ದೊರೆಯುವಂತಾಗಲು ‘ಪುಸ್ತಕ’ವನ್ನು ಶಾಸಕರು ಇದೇ ಸಂದರ್ಬದಲ್ಲಿ ಬಿಡುಗಡೆ ಮಾಡಿದರು. ಪುಸ್ತಕದಲ್ಲಿ ಪ್ರಯೋಗಾಲಯ ವರದಿ, ಎಕ್ಸ್‍ರೇ, ಯುಎಸ್‍ಜಿ ವರದಿ, ಸಿಟಿ ಸ್ಕ್ಯಾನ್ ವರದಿ, ಸಿಟಿ ಪಿಲ್ಮ್ ವರದಿ, ಎಂಆರ್‍ಐ ಪಿಲ್ಮ್ ವರದಿ, ವಾರ್ಡ್ ಆರೋಗ್ಯ ಸೇವೆ ಸಂಬಂಧಿಸಿದಂತೆ ಮಾಹಿತಿ ಒಳಗೊಂಡಿದೆ. ಸಾಮಾನ್ಯ ವಿಭಾಗ, ಒಟಿ, ವಾರ್ಡ್ ಸೇವಾ ಶುಲ್ಕಗಳು, ರೋಗಿಯ ಆರೋಗ್ಯ ಸಂಬಂಧ ಸಂಪೂರ್ಣ ವಿವರ,…

Read More

ಮಡಿಕೇರಿ ಡಿ.4 NEWS DESK : ಕೊಡಗಿನ ಪರಿಸರಕ್ಕೆ ಮಾರಕವಾಗಿರುವ ಬೃಹತ್ ಲೇಔಟ್ ಹಾಗೂ ಮೆಗಾ ಟೌನ್‍ಶಿಪ್ ಗಳಿಗಾಗಿ ಭೂಪರಿವರ್ತನೆ ಮತ್ತು ಭೂವಿಲೇವಾರಿ ಮಾಡುವುದನ್ನು ತಕ್ಷಣ ಸ್ಥಗಿತಗೊಳಿಸಬೇಕೆಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಕಡಂಗದಲ್ಲಿ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮ ನಡೆಸಿತು. ಜನಜಾಗೃತಿಯ ನೇತೃತ್ವ ವಹಿಸಿ ಮಾತನಾಡಿದ ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಕರ್ನಾಟಕ ಭೂ ಸುಧಾರಣಾ ಕಾಯ್ದೆ 2020-21ರ ಲೋಪದೋಷಗಳ ದುರ್ಲಾಭ ಪಡೆದು ಕರ್ನಾಟಕದ 29 ಜಿಲ್ಲೆಗಳ, ಭಾರತದ 29 ರಾಜ್ಯಗಳ ಮತ್ತು 8 ಕೇಂದ್ರಾಡಳಿತ ಪ್ರದೇಶಗಳ, ಜಗತ್ತಿನ 193 ದೇಶಗಳ ರಾಜಕಾರಣಿಗಳು, ಅಧಿಕಾರಶಾಹಿಗಳು ಹಾಗೂ ಆರ್ಥಿಕ ಅಪರಾಧಿಗಳು ಕೊಡವ ಲ್ಯಾಂಡ್‍ನಲ್ಲಿ ಬೇನಾಮಿ ಆಸ್ತಿಯನ್ನು ಹೊಂದಿದ್ದು, ಈ ಪವಿತ್ರ ನೆಲೆ, ನೆಲ, ಜಲಮೂಲ ಮತ್ತು ಪ್ರಕೃತಿಯನ್ನು ಲೂಟಿಮಾಡಿ ಕೊಳ್ಳೆ ಹೊಡೆಯುತ್ತಿದ್ದಾರೆ ಎಂದು ಆರೋಪಿಸಿದರು. ಮುಂದೊಂದು ದಿನ ಕಡಿಯತ್ ನಾಡಿನ ಪವಿತ್ರ ಮಲೆತಿರಿಕೆ ದೇವ ನೆಲೆಯ ಕುಂದ್ ಹಾಗೂ ಮನಮೋಹಕ ಚೋಮ ಕುಂದ್ ಮತ್ತು ನಯನ ಮನೋಹರ ಬೆಪ್ಪುನಾಡಿನ ಅಸ್ಮಿತೆ…

