ಮಡಿಕೇರಿ, NEWS DESK ಮಾ.3:-ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಬೋಧಕ ಆಸ್ಪತ್ರೆಯ ಕಿವಿ, ಮೂಗು ಮತ್ತು ಗಂಟಲು ವಿಭಾಗ ವತಿಯಿಂದ ‘ವಿಶ್ವ ಶ್ರವಣ ದಿನ’ ಪ್ರಯುಕ್ತ ಮಂಗಳವಾರ ಸಂಸ್ಥೆಯ ಎರಡನೇ ವರ್ಷದ ಪದವಿ ವೈದ್ಯಕೀಯ ವಿದ್ಯಾರ್ಥಿಗಳಿಂದ ನಗರದ ರಾಜಾಸೀಟು ಉದ್ಯಾನವನ ಆವರಣದಲ್ಲಿ ಶ್ರವಣದ ಮಹತ್ವ ಕುರಿತು ಬೀದಿನಾಟಕ ಮೂಲಕ ಜಾಗೃತಿ ಮತ್ತು ಜಾಥ ಕಾರ್ಯಕ್ರಮ ನಡೆಯಿತು. ಕೇಳಿ ಕೇಳಿ ಜನರೇ, ಪ್ರತಿಯೊಬ್ಬರ ಶ್ರವಣ ಅದರಲ್ಲೂ ಮಕ್ಕಳ ಶ್ರವಣ ಉತ್ತಮ ರೀತಿಯಲ್ಲಿ ಇರುವಂತೆ ನೋಡಿಕೊಳ್ಳುವುದು ಅತ್ಯಗತ್ಯ. ಆ ನಿಟ್ಟಿನಲ್ಲಿ ತಜ್ಞ ವೈದ್ಯರನ್ನು ಭೇಟಿ ಮಾಡಿ, ಕಾಲ ಕಾಲಕ್ಕೆ ವೈದ್ಯಕೀಯ ಪರೀಕ್ಷೆ ಮಾಡಿಸಿಕೊಳ್ಳುವಂತೆ ಬೀದಿನಾಟಕ ಪ್ರದರ್ಶನ ಮೂಲಕ ಜಾಗೃತಿ ಮೂಡಿಸಿದರು. ಮಕ್ಕಳ ಬೆಳವಣಿಗೆಯಲ್ಲಿ ಪೋಷಕರ ಪಾತ್ರ ಹೆಚ್ಚಿನದ್ದಾಗಿದೆ. ಆ ದಿಸೆಯಲ್ಲಿ ಕಿವಿಗೆ ಯಾವುದೇ ವಸ್ತುವನ್ನು ಬಳಸಬಾರದು. ಮಕ್ಕಳಲ್ಲಿ ಕಿವಿ ಸ್ಪಷ್ಟವಾಗಿ ಕೇಳುತ್ತಿದೆಯೇ ಎಂಬುದನ್ನು ಖಾತರಿಪಡಿಸಿಕೊಳ್ಳಬೇಕು. ಶ್ರವಣ ದೋಷ ಇದ್ದಲ್ಲಿ ಹತ್ತಿರದ ತಜ್ಞ ವೈದ್ಯರನ್ನು ಭೇಟಿ ಮಾಡಿ ಪರೀಕ್ಷಿಸಬೇಕು. ಸೂಕ್ಷ್ಮ ಭಾಗವಾದ ಕಿವಿಗೆ ಯಾವುದೇ ರೀತಿಯ…
ಲೇಖಕ: Lakshmish S K
ಮಡಿಕೇರಿ, NEWS DESK ಮಾ.03:-ಬಲಿಜ ಸಮಾಜದ ವಿದ್ಯಾರ್ಥಿಗಳ ಉದ್ಯೋಗದ ಅನುಕೂಲಕ್ಕಾಗಿ 2ಎ ಹಿಂದುಳಿದ ವರ್ಗದ ಮೀಸಲಾತಿ ನೀಡುವಂತಾಗಬೇಕು ಎಂದು ಯೋಗಿ ನಾರಾಯಣ ಬಲಿಜ ಸಂಘದ ಜಿಲ್ಲಾಧ್ಯಕ್ಷರಾದ ಟಿ.ಜಿ.