ಲೇಖಕ: admin

  ಮಡಿಕೇರಿ ಡಿ.20 NEWS DESK : ಕರ್ನಾಟಕ ಸರ್ಕಾರ ಕೃಷಿ ಇಲಾಖೆ ವತಿಯಿಂದ ಅಂತರರಾಷ್ಟ್ರೀಯ ಸಿರಿಧಾನ್ಯ ಮತ್ತು ಸಾವಯವ ಮೇಳ 2025 ರ ಅಂಗವಾಗಿ ಕೊಡಗು ಜಿಲ್ಲೆಯಲ್ಲಿ ಜಿಲ್ಲಾ ಮಟ್ಟದ ಸಿರಿಧಾನ್ಯ ಜಾಗೃತಿ ನಡಿಗೆ ಕಾರ್ಯಕ್ರಮ ನಡೆಯಿತು. ನಗರದ ಕೋಟೆ ಆವರಣದಿಂದ ಗಾಂಧಿ ಮೈದಾನವರೆಗೆ ನಡೆದ ಜಾಥಾವನ್ನು ಕೊಡಗು ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಉದ್ಘಾಟಿಸಿದರು. ಕೃಷಿ ಇಲಾಖೆಯಿಂದ ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ “ಸಿರಿಧಾನ್ಯ” ಮತ್ತು “ಮರೆತು ಹೋದ ಖಾದ್ಯಗಳ’ ಪಾಕ ಸ್ಪರ್ಧೆ ನಡೆಯಲಿದೆ.

Read More

ಮಡಿಕೇರಿ NEWS DESK ಡಿ.19 : ಕೊಡಗು ಜಿಲಾ ಸಹಕಾರ ಕೇಂದ್ರ ಬ್ಯಾಂಕ್ ಮತ್ತು ಇದರ ವಿವಿಧ ಶಾಖೆೆಗಳು ಸೇರಿದಂತೆ ಹಣಕಾಸು ಸಂಸ್ಥೆಗಳಲ್ಲಿ ನಕಲಿ ಚಿನ್ನವನ್ನು ಅಡವಿಟ್ಟು 34,95,016 ರೂ. ವಂಚಿಸಿರುವ ಪ್ರಕರಣದ 12 ಆರೋಪಿಗಳನ್ನು ಕೊಡಗು ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ಜಿಲ್ಲಾ ಪೊಲಿಸ್ ವರಿಷ್ಟಾಧಿಕಾರಿ ಕೆ.ರಾಮರಾಜನ್ ಅವರು ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿ, ನಗರದ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಮುಖ್ಯ ಶಾಖೆಯಲ್ಲಿ ಮೊಹಮ್ಮದ್ ರಿಜ್ವಾನ್ ಕೆ.ಎ.ಎಂಬಾತ ಇದೇ ಡಿ.4 ರಂದು 8 ಚಿನ್ನದ ಬಳೆಗಳನ್ನು ಅಡಮಾನವಿಟ್ಟು ಸಾಲ ಪಡೆಯುವ ಸಂದರ್ಭ, ಆಭರಣಗಳನ್ನು ಪರಿಶೀಲಿಸಿದಾಗ ಅವುಗಳು ನಕಲಿ ಎನ್ನುವುದು ಕಂಡು ಬಂದಿದೆ. ಇದೇ ರೀತಿ ಎಮ್ಮೆಮಾಡು ನಿವಾಸಿಗಳಾದ ರಿಯಾಜ್, ಖತೀಜಾ, ಮೊಹಮ್ಮದ್ ಹನೀಫ್, ಕುಂಜಿಲ ಗ್ರಾಮದ ನಿವಾಸಿಗಳಾದ ಅಬ್ದುಲ್ ನಾಸೀರ್, ಮೂಸಾ ಮತ್ತು ಹಂಸ ಎಂಬವರು ಮಡಿಕೇರಿ, ಭಾಗಮಂಡಲ, ವಿರಾಜಪೇಟೆ, ಕಡಂಗಗಳಲ್ಲಿನ ಕೆಡಿಸಿಸಿ ಬ್ಯಾಂಕ್, ಮಡಿಕೇರಿಯ ಮುತ್ತೂಟ್ ಫಿನ್ ಕಾರ್ಪ್ ಮತ್ತು ಭಾಗಮಂಡಲ ವಿಎಸ್‌ಎಸ್‌ಎನ್ ಬ್ಯಾಂಕ್‌ಗಳಲ್ಲಿ…

Read More

ಮಡಿಕೇರಿ ಡಿ.19 NEWS DESK : ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ರೈತ ಹೋರಾಟ ಸಮಿತಿ, ರೈತ ಸಂಘ ಹಾಗೂ ವಿವಿಧ ಸಂಘ, ಸಂಸ್ಥೆಗಳು ಡಿ.20 ರಂದು ಮಡಿಕೇರಿಯಲ್ಲಿ ನಡೆಸುತ್ತಿರುವ ಹೋರಾಟಕ್ಕೆ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ನೈತಿಕ ಬೆಂಬಲ ನೀಡಲಿದೆ ಎಂದು ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸಿ ಮತ್ತು ಡಿ ಭೂಮಿ ಸಮಸ್ಯೆಗೆ ಪರಿಹಾರ ಸೂಚಿಸುವ ಬದಲು ಗೊಂದಲ ಸೃಷ್ಟಿಸಲಾಗಿದೆ. ತಲೆತಲಾಂತರಗಳಿಂದ ಕೃಷಿ ಮಾಡಿಕೊಂಡು ಬರುತ್ತಿರುವ ರೈತರ ಭೂಮಿ ಕಸಿದುಕೊಳ್ಳುವ ಪ್ರಯತ್ನವನ್ನು ಸರಕಾರ ಮಾಡುತ್ತಿದೆ. ಹೊರಗಿನ ಬಂಡವಾಳಶಾಹಿಗಳು ಕಬಳಿಕೆ ಮಾಡಿಕೊಂಡಿರುವ ಸಾವಿರಾರು ಎಕರೆ ಭೂಮಿಯನ್ನು ವಶಕ್ಕೆ ಪಡೆದುಕೊಳ್ಳಲು ವಿಫಲವಾಗಿರುವ ಸರಕಾರ ಸಣ್ಣ ರೈತರನ್ನು ಗುರಿ ಮಾಡಿ ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಪ್ರಯೋಗ ಮಾಡುತ್ತಿದೆ. 99 ವರ್ಷಗಳಿಗೆ ಗುತ್ತಿಗೆ ನೀಡಿದ ಭೂಮಿಯನ್ನು 999 ವರ್ಷಗಳೆಂದು ವಂಚಿಸಿದ ದೊಡ್ಡ ಬಂಡವಾಳಶಾಹಿಗಳನ್ನು ತೆರವುಗೊಳಿಸುವಂತೆ ನ್ಯಾಯಾಲಯದ ಆದೇಶವಿದ್ದರೂ ಕ್ರಮ ಕೈಗೊಳ್ಳದ ಸರಕಾರ ಸ್ಥಳೀಯ ರೈತರನ್ನು ಸಂಕಷ್ಟಕ್ಕೆ ತಳ್ಳುತ್ತಿದೆ ಎಂದು…

Read More

ಮಡಿಕೇರಿ ಡಿ.19 NEWS DESK : ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ ಮೈಸೂರು ಹಾಗೂ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ 2024-25 ನೇ ಸಾಲಿನಲ್ಲಿ ಗ್ರಾಮೀಣ ರೈತ ಮಹಿಳೆಯರಿಗೆ ಐದು ವಾರದ ನಾಟಿ ಕೋಳಿ ಮರಿಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿ ಜಿಲ್ಲೆಗೆ 218 (ಪರಿಶಿಷ್ಟ ಜಾತಿ-9, ಪರಿಶಿಷ್ಟ ಪಂಗಂಡ 189, ಸಾಮಾನ್ಯ 20) ಗುರಿ ನಿಗಧಿಯಾಗಿದ್ದು ಆಯ್ಕೆಯಾಗುವ ಪ್ರತಿ ಫಲಾನುಭವಿಗಳಿಗೆ ಐದು ವಾರದ ನಾಟಿ ಕೋಳಿ ಮರಿಗಳನ್ನು ಉಚಿತವಾಗಿ ವಿತರಣೆ ಮಾಡಲಾಗುವುದು. ಅರ್ಜಿಯನ್ನು ಭರ್ತಿ ಮಾಡಿ ಡಿಸೆಂಬರ್, 27 ರೊಳಗೆ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು ಪಶು ಆಸ್ಪತ್ರೆ ಮಡಿಕೇರಿ 9448647276, ವಿರಾಜಪೇಟೆ 9141093996, ಪೆÇನ್ನಂಪೇಟೆ 9480669439, ಸೊಮವಾರಪೇಟೆ 9980360200, ಕುಶಾಲನಗರ 9448422269 ಇವರನ್ನು ಸಂಪರ್ಕಿಸಬಹುದು. ಆಸಕ್ತ ಫಲಾನುಭವಿಗಳು ಈ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

