Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
  • *ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*
  • *ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *
  • *ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಸಾಮಾಜಿಕ ನ್ಯಾಯದ ಬಗ್ಗೆ ಮಾಧ್ಯಮಗಳು ಜನರಲ್ಲಿ ಜಾಗೃತಿ ಮೂಡಿಸಲಿ :  ಮುಖ್ಯಮಂತ್ರಿ ಸಿದ್ದರಾಮಯ್ಯ*
ಇತ್ತೀಚಿನ ಸುದ್ದಿಗಳು

*ಸಾಮಾಜಿಕ ನ್ಯಾಯದ ಬಗ್ಗೆ ಮಾಧ್ಯಮಗಳು ಜನರಲ್ಲಿ ಜಾಗೃತಿ ಮೂಡಿಸಲಿ :  ಮುಖ್ಯಮಂತ್ರಿ ಸಿದ್ದರಾಮಯ್ಯ*

September 19, 20253 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಬೆಂಗಳೂರು ಸೆ.19 NEWS DESK : ಸಮಾಜದಲ್ಲಿನ ಅಸಮಾನತೆಗೆ ಕಾರಣಗಳು ಹಾಗೂ ಸಾಮಾಜಿಕ ನ್ಯಾಯದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯದಲ್ಲಿ ಮಾಧ್ಯಮಗಳು ತೊಡಗಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದರು. ಬೆಂಗಳೂರಿನ ವಾರ್ತಾ ಸೌಧದ ಸುಲೋಚನಾ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ 2024 ನೇ ಕ್ಯಾಲೆಂಡರ್ ವರ್ಷದ ವಡ್ಡರ್ಸೆ ರಘುರಾಮ ಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ ಹಾಗೂ 2017 ರಿಂದ 2023 ನೇ ಕ್ಯಾಲೆಂಡರ್ ವರ್ಷದ ಪರಿಸರ ಮತ್ತು ಅಭಿವೃದ್ಧಿ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ ಸಮಾರಂಭ ದಲ್ಲಿ ಭಾಗವಹಿಸಿ ಮಾತನಾಡಿದರು. :: ಮಾಧ್ಯಮಗಳು ಸತ್ಯ ಅಸತ್ಯದ ಶೋಧನೆ ನಡೆಸಬೇಕು ::  ಅಭಿಪ್ರಾಯಗಳು ವಸ್ತುಸ್ಥಿತಿಯಿಂದ ಕೂಡಿರಬೇಕು. ಅನೇಕ ಬಾರಿ ಊಹಾ ಪತ್ರಿಕೋದ್ಯಮ ಆಗಿರುತ್ತದೆ , ಅದು ಆಗಬಾರದು. ಸತ್ಯ ಅಸತ್ಯಗಳನ್ನು ಪತ್ತೆ ಹಚ್ಚಿ, ಸತ್ಯವನ್ನು ಶೋಧನೆ ಮಾಡುವ ಕಾರ್ಯವನ್ನು ಪತ್ರಿಕೋದ್ಯಮ ಮಾಡಬೇಕು. ಯಾವುದೇ ಕಾರಣಕ್ಕೂ ಒಬ್ಬ ವ್ಯಕ್ತಿಯು ತಪ್ಪು ಮಾಡದಿದ್ದರೂ, ಸುಮ್ಮನೆ ಆರೋಪಗಳನ್ನು ಮಾಡಬಾರದು. ಸರ್ಕಾರದಲ್ಲಿ ಎಲ್ಲವೂ ಸರಿಯಾಗಿರುವುದಿಲ್ಲ ನಿಜ, ಆದರೆ ಸರ್ಕಾರದ ಜನಪರ ವಿಚಾರಗಳನ್ನು ಜನರಿಗೆ ತಿಳಿಸುವ ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಜನ ವಿರೋಧಿ ಕಾರ್ಯವನ್ನು ಸರ್ಕಾರ ಮಾಡಿದರೆ ಅದನ್ನೂ ಜನರಿಗೆ ತಿಳಿಸುವ ಕಾರ್ಯ ಮಾಡಬೇಕು ಎಂದರು. :: ಸಮಾನ ಅವಕಾಶಗಳ ಮಹತ್ವ ಬಗ್ಗೆ ಜನರಲ್ಲಿ ಅರಿವು ::  ಸಮಾಜದಲ್ಲಿ ಜಾತಿ ವ್ಯವಸ್ಥೆ, ಅಸಮಾನತೆ ಇದೆ. ಸಾಮಾಜಿಕ ಅಸಮಾನತೆ ಬಗ್ಗೆ ಜನರಿಗೆ ತಿಳಿಸುವ ಕಾರ್ಯ ಮಾಡಬೇಕು. ಬಹುಸಂಖ್ಯಾತರಾಗಿರುವ ಜನ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿರುವುದು ಅಸಮಾನತೆಗೆ ಪ್ರಮುಖ ಕಾರಣ. ಇದನ್ನು ನೇರವಾಗಿ ಜನರಿಗೆ ತಿಳಿಸುವ ಪ್ರಯತ್ನದಲ್ಲಿ, ಯಾವುದೇ ರಾಜಿ ಇಲ್ಲದೆ, ಸಾಮಾಜಿಕ ನ್ಯಾಯ ಎಲ್ಲರಿಗೂ ಸಿಕ್ಕಿದೆಯೇ, ಇಲ್ಲವೇ, ಸಮಬಾಳು, ಸಮಪಾಲು ಅನುಷ್ಠಾನಕ್ಕೆ ಬಂದಿದೆಯೇ ಎಂಬುದನ್ನು ಪರಿಶೀಲಿಸಬೇಕು. ಸಾಮಾಜಿಕ ನ್ಯಾಯ ಕೇವಲ ಭಾಷಣಕ್ಕೆ ಮಾತ್ರ ಸೀಮಿತವಾಗಿರಬೇಕಾದ ವಿಚಾರವಲ್ಲ. ಎಲ್ಲರಿಗೂ ದೇಶದ ವ್ಯವಸ್ಥೆಯಲ್ಲಿ ಇನ್ನೂ ಸಹ ಸಮಾನವಾದ ಅವಕಾಶ ಸಿಗದಿರಲು ಕಾರಣಗಳೇನು ಎಂಬ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ಮಾಧ್ಯಮ ಮಾಡಬೇಕು ಎಂದರು. :: ದಸರಾ- ಸಾಂಸ್ಕೃತಿಕ ನಾಡ ಹಬ್ಬ ::  ಇತ್ತೀಚಿಗೆ ಟಿವಿ ಚಾನೆಲ್‌ಗಳು ಇನ್ನೊಬ್ಬರ ಹೇಳಿಕೆ ಬಗ್ಗೆ ಪ್ರತಿಕ್ರಿಯೆಯನ್ನು ಕೇಳಿ ಸುದ್ದಿ ಮಾಡುತ್ತವೆ. ಅದರಲ್ಲಿ ಅನೇಕ ವಿಚಾರಗಳು ಸಮಾಜಕ್ಕೆ ಸಂಬಂಧವೇ ಪಟ್ಟಿರುವುದಿಲ್ಲ. ಸಮಾಜಕ್ಕೆ ಸಂಬಂಧಪಟ್ಟಂತಹ ವಿಚಾರಗಳ ಬಗ್ಗೆ ಪ್ರಶ್ನೆಗಳನ್ನು ಕೇಳಿ. ಭಾನು ಮುಷ್ತಾಕ್‌ ದಸರಾ ಉದ್ಘಾಟನೆಯನ್ನು ವಿಷಯವನ್ನಾಗಿಸಲು ಹೊರಟರು. ಹೈಕೋರ್ಟ್‌ ಮತ್ತು ಸುಪ್ರಿಂಕೋರ್ಟ್‌ ಸಹ ಇದನ್ನು ವಜಾಗೊಳಿಸಿದೆ. ದಸರಾ ಹಬ್ಬ ಧಾರ್ಮಿಕ ವಿಚಾರವಲ್ಲ, ಅದು ನಾಡ ಹಬ್ಬವಾಗಿದ್ದು, ಸಾಂಸ್ಕೃತಿಕ ವಿಚಾರವಾಗಿದೆ. ನಮ್ಮಲ್ಲಿ ಸಹಬಾಳ್ವೆ ಇರಬೇಕು. ಸಮಾಜದಲ್ಲಿ ವೈವಿಧ್ಯತೆಯಲ್ಲಿ ಏಕತೆಯನ್ನು ನಿರ್ಮಾಣ ಮಾಡಬೇಕು. ಅಂಬೇಡ್ಕರ್ ಅವರು ಸ್ವಾತಂತ್ರ್ಯ ದೊರೆತ ಸಂದರ್ಭದಲ್ಲಿ ನಾವು ವೈರುಧ್ಯಗಳಿಂದ ಕೂಡಿದ ಸಮಾಜಕ್ಕೆ ಕಾಲಿಡುತ್ತಿದ್ದೇವೆ. ಸಮಾಜದ ದುರ್ಬಲ ವರ್ಗದವರ ಅಭಿವೃದ್ಧಿಯಾದರೆ ಮಾತ್ರ ನಿಜವಾದ ಅಭಿವೃದ್ಧಿ ಎಂದು ಹೇಳಿದ್ದರು. :: ಸಮಸಮಾಜದ ಕನಸು ಕಂಡ ಪರ್ತಕರ್ತ :: ವಡ್ಡರ್ಸೆ ರಘುರಾಮ ಶೆಟ್ಟರು ಸಮ ಸಮಾಜ ನಿರ್ಮಾಣದ ಕನಸು ಕಂಡ ಪತ್ರಕರ್ತರು. ಜಾತಿ ಸಮಸ್ಯೆಗಳ ವಿರುದ್ಧ ಬರೆದವರು ಎಂದು