ಗಣೇಶ್ ನಾಯ್ಡು ಅವರು ಒತ್ತಾಯಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಹಯೋಗದೊಂದಿಗೆ ನಗರದ ಗಾಂಧಿ ಭವನದಲ್ಲಿ ಮಂಗಳವಾರ ನಡೆದ ಶ್ರೀ ಯೋಗಿ ನಾರಾಯಣ ಯತೀಂದ್ರದ ಜಯಂತಿ(ಕೈವಾರ ತಾತಯ್ಯ) ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಬಲಿಜ ಸಮಾಜದ ವಿದ್ಯಾರ್ಥಿಗಳಿಗೆ ಶಿಕ್ಷಣದಲ್ಲಿ 2ಎ ಮೀಸಲಾತಿ ನಿಡಲಾಗಿದೆ. ಆದರೆ ಉದ್ಯೋಗದಲ್ಲಿ ಮಾತ್ರ 3ಎ ನಲ್ಲಿ ಮೀಸಲಾತಿ ಕಲ್ಪಿಸಲಾಗಿದೆ. ಇದರಿಂದ ಬಲಿಜ ಸಮಾಜದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದ್ದು, ಶಿಕ್ಷಣದಂತೆ ಉದ್ಯೋಗದಲ್ಲಿಯೂ ಸಹ 2ಎ ಹಿಂದುಳಿದ ವರ್ಗದಡಿ ಮೀಸಲಾತಿ ನೀಡುವಂತಾಗಬೇಕು ಎಂದು ಮನವಿ ಮಾಡಿದರು. ಪ್ರತೀ ಸಮಾಜದಲ್ಲಿಯೂ ಸಹ ಶ್ರೀಮಂತರು ಮತ್ತು ಬಡವರು ಇದ್ದಾರೆ. ಆದರೆ ಕಡು ಬಡವರಿಗೆ ಉದ್ಯೋಗ ದೊರೆಯುತ್ತಿಲ್ಲ, ಆದ್ದರಿಂದ ಈ ಬಗ್ಗೆ ಗಮನಹರಿಸಬೇಕು ಎಂದು ಯೋಗಿ ನಾರಾಯಣ ಬಲಿಜ ಸಮಾಜದ ಜಿಲ್ಲಾ ಘಟಕದ…
ಮಡಿಕೇರಿ, NEWS DESK ಮಾ.3:-ಕೊಡಗು ಜಿಲ್ಲೆಯಲ್ಲಿ ರಾಷ್ಟ್ರೀಯ ನೈಸರ್ಗಿಕ ಕೃಷಿ ಅಭಿಯಾನ ಯೋಜನೆಯು ಅನುμÁ್ಠನಗೊಳ್ಳುತ್ತಿದ್ದು ಮೈಸೂರು ಹಾಗೂ ಕೊಡಗು ಜಿಲ್ಲೆ ಲೋಕಸಭಾ ಸದಸ್ಯರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕೊಡಗು ಜಿಲ್ಲೆಯಲ್ಲಿ 3125 ರೈತರಿಗೆ ವಿತರಿಸುವ ರೈತರ ಅಧ್ಯಯನ ಕೈಪಿಡಿ, ನೈಸರ್ಗಿಕ ಕೃಷಿ ರೈತರ ದಿನಚರಿ ಪುಸ್ತಕ, ನೈಸರ್ಗಿಕ ಕೃಷಿ ಕುರಿತು ಸಾಮಾನ್ಯವಾಗಿ ಕೇಳಲಾಗುವ ಪ್ರಶ್ನೆಗಳು ಮತ್ತು ಕೃಷಿ ಇಲಾಖೆಯಿಂದ ರೈತರಿಗೆ ದೊರೆಯುವ ಸೌಲಭ್ಯಗಳ ಪುಸ್ತಿಕೆಗಳನ್ನು ತಮ್ಮ ಮೈಸೂರು ಕಚೇರಿಯಲ್ಲಿ ಬಿಡುಗಡೆ ಮಾಡಿದರು. ಈ ಯೋಜನೆಯು ಕೇಂದ್ರ ಸರ್ಕಾರದ ಶೇ.60 ರಷ್ಟು ಹಾಗೂ ರಾಜ್ಯ ಸರ್ಕಾರದ ಶೇ.40 ರಷ್ಟು ಅನುದಾನದೊಂದಿಗೆ ಕೊಡಗು ಜಿಲ್ಲೆಯಲ್ಲಿ ಅನುμÁ್ಠನಗೊಳ್ಳುತ್ತಿದೆ. ಈ ಯೋಜನೆಯಡಿ 50 ಜನ ಗುಚ್ಚ ಸಂಪನ್ಮೂಲ ವ್ಯಕ್ತಿ (ಎರಡು ಗ್ರಾಮ ಪಂಚಾಯಿತಿಗಳಿಗೆ ಒಬ್ಬರಂತೆ) 17 ಜನ ಸಂಪನ್ಮೂಲ ವ್ಯಕ್ತಿಗಳ ಸಹಯೋಗದೊಂದಿಗೆ ಕೊಡಗು ಜಿಲ್ಲೆಯಲ್ಲಿ ನೈಸರ್ಗಿಕ ಕೃಷಿ ಅನುಸರಿಸುವ ರೈತರಿಗೆ ಮಾರ್ಗದರ್ಶನ, ತರಬೇತಿ ನೀಡಲಾಗುವುದು. ಈ ಪುಸ್ತಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲೆಯ ಕೃಷಿ…
ಮಡಿಕೇರಿ, NEWS DESK ಮಾ.3:-ಗ್ಯಾರಂಟಿ ಯೋಜನೆಗಳ ಅನುμÁ್ಠನ ಸಮಿತಿ ಅಧ್ಯಕ್ಷರಾದ ಎಂ.ಜಿ.ಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ತಾಲ್ಲೂಕು ಗ್ಯಾರಂಟಿ ಸಮಿತಿ ಸಭೆ ನಡೆಯಿತು. ಗೃಹಲಕ್ಷ್ಮಿ ಯೋಜನೆ:-ಶಿಶುಅಭಿವೃದ್ದಿ ಇಲಾಖೆಯಲ್ಲಿ ಗೃಹಲಕ್ಷ್ಮಿ ಯೋಜನೆಯಡಿ ನವೆಂಬರ್ ಮಾಹೆಯವರೆಗೆ 1,16,781 ಗೃಹಲಕ್ಷ್ಮಿ ಫಲಾನುಭವಿಗಳಿಗೆ ರೂ.23,35,62,000.00 ಹಣ ಪಾವತಿಯಾಗಿದ್ದು, ಎನ್‍ಪಿಸಿಐ, ಇ-ಕೆವೈಸಿ ಮಾಡಿಸಲು ಬಾಕಿ ಉಳಿದಿರುವ ಫಲಾನುಭವಿಗಳ ಸಂಖ್ಯೆ 766, ಐ. ಟಿ, ಜಿ ಎಸ್ ಟಿ ಪಾವತಿದಾರರು ಎಂದು ತಿರಸ್ಕøತಗೊಂಡ ಫಲಾನುಭವಿಗಳ ಸಂಖ್ಯೆ 2,383 ಆಗಿರುತ್ತದೆ ಹಾಗೂ 302 ಗೃಹಲಕ್ಷ್ಮಿ ಯೋಜನೆಯ ಮಹಿಳಾ ಫಲಾನುಭವಿಗಳು ಮರಣ ಹೊಂದಿದ್ದು, ಅದರಲ್ಲಿ 66 ಫಲಾನುಭವಿಗಳನ್ನು ಗೃಹಲಕ್ಷ್ಮಿ ಯೋಜನೆಯಿಂದ ಡಿಲೀಟ್ ಮಾಡಿದ್ದು 236 ಫಲಾನುಭವಿಗಳನ್ನು ಡಿಲೀಟ್ ಮಾಡಲು ಬಾಕಿ ಇರುತ್ತದೆ ಎಂದು ಸಭೆಗೆ ಮಾಹಿತಿ ನೀಡಿದರು. ಸಮಿತಿ ಸದಸ್ಯರಾದ ಪ್ರಭು ರೈ ಅವರು ಮಾತನಾಡಿ ಮುಂದಿನ ಸಭೆಗೆ ಮಡಿಕೇರಿ ತಾಲ್ಲೂಕಿಗೆ ಸಂಬಂಧಿಸಿದಂತೆ ಗೃಹಲಕ್ಷ್ಮಿ ಯೋಜನೆಯ ಪ್ರಗತಿ ವರದಿಯನ್ನು ನೀಡಲು ಇಲಾಖಾಧಿಕಾರಿಯವರಿಗೆ ತಿಳಿಸಿದರು. ಶಕ್ತಿಯೋಜನೆ: ಶಕ್ತಿ ಯೋಜನೆಯಲ್ಲಿ 2026 ಫೆಬ್ರವರಿ ಮಾಹೆಯವರೆಗೆ…