Read More

ವಿರಾಜಪೇಟೆ ಡಿ.19 NEWS DESK : ವಿರಾಜಪೇಟೆಯ ನಾಟ್ಯ ಮಯೂರಿ ನೃತ್ಯ ಟ್ರಸ್ಟ್ ವತಿಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ನಯನ ಸಭಾಂಗಣದಲ್ಲಿ ಭಾರತ ಭೂಷಣ ಹಾಗೂ ಕರುನಾಡ ಭೂಷಣ ರಾಷ್ಟ್ರೀಯ ಪ್ರಶಸ್ತಿ ಮತ್ತು ನೃತ್ಯೋತ್ಸವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಕೆಪಿಸಿಸಿ ಸಂಯೋಜಕ ಮಂಜುನಾಥ ಶೆಟ್ಟಿ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಶಶಿಧರ್ ಕೋಟೆ, ಡಾ.ಕೆಂಚನೂರು ಶಂಕರ್, ಡಾ.ಶ್ರೀಧರ್, ಕಾಂತಿ ಶೆಟ್ಟಿ ಪಾಲ್ಗೊಂಡು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ತೋತಾಪುರಿ ಸೋಮಶೇಖರ ಗುರೂಜಿ ಕಲೆಯನ್ನು ಪ್ರೋತ್ಸಾಹಿಸಬೇಕು ಎಂದು ಹಿತನುಡಿಗಳನ್ನಾಡಿದರು. ಮಲ್ಲಿಕಾ ಕೇಶವ್, ವೆಂಕಟರಾಜು ವಿರಾಜಪೇಟೆಯ ನಾಟ್ಯ ಮಯೂರಿ ನೃತ್ಯ ಟ್ರಸ್ಟ್‍ನ ಪ್ರೇಮಂಜಲಿ ಇದ್ದರು. ಅನೇಕ ಕಡೆಗಳಿಂದ ನೃತ್ಯ ತಂಡಗಳು ಆಗಮಿಸಿ ಉತ್ತಮ ನೃತ್ಯ ಪ್ರದರ್ಶನ ನೀಡಿದರು. ಕಾರ್ಯಕ್ರಮದಲ್ಲಿ ಸುಮಾರು 80 ಜನರಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