Read More

ಮಡಿಕೇರಿ ಡಿ.4 NEWS DESK : ಸಾರ್ವಜನಿಕ ಸೇವೆಗಾಗಿ ಡಿ.8 ರಂದು ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬೆಳಿಗ್ಗೆ 10.30 ಗಂಟೆಗೆ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ನೂತನ ಕಚೇರಿ ಆರಂಭಗೊಳ್ಳಲಿದೆ.  

Read More

ಮಡಿಕೇರಿ ಡಿ.4 NEWS DESK : ಹುದಿಕೇರಿ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿಯ ಸಭೆಯು ಬಿರುನಾಣಿಯಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧ್ಯಕ್ಷ ಎಂ.ಪಿ.ಕೇಶವ ಕಾಮತ್  ಸಾಹಿತ್ಯ ಪರಿಷತ್ತಿನ ದ್ಯೆಯುದ್ದೇಶಗಳು, ಕೆಲಸ ಕಾರ್ಯಗಳು, ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಮಾಹಿತಿ ನೀಡಿದರು. ಪೊನ್ನಂಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೋಳೆರ ದಯಾ ಚಂಗಪ್ಪ ಮಾತನಾಡಿ ಹುದಿಕೇರಿ ಹೋಬಳಿ ಜಿಲ್ಲೆಯಲ್ಲಿಯೇ ಒಂದು ಮಾದರಿ ಹೋಬಳಿಯಾಗಬೇಕು ಎಂದರು. ಹುದಿಕೇರಿ ಹೋಬಳಿಯ ಅಧ್ಯಕ್ಷರ ಬಾನಂಗಡ ಅರುಣ್ ಮಾತನಾಡಿ, ಹೋಬಳಿಯ ಕಾರ್ಯಕಾರಿ ಸಮಿತಿಯ ಆಯ್ಕೆ ಇಂದು ನಡೆಯಲಿದ್ದು ಎಲ್ಲರೂ ನನ್ನೊಂದಿಗೆ ಕೈಜೋಡಿಸಿ ಕೆಲಸ ಮಾಡಬೇಕು ಎಂದು ಕೋರಿಕೊಂಡರು. ನಂತರ ಜಿಲ್ಲಾಧ್ಯಕ್ಷರ ನಿರ್ದೇಶನದಲ್ಲಿ ನಡೆದ ಹೋಬಳಿ ಕಾರ್ಯ ಮಂಡಳಿಯ ಆಯ್ಕೆ ಪ್ರಕ್ರಿಯೆಯಲ್ಲಿ ಗೌರವ ಕಾರ್ಯದರ್ಶಿಯಾಗಿ ಕುಪ್ಪಣಮಾಡ ಬೇಬಿ ನಂಜಮ್ಮ ದೇವಯ್, ಗೌರವ ಕೋಶಾಧಿಕಾರಿಯಾಗಿ ಅಣ್ಣಳಮಾಡ ಭವ್ಯ, ಸಂಘಟನಾ ಕಾರ್ಯದರ್ಶಿಯಾಗಿ ಕರ್ತಮಾಡ ಪಾರ್ವತಿ ವಿಜಯ, ಮಹಿಳಾ ಪ್ರತಿನಿಧಿಯಾಗಿ ನೆಲ್ಲಿರ ಶ್ವೇತಾ…

Read More

ಮಡಿಕೇರಿ ಡಿ.4 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕೊಡಮಾಡುವ ಪ್ರತಿಷ್ಠಿತ “ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ”ಗೆ ಪುರುಷ ಲೇಖಕರು ಬರೆದು ಪ್ರಕಟಿಸಿದ ಕನ್ನಡ ಭಾಷೆಯ ಕೃತಿಗಳನ್ನು ಆಹ್ವಾನಿಸಲಾಗಿದೆ. 2024-25 ನೇ ಸಾಲಿನ ಪ್ರಶಸ್ತಿ ಪುರಸ್ಕಾರ ಪಡೆಯಲು ಆಸಕ್ತ ಪುರುಷ ಲೇಖಕರು ತಾವು ರಚಿಸಿದ ಕಥೆ, ಕಾದಂಬರಿ, ಕವನ ಸಂಕಲನ ಕೃತಿಗಳ ನಾಲ್ಕು ಪ್ರತಿಗಳನ್ನು ಅರ್ಜಿಯೊಂದಿಗೆ ಕಳುಹಿಸಿ ತಕ್ಕದ್ದು.  2019ರ ನಂತರ ಪ್ರಕಟಿತ ಪುಸ್ತಕಗಳನ್ನು ಮಾತ್ರ ಕಳುಹಿಸಿತಕ್ಕದ್ದು, ಕಳುಹಿಸುವ ಕೃತಿಗೆ ಯಾವುದೇ ಪ್ರಶಸ್ತಿ ಬಂದಿರಕೂಡದು. ಓರ್ವ ಲೇಖಕ ಒಂದು ಕೃತಿಯನ್ನು ಮಾತ್ರ ಕಳುಹಿಸತಕ್ಕದ್ದು,  ಲಕೊಟೆಯ ಮೇಲೆ *ಬಿ.ಎಸ್ ಗೋಪಾಲಕೃಷ್ಣ ದತ್ತಿ ಪ್ರಶಸ್ತಿಗೆ ಎಂದು ಬರೆಯಬೇಕು. ಕಳುಹಿಸಬೇಕಾದ ವಿಳಾಸ : : ಅಧ್ಯಕ್ಷರು, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಅಂಬೇಡ್ಕರ್ ಭವನದ ಬಳಿ, ಸುದರ್ಶನ ವೃತ್ತ, ಮಡಿಕೇರಿ. ಮೊಬೈಲ್ ಸಂಖ್ಯೆ _94483 46276. ಇಲ್ಲಿಗೆ ದಿನಾಂಕ 25.12.2024 ರ ಒಳಗಾಗಿ ತಲುಪಿಸಬೇಕೆಂದು ಪರಿಷತ್ತಿನ ಅಧ್ಯಕ್ಷರಾದ ಎಂ.ಪಿ. ಕೇಶವ ಕಾಮತ್ ಪತ್ರಿಕಾ ಪ್ರಕಟಣೆಯಲ್ಲಿ…

Read More

ಮಡಿಕೇರಿ ಡಿ.4 NEWS DESK : ಕರಿಕೆ ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖ್ ಆಗಿ ಪಿ.ಎಂ.ನಂಜುಂಡ ಹಾಗೂ ಸಹ ಪ್ರಮುಖ್ ಆಗಿ ಜಯಪ್ರಕಾಶ್ ಆಯ್ಕೆಯಾಗಿದ್ದಾರೆ. 1ನೇ ವಾರ್ಡ್ ಅಧ್ಯಕ್ಷರಾಗಿ ಕೆ.ಜಿ.ರತೀಶ್, 2ನೇ ವಾರ್ಡ್ ಅಧ್ಯಕ್ಷರಾಗಿ ಮಧುಸೂದನ್, 3ನೇ ವಾರ್ಡ್ ಅಧ್ಯಕ್ಷರಾಗಿ ಕೆ.ಬಿ.ರಾಜೇಶ್ ಹಾಗೂ 4ನೇ ವಾರ್ಡ್ ಅಧ್ಯಕ್ಷರಾಗಿ ಪ್ರದೀಪ್ ಕುಮಾರ್ ನೇಮಕಗೊಂಡಿದ್ದಾರೆ.  ಮಡಿಕೇರಿ ಗ್ರಾಮಾಂತರ ಬಿಜೆಪಿ ಮಂಡಲದ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.

Read More