ವಿವರಿಸಿದರು. :: ಪತ್ರಕರ್ತರು ಪರಿಸರ ನ್ಯಾಯಕ್ಕೆ ಬದ್ಧವಾಗಿರಬೇಕು ::  ಪರಿಸರ ಅಭಿವೃದ್ಧಿ ಸಂರಕ್ಷಣೆಗೆ ಮಾಧ್ಯಮಗಳು ಹೆಚ್ಚು ಒತ್ತು ನೀಡಬೇಕು. ಪತ್ರಕರ್ತರು ಪರಿಸರ ನ್ಯಾಯಕ್ಕೆ ಬದ್ಧವಾಗಿರಬೇಕು. ಸ್ವಾತಂತ್ರ್ಯ ಪೂರ್ವದ ಮಾಧ್ಯಮ ರಂಗಕ್ಕೂ ಇಂದಿನ ಮಾಧ್ಯಮ ರಂಗಕ್ಕೂ ಅಜಗಜಾಂತರ ವ್ಯತ್ಯಾಸವಿದೆ ಸ್ವಾತಂತ್ರ್ಯೋತ್ತರ ಪತ್ರಿಕೋದ್ಯಮ ಶ್ರೀಮಂತರ ಕೈಗಳಿಗೆ ಸಿಕ್ಕಿಹಾಕಿಕೊಂಡಿದೆ. ಪತ್ರಕರ್ತರು ಇದನ್ನು ಅರ್ಥ ಮಾಡಿಕೊಂಡು ಕರ್ತವ್ಯ ನಿರ್ವಹಿಸಬೇಕಿದೆ ಎಂದರು. :: ಮಹಿಳೆಯರಿಗೂ ಸಮಾನತೆ ::  ನಮ್ಮ ಸಮಾಜದಲ್ಲಿ ಜಾತಿ ವ್ಯವಸ್ಥೆ ಹೇಗೆ ಬೇರು ಬಿಟ್ಟಿದೆ ಎಂದರೆ ಐದಾರು ವರ್ಷಗಳಲ್ಲಿ, ಹತ್ತಿಪ್ಪತ್ತು ವರ್ಷಗಳಲ್ಲಿ ಹೋಗುವಂತದ್ದಲ್ಲ. ಆದರೆ ಅಸಮಾನತೆಯ ಮಟ್ಟವನ್ನು ಕಡಿಮೆ ಮಾಡಿ ಸಮ ಸಮಾಜ ನಿರ್ಮಾಣಕ್ಕೆ ನಮ್ಮ ಸರ್ಕಾರ ಅನೇಕ ಜನಪರ ಕಾರ್ಯಕ್ರಮಗಳನ್ನು ಹಾಕಿಕೊಂಡಿದೆ. ಮಹಿಳೆಯರಿಗೂ ಸಮಾನತೆ ಬರಬೇಕು ಎನ್ನುವ ನಿಟ್ಟಿನಲ್ಲಿ ಮಹಿಳಾ ಸಬಲೀಕರಣಕ್ಕೂ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಎಲ್ಲರ ಅಭಿವೃದ್ಧಿಯೇ ನಿಜವಾದ ಅಭಿವೃದ್ಧಿ , ದುರ್ಬಲ ವರ್ಗದವರ ಅಭಿವೃದ್ಧಿಯೇ ನಿಜವಾದ ಅಭಿವೃದ್ಧಿ ಎಂದರು. :: ಶಾಲಾಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ::  ಬಹಳಷ್ಟು ಜನರು ಸಂವಿಧಾನವನ್ನೇ ಓದಿರುವುದಿಲ್ಲ ಇದೇ ಕಾರಣಕ್ಕೆ ನಮ್ಮ ಸರ್ಕಾರ, ಶಾಲಾ-ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓದುವಂತಹ ಕಾರ್ಯಕ್ರಮ ಹಮ್ಮಿಕೊಂಡಿತು ಸಂವಿಧಾನದ ಕರ್ತವ್ಯಗಳನ್ನು, ಹಕ್ಕುಗಳನ್ನು ತಿಳಿದುಕೊಂಡಲ್ಲಿ ಜನರ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಲು ಸಹಾಯಕವಾಗುತ್ತದೆ ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ಕೆಲಸ ಮಾಡಿದರೆ ಸಮಾಜ, ನಾಡು ದೇಶ ಎಲ್ಲಕ್ಕೂ ಒಳ್ಳೆಯದಾಗುತ್ತದೆ ಎಂದರು. ಸುಮಾರು 2017ರಿಂದ ಬಾಕಿ ಇದ್ದ ಪ್ರಶಸ್ತಿಗಳನ್ನು ಇಂದು ಪ್ರದಾನ ಮಾಡಲಾಗಿದೆ ಆಯಾ ವರ್ಷದ ಪ್ರಶಸ್ತಿಗಳನ್ನು ಆಯಾ ವರ್ಷವೇ ನೀಡಿದರೆ ಉತ್ತಮ. ಅನೇಕ ವರ್ಷಗಳ ಪ್ರಶಸ್ತಿಗಳನ್ನು ಒಟ್ಟಿಗೆ ನೀಡುವುದು ಒಳ್ಳೆಯ ಪದ್ಧತಿಯಲ್ಲ ಎನ್ನುವ ಅಭಿಪ್ರಾಯ ವ್ಯಕ್ತಪಡಿಸಿದರು.