Read More

ಮಡಿಕೇರಿ ಡಿ.19 NEWS DESK : ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಕಳೆದ 2022-23, 2023-24ನೇ ಸಾಲಿನ ಗೌರವ ಪ್ರಶಸ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 1. ಕೊಡವ ಭಾಷೆ-ಸಾಹಿತ್ಯ ಕ್ಷೇತ್ರ 2. ಕೊಡವ ಕಲೆ-ಜಾನಪದ ಕ್ಷೇತ್ರ 3. ಕೊಡವ ಸಂಸ್ಕೃತಿ – ಸಮಾಜ ಸೇವಾ ಕ್ಷೇತ್ರ – ಈ ಮೂರು ಕ್ಷೇತ್ರಗಳಲ್ಲಿ ಅನನ್ಯ ಸೇವೆ ಸಲ್ಲಿಸಿರುವ ಸಾಧಕರನ್ನು ಈ ಎರಡು ವರ್ಷಗಳ ಸಾಲಿನ ಪ್ರಶಸ್ತಿಗೆ ಪರಿಗಣಿಸಲಾಗುವುದು ಪ್ರತಿಯೊಂದು ಕ್ಷೇತ್ರಕ್ಕೆ ತಲಾ ಒಬ್ಬರಂತೆ ಒಟ್ಟು ಆರು ಜನ ಸಾಧಕರನ್ನು ಗೌರವ ಪ್ರಶಸ್ತಿಗೆ ಆಯ್ಕೆ ಮಾಡಲಾಗುವುದು. ಅರ್ಜಿಗಳನ್ನು ಸ್ವತಃ ಸಾಧಕರೇ ಸಲ್ಲಿಸಬಹುದು ಅಥವಾ ಸಾಧಕರ ಅಭಿಮಾನಿಗಳು ಶಿಫಾರಸ್ಸು ಮಾಡಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವವರು ತಮ್ಮ ಸೇವಾ ವಿವರ ಮತ್ತು ವ್ಯಕ್ತಿ ಪರಿಚಯದ ಎಲ್ಲಾ ಮಾಹಿತಿಯನ್ನು ಅಧ್ಯಕ್ಷರು / ರಿಜಿಸ್ಟ್ರಾರ್ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ, ಸ್ಕೌಟ್ಸ್ ಭವನ, ಮ್ಯಾನ್ಸ್ ಕಾಂಪೌಂಡ್ ಮಡಿಕೇರಿ-571201, ಈ ವಿಳಾಸಕ್ಕೆ ಅರ್ಜಿಯನ್ನು ಭಾವಚಿತ್ರ ಹಾಗೂ ದಾಖಲಾತಿಗಳ ಜೆರಾಕ್ಸ್ ಪ್ರತಿಗಳೊಂದಿಗೆ ಅಕಾಡೆಮಿಗೆ…

Read More

ಮಡಿಕೇರಿ ಡಿ.19 NEWS DESK : ರೈತರ ನ್ಯಾಯೋಚಿತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಡಿ.20 ರಂದು ರೈತ ಹೋರಾಟ ಸಮಿತಿ, ರೈತ ಸಂಘ ಮತ್ತು ವಿವಿಧ ಸಂಘ ಸಂಸ್ಥೆಗಳು ಮಡಿಕೇರಿಯಲ್ಲಿ ನಡೆಸುತ್ತಿರುವ ಬೃಹತ್ ಪ್ರತಿಭಟನೆಗೆ ಕೊಡಗು ಜಿಲ್ಲಾ ಜಾತ್ಯತೀತ ಜನತಾದಳ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಯುವ ಜೆಡಿಎಸ್ ಜಿಲ್ಲಾಧ್ಯಕ್ಷ ಸಿ.ಎಲ್.ವಿಶ್ವ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೃಷಿ ಪ್ರಧಾನ ನಾಡಾಗಿರುವ ಕರ್ನಾಟಕದಲ್ಲಿ ಪ್ರಸ್ತುತ ಇರುವ ಸರಕಾರದಿಂದ ರೈತರಿಗೆ ನ್ಯಾಯ ಸಿಗುತ್ತಿಲ್ಲ. ತಲೆತಲಾಂತರಗಳಿಂದ ಕೃಷಿ ಕಾರ್ಯ ಮಾಡಿಕೊಂಡು ಬರುತ್ತಿರುವ ರೈತಾಪಿ ವರ್ಗ ಕೃಷಿಭೂಮಿ ಕಳೆದುಕೊಳ್ಳುವ ಆತಂಕ ಎದುರಿಸುತ್ತಿದೆ. ಜೆಡಿಎಸ್ ಪಕ್ಷ ರೈತರ ಪರ ಸದಾ ಇದ್ದು, ಶುಕ್ರವಾರದ ಹೋರಾಟದಲ್ಲಿ ಭಾಗಿಯಾಗಲಿದೆ ಎಂದು ತಿಳಿಸಿದ್ದಾರೆ. ರಾಜ್ಯ ಸರಕಾರ ತಕ್ಷಣ ಎಚ್ಚೆತ್ತುಕೊಂಡು ಸಿ ಮತ್ತು ಡಿ ಭೂಮಿ ಗೊಂದಲ ನಿವಾರಿಸಬೇಕು, ಕೃಷಿಕರ ಭೂಮಿ ಕಸಿದುಕೊಳ್ಳುವ ಪ್ರಯತ್ನ ಮಾಡಬಾರದು, ವನ್ಯಜೀವಿಗಳ ಹಾವಳಿ ತಡೆಗೆ ಕ್ರಮ ಕೈಗೊಳ್ಳಬೇಕು ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು. ತಪ್ಪಿದಲ್ಲಿ…

