ಮಡಿಕೇರಿ ಜ.10 : ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಪ್ರಸಕ್ತ ವರ್ಷದ ಕ್ರಿಯಾ ಯೋಜನೆಯನ್ನು ತ್ವರಿತ ಅನುಷ್ಠಾನ ಮಾಡಿ ಕಾಮಗಾರಿಗಳನ್ನು ಸಮರೋಪಾದಿಯಲ್ಲಿ ಅನುಷ್ಠಾನಕ್ಕೆ ತರಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಗೃಹ ಕಚೇರಿ ಕೃಷ್ಣದಲ್ಲಿ ಇಂದು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಪ್ರಗತಿ ಪರಿಶೀಲನೆ ನಡೆಸಿ, ಸಲಹೆ ಸೂಚನೆಗಳನ್ನು ನೀಡಿದರು. ಮಂಡಳಿಯಲ್ಲಿ ಪ್ರಸ್ತುತ ರೂ.2,106 ಕೋಟಿ ಲಭ್ಯವಿದೆ. ಸರ್ಕಾರ ಅಧಿಕಾರಕ್ಕೆ ಬಂದ ನಂತರ 757.66 ಕೋಟಿ ರೂ. ವೆಚ್ಚ ಮಾಡಲಾಗಿದೆ, ಈ ಆರ್ಥಿಕ ವರ್ಷಾಂತ್ಯದ ವೇಳೆಗೆ ಇನ್ನೂ ಒಂದು ಸಾವಿರ ಕೋಟಿ ರೂ. ವೆಚ್ಚ ಆಗುವ ಸಾಧ್ಯತೆಗಳಿವೆ. ಇದಕ್ಕಾಗಿ ಮಂಡಳಿಯ ಅಧ್ಯಕ್ಷರು, ಕಲ್ಯಾಣ ಕರ್ನಾಟಕದ ಎಲ್ಲ ಜಿಲ್ಲಾ ಉಸ್ತುವಾರಿ ಸಚಿವರುಗಳು ಹಾಗೂ ಹಿರಿಯ ಅಧಿಕಾರಿಗಳು ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸಬೇಕು ಎಂದರು. ನಿಯಮಿತವಾಗಿ ಪ್ರಗತಿ ಪರಿಶೀಲನೆ ನಡೆಸಿ, ಹಿನ್ನಡೆ ಕಂಡಿರುವ ಯೋಜನೆಗಳ ತ್ವರಿತ ಅನುಷ್ಠಾನ ಮಾಡಬೇಕು. ಪ್ರಾರಂಭವಾಗದ ಕಾಮಗಾರಿಗಳನ್ನು ಮರುಪರಿಶೀಲನೆ ಮಾಡಿ, ಬದಲಿಸುವ ಮೂಲಕ ಸಕಾಲದಲ್ಲಿ ಅನುದಾನ ವೆಚ್ಚ ಮಾಡಬೇಕು. ಕಾಮಗಾರಿಗಳ ಅನುಷ್ಠಾನಕ್ಕೆ…
ಲೇಖಕ: admin
ಸಿದ್ದಾಪುರ ಜ.10 : ವಿಕಲಚೇತನರ ಪಂಜಕುಸ್ತಿ ರಾಜ್ಯ ಮಟ್ಟ ಸ್ಪರ್ಧೆಯಲ್ಲಿ ಕೊಡಗಿನ ಕ್ರೀಡಾಪಟು ಹಸ್ಸನ್ ಚಿನ್ನದ ಪದಕ ಗೆದ್ದು ರಾಷ್ಟ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಏಷಿಯನ್ ಆರ್ಮ್ ರೆಸ್ಲಿಂಗ್ ಅಸೋಸಿಯೇಷನ್, ವರ್ಲ್ಡ್ ಆರ್ಮ್ ರೆಸ್ಲಿಂಗ್ ಅಸೋಸಿಯೇಷನ್ ಸಹಯೋಗದಲ್ಲಿ ಕರ್ನಾಟಕ ಆರ್ಮ್ ರೆಸ್ಲಿಂಗ್ ಅಸೋಸಿಯೇಷನ್ ಬೆಂಗಳೂರಿನಲ್ಲಿ ಆಯೋಜಿದ್ದ ಸ್ಪರ್ಧೆಯಲ್ಲಿ ಹಸ್ಸನ್ ಪ್ರಥಮ ಸ್ಥಾನ ಪಡೆದು ಕೊಂಡಿದ್ದಾರೆ. ಜೂನ್ 6 ರಿಂದ 10ರ ವರೆಗೆ ಮಹಾರಾಷ್ಟ್ರದ ನಾಗಪುರ್ ನಲ್ಲಿ ರಾಷ್ಟ್ರ ಮಟ್ಟದ ಕ್ರೀಡೆ ಜರುಗಲಿದ್ದು, ಹಸ್ಸನ್ ಅವರಿಗೆ ಬೆಂಗಳೂರಿನ ಕೋಚ್ ದೀಪಕ್ ತರಬೇತಿ ನೀಡುತ್ತಿದ್ದಾರೆ. ಬಡತನದ ಕಾರಣದಿಂದ ಅವಕಾಶ ವಂಚಿತನಾಗುತ್ತಿರುವ ಅಪ್ರತಿಮ ಕ್ರೀಡಾಪಟು ಹಸ್ಸನ್ ಕುರಿತು ಈ ಹಿಂದೆ ಪ್ರತಿನಿಧಿ ವಿಶೇಷ ವರದಿ ಪ್ರಕಟಿಸಿತ್ತು. ಇದನ್ನು ಗಮನಿಸಿದ ಅರೆಕಾಡು ಗ್ರಾಮ ಪಂಚಾಯತಿಯು, ಇದೀಗ ಹಸ್ಸನ್ ಅವರಿಗೆ ಕ್ರೀಡಾಕೂಟಕ್ಕೆ ತೆರಳಲು ಹತ್ತು ಸಾವಿರ ರೂ. ನೀಡುವ ಭರವಸೆ ನೀಡಿದೆ. ಜಿಲ್ಲಾ ಅಂಗವಿಕಲರ ಕಲ್ಯಾಣ ಇಲಾಖೆ ವತಿಯಿಂದ ಟಿಎ ಡಿಎ ನೀಡುವ ಭರವಸೆಯನ್ನೂ ನೀಡಿರುವುದಾಗಿ ಹಸ್ಸನ್ ಪ್ರತಿನಿಧಿಗೆ ತಿಳಿಸಿದ್ದಾರೆ.…
ಮಡಿಕೇರಿ ಜ.10 : ಹಳೆಯ ಪಿಂಚಣಿ ಯೋಜನೆಯನ್ನು ಮರು ಜಾರಿಗೆ ತರಬೇಕೆಂದು ಒತ್ತಾಯಿಸಿ ನೈರುತ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಕೆ.ಮಂಜುನಾಥ್ ಕುಮಾರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ರಾಜ್ಯ ಪಿಂಚಣಿ ಯೋಜನೆ ಎಂಪಿಎಸ್ ಸಂಬಂಧಿತ ಸಂಘಟನೆಗಳ ಸಭೆಯಲ್ಲಿ ಪಾಲ್ಗೊಂಡ ಅವರು ಪಿಂಚಣಿ ಯೋಜನೆಯ ಸಾಧಕ ಬಾಧಕಗಳ ಕುರಿತು ವಿವರಿಸಿದರು. ಹಳೆಯ ಪಿಂಚಣಿ ಯೋಜನೆಯನ್ನು 2006 ಏ.1 ರಂದು ಅಂದಿನ ಜೆಡಿಎಸ್ ಮತ್ತು ಬಿಜೆಪಿ ಸಮ್ಮಿಶ್ರ ಸರ್ಕಾರ ರದ್ದು ಮಾಡಿತು. 2006 ಮಾ.31ಕ್ಕಿಂತ ಮೊದಲು ನೇಮಕಾತಿಯಾದ ಖಾಸಗಿ ಅನುದಾನಿತ ಶಿಕ್ಷಕರಿಗೆ ಹಳೆಯ ಪಿಂಚಣಿ ಯೋಜನೆ ಈಗಲೂ ಅನ್ವಯವಾಗುತ್ತಿದೆ. ಆದರೆ 2006 ಏ.1 ರ ನಂತರ ಅನುಮೋದನೆ ಪಡೆದವರಿಗೆ ಹಳೆಯ ಪಿಂಚಣಿ ಯೋಜನೆ ರದ್ದಾಗಿದ್ದು, ಹೊಸ ಪಿಂಚಣಿ ಯೋಜನೆ ಕೂಡ ಅನ್ವಯವಾಗದೇ ಇರುವುದು ದೊಡ್ಡ ದುರಂತ ಎಂದು ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಮಂಜುನಾಥ್ ಕುಮಾರ್ ಅಭಿಪ್ರಾಯ ಹಂಚಿಕೊಂಡರು. ಸರ್ಕಾರಿ ಎಂಪಿಎಸ್ ನೌಕರರ ಭತ್ಯೆ…
ಮಡಿಕೇರಿ ಜ.10 : ಇತ್ತೀಚಿನ ದಿನಗಳಲ್ಲಿ ಕೊಡಗಿನಲ್ಲಿ ಶುಂಠಿ ಬೆಳೆಗಾಗಿ ಅರಣ್ಯ ಇಲಾಖೆಯ ಪೂರ್ವಾ ಅನುಮತಿ ಪಡೆಯದೆ ಮರಗಳನ್ನು ಹನನ ಮಾಡುತ್ತಿರುವುದು ಇಲಾಖಾ ಗಮನಕ್ಕೆ ಬಂದಿದ್ದು, ಈ ಕೃತ್ಯ ಎಸಗುತ್ತಿರುವವರ ಮೇಲೆ ಅರಣ್ಯ ಮೊಕದ್ದಮೆ ದಾಖಲಾಗುತ್ತಿರುತ್ತದೆ. ಯಾವುದೇ ಉದ್ದೇಶಕ್ಕಾದರು ಸರಿ ಮರಗಳನ್ನು ತೆರವುಗೊಳಿಸಲು ಅರಣ್ಯ ಇಲಾಖಾ ಅನುಮತಿ ಕಡ್ಡಾಯವಾಗಿರುತ್ತದೆ ಕಾನೂನಾತ್ಮಕವಾಗಿ ಅನುಮತಿ ಪಡೆಯದೆ ಮರಗಳನ್ನು ತೆರವುಗೊಳಿಸಿದ್ದಲ್ಲಿ ಜಾಗದ ಮಾಲೀಕರು ಮತ್ತು ಜಾಗವನ್ನು ಗುತ್ತಿಗೆ ಪಡೆದವರು ಹಾಗೂ ಕೃತ್ಯವನ್ನು ಎಸಗಿದವರ ಮೇಲೆ ಅರಣ್ಯ ಮೊಕದ್ದಮೆ ದಾಖಲಾಗಿರುತ್ತದೆ. ಹಾಗೂ ಆರೋಪಿತರು ನ್ಯಾಯಾಂಗ ಬಂಧನಕ್ಕೆ ಒಳಪಡಬೇಕಾಗಿರುತ್ತದೆ. ಕೃತ್ಯಕ್ಕೆ ಬಳಸಿದ ವಾಹನ ಮತ್ತು ಯಂತ್ರೋಪಕರಣಗಳನ್ನು ಇಲಾಖಾ ಪರ ಅಮಾನತ್ತು ಪಡಿಸಿಕೊಳ್ಳಲಾಗುತ್ತದೆ ಮತ್ತು ಆರೋಪಿತರು ಮರಗಳ ಮೌಲ್ಯ ಹಾಗೂ ಪರಿಸರ ನಾಶಮಾಡಿದ್ದಕ್ಕೆ ದಂಡ ತೆರಬೇಕಾಗಿರುತ್ತದೆ. ತಪ್ಪಿದ್ದಲ್ಲಿ ಆರೋಪಿತರ ಮೇಲೆ ದೋಷರೋಪಣಾ ಪಟ್ಟಿಯನ್ನು ತಯಾರಿಸಿ ಘನ ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು. ಆದ್ದರಿಂದ ಸಾರ್ವಜನಿಕರು ಯಾವುದೇ ಉದ್ದೇಶಕ್ಕೆ ಮರ ತೆರವುಗೊಳಿಸಲು ಅರಣ್ಯ ಇಲಾಖೆಯ ಪೂರ್ವಾನುಮತಿ ಪಡೆಯಲು ತಿಳಿಸಿದೆ. ಪರಿಸರ ಸಂರಕ್ಷಣೆ ಮಾಡುವಲ್ಲಿ ಇಲಾಖೆಯೊಂದಿಗೆ…
ವಿರಾಜಪೇಟೆ ಜ.10 : “ಪರ್ಸೆಪ್ಸನ್ ಅಯಿನ್ಡ್ ಚಾಲೆಂಜ್ ಸ್ ಅಫ್ ಗ್ರೀನ್ ಬ್ಯಾಂಕಿಂಗ್, ಎ ಸ್ಪೆಷಲ್ ರೆಫರೆನ್ಸ್ ಟು ಕೊಡಗು ಡಿಸ್ಟ್ರಿಕ್ ಓಫ್ ಕರ್ನಾಟಕ ಸ್ಟೇಟ್ “ಎಂಬ ವಿಷಯದ ಬಗ್ಗೆ ಡಾ. ಕುಸುಮಾಕರ ಹೆಬ್ಬಾರ ಅವರ ಮಾರ್ಗದರ್ಶನದಲ್ಲಿ ಸಾದರ ಪಡಿಸಿದ ಮಹಾ ಪ್ರಭಂದಕ್ಕೆ ಮಂಗಳೂರು ವಿಶ್ವವಿದ್ಯಾಲಯವು ರುದ್ರಕುಮಾರ್ ಅವರಿಗೆ ಪಿ.ಎಚ್. ಡಿ. ಪದವಿಯನ್ನು ನೀಡಿದೆ. ರುದ್ರಕುಮಾರ್ ರವರು ಪ್ರಸ್ತುತ ಸುಳ್ಯದ ನೆಹರು ಮೆಮೋರಿಯಲ್ ಪದವಿ ಕಾಲೇಜಿನ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಈ ಹಿಂದೆ ಇವರು ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಬಿಟಿಸಿಜಿ ಕಾಲೇಜಿನಲ್ಲಿ ಉಪನ್ಯಾಸಕರಾಗಿ, ಸಂತ ಜೋಸೆಫರ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಮತ್ತು ವಿರಾಜಪೇಟೆಯ ಸೆಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ಉಪನ್ಯಾಸಕರಾಗಿಯೂ ಸೇವೆಯನ್ನು ಸಲ್ಲಿಸಿದ್ದರು. ಮಾತ್ರವಲ್ಲದೆ ತಮ್ಮ ಸೇವಾ ದಕ್ಷತೆ, ಪ್ರಾಮಾಣಿಕತೆ ಮತ್ತು ಸರಳ ವ್ಯಕ್ತಿತ್ವದಿಂದ ವಿದ್ಯಾರ್ಥಿಗಳ ಮತ್ತು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದರು.
ಮಡಿಕೇರಿ ಜ.010 : ಪ್ರಸಕ್ತ(2023-24) ಸಾಲಿಗೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿವಿಧ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹೊಸದಾಗಿ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಪರಿಶಿಷ್ಟ ಪಂಗಡದ ಇಲಾಖೆಯ ವೆಬ್‍ಸೈಟ್ https://ssp.postmatric.karnataka.gov.in ಆನ್‍ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದು. ಅರ್ಜಿಯೊಂದಿಗೆ ವಿದ್ಯಾರ್ಥಿಯ ಜಾತಿ ಪ್ರಮಾಣ ಪತ್ರ ಮತ್ತು ಆದಾಯ ಪ್ರಮಾಣ ಪತ್ರ(ಆದಾಯದ ಮಿತಿ 2.50 ಲಕ್ಷ), ಆಧಾರ್ ಕಾರ್ಡ್ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಎನ್‍ಪಿಸಿಐ ಮೂಲಕ ಕಡ್ಡಾಯವಾಗಿ ಲಿಂಕ್ ಮಾಡಿರಬೇಕು ಅಥವಾ ಅಂಚೆ ಕಚೇರಿಯಲ್ಲಿ ಐಪಿಪಿಬಿ ಖಾತೆ ಹೊಂದಿರಬೇಕು. ದೂರವಾಣಿ ಸಂಖ್ಯೆ ಚಾಲ್ತಿಯಲ್ಲಿರುವ ಆಧಾರ್ ಲಿಂಕ್ ಆಗಿರುವ ದೂ.ಸಂ. ಕಡ್ಡಾಯವಾಗಿರಬೇಕು. ವಿದ್ಯಾರ್ಥಿಯ ಹಿಂದಿನ ವರ್ಷದ ಅಂಕಪಟ್ಟಿ, ವಿದ್ಯಾರ್ಥಿಯ ಇತ್ತೀಚಿನ ಭಾವಚಿತ್ರ, ಅಧ್ಯಯನ-ಬೋನಾಫೈಡ್ ಪ್ರಮಾಣ ಪತ್ರ, ಪ್ರಸಕ್ತ ಕೋರ್ಸ್‍ನ ಶುಲ್ಕ ರಶೀದಿ ಪ್ರತಿ, ತಂದೆ, ತಾಯಿ/ಪೋಷಕರ ಆಧಾರ್ ಕಾರ್ಡ್ ಪ್ರತಿ, ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು(ಗ್ರೇಡ್-1),…
ಮಡಿಕೇರಿ ಜ.9 : ಮಡಿಕೇರಿ ನಗರದ ಅಭಿವೃದ್ಧಿಗೆ ಪೂರಕವಾಗಿ ಹಾಗೂ ಸಾರ್ವಜನಿಕರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸದ ಆರೋಪದ ಹಿನ್ನೆಲೆಯಲ್ಲಿ ನಗರಸಭೆಯ ಪೌರಾಯುಕ್ತರನ್ನು ವರ್ಗಾವಣೆಗೊಳಿಸುವಂತೆ ಸರಕಾರಕ್ಕೆ ಶಿಫಾರಸ್ಸು ಸಲ್ಲಿಸಲು ನಗರಸಭೆಯ ಆಡಳಿತ ಮತ್ತು ವಿಪಕ್ಷ ಸದಸ್ಯರು ಸರ್ವಾನುಮತದ ತೀರ್ಮಾನ ಕೈಗೊಂಡಿದ್ದಾರೆ. ಮಡಿಕೇರಿಯ ನಗರಸಭೆಯ ಪೌರಾಯುಕ್ತರ ವರ್ಗಾವಣೆ ಕುರಿತಂತೆ ನಗರಸಭೆಯ ಸಭಾಂಗಣದಲ್ಲಿ ನಡೆದ ಸರ್ವ ಸದಸ್ಯರ ತುರ್ತು ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. ತುರ್ತು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ, ಪೌರಾಯುಕ್ತರು ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ಸ್ಪಂದಿಸುತ್ತಿಲ್ಲ. ಇದರಿಂದ ತೆರಿಗೆ ಪಾವತಿದಾರರಿಗೆ ಅನಾನುಕೂಲ ಹಾಗೂ ತೊಂದರೆಯಾಗುತ್ತಿದೆ. ಪೌರಾಯುಕ್ತರ ಕಾರ್ಯವೈಖರಿ ಬಗ್ಗೆ ಸದಸ್ಯರಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಅಸಮಾಧಾನವಿದೆ ಎಂದು ಆರೋಪಿಸಿದರು. ಪೌರಾಯುಕ್ತರ ವರ್ಗಾವಣೆಗೆ ಸಂಬಂಧಿಸಿದಂತೆ ತುರ್ತು ಸಭೆ ಕರೆಯಲಾಗಿದೆ. ಸದಸ್ಯರು ತಮ್ಮ ಅಭಿಪ್ರಾಯ, ಸಲಹೆ ಸೂಚನೆಗಳನ್ನು ತಿಳಿಸುವಂತೆ ಹೇಳಿದರು. ಎಸ್‌ಡಿಪಿಐ ಸದಸ್ಯ ಅಮೀನ್ ಮೊಹ್ಸಿನ್, ಬಿಜೆಪಿ ಸದಸ್ಯರಾದ ಅರುಣ್ ಶೆಟ್ಟಿ ಹಾಗೂ ಕೆ.ಎಸ್.ರಮೇಶ್ ಮಾತನಾಡಿ, ಪೌರಾಯುಕ್ತರ ವರ್ಗಾವಣೆಗೆ…
ಮಡಿಕೇರಿ ಜ.9 : ಮೂಲಭೂತ ಸೌಲಭ್ಯ ಮತ್ತು ಶಿಕ್ಷಕರ ಕೊರತೆಯಿಂದ ಕೊಡಗು ಜಿಲ್ಲೆಯ ವಿವಿಧ ಭಾಗಗಳ ಸರ್ಕಾರಿ ಶಾಲೆಗಳು ಮುಚ್ಚುವ ಹಂತದಲ್ಲಿವೆ. ಸರ್ಕಾರಿ ಆಸ್ಪತ್ರೆಗಳು ರೋಗಿಗಳಿಗೆ ಸೂಕ್ತ ಆರೋಗ್ಯ ಸೇವೆ ನೀಡುವಲ್ಲಿ ವಿಫಲವಾಗುತ್ತಿವೆ ಎಂದು ಆರೋಪಿಸಿರುವ ಆಮ್ ಆದ್ಮಿ ಪಾರ್ಟಿಯ ಕೊಡಗು ಜಿಲ್ಲಾಧ್ಯಕ್ಷ ಭೋಜಣ್ಣ ಸೋಮಯ್ಯ ಅವರು, ಹೋರಾಟದ ಎಚ್ಚರಿಕೆ ನೀಡಿದ್ದಾರೆ. “ಆಮ್ ಆದ್ಮಿ ಪಾರ್ಟಿಯ ನಡೆ ಹಳ್ಳಿಯ ಕಡೆ” ಕಾರ್ಯಕ್ರಮದ ಭಾಗವಾಗಿ ಸೋಮವಾರಪೇಟೆ ತಾಲ್ಲೂಕಿನ ಹಲವು ಗ್ರಾಮಗಳಿಗೆ ಭೇಟಿ ನೀಡಿ ಸಮಸ್ಯೆಗಳ ಕುರಿತು ಮಾಹಿತಿ ಸಂಗ್ರಹಿಸಿದ ಅವರು ಶಿಕ್ಷಕರು ಹಾಗೂ ವೈದ್ಯರ ಕೊರತೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಗರ್ವಾಲೆ ಪ್ರಾಥಮಿಕ ಶಾಲೆ 4-5 ವರ್ಷಗಳ ಹಿಂದೆಯೇ ಮುಚ್ಚಲ್ಪಟ್ಟಿದ್ದು, ಆಶ್ಚರ್ಯಕ್ಕೆ ಕಾರಣವಾಗಿದೆ. ಕುಂದಳ್ಳಿ, ಬಾಚಹಳ್ಳಿ, ಕೊತ್ನಳ್ಳಿ, ಕೂತಿ, ಹರಗ ಮತ್ತು ಅಬ್ಬಿಮಠ ಸರ್ಕಾರಿ ಶಾಲೆಗಳು ಮುಚ್ಚಿವೆ. ಉಳಿದ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಬಹಳ ಕಡಿಮೆ ಇದೆ, ಹಾಗೆಯೇ ಶಿಕ್ಷಕರ ಕೊರತೆಯೂ ಕಾಡಿದೆ. ಶಾಲೆ ಯಾವಾಗ ಬೇಕಾದರೂ ಮುಚ್ಚುವ ಹಂತದಲ್ಲಿದೆ ಎಂದು ಬೇಸರ…
ಮಡಿಕೇರಿ ಜ.9 : ಶ್ರೀಮಂಗಲದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ ನೀಡಿದರು. ಸಿಬ್ಬಂದಿಯ ಕಾರ್ಯ ಕ್ಷಮತೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಮಡಿಕೇರಿ ಜ.09 : ವಿರಾಜಪೇಟೆ ವಲಯ ಅಬಕಾರಿ ನಿರೀಕ್ಷಕರ ಕಚೇರಿ ಆವರಣದಲ್ಲಿರುವ ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಂಡಿರುವ 4 ವಾಹನಗಳನ್ನು ಎಲ್ಲಿದೆಯೋ, ಹೇಗಿದೆಯೋ ಹಾಗೆ ಟೆಂಡರ್ ಕಂ ಹರಾಜು ಮೂಲಕ ಜನವರಿ, 16 ರಂದು ಬೆಳಗ್ಗೆ 11 ಗಂಟೆಗೆ ವಿಲೇವಾರಿ ಮಾಡಲಾಗುವುದು. ಈ ಬಗ್ಗೆ ಹೆಚ್ಚಿನ ಮಾಹಿತಿಗೆ ಅಬಕಾರಿ ನಿರೀಕ್ಷಕರು, ವಿರಾಜಪೇಟೆ ವಲಯ, ವಿರಾಜಪೇಟೆ ಇವರನ್ನು ಸಂಪರ್ಕಿಸಬಹುದು ಎಂದು ಅಬಕಾರಿ ಉಪ ಆಯುಕ್ತರು ತಿಳಿಸಿದ್ದಾರೆ.






