ಲೇಖಕ: admin

ಮಡಿಕೇರಿ ಜ.11 : ಸಿನಿಮಾದ ಮೂಲಕ ಸಮಾಜಕ್ಕೆ ಉತ್ತಮ ಸಂದೇಶವನ್ನು ನೀಡುವ ಉದ್ದೇಶದಿಂದ ಕುಟುಂಬ ಸದಸ್ಯರೇ ಸೇರಿ `ಕಿಲ್ಲಿಂಗ್ ಡಾಲ್’ ಎಂಬ ಕಿರುಚಿತ್ರವನ್ನು ನಿರ್ಮಿಸಲಾಗಿದೆ ಎಂದು ಚಿತ್ರದ ನಿರ್ದೇಶಕ ಐಮಣಿಯಂಡ ಲೋಹಿತ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಚಿತ್ರದ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದ ಅವರು, ವಿರಾಜಪೇಟೆಯ ಚೂರಿಯಲ್ ಎಂಬಲ್ಲಿ ಚಿತ್ರೀಕರಣ ನಡೆದಿದ್ದು, ಜ.14ರಂದು ಲೋಹಿತ್ ಸ್ಟುಡಿಯೋ ಯೂಟ್ಯೂಬ್ ಚಾನಲ್‍ನಲ್ಲಿ ಚಿತ್ರ ಬಿಡುಗಡೆಯಾಗಲಿದೆ ಎಂದು ಮಾಹಿತಿ ನೀಡಿದರು. ಮಧ್ಯಮ ವರ್ಗದ ಯುವಕನೊಬ್ಬನ ಸುತ್ತ ಹೆಣೆದಿರುವ ಕಥೆಯಾಗಿದ್ದು, ನೋಡಲು ಅಷ್ಟೇನು ಸುಂದರವಲ್ಲದ ಯುವಕ ಮನನೊಂದು ತೆಗೆದುಕೊಳ್ಳುವ ತಪ್ಪು ನಿರ್ಧಾರಗಳು ಹಾಗೂ ಅದರಿಂದ ಸಮಾಜದ ಮೇಲಾಗುವ ದುಷ್ಪರಿಣಾಮದ ಕುರಿತು 35 ನಿಮಿಷದ ಕಿರುಚಿತ್ರದಲ್ಲಿ ತೋರಿಸಲಾಗಿದೆ ಎಂದು ತಿಳಿಸಿದರು. ಈ ಕಿರಿಚಿತ್ರವನ್ನು ತಾನೇ ನಿರ್ದೇಶನ, ನಿರ್ಮಾಣ ಮಾಡಿ, ಪ್ರಮುಖ ಪಾತ್ರದಲ್ಲಿ ನಟಿಸಿದ್ದು, ಸುಮಾರು 1 ಲಕ್ಷ ಬಜೆಟ್‍ನಲ್ಲಿ ಚಿತ್ರ ಮೂಡಿ ಬಂದಿದೆ. ನಟನೆಯ ಬಗ್ಗೆ ಕಿಂಚಿತ್ತೂ ಅನುಭವ ಇಲ್ಲದ ಕುಟುಂಬದ 15 ಮಂದಿ ಮೊದಲ ಬಾರಿಗೆ…