Read More

ಮಡಿಕೇರಿ ಡಿ.19 NEWS DESK : ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಹೆಸರನ್ನು ಸಂಸತ್‍ನಲ್ಲಿ ಪ್ರಸ್ತಾಪಿಸಿ ಅಪಹಾಸ್ಯ ಮಾಡಿರುವ ಕೇಂದ್ರ್ರ ಗೃಹ ಸಚಿವ ಅಮಿತ್ ಷಾ ಅವರ ನಿಲುವನ್ನು ಖಂಡಿಸಿ ಡಿ.24 ರಂದು ನಗರದಲ್ಲಿ ಕೊಡಗು ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಒಕ್ಕೂಟದ ಪ್ರಮುಖರು, ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಅಪಮಾನಿಸುವ ಮೂಲಕ ಅಮಿತ್ ಷಾ ಅವರು ಸಂವಿಧಾನಕ್ಕೆ ಅವಮಾನ ಮಾಡಿದ್ದಾರೆ. ತಕ್ಷಣವೆ ಗೃಹ ಸಚಿವರು ರಾಷ್ಟ್ರದ ಜನತೆಯ ಮುಂದೆ ಕ್ಷಮೆ ಯಾಚನೆ ಮಾಡಬೇಕು ಮತ್ತು ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕೆಂದು ಆಗ್ರಹಿಸಿದರು. ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟದಿಂದ ಡಿ.24 ರಂದು ಬೆಳಗ್ಗೆ 11 ಗಂಟೆಗೆ ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ವೃತ್ತದಲ್ಲಿ ಪ್ರತಿಭಟನೆ ನಡೆದು, ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಗುತ್ತದೆಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ದಸಂಸ ಸಂಚಾಲಕರಾದ ದಿವಾಕರ್, ಒಕ್ಕೂಟದ ಸಂಚಾಲಕ ಮೋಹನ್ ಮೌರ್ಯ, ಕಾರ್ಯದರ್ಶಿ ಗಣೇಶ್, ಪ್ರಮುಖರಾದ ಇಸಾಖಾನ್,…

Read More

ಮಡಿಕೇರಿ ಡಿ.19 NEWS DESK : ಮುಂಬರುವ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯ್ತಿ ಚುನಾವಣೆಗಳ ಹಿನ್ನೆಲೆಯಲ್ಲಿ ಆಮ್ ಆದ್ಮಿ ಪಕ್ಷವನ್ನು ಸಂಘಟಿಸುವ ಮತ್ತು ಸದಸ್ಯತ್ವ ಅಭಿಯಾನವನ್ನು ಆರಂಭಿಸುವ ಸಲುವಾಗಿ ಡಿ.21 ರಂದು ಪಕ್ಷದ ರಾಜ್ಯಾಧ್ಯಕ್ಷರಾದ ಮುಖ್ಯ ಮಂತ್ರಿ ಚಂದ್ರು ಅವರು ಜಿಲ್ಲಾ ಕೇಂದ್ರ್ರ ಮಡಿಕೇರಿಗೆ ಆಗಮಿಸಲಿದ್ದಾರೆಂದು ಪಕ್ಷದ ಜಿಲ್ಲಾ ಅಧ್ಯಕ್ಷ ಮುಕ್ಕಾಟಿರ ಕೆ.ಅಪ್ಪಯ್ಯ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗು ಜಿಲ್ಲೆಯಲ್ಲಿ 2012ರಲ್ಲಿ ಪಕ್ಷ ತನ್ನ ಅಸ್ತಿತ್ವವನ್ನು ಕಂಡು ಕೊಂಡಿದ್ದು, ಪ್ರಸ್ತುತ ಗ್ರಾಮೀಣ ಭಾಗಗಳಿಗೂ ಪಸರಿಸಿದ್ದು, ಸಾಕಷ್ಟು ಸದಸ್ಯರುಗಳನ್ನು ಹೊಂದಿದೆ. ನಮ್ಮೆಲ್ಲ ಪಕ್ಷದ ಸದಸ್ಯರನ್ನು ಅಭಿಮಾನಿಗಳನ್ನು ಸಂಘಟಿಸುವ ಚಿಂತನೆಯಡಿ ಮುಖ್ಯಮಂತ್ರಿ ಚಂದ್ರು ನಗರಕ್ಕೆ ಆಗಮಿಸಿದ್ದು, ಮಧ್ಯಾಹ್ನ 1 ಗಂಟೆಗೆ ಬಾಲಭವನದಲ್ಲಿ ಕಾರ್ಯಕರ್ತರ ಸಭೆಯನ್ನು ನಡೆಸಲಿದ್ದಾರೆಂದು ಮಾಹಿತಿ ನೀಡಿದರು. ಸಭೆಯ ಸಂದರ್ಭವೇ ಸದಸ್ಯತ್ವ ನೋಂದಣಿ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ. ಸಭೆಯಲ್ಲಿ ಸಾರ್ವಜನಿಕರು ಪಾಲ್ಗೊಳ್ಳಬಹುದೆಂದು ತಿಳಿಸಿದ ಅಪ್ಪಯ್ಯ, ಮುಖ್ಯ ಮಂತ್ರಿ ಚಂದ್ರು ಅವರು ಅಂದು ಸ್ಥಳೀಯ ನಾಯಕರ ಸೌಹಾರ್ದ ಭೇಟಿ ಕಾರ್ಯಕ್ರಮವನ್ನು ಇಟ್ಟು ಕೊಂಡಿರುವುದಾಗಿ…

