ಮಡಿಕೇರಿ ಜ.9 : ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ ಪರಿಹರಿಸುವುದು ಅಧಿಕಾರಿ ಮತ್ತು ಸಿಬ್ಬಂದಿಗಳ ಕರ್ತವ್ಯವಾಗಿದೆ. ಆ ನಿಟ್ಟಿನಲ್ಲಿ ಸಾಧ್ಯವಾದಷ್ಟು ಕಾಲಮಿತಿಯಲ್ಲಿ ಸಾರ್ವಜನಿಕರಿಗೆ ಸ್ಪಂದಿಸುವುದು ಅತಿಮುಖ್ಯ ಎಂದು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ತಿಳಿಸಿದ್ದಾರೆ. ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಟಿ.ಶೆಟ್ಟಿಗೇರಿ ಗ್ರಾಮದ ಕೊಡವ ಸಮಾಜದ ಸಭಾಂಗಣದಲ್ಲಿ ನಡೆದ “ಜನಸ್ಪಂದನಾ“ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅಧಿಕಾರಿ ಮತ್ತು ಸಿಬ್ಬಂದಿಗಳು ಸಾರ್ವಜನಿಕರನ್ನು ಗೌರವದಿಂದ ಕಾಣಬೇಕು. ಕಚೇರಿಗೆ ಬಂದಾಗ ಸೌಜನ್ಯದಿಂದ ನಡೆದುಕೊಳ್ಳಬೇಕು. ಅಡ್ವಕೇಟ್ ಜನರಲ್ ಆಗಿ 6 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ. ಸಾರ್ವಜನಿಕರ ಕೆಲಸಗಳಿಗೆ ಸ್ಪಂದಿಸಬೇಕು. ಕೆಲಸ ಆಗದಿರುವುದಕ್ಕೆ ಹಿಂಬರಹವನ್ನಾದರೂ ನೀಡಬೇಕು ಎಂದು ಎ.ಎಸ್.ಪೊನ್ನಣ್ಣ ಸಲಹೆ ಮಾಡಿದರು. ವಿರಾಜಪೇಟೆಯ ಗೃಹ ಕಚೇರಿಯಲ್ಲಿ ಸಾರ್ವಜನಿಕರ ಭೇಟಿ ಕಾರ್ಯಕ್ರಮ ಇದ್ದೇ ಇರುತ್ತದೆ. ಆ ನಿಟ್ಟಿನಲ್ಲಿ ಸಾಧ್ಯವಾದಷ್ಟು ಸಾರ್ವಜನಿಕರಿಗೆ ಸ್ಪಂದಿಸಲು ಪ್ರಯತ್ನಿಸಲಾಗುತ್ತದೆ. ಕೊಡಗು ಜಿಲ್ಲೆಗೆ ಸರ್ಕಾರದ ಹಂತದಲ್ಲಿ ಆಗಬೇಕಿರುವ ಕೆಲಸ ಕಾರ್ಯಗಳನ್ನು ತ್ವರಿತಗತಿಯಲ್ಲಿ ಕಾರ್ಯರೂಪಕ್ಕೆ ತರಲು ಪ್ರಾಮಾಣಿಕ…
ಲೇಖಕ: admin
ವಿರಾಜಪೇಟೆ ಜ.9 : ಕೆದಮುಳ್ಳೂರು ಗ್ರಾ.ಪಂ ವ್ಯಾಪ್ತಿಯ ಪಾಲಂಗಾಲ ಗ್ರಾಮದಲ್ಲಿ ಅಯೋಧ್ಯೆಯ ಪವಿತ್ರ ಮಂತ್ರಾಕ್ಷತೆಯನ್ನು ವಿತರಿಸಲಾಯಿತು. ಕರಸೇವಕರು ಗ್ರಾಮದ ಮನೆಮನೆಗೆ ತೆರಳಿಗೆ ಮಂತ್ರಾಕ್ಷತೆಯನ್ನು ವಿತರಿಸಿ, ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿದರು. ಈ ಕಾರ್ಯಕ್ರಮಕ್ಕೆ ಎಲ್ಲಾ ಸಾರ್ವಜನಿಕ ಬಂಧುಗಳು ಸಹಕಾರ ನೀಡಿದರು.
ಕುಶಾಲನಗರ ಜ.9 : ಸರ್ಕಾರಿ ಆಸ್ಪತ್ರೆಯಲ್ಲಿ ಕುಶಾಲನಗರ ವ್ಯಾಪ್ತಿಯ ಗರ್ಭಿಣಿ ಮಹಿಳೆಯರಿಗೆ ಸೀಮಂತ ಕಾರ್ಯಕ್ರಮ ನಡೆಯಿತು. ತಾಯಿಯಿಂದ ಮಗುವಿಗೆ ಸಿಫಿಲಿಸ್ ಹಾಗೂ ಹೆಪಟೈಟಿಸ್ ಹರಡುವಿಕೆ ನಿರ್ಮೂಲನಾ ಆಂದೋಲನದ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ 30 ಕ್ಕೂ ಹೆಚ್ಚು ಗರ್ಭಿಣಿ ಮಹಿಳೆಯರು ಪಾಲ್ಗೊಂಡಿದ್ದರು. ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಮಧುಸೂದನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಹಿಳೆಯರಿಗೆ ಆರೋಗ್ಯದ ಕುರಿತು ಮಾಹಿತಿ ನೀಡಿದರು. ಆಸ್ಪತ್ರೆಯ ಪ್ರಸೂತಿ ಹಾಗೂ ಹೆರಿಗೆ ತಜ್ಞರಾದ ಡಾ.ಪ್ರತಿಭಾ, ಗರ್ಭಿಣಿ ಮಹಿಳೆಯರ ಆರೋಗ್ಯ ಪದ್ದತಿ, ಕಾಲಾನುಕ್ರಮವಾಗಿ ತಪಾಸಣೆ ಮಾಡಿಸಿಕೊಳ್ಳುವ ಬಗೆ, ರಕ್ತ ಪರೀಕ್ಷೆ, ಗರ್ಭನಿರೋಧಕಗಳ ಬಳಕೆ ಸೇರಿದಂತೆ ಸಮಗ್ರ ಆರೋಗ್ಯ ನಿರ್ವಹಣೆಯ ಕುರಿತಾಗಿ ಮಾಹಿತಿ ನೀಡಿದರು. ತಾಲ್ಲೂಕು ಆರೋಗ್ಯ ಸುರಕ್ಷಾ ಅಧಿಕಾರಿ ಕೆ.ವಿ.ಅಶ್ವಿನಿ, ವೈದ್ಯಾಧಿಕಾರಿ ಡಾ.ಪ್ರಾಣೇಶ್, ಆಸ್ಪತ್ರೆಯ ಕಛೇರಿ ಅಧೀಕ್ಷಕಿ ಅನಿತಾ, ಹಿರಿಯ ಶುಶ್ರೂಷಕಿ ಮಂಜುಳಾ, ಆಪ್ತಸಮಾಲೋಚಕಿ ಮುತ್ತಮ್ಮ, ಶ್ರೀಲತಾ, ದಿವಾಕರ್ ಇದ್ದರು.






