ಮಡಿಕೇರಿ ಜ.12 : ಕರ್ನಾಟಕ ಸ್ಪೋರ್ಟ್ಸ್ ಡ್ಯಾನ್ಸ್ ಅಸೋಸಿಯೇಷನ್ ವತಿಯಿಂದ ಮಂಡ್ಯದಲ್ಲಿ ನಡೆದ ರಾಜ್ಯಮಟ್ಟದ ನೃತ್ಯ ಸ್ಪರ್ಧೆಯಲ್ಲಿ ಹೆಗ್ಗಳ ಗ್ರಾಮದ ಪಿ.ಎ. ಇಶಾನಿ ಮೂರು ಚಿನ್ನದ ಪದಕ ಪಡೆದು, ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಇವಳು ಹೆಗ್ಗಳ ಗ್ರಾಮದ ಪಡಂಬೈಲು ಅನಿಲ್ ಮತ್ತು ತೀರ್ಥ ದಂಪತಿಗಳ ಪುತ್ರಿ.
ಲೇಖಕ: admin
ಮಡಿಕೇರಿ ಜ.12 : ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು, ಸಮರ್ಪಣ್ ಮತ್ತು ವೀರಲೋಕ ಸಂಯುಕ್ತಾಶ್ರಯದಲ್ಲಿ ಮಡಿಕೇರಿ ರೋಟರಿ ವುಡ್ಸ್ ಸಹಯೋಗದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕಂಪ್ಯೂಟರ್ ಪ್ರಯೋಗಾಲಯದ ಉನ್ನತೀಕರಣ ಸಮಾರಂಭವು ಜ.13 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಸಭಾಂಗಣದಲ್ಲಿ ನಡೆಯಲಿದೆ. ಬೆಂಗಳೂರು ವೀರಲೋಕ ಮುಖ್ಯಸ್ಥರಾದ ವೀರಕಪುತ್ರ ಶ್ರೀನಿವಾಸ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕರಾದ ಡಾ.ಮಂತರ್ ಗೌಡ ಅವರು ಉದ್ಘಾಟಿಸಲಿದ್ದಾರೆ. ಜಿಲ್ಲಾಧಿಕಾರಿ ವೆಂಕಟ್ ರಾಜಾ, ಪೊಲೀಸ್ ಅಧಿಕಾರಿ ಎಲ್.ವೈ.ರಾಜೇಶ್, ಮಡಿಕೇರಿ ರೋಟರಿ ವುಡ್ಸ್ ಅಧ್ಯಕ್ಷರಾದ ವಸಂತ್ ಕುಮಾರ್, ಶಕ್ತಿ ದಿನಪತ್ರಿಕೆಯ ಸಲಹಾ ಸಂಪಾದಕರಾದ ಬಿ.ಜಿ.ಅನಂತಶಯನ, ಬೆಂಗಳೂರು ಸಮರ್ಪಣ್ ಟ್ರಸ್ಟ್‍ನ ಮುಖ್ಯಸ್ಥರಾದ ಸಾಗರ್, ಸರ್ಕಾರಿ ಪದವಿ ಪೂರ್ವ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಎ.ಪಿ.ಧನಂಜಯ, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪಿ.ಆರ್.ವಿಜಯ ಇತರರು ಪಾಲ್ಗೊಳ್ಳಲಿದ್ದಾರೆ.