Read More

ಮಡಿಕೇರಿ ಜ.11 : ಚೆಟ್ಟಳ್ಳಿಯ ಕೇಂದ್ರೀಯ ತೋಟಗಾರಿಕಾ ಪ್ರಾಯೋಗಿಕಾ ಕೇಂದ್ರದ ವತಿಯಿಂದ ಜ.17 ರಂದು ಚೆಟ್ಟಳ್ಳಿಯಲ್ಲಿ ಪ್ಯಾಶನ್ ಫ್ರೂಟ್ ಮತ್ತು ಪಪ್ಪಾಯ ಹಣ್ಣಿನ ವೈವಿಧ್ಯತೆಯ ಪ್ರದರ್ಶನ ಮತ್ತು ಚರ್ಚೆ ನಡೆಯಲಿದೆ ಎಂದು ಕೇಂದ್ರದ ಮುಖ್ಯಸ್ಥ ಹಾಗೂ ಹಿರಿಯ ವಿಜ್ಞಾನಿ ಡಾ. ಎಸ್.ರಾಜೇಂದ್ರ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ಯಾಶನ್ ಫ್ರೂಟ್ ಮತ್ತು ಪಪ್ಪಾಯ ಹಣ್ಣಿನಲ್ಲಿರುವ ವೈವಿಧ್ಯತೆಯನ್ನು ದಾಖಲು ಮಾಡುವ ಉದ್ದೇಶದಿಂದ ಚೆಟ್ಟಳ್ಳಿಯ ಕೇಂದ್ರೀಯ ತೋಟಗಾರಿಕಾ ಪ್ರಾಯೋಗಿಕಾ ಕೇಂದ್ರದಲ್ಲಿ ಪ್ರದರ್ಶನ ಮತ್ತು ಚರ್ಚೆ ನಡೆಯಲಿದ್ದು, ಬೆಳೆಗಾರರು ಬೀಜದಿಂದ ಬೆಳೆದಂತಹ ಸ್ಥಳೀಯ ಅಥವಾ ಸಂರಕ್ಷಿತ ಪ್ಯಾಶನ್ ಫ್ರೂಟ್ ಮತ್ತು ಪಪ್ಪಾಯ ಹಣ್ಣಿನ ಮಾದರಿಗಳನ್ನು ಪ್ರದರ್ಶಿಸಬಹುದು ಎಂದು ಮಾಹಿತಿ ನೀಡಿದರು. ಕೀಟ ವಿಜ್ಞಾನಿ ಎ.ಟಿ.ರಾಣಿ ಮಾತನಾಡಿ, ಆದ್ರ್ರ ಉಷ್ಣ ವಲಯದ ವಾತವರಣದಲ್ಲಿ ಬೆಳೆದಿರುವ ಪ್ಯಾಶನ್ ಫ್ರೂಟ್ ಮತ್ತು ಪಪ್ಪಾಯ ಹಣ್ಣಿನ ಮಾದರಿಗಳನ್ನು ಪ್ರದರ್ಶಿಸಬಹುದು, ಒಬ್ಬ ಬೆಳೆಗಾರ ಎಷ್ಟು ಮಾದರಿಗಳನ್ನಾದರು ಪ್ರದರ್ಶಿಬಹುದು. ಆದರೆ ಪ್ಯಾಶನ್ ಫ್ರೂಟ್ ಮತ್ತು ಪಪ್ಪಾಯ ಹಣ್ಣಿನ ಮಾದರಿಗಳು ಒಂದಕ್ಕಿಂತ ಒಂದು ವಿಭಿನ್ನವಾಗಿರುವಂತೆ…

Read More

ವಿರಾಜಪೇಟೆ ಜ.11 : ಕುಂಜಲಗೇರಿ ಗ್ರಾಮದ ಶ್ರೀ ಮಡಕೊಡ ಶಾಸ್ತವು ಈಶ್ವರ ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಡಾ. ಡಿ.ವೀರೇಂದ್ರ ಹೆಗ್ಗಡೆಯವರು 2,00,000. ಅನುದಾನವನ್ನು ಮಂಜೂರಾತಿ ಮಾಡಿದರು. ವಿರಾಜಪೇಟೆಯ ಶ್ರೀ ಕ್ಷೇತ್ರ ಧರ್ಮಸ್ಥಳ, ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ದಿನೇಶ್ ಅನುದಾನದ ಡಿ.ಡಿ ಯನ್ನು ಸಮಿತಿಯ ಅಧ್ಯಕ್ಷ ಚಿಯಂಡಿರ ನವೀನ್ ಮುತ್ತಣ್ಣ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭ ಮೇಲ್ವಿಚಾರಕ ನಾಗರಾಜ್, ಸಮಿತಿಯ ಪದಾಧಿಕಾರಿಗಳಾದ ಕುಳಿಯಕಂಡ ಪೊನ್ನಣ್ಣ, ಚಿಯಂಡಿರ ಸುಬ್ರಮಣಿ, ಭಂಟರ ಗಿರೀಶ್ ರೈ, ಭಂಟರ ಲೀಲಾದರ ರೈ, ಭಂಟರ ದೀಪಕ್ ರೈ, ವಲ್ಲಂಡ ಅಯ್ಯಪ್ಪ, ಪಾಲೇಕಂಡ ತಿಮ್ಮಯ್ಯ ಅಲ್ಲಪಿರ ನಾಣಯ್ಯ, ಕುಂಜಿಲಗೇರಿ ಗ್ರಾಮಸ್ಥರು ಉಪಸ್ಥಿತರಿದ್ದರು.