 

Share. Facebook Twitter Pinterest LinkedIn Tumblr Email WhatsApp
Previous Article*ನಾಕೂರು : ಲಕ್ಷ್ಮಿ ಮಹಿಳಾ ಒಕ್ಕಲಿಗ ಗೌಡ ಸಂಘದಿಂದ ಶಿವಮ್ಮಗೆ ಸನ್ಮಾನ* 
Next Article *ಮಡಿಕೇರಿ ದಸರಾ ಸಂಭ್ರಮ : ದೀಪಾಲಂಕಾರ, ರಂಗೋಲಿ, ಸೆಲ್ಫಿ ಸ್ಪರ್ಧೆಯ ಆಕರ್ಷಣೆ*

Recommended: Website design development company services in Mangalore Forex Trading Teacher in India

Related Posts

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

ಬೆಂಗಳೂರು ಫೆ.12: ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ರಾಜ್ಯದ ಜನತೆಗೆ ಈಗ ಮತ್ತೊಂದು ಆರ್ಥಿಕ ಹೊರೆ ಬೀಳುವ…

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026

*ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *

February 12, 2026

*ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*

February 12, 2026

*ಫೆ.15 ರಂದು ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮೂರ್ನಾಡು ಶಾಖೆ ಉದ್ಘಾಟನೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.