Read More

ಮಡಿಕೇರಿ ಡಿ.19 NEWS DESK : ರೈತರ ಕೃಷಿಭೂಮಿಯನ್ನು ರೈತರಿಗೆ ಮಂಜೂರು ಮಾಡಬೇಕು, ಸಿ ಮತ್ತು ಡಿ ಭೂಮಿ ಗೊಂದಲ ನಿವಾರಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಡಿ.20 ರಂದು ರೈತ ಹೋರಾಟ ಸಮಿತಿ, ರೈತ ಸಂಘ ಮತ್ತು ವಿವಿಧ ಸಂಘ ಸಂಸ್ಥೆಗಳು ಮಡಿಕೇರಿಯಲ್ಲಿ ನಡೆಸುತ್ತಿರುವ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ಮಡಿಕೇರಿ ನಗರ ಚೇಂಬರ್ ಆಫ್ ಕಾಮರ್ಸ್ ನ ಮಾಜಿ ಅಧ್ಯಕ್ಷ ಎಂ.ಧನಂಜಯ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ದೇಶದ ಆಸ್ತಿಯಾಗಿರುವ ಮತ್ತು ಆರ್ಥಿಕ ಕ್ಷೇತ್ರಕ್ಕೆ ಬಲ ತುಂಬುತ್ತಿರುವ ರೈತರ ನ್ಯಾಯೋಚಿತ ಬೇಡಿಕೆಗಳನ್ನು ಸರಕಾರ ಈಡೇರಿಸಬೇಕು. ತಲೆತಲಾಂತರಗಳಿಂದ ಕೃಷಿ ಕಾರ್ಯ ಮಾಡಿಕೊಂಡು ಬಂದಿರುವ ರೈತರ ಹಿತ ಕಾಯಬೇಕು. ಹಸಿರು ನ್ಯಾಯಾಲಯಕ್ಕೆ ಒತ್ತಡ ಹಾಕಿ ಸ್ಥಳೀಯ ಜನರನ್ನು ಒಕ್ಕಲೆಬ್ಬಿಸುವುದನ್ನು ತಪ್ಪಿಸಬೇಕು ಎಂಬಿತ್ಯಾದಿ ಬೇಡಿಕೆಗಳಿಗೆ ನನ್ನ ಸಹಮತವಿದ್ದು, ಹೋರಾಟದಲ್ಲಿ ಪಾಲ್ಗೊಂಡು ಕೃಷಿಕ ವರ್ಗಕ್ಕೆ ಬೆಂಬಲ ನೀಡುವುದಾಗಿ ಹೇಳಿದ್ದಾರೆ.

Read More