Read More

ವಿರಾಜಪೇಟೆ ಜ.11: ಶಿಕ್ಷಣ ಇಲಾಖೆಯ ಆದೇಶದಂತೆ ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ರಾಜೇಶ್ ಅವರ ಮಾರ್ಗದರ್ಶನದಲ್ಲಿ ಅಮ್ಮತ್ತಿ ಒಂಟಿ ಅಂಗಡಿ ಕ್ಲಸ್ಟರ್ ಮಟ್ಟದಲ್ಲಿ ದೇವಣಗೇರಿ ಶಾಲೆಯಲ್ಲಿ ಅಡುಗೆ ಸಿಬ್ಬಂದಿಗಳಿಗೆ ಅಡುಗೆ ಸ್ಪರ್ಧೆ ನಡೆಯಿತು. ತೀರ್ಪುಗಾರರಾಗಿ ಶಿಕ್ಷಣ ಸಂಯೋಜಕರಾದ ಮಾರ್ಗರೇಟ್ ಮತ್ತು ವಿಶಾಲಶ್ರೀ ಹಾಗೂ ವಿರಾಜಪೇಟೆ ಮತ್ತು ಕಲ್ತೋಡು ಕ್ಲಸ್ಟರ್ ಸಿಆರ್‍ಪಿ ವೆಂಕಟೇಶ್ ಕಾರ್ಯನಿರ್ವಹಿಸಿದರು. ಇದೇ ಸಂದರ್ಭ ಪ್ರಥಮ ದ್ವಿತೀಯ, ತೃತೀಯ ಸ್ಥಾನ ಪಡೆದ ವಿಜೇತರಿಗೆ ಬಹುಮಾನವನ್ನು ನೀಡಿ ಗೌರವಿಸಲಾಯಿತು. ಭಾಗವಹಿಸಿದ ಎಲ್ಲಾ ಅಡುಗೆ ಸಿಬ್ಬಂದಿಗಳಿಗೆ ಪ್ರೋತ್ಸಾಹಕರ ಬಹುಮಾನವನ್ನು ನೀಡಲಾಯಿತು.