ಜಿಲ್ಲಾ ಘಟಕದಿಂದ ಮನವಿ: 2026-27 ನೇ ಸಾಲಿನಲ್ಲಿ ಕೇಂದ್ರ ಸರ್ಕಾರವು ನಡೆಸಲಿರುವ ಜನಗಣತಿಯಲ್ಲಿ ಪ್ರೌಢಶಾಲಾ ಶಿಕ್ಷಕರಿಗೆ ವಿನಾಯಿತಿ ಕೋರಿ ಮಾನ್ಯ ಕೊಡಗು ಜಿಲ್ಲಾಧಿಕಾರಿಯವರಾದ, ಸೋಮಶೇಖರ್,ರವರಿಗೆ ಕೊಡಗು ಪ್ರೌಢಶಾಲಾ ಸಹಶಿಕ್ಷಕರ ವತಿಯಿಂದ ಮನವಿ ಸಲ್ಲಿಸಲಾಯಿತು, ಈ ಸಂದರ್ಭದಲ್ಲಿ ಪ್ರೌಢಶಾಲಾ ಶಿಕ್ಷಕರಿಗೆ ಹತ್ತನೇ ತರಗತಿಯ ಉತ್ತಮ ಫಲಿತಾಂಶ ತರುವ ನಿಟ್ಟಿನಲ್ಲಿ ಬಹಳ ಒತ್ತಡವಿದ್ದು ಪರೀಕ್ಷಾ ಕಾರ್ಯ ಮತ್ತು ಮೌಲ್ಯ ಮಾಪನ ಕಾರ್ಯದಲ್ಲಿ ಪಾಲ್ಗೊಳ್ಳಬೇಕಾಗಿರುವುದರಿಂದ, ಪ್ರೌಢಶಾಲಾ ಶಿಕ್ಷಕರಿಗೆ ವಿನಾಯಿತಿ ನೀಡಬೇಕು, ಅನಿವಾರ್ಯವಿದ್ದರೆ, ಮೇಲ್ವಿಚಾರಕರು ಮತ್ತು ನೋಡಲ್ ಅಧಿಕಾರಿಗಳಾಗಿ, ನೇಮಿಸಬೇಕು, ಆನಾರೋಗ್ಯವಿದ್ದವರಿಗೆ, ನಿವೃತ್ತಿ ಅಂಚಿನಲ್ಲಿ ಇರುವವರಿಗೆ ಜನಗಣತಿಯಿಂದ ಕೈಬಿಡಬೇಕು ಎಂದು ಮನವಿ ಮಾಡಲಾಯಿತು, ಬೇರೆ ಇಲಾಖೆಯವರನ್ನು ಗಣತಿ ಕಾರ್ಯಕ್ಕೆ ಬಳಸಿಕೊಳ್ಳಬೇಕು ಎಂದು, ಕೋರಲಾಯಿತು, ಇದೇ ಸಂದರ್ಭದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಗಣತಿ ಮತ್ತು ಪರಿಶಿಷ್ಟ ಜಾತಿ ಗಣತಿ ದಾರರಿಗೆ ಮತ್ತು ಮೇಲ್ವಿಚಾರಕರಿಗೆ ಗಳಿಕೆ ರಜೆ ಮಂಜೂರು ಮಾಡಬೇಕೆಂದು ಮನವಿ ಮಾಡಲಾಯಿತು, ನಮ್ಮ ಮನವಿಗೆ ಉತ್ತಮವಾಗಿ ಸ್ಪಂದಿಸಿದ ಮಾನ್ಯ ಜಿಲ್ಲಾಧಿಕಾರಿಗಳು ಪ್ರೌಢಶಾಲಾ ಶಿಕ್ಷಕರಿಗೆ ಕೇಡರ್ ಗೆ, ತಕ್ಕಂತೆ ಮೇಲ್ವಿಚಾರಕರು…
ಬೆಂಗಳೂರು, ಮಾರ್ಚ್ 3, 2026: ಅಮೆರಿಕ-ಇಸ್ರೇಲ್ ದಾಳಿಯಿಂದಾಗಿ ಮಧ್ಯಪ್ರಾಚ್ಯದ ವಾಯುಪ್ರದೇಶ ಮುಚ್ಚಲ್ಪಟ್ಟ ಪರಿಣಾಮ ಅಬುಧಾಬಿ ಮತ್ತು ದುಬೈ ವಿಮಾನ ನಿಲ್ದಾಣಗಳಲ್ಲಿ ಸಿಲುಕಿಕೊಂಡಿದ್ದ ಸುಮಾರು 213 ಕನ್ನಡಿಗರು ಸೋಮವಾರ ರಾತ್ರಿ ಬೆಂಗಳೂರಿಗೆ ಸುರಕ್ಷಿತವಾಗಿ ಬಂದಿಳಿದಿದ್ದಾರೆ. ಮೂರು ದಿನಗಳ ಕಾಲ ಯುದ್ಧದ ಆತಂಕದಲ್ಲೇ ದಿನ ದೂಡಿದ್ದ ಪ್ರಯಾಣಿಕರು, ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ಕಾಲಿಡುತ್ತಿದ್ದಂತೆ ನೆಮ್ಮದಿಯ ನಿಟ್ಟುಸಿರು ಬಿಟ್ಟರು. ಗಣ್ಯರ ಸುರಕ್ಷಿತ ವಾಪಸಾತಿ ಸೋಮವಾರ ರಾತ್ರಿ 10 ಗಂಟೆಗೆ ಎತಿಹಾದ್ ಏರ್ವೇಸ್ (Etihad Airways) ವಿಮಾನದ ಮೂಲಕ ಮರಳಿದವರಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಹಾಗೂ ಖ್ಯಾತ ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧು ಪ್ರಮುಖರು. ದಕ್ಷಿಣ ಆಫ್ರಿಕಾ ಪ್ರವಾಸ ಮುಗಿಸಿ ವಾಪಸ್ಸಾಗುತ್ತಿದ್ದ ಇವರು ಸಂಘರ್ಷದ ಹಿನ್ನೆಲೆಯಲ್ಲಿ ದುಬೈನಲ್ಲಿ ಸಿಲುಕಿದ್ದರು. ಬುರ್ಜ್ ಖಲೀಫಾ ಬಳಿ ಬಾಂಬ್ ಸದ್ದು! ತಮ್ಮ ಆತಂಕದ ಕ್ಷಣಗಳನ್ನು ಹಂಚಿಕೊಂಡ ಎಂಎಲ್ಸಿ ಭೋಜೇಗೌಡ, “ನಾನು ಸಚಿವ ಕೃಷ್ಣ ಭೈರೇಗೌಡ ಅವರೊಂದಿಗೆ ಫೋನಿನಲ್ಲಿ ಮಾತನಾಡುತ್ತಿದ್ದಾಗಲೇ ದೊಡ್ಡದೊಂದು ಬಾಂಬ್ ಸ್ಫೋಟದ ಶಬ್ದ ಕೇಳಿಸಿತು.…
ಮಡಿಕೇರಿ NEWS DESK ಮಾ.3 : ಪರಿಶಿಷ್ಟ ಜಾತಿ ಸಮೂಹಕ್ಕೆ ಮಾರಕವಾಗಿದ್ದ ನ್ಯಾ.ನಾಗಮೋಹನ್ ದಾಸ್ ಅವರ ಒಳ ಮೀಸಲಾತಿಗಳ ವರದಿಗೆ ಬದಲಾಗಿ, ಹಳೆಯ ಮೀಸಲಾತಿ ನಿಯಮಗಳಂತೆ 56 ಸಾವಿರ ಹುದ್ದೆಗಳ ನೇಮಕಾತಿಗೆ ನಿರ್ಧರಿಸಿರುವ ಸರಕಾರದ ನಿರ್ಧಾರವನ್ನು ಸ್ವಾಗತಿಸುವುದಾಗಿ ಕೊಡಗು ಜಿಲ್ಲಾ ಬಲಗೈ ಜಾತಿಯ ಸಮುದಾಯದ ಪ್ರಮುಖ ಟಿ.ಈ.ಸುರೇಶ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನ್ಯಾ.ನಾಗಮೋಹನ್ ದಾಸ್ ಅವರು ಒಳಮೀಸಲಾತಿಗೆ ಸಂಬಂಧಿಸಿದಂತೆ ನೀಡಿರುವ ವರದಿ ಅವೈಜ್ಞಾನಿಕವಾಗಿದೆ. ಇದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತಂದುದಲ್ಲದೆ, ವಿಷಯಕ್ಕೆ ಸಂಬಂಧಿಸಿದಂತೆ ಸಚಿವ ಸಂಪುಟ ಸಭೆ ಕರೆಸಿ, ಅದರಲ್ಲಿ ಹಳೇ ಮೀಸಲಾತಿ ನಿಯಮಗಳಂತೆ ನೇಮಕಾತಿಗೆ ತೀರ್ಮಾನ ಕೈಗೊಳ್ಳಲು ಕಾರಣರಾದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ ಖರ್ಗೆ ಅವರಿಗೆ ಬಲಗೈ ಜಾತಿ ಸಮುದಾಯದ ಪರವಾಗಿ ಧನ್ಯವಾದಗಳನ್ನು ಸಲ್ಲಿಸುವುದಾಗಿ ಹೇಳಿದರು. ಪರಿಶಿಷ್ಟ ಜಾತಿಯ 101 ಉಪಜಾತಿಯವರು ಪರಸ್ಪರ ಸೌಹಾರ್ದತೆಯಿಂದ ಇದ್ದೇವೆ. ಪಟ್ಟಭದ್ರ ಹಿತಾಸಕ್ತಿಗಳು ಇದೀಗ ನಮ್ಮ ನಡುವೆ…
ಬೆಂಗಳೂರು, NEWS DESK ಮಾರ್ಚ್ 03: ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನಾರೋಗ್ಯ ಮುಖ್ಯ ಮಂತ್ರಿಗಳ ಆರೋಗ್ಯ ಕರ್ನಾಟಕ (AB-PM-JAY-CMs-ArK) ಯೋಜನೆಯಡಿ ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಗಳು ಅಥವಾ ಯೋಜನೆಯ ಅನುಷ್ಠಾನದಲ್ಲಿ ಭಾಗಿಯಾಗುವ ಯಾವುದೇ ಪಾಲುದಾರರ ವಿರುದ್ಧ ಭ್ರಷ್ಟಾಚಾರ, ವೈದ್ಯಕೀಯ ಮತ್ತು ವೈದ್ಯಕೀಯೇತರ ವಂಚನೆ ಅಥವಾ ಉದ್ದೇಶಪೂರ್ವಕವಾಗಿ ಅಥವಾ ವಿವೇಚನಾಯುತವಾಗಿ ಅಧಿಕಾರ ದುರುವಯೋಗದಂತಹ ಯಾವುದೇ ಆರೋಪಗಳು ಕಂಡುಬಂದಲ್ಲಿ ಆರೋಪಿತರ ವಿರುದ್ಧ ದೂರು/ಮಾಹಿತಿ ನೀಡುವ ಯಾವುದೇ ವ್ಯಕ್ತಿಯ ಗುರುತನ್ನು ಗೌಪ್ಯವಾಗಿಟ್ಟು ಇಂತಹ ಪ್ರಕರಣಗಳ ಮಾಹಿತಿ ಪಡೆದು ವಿಚಾರಣೆ ನಡೆಸಲು Whistle Blower Policy ಯನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ನಲ್ಲಿ ಸರ್ಕಾರದ ಆದೇಶದ ಅನ್ವಯ ಅನುಷ್ಠಾನಗೊಳಿಸಲಾಗಿರುತ್ತದೆ. ಅದರಂತೆ,AB-PM-JAY-CMs-ArK ಅನುಷ್ಠಾನದಲ್ಲಿ ಭಾಗಿಯಾಗಿರುವ ಯಾವುದೇ ಪಾಲುದಾರರ ವಿರುದ್ಧ ಕೇಳಿಬರುವ ಅಂತಹ ಆರೋಪದ ಮೇಲೆ ದೂರುಗಳನ್ನು ಸ್ವೀಕರಿಸಲು, ವಿಚಾರಿಸಲು, ಅಂತಹ ದೂರು ನೀಡುವ ವ್ಯಕ್ತಿಯ ಗೌಪ್ಯತೆಯನ್ನು ಕಾಪಾಡಲು ಹಾಗೂ ಅದಕ್ಕೆ ಪ್ರಾಸಂಗಿಕವಾದ ವಿಷಯಗಳ ಬಹಿರಂಗಪಡಿಸುವಿಕೆಯ ವಿರುದ್ಧ ಸಾಕಷ್ಟು ಸುರಕ್ಷತೆಗಳನ್ನು ಒದಗಿಸುವುದು Whistle Blower Policy ಯ ಉದ್ದೇಶವಾಗಿರುತ್ತದೆ.…