ಮಡಿಕೇರಿ ಜ.11 : ಭಾರತ ಔಷಧಿ ವ್ಯಾಪಾರಿಗಳ ಸಂಘದ ಸಂಘಟನಾ ಕಾಯ೯ದಶಿ೯ಯಾಗಿ ಆಯ್ಕೆಯಾದ ಮಡಿಕೇರಿಯ ಸಪ್ತಗಿರಿ ಔಷಧಿ ಮಾರಾಟ ಸಂಸ್ಥೆಯ ಉದ್ಯಮಿ ಅಂಬೆಕಲ್ ಜೀವನ್ ಕುಶಾಲಪ್ಪ ಅವರನ್ನು ಕನಾ೯ಟಕ ರಾಜ್ಯ ಔಷಧಿ ವ್ಯಾಪಾರಿಗಳ ಸಂಘದ ವತಿಯಿಂದ ಸನ್ಮಾನಿಸಲಾಯಿತು. ಬೆಂಗಳೂರಿನ ನಗರಬಾವಿಯಲ್ಲಿರುವ ಕಿಂಗ್ಸ್ ಕ್ಲಬ್ ನಲ್ಲಿ ಆಯೋಜಿತ ಸಮಾರಂಭದಲ್ಲಿ ಅಂಬೆಕಲ್ ಜೀವನ್ ಕುಶಾಲಪ್ಪ ಅವರನ್ನು ರಾಜ್ಯ ಔಷಧಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ರಘುನಾಥ ರೆಡ್ಡಿ, ಅಖಿಲ ಭಾರತ ಔಷಧ ವ್ಯಾಪಾರಿಗಳ ಸಂಘದ ಅಧ್ಯಕ್ಷ ಜಗನ್ನಾಥ್ ಸಿಂಧೆ, ರಾಷ್ಟ್ರೀಯ ಕಾಯ೯ದಶಿ೯ ರಾಜೀವ್ ಸಿಂಘಾಲ್, ದಕ್ಷಿಣ ವಲಯ ಉಪಾಧ್ಯಕ್ಷ ಮೋಹನ್, ಮತ್ತಿತರರು ಗೌರವಿಸಿ ಸನ್ಮಾನಿಸಿದರು. ಇದೇ ಸಂದಭ೯ ರಾಜ್ಯದ ವಿವಿಧ ಜಿಲ್ಲೆಗಳ ಔಷಧಿ ವ್ಯಾಪಾರಸ್ಥರ ಸಂಘದ ವತಿಯಿಂದಲೂ ಜೀವನ್ ಅವರನ್ನು ಸನ್ಮಾನ ಮಾಡಲಾಯಿತು. ಜೀವನ್ ಅವರು ರಾಷ್ಟ್ರೀಯ ಮಟ್ಟದಲ್ಲಿ ಔಷಧಿ ವ್ಯಾಪಾರಿಗಳ ವಿವಿಧ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವ ಭರವಸೆ ತಮಗಿದ್ದು, ಪಾಂಡಿಚೇರಿ, ಲಕ್ಷ್ದದ್ವೀಪದಲ್ಲಿ ಸಂಘಟನೆ ಬಲಗೊಳಿಸುವ ನಿಟ್ಟಿನಲ್ಲಿ ಹೆಚ್ಚಿನ ಮುತುವಜಿ೯ ವಹಿಸಲು…
ಮಡಿಕೇರಿ ಜ.11 : ಇದೇ ಜನವರಿ ತಿಂಗಳಲ್ಲಿ ಶಿವಯೋಗಿ ಸಿದ್ದರಾಮೇಶ್ವರ, ಮಹಾಯೋಗಿ ವೇಮನ, ಅಂಬಿಗರ ಚೌಡಯ್ಯ ಮತ್ತು ಮಡಿವಾಳ ಮಾಚಿದೇವ ಜಯತ್ಯೋತ್ಸವ ಆಚರಣೆ ಸಂಬಂಧ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆಯು ನಡೆಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಜ.15 ರಂದು ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ನಿಗದಿಯಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಸಭೆಯ ಗಮನಕ್ಕೆ ತಂದರು. ಈ ಸಂದರ್ಭದಲ್ಲಿ ಮಾತನಾಡಿದ ಭೋವಿ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷರಾದ ಡಿ.ಸುಜೀತ್ ಅವರು ಜನವರಿ, 15 ರಂದು ಮಕರ ಸಂಕ್ರಾಂತಿ ಹಬ್ಬ ಇರುವುದರಿಂದ ಜನವರಿ, 22 ರಂದು ಕಾರ್ಯಕ್ರಮ ಆಯೋಜಿಸುವಂತಾಗಬೇಕು ಎಂದು ಕೋರಿದರು. ಜ.21 ರಂದು ಅಂಬಿಗರ ಚೌಡಯ್ಯ ಜಯಂತಿ ನಿಗದಿಯಾಗಿದ್ದು, ಜ.21 ರ ಬದಲಾಗಿ, 22 ರಂದು ಕಾರ್ಯಕ್ರಮ ಆಯೋಜಿಸುವಂತೆ ಕಾವೇರಿ ಮೀನುಗಾರರ ಸಂಘದ ಮಾಜಿ ಅಧ್ಯಕ್ಷರಾದ ಇ.ಎಸ್.ಶ್ರೀನಿವಾಸ್ ಅವರು ಮನವಿ ಮಾಡಿದರು. ಈ ಎರಡು ಕಾರ್ಯಕ್ರಮವನ್ನು ನಗರದ ಗಾಂಧಿ…
ಮಡಿಕೇರಿ ಜ.11 : ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ 2002 ನ.4 ರಂದು ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಪ್ರಾರಂಭಗೊಂಡ ‘ಸಾಂತ್ವನ ಮಹಿಳಾ ಸಹಾಯವಾಣಿ’ ಕೊಡಿಗಿನಾದ್ಯಂತ ಸಮಾಜದ ನೊಂದ ಮಹಿಳೆಯರು ಪ್ರತಿಯೊಂದು ಸ್ತರದಲ್ಲಿ ಎದುರಿಸುತ್ತಿರುವ ಹಲವಾರು ಸಮಸ್ಯೆಗಳನ್ನು ದಾಖಲಿಸಿಕೊಂಡು ತಕ್ಷಣಕ್ಕೆ ಸರಿಯಾದ ಸಲಹೆ ಸೂಚನೆಗಳನ್ನು ನೀಡಿ ನೆರವು ಕಲ್ಪಿಸುತ್ತಾ ಬಂದಿರುತ್ತದೆ. ಸಾಂತ್ವನ ಕೇಂದ್ರದಲ್ಲಿ ಈವರೆಗೆ 5024 ವಿವಿಧ ಸ್ವರೂಪದ ಪ್ರಕರಣಗಳು ದಾಖಲಾಗಿದ್ದು, 5014 ಪ್ರಕರಣಗಳು ಇತ್ಯರ್ಥಗೊಂಡಿರುತ್ತದೆ. 2023-24ನೇ ಆರ್ಥಿಕ ಸಾಲಿನಲ್ಲಿ ಏಪ್ರಿಲ್ ತಿಂಗಳಿನಿಂದ 2023 ರ ಏಪ್ರಿಲ್, 01 ರಿಂದ ಡಿಸೆಂಬರ್ ತಿಂಗಳ ಅಂತ್ಯದವರೆಗೆ, 220 ಪ್ರಕರಣಗಳು ದಾಖಲಾಗಿ 210 ಪ್ರಕರಣಗಳು ಇತ್ಯರ್ಥಗೊಂಡು ಉಳಿದ 10 ಪ್ರಕರಣಗಳು ಇತ್ಯರ್ಥದ ಹಂತದಲ್ಲಿರುತ್ತದೆ. ಮಹಿಳಾ ಸಹಾಯವಾಣಿಯ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಸಾಂತ್ವನ ಕೇಂದ್ರದ ಅಧ್ಯಕ್ಷರಾದ ಕೆ.ಎಸ್.ಪ್ರಕಾಶ್ ಹಾಗೂ ಪ್ರಧಾನ ಕಾರ್ಯದರ್ಶಿ ನಮಿತ ಆರ್. ರೈ ಅವರು ಕೋರಿದ್ದಾರೆ. ಹೆಚ್ಚಿನ ಮಾಹಿತಿಗೆ ದೂ.ಸಂ. 9880985939 ನ್ನು ಸಂಪರ್ಕಿಸಬಹುದು. ಈ ವರೆಗೆ…
ಮಡಿಕೇರಿ ಜ.11 : ರಾಷ್ಟ್ರೀಯ ಆಯುಷ್ ಅಭಿಯಾನದ ಯೋಜನೆಯಡಿ ಕೊಡಗು ಜಿಲ್ಲಾ ಆಯುಷ್ ಇಲಾಖೆಯ ಪಾರಾಣೆ ಮತ್ತು ಶ್ರೀಮಂಗಲ ಆಯುಷ್ ಆರೋಗ್ಯ ಹಾಗೂ ಕ್ಷೇಮ ಕೇಂದ್ರಗಳಿಗೆ ಕಮ್ಯುನಿಟಿ ಹೆಲ್ತ್ ಆಫೀಸರ್ (ಸಿಎಚ್‍ಒ) ಹುದ್ದೆಗಳಿಗೆ ಹಾಗೂ ವಿರಾಜಪೇಟೆ ಸರ್ಕಾರಿ ಆಯುರ್ವೇದ ಆಸ್ಪತ್ರೆಯಲ್ಲಿ ಖಾಲಿ ಇರುವ ಮಲ್ಟಿಪರ್ಪಸ್ ವರ್ಕರ್ ಹುದ್ದೆಯನ್ನು ಭರ್ತಿ ಮಾಡುವ ಸಂಬಂಧ ಈಗಾಗಲೇ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಜ.16 ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ಆಯುಷ್ ಸಮಿತಿಯ ಅಧ್ಯಕ್ಷರಾದ ಜಿಲ್ಲಾಧಿಕಾರಿ ಹಾಗೂ ಸಮಿತಿ ಸದಸ್ಯರ ಸಮ್ಮುಖದಲ್ಲಿ ನೇರ ಸಂದರ್ಶನ ನಡೆಯಲಿದೆ. ಅಭ್ಯರ್ಥಿಗಳು ತಮ್ಮ ಮೂಲ ದಾಖಲಾತಿಗಳೊಂದಿಗೆ ನಿಗಧಿತ ಸಮಯಕ್ಕೆ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಾಜರಾಗುವಂತೆ ಸೂಚಿಸಿದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ಆಯುಷ್ ಕಚೇರಿಯ ದೂ.ಸಂ.08272-295128 ಹಾಗೂ 8618442161 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ಆಯುಷ್ ಅಧಿಕಾರಿ ಹಾಗೂ ಜಿಲ್ಲಾ ಆಯುಷ್ ಸಮಿತಿಯ ಸದಸ್ಯ ಕಾರ್ಯದರ್ಶಿ ಡಾ.ರೇಣುಕಾದೇವಿ ಅವರು ತಿಳಿಸಿದ್ದಾರೆ.
ಮಡಿಕೇರಿ ಜ.11 : ಬೆಂಗಳೂರಿನ ಆರ್.ಎ.ಮಂಡುಕರ್ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಅಕಾಡೆಮಿಯಲ್ಲಿ ನಡೆದ ರಾಜ್ಯ ಮಟ್ಟದ ವೃತ್ತಿಪರ ಮತ್ತು ಕ್ರೀಡಾಕೂಟ ಸಮಾರೋಪ ಸಮಾರಂಭದಲ್ಲಿ ಕೊಡಗು ಜಿಲ್ಲೆಯ ಎಚ್.ಆರ್.ಪಲ್ಲವಿ ಅವರು 400 ಮೀಟರ್ ಓಟ ಸ್ಪರ್ಧೆಯಲ್ಲಿ ಪ್ರಥಮ ಮತ್ತು 100 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ ಪಡೆದು ಮಹಿಳೆಯರ ವಿಭಾಗದಲ್ಲಿ ವೈಯಕ್ತಿಕ ಚಾಂಪಿಯನ್ ಶಿಪ್‍ಆಗಿ ಕೊಡಗು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಹಾಗೂ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಹಾಗೆಯೇ ವೈ.ಎನ್.ಕವನ್ ಕುಮಾರ್ ಅವರು ಪುರುಷರ ವಿಭಾಗದ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಕೊಡಗು ಜಿಲ್ಲೆಯಿಂದ 4 ಮಂದಿ ಗೃಹರಕ್ಷಕರು ಕ್ರೀಡಾಕೂಟದಲ್ಲಿ ಪಾಲ್ಗೊಂಡು ರಾಜ್ಯ ಮಟ್ಟದ ವೃತ್ತಿಪರ ಮತ್ತು ಕ್ರೀಡಾಕೂಟದಲ್ಲಿ ಜಯ ಸಾಧಿಸಿದ್ದಾರೆ. ಎ.ಪಿ.ಜಯಕುಮಾರ್ ಅವರು ಬೆಂಗಳೂರಿನ ಗೃಹರಕ್ಷಕ ಮತ್ತು ಪೌರರಕ್ಷಣಾ ತರಬೇತಿ ಅಕಾಡೆಮಿಯಲ್ಲಿ ನಡೆದ ಅಡ್ವಾನ್ಸ್ ಪೈರ್ ಪೈಟಿಂಗ್ ತರಬೇತಿಯಲ್ಲಿ ಒಟ್ಟು 60 ಗೃಹರಕ್ಷಕರಲ್ಲಿ ಪ್ರಥಮ ಸ್ಥಾನಪಡೆದಿರುತ್ತಾರೆ. ಮತ್ತು ಗೃಹರಕ್ಷಕರ ಅಧೀಕಾರಿಗಳ ತರಬೇತಿಯಲ್ಲಿ ದ್ವೀತೀಯ ಸ್ಥಾನ ಪಡೆದಿರುತ್ತಾರೆ. ಹಾಗೂ…
ಸೋಮವಾರಪೇಟೆ ಜ.11 : ‘ಕೊಡವ ಲ್ಯಾಂಡ್’ ಬೇಡಿಕೆ ರಾಜ್ಯಾಂಗದ ಆರನೇ ಶೆಡ್ಯೂಲ್ ಅನ್ವಯ ಸ್ಥಾಪನೆಯಾದಲ್ಲಿ, ಜಿಲ್ಲೆಯ ಇತರೆ ಜನಾಂಗದವರು ಕಡೆಗಣಿಸಲ್ಪಡುವ ಆತಂಕ ವಿವಿಧ ಜನಾಂಗದ ಪ್ರಮುಖರ ಸಭೆಯಲ್ಲಿ ವ್ಯಕ್ತವಾಯಿತು. ಕೊಡವ ಲ್ಯಾಂಡ್ ವಿರುದ್ಧ ಜಿಲ್ಲಾ ಸೌಹಾರ್ದ ವೇದಿಕೆ ವತಿಯಿಂದ ಇಲಿನ ಒಕ್ಕಲಿಗರ ಸಮುದಾಯ ಭವನದಲ್ಲಿ ಗುರುವಾರ ಕರೆಯಲಾಗಿದ್ದ ಸಭೆಯಲ್ಲಿ ವೇದಿಕೆಯ ಪ್ರಮುಖರಾದ ಎಸ್.ಎಂ. ಚಂಗಪ್ಪ ಮಾತನಾಡಿ, ಕೊಡವ ಸ್ವಾಯತ್ತ ಜಿಲ್ಲಾ ಕೌನ್ಸಿಲ್ ಸ್ಥಾಪನೆಯಾದರೆ, ಇತರೆಲ್ಲ ಜನಾಂಗದವರು ಕಡೆಗಣಿಸಲ್ಪಡುವ ಸಾಧ್ಯತೆ ಇರುವುದರೊಂದಿಗೆ, ಮತ್ತೆ ಅದರ ವಿರುದ್ಧ ಹೋರಾಟ ನಡೆಸಬೇಕಾದ ಅನಿವಾರ್ಯತೆ ಮೂಡಬಹುದೆಂದು ಎಚ್ಚರಿಕೆಯ ನುಡಿಗಳನ್ನಾಡಿದರು. ಕೊಡವ ನ್ಯಾಷನಲ್ ಕೌನ್ಸಿಲ್‍ನ ಪ್ರಮುಖರು ಸ್ವಾಯತ್ತ ಜಿಲ್ಲೆ ಸ್ಥಾಪನೆಗೆ ಈಗಾಗಲೇ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕಳೆದ ಮಾ.15ರಂದು ರಾಜ್ಯ ಉಚ್ಚ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಕರ್ನಾಟಕ ಸರ್ಕಾರ, ಕೇಂದ್ರ ಗೃಹ ಇಲಾಖೆ, ಕಾನೂನು ಇಲಾಖೆಯನ್ನು ಪ್ರತಿವಾದಿಗಳನ್ನಾಗಿಸಲಾಗಿದೆ. ಇನ್ನು ಇತರ ಜನಾಂಗದವರು ಮೌನಕ್ಕೆ ಶರಣಾದರೆ, ಮುಂದಿನ ಪೀಳಿಗೆಗೆ ಸಂಕಷ್ಟ ಎದುರಾಗಲಿದೆಯೆಂದು ಎಚ್ಚರಿಸಿದರು. 6ನೇ ಶೆಡ್ಯೂಲ್‍ನಲ್ಲಿ ಅಸ್ಸಾಂ, ಮಿಜೋರಾಂ, ಮೇಘಾಲಯ, ತ್ರಿಪುರ…
ಮಡಿಕೇರಿ ಜ.11 : ಗಣರಾಜ್ಯೋತ್ಸವ ಅಂಗವಾಗಿ ಅಮಿಟಿ ಯೂನೈಟೆಡ್ ಎಫ್‍ಸಿ ವತಿಯಿಂದ ಜ.26 ರಿಂದ 28ರ ವರೆಗೆ ಸುಂಟಿಕೊಪ್ಪದ ಗದ್ದೆಹಳ್ಳದಲ್ಲಿ 5+2 ಆಟಗಾರರ ರಾಜ್ಯ ಮಟ್ಟದ ಹೊನಲು ಬೆಳಕಿನ ಫುಟ್ಬಾಲ್ ಪಂದ್ಯಾವಳಿ ನಡೆಯಲಿದೆ ಎಂದು ಸಂಘದ ಸದಸ್ಯ ಎಸ್.ಎ.ಸತ್ತಾರ್ ಇಚ್ಚ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಂಟಿಕೊಪ್ಪದ ಗದ್ದೆಹಳ್ಳದ ಸೈಟ್ ಮೈದಾನದಲ್ಲಿ ಪ್ರತಿದಿನ ಬೆಳಗ್ಗೆ 10 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಪಂದ್ಯಾವಳಿ ನಡೆಯಲಿದ್ದು, ಆಸಕ್ತ ತಂಡಗಳು ಮೈದಾನ ಶುಲ್ಕ ನೀಡಿ ತಂಡಗಳ ಹೆಸರು ನೋಂದಾಯಿಸಿಕೊಳ್ಳುವಂತೆ ತಿಳಿಸಿದರು. ಪಂದ್ಯಾವಳಿಯ ಸಲುವಾಗಿ ಜ.26ರಂದು ಸುಂಟಿಕೊಪ್ಪದ ನುಜುಮಾ ನುರಿಯಾ ಮದ್ರಾಸ್ ಹಾಲ್‍ನಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿದೆ ಎಂದು ಹೇಳಿದರು. ಕ್ರೀಡಾಕೂಟದ ಉಸ್ತುವಾರಿ ಎಂ.ಎಂ.ನೌಫಲ್ ಮಾತನಾಡಿ, ಗ್ರಾಮೀಣ ಪ್ರತಿಭೆಗಳನ್ನು ಗುರುತಿಸುವ ಸಲುವಾಗಿ ಕ್ರೀಡಾಕೂಟವನ್ನು ಆಯೋಜಿಸಲಾಗಿದ್ದು, 40 ತಂಡಗಳ ನಿರೀಕ್ಷಿಸಲಾಗಿದೆ ಎಂದರು. ಪ್ರಥಮ ಸ್ಥಾನ ಪಡೆದ ತಂಡಕ್ಕೆ 66,666 ನಗದು ಮತ್ತು ಆಕರ್ಷಕ ರೋಸ್‍ವುಡ್‍ನಿಂದ ತಯಾರಿಸಿದ ಟ್ರೋಫಿ, ದ್ವಿತೀಯ ಸ್ಥಾನ ಪಡೆದ ತಂಡಕ್ಕೆ 33,333 ನಗದು…
ಮಡಿಕೇರಿ ಜ.11 : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರು, ಹಿರಿಯ ಸಾಹಿತಿಗಳೂ ಆದ ಎಸ್.ಸಿ.ರಾಜಶೇಖರ್ ಅವರು ಮೈಸೂರಿನಲ್ಲಿ ನಿಧನರಾಗಿದ್ದಾರೆ. ವಯೋಸಹಜವಾದ ಅನಾರೋಗ್ಯದಿಂದ ಬಳಲುತ್ತಿದ್ದ ರಾಜಶೇಖರ್ ಅವರು ಮೈಸೂರಿನ ಜೆಪಿ.ನಗರದ ಮಗನ ಮನೆಯಲ್ಲಿ ನೆಲೆಸಿದ್ದರು. ಇವರು ಜ.10 ರಂದು ಕೊನೆಯುಸಿರೆಳೆದಿದ್ದಾರೆ. ರಾಜಶೇಖರ ಅವರು ವ್ಯಾಪಕ ಓದಿನ ಉಪನ್ಯಾಸಕರು, ಸಾಹಿತಿಗಳು ಆಗಿದ್ದರು. ಅವರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಜಿಲ್ಲೆಯಲ್ಲಿ ಹಲವು ಸಾಹಿತ್ಯ ಪರ ಚಟುವಟಿಕೆಗಳನ್ನು ನಡೆಸಿದ್ದರು. :: ಸಂತಾಪ :: ರಾಜಶೇಖರ್ ಅವರ ನಿಧನಕ್ಕೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೇಶವ ಕಾಮತ್, ಮಾಜಿ ಅಧ್ಯಕ್ಷರಾದ ಎಂ.ಎಸ್.ಪೂವಯ್ಯ, ಟಿ.ಪಿ.ರಮೇಶ್, ಲೋಕೇಶ್ ಸಾಗರ್, ಮಾಜಿ ಕಾರ್ಯದರ್ಶಿ ಜೆ.ಸೋಮಣ್ಣ ಸಂತಾಪ ಸೂಚಿಸಿದ್ದಾರೆ.