Read More

ಮಡಿಕೇರಿ ಜ.11 : NEWS DESK ವ್ಯಾಪಾರಸ್ಥರು ಕಾಫಿ ಮತ್ತು ಕಾಳು ಮೆಣಸು ಖರೀದಿ ಮಾಡುವ ಸಂದರ್ಭ ಮಾರಾಟ ಮಾಡುವವರ ಸಂಪೂರ್ಣ ಮಾಹಿತಿಯನ್ನು ಸಂಗ್ರಹಿಸಬೇಕು. ತಪ್ಪಿದಲ್ಲಿ ಜೈಲು ಶಿಕ್ಷೆ ಹಾಗೂ ದಂಡ ವಿಧಿಸುವ ಸಾಧ್ಯತೆಗಳಿರುತ್ತದೆ ಎಂದು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಎಚ್ಚರಿಕೆ ನೀಡಿದ್ದಾರೆ. ಜಿಲ್ಲೆಯಲ್ಲಿನ ವ್ಯಾಪಾರಸ್ಥರು ಕಾಫಿ ಮತ್ತು ಕಾಳುಮೆಣಸು ಮಾರಾಟ ಮಾಡುವವರ ಹೆಸರು, ವಿಳಾಸ, ಮೊಬೈಲ್ ಸಂಖ್ಯೆಯನ್ನು ಸಂಗ್ರಹಿಸಿ ಇಟ್ಟುಕೊಳ್ಳಬೇಕು. ಬೆಳೆ ಖರೀದಿಸುವಾಗ ಸಂಶಯ ಉಂಟಾದಲ್ಲಿ ಅಂತಹ ವ್ಯಕ್ತಿಗಳ ಭಾವಚಿತ್ರ ತೆಗೆದುಕೊಳ್ಳಬೇಕು. ಮಾರಾಟಗಾರರ ಹಿನ್ನೆಲೆಯನ್ನು ಪರಿಶೀಲಿಸಿ ಎಚ್ಚರಿಕೆಯಿಂದ ವ್ಯವಹರಿಸಬೇಕು ಎಂದು ಮನವಿ ಮಾಡಿದ್ದಾರೆ. ಸ್ಥಳೀಯ ಪೊಲೀಸ್ ಠಾಣಾಧಿಕಾರಿಗಳು ಪರಿಶೀಲನೆ ಮಾಡುವ ಸಂದರ್ಭ ಕಾಫಿ ಮತ್ತು ಕಾಳು ಮೆಣಸು ವ್ಯಾಪಾರಸ್ಥರು ಖರೀದಿದಾರರ ವಿವರವನ್ನು ಸಂಗ್ರಹಿಸದೇ ಇರುವುದು ಕಂಡುಬಂದಲ್ಲಿ ಅಂತಹ ವ್ಯಾಪಾರಸ್ಥರ ಮೇಲೆ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸದರಿಯವರಿಗೆ ನ್ಯಾಯಾಲಯ 3 ವರ್ಷಗಳ ಜೈಲು ಶಿಕ್ಷೆ ಹಾಗೂ ದಂಡ ವಿಧಿಸುವ ಸಾಧ್ಯತೆಗಳಿರುತ್ತದೆ ಎಂದು ಎಸ್‌ಪಿ ತಿಳಿಸಿದ್ದಾರೆ. ಕೊಡಗು…

Read More

ಮಡಿಕೇರಿ ಜ.11 : ಉಜ್ವಲ ಯೋಜನೆಯಡಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಫಲಾನುಭವಿಗಳಿಗೆ ಗ್ಯಾಸ್ ಸ್ಟವ್ ವಿತರಿಸಿದರು. ವಿರಾಜಪೇಟೆಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ  ಗ್ಯಾಸ್ ಸ್ಟವ್ ವಿತರಿಸಿ, ಅರ್ಹ ಫಲಾನುಭವಿಗಳು ಇದರ ಸದ್ಭಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.   

Read More

ವಿರಾಜಪೇಟೆ ಜ.11 : ಒಗ್ಗಟ್ಟಿನ ಬಲ ಇದ್ದಾಗ ಮಾತ್ರ ಕೊಡವ ಜನಾಂಗ ಉಳಿಯಲು ಸಾಧ್ಯ. ಕೊಡವ ಪೊಮ್ಮಕ್ಕಡ ಕೂಟ ಜನಾಂಗದ ಅಭಿವೃದ್ಧಿಗೆ ಶ್ರಮಿಸುವ ಮೂಲಕ ಏಳಿಗೆಯನ್ನು ಪಡೆಯಲೆಂದು ಬಾಳುಗೊಡು ಕೊಡವ ಸಮಾಜಗಳ ಒಕ್ಕೂಟದ ಅಧ್ಯಕ್ಷ ಕಳ್ಳಿಚಂಡ ವಿಷ್ಣು ಕಾರ್ಯಪ್ಪ ಹೇಳಿದರು. ಕೊಡವ ಪೊಮ್ಮಕ್ಕಡ ಕೂಟದ ವತಿಯಿಂದ ಕೊಡವ ಸಮಾಜದ ಆವರಣದಲ್ಲಿ ನಡೆದ ಪುತ್ತರಿ ಒತ್ತೊರ್ಮೆ ಕೂಟದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಕಳ್ಳಿಚಂಡ ವಿಷ್ಣು ಕಾರ್ಯಪ್ಪ ಅವರು, ತಾಯಿಯೇ ನಮ್ಮ ಮೊದಲ ಗುರು. ನಾವು ಭೂಮಿ ತಾಯಿಯನ್ನು ಪೂಜೆ ಮಾಡುವವರು. ಭೂಮಿಗೆ ತಾಯಿಯ ಸ್ಥಾನ ನೀಡಿದ್ದೇವೆ. ಹಾಗಾಗಿ ತಾಯಿ, ಹೆಂಡತಿ, ಮಕ್ಕಳು ಎಲ್ಲರಲ್ಲೂ ಪೂಜನೀಯ ಭಾವದಿಂದ ಕಾಣಬೇಕು ಎಂದರು. ಹೆಣ್ಣಿನ ಪಾತ್ರ ಮಹತ್ವದಾಗಿದ್ದು, ಪ್ರತಿಯೊಬ್ಬರ ಯಶಸ್ಸಿನ ಹಿಂದೆ ಮಹಿಳೆ ಇದ್ದಾಳೆ. ತಾಯಿ ಮಕ್ಕಳಿಗೆ ಮೊದಲು ಸಂಸ್ಕಾರ ಕಲಿಸಬೇಕು. ಜೊತೆಗೆ ವಿದ್ಯೆ ಕೊಡಬೇಕು. ಬುದ್ದಿ ಹೇಳಬೇಕು. ಮಕ್ಕಳನ್ನು ಆಸ್ತಿಯಾಗಿ ಮಾಡಿ ಅವರನ್ನು ಓದಿಸಿ ಅವರ ಕಾಲಮೇಲೆ ಅವರನ್ನು ನಿಲ್ಲುವಂತೆ ಮಾಡಿ ಎಂದು ಕಿವಿಮಾತು…