ಮಡಿಕೇರಿ, NEWS DESK ಮಾ.03: ಜಿಲ್ಲಾ ಪೊಲೀಸ್ ಘಟಕದಲ್ಲಿ ಅಪರಾಧ ಪತ್ತೆ, ಸ್ಫೋಟಕ, ಮಾದಕ ದ್ರವ್ಯ ಪತ್ತೆಯ ಸಮಯದಲ್ಲಿ ತರಬೇತು ಹೊಂದಿದ ಶ್ವಾನಗಳನ್ನು ಬಳಸುತ್ತಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಶ್ವಾನದಳಕ್ಕೆ ನಾಪೋಕ್ಲು ಬಳಿಯ ಪಾಲೂರು ನಿವಾಸಿ ಎ.ಯು.ಪೂವಯ್ಯ ಎಂಬವರು ಒಂದು ಬೆಲ್ಜಿಯನ್ ಮಾಲಿನೋಯಿಸ್ ಶ್ವಾನವನ್ನು ನೀಡಿದ್ದು ಇವರ ಕೊಡುಗೆಯನ್ನು ಶ್ಲಾಘಿಸಲಾಗಿದೆ.
ಸೋಮವಾರಪೇಟೆ NEWS DESK ಮಾ.3 : ಆಕಸ್ಮಿಕವಾಗಿ ಅಗ್ನಿ ಅವಘಡ ಸಂಭವಿಸಿ ಮಾಜಿ ಸಿ ಆರ್ ಪಿ ಎಫ್ ನ ಯೋಧರೊಬ್ಬರೂ ಸಾವನಪ್ಪಿರುವ ಘಟನೆ ಸಮೀಪದ ತೋಳುರುಶೆಟ್ಟಳ್ಳಿಯಲ್ಲಿ ನಡೆದಿದೆ. ಹೆಚ್.ಎ.ವೆಂಕಟೇಶ್(64) ಮೃತ ದುರ್ದೈವಿ. ಮನೆಯಲ್ಲೇ ತೋಟ ಬಳಕೆಯ ಯಂತ್ರಗಳಿಗೆಂದು ತಂದಿಟ್ಟಿದ್ದ ಪೆಟ್ರೋಲ್‌ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಕ್ಷಣಾರ್ಧದಲ್ಲಿ ಬೆಂಕಿ ವ್ಯಾಪಿಸಿದೆ. ವೆಂಕಟೇಶ್ ಅವರು ಒಂದು ಕಾಲನ್ನು ಕಳೆದುಕೊಂಡಿದ್ದರಿಂದ ತಕ್ಷಣ ಸ್ಥಳದಿಂದ ಹೊರಬರಲು ಸಾಧ್ಯವಾಗದೆ ಬೆಂಕಿಗೆ ಸಿಲುಕಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಬೆಂಕಿಯ ತೀವ್ರತೆಗೆ ಮನೆಯ ಒಂದು ಭಾಗ ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಸ್ಥಳೀಯರು ಮನೆಯ ಮೇಲಿನಿಂದ ದಟ್ಟ ಹೊಗೆ ಕಾಣಿಸಿಕೊಂಡ ಹಿನ್ನೆಲೆ ಧಾವಿಸಿ ಬೆಂಕಿ ನಂದಿಸುವ ಪ್ರಯತ್ನ ಮಾಡಿದ್ದಾರೆ. ಆದರೆ ಆಗಲೇ ವೆಂಕಟೇಶ್ ಅವರು ಸಾವನ್ನಪ್ಪಿದ್ದಾರೆಂದು ತಿಳಿದು ಬಂದಿದೆ. ಸ್ಥಳಕ್ಕೆ ಸೋಮವಾರಪೇಟೆ ವೃತ್ತ ನಿರೀಕ್ಷಕ ಮುದ್ದು ಮಾದೇವ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರು ಪತ್ನಿ ಹಾಗೂ ಇರ್ವರೂ ಪುತ್ರಿಯರನ್ನು ಅಗಲಿದ್ದಾರೆ.