Read More

ಮಡಿಕೇರಿ ಜ.11 :  ಹುಣಸೂರು ತಾಲ್ಲೂಕಿನ ಬಸವನಹಳ್ಳಿ ಗ್ರಾಮದಲ್ಲಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಜಲಜೀವನ್ ಮಿಷನ್ ಯೋಜನೆಯಡಿ ಮನೆಗಳಿಗೆ ನಲ್ಲಿಗಳ ಮೂಲಕ ಕುಡಿಯುವ ನೀರನ್ನು ಒದಗಿಸಲು 88.75 ಲಕ್ಷ ರೂ ವೆಚ್ಚದ ಕಾಮಗಾರಿಗೆ  ಸಂಸದ ಪ್ರತಾಪ್ ಸಿಂಹ ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭ  ಶಾಸಕ ಜಿ.ಡಿ ಹರೀಶ್ ಗೌಡ, ಗ್ರಾಮದ ಮುಖಂಡರು ಮತ್ತು ಅಧಿಕಾರಿಗಳು ಹಾಜರಿದ್ದರು.  

Read More

ಮಡಿಕೇರಿ ಜ.11 :  ಹುಣಸೂರು ತಾಲ್ಲೂಕಿನ ಗದ್ದಿಗೆಯಲ್ಲಿ  ವಿಜ್ಞಾನ ಪ್ರಯೋಗ ಶಿಬಿರ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಂಸದ ಪ್ರತಾಪ್ ಸಿಂಹ ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ, ಅರಿವು ಮತ್ತು ವೈಜ್ಞಾನಿಕ ಸಾಕ್ಷರತೆ ಉಂಟು ಮಾಡಲು ಕಾರ್ಯಕ್ರಮ ಸಹಕಾರಿಯಾಗಿದೆ ಎಂದರು. ಈ ಸಂದರ್ಭ ಶಾಸಕ  ಜಿ.ಡಿ ಹರೀಶ್ ಗೌಡ ಹಾಗೂ ಶಿಕ್ಷಕರು ಹಾಜರಿದ್ದರು. 

Read More

ಬೆಂಗಳೂರು ಜ.11 :  ಮಾಜಿ ಪ್ರಧಾನ ಮಂತ್ರಿ ದಿವಂಗತ ಲಾಲ್‌ ಬಹದ್ದೂರ್‌ ಶಾಸ್ತ್ರಿ ಅವರ ಪುಣ್ಯಸ್ಮರಣೆಯ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧ ಆವರಣದಲ್ಲಿ  ಲಾಲ್‌ ಬಹದ್ದೂರ್‌ ಶಾಸ್ತ್ರಿ ಅವರ  ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದರು. ಈ ಸಂದರ್ಭದ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜು, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯೆಲ್‌ ಮೊದಲಾದವರು  ಹಾಜರಿದ್ದರು.